Homeಮುಖಪುಟತೆಲಂಗಾಣ | 64 ಮಾವೋವಾದಿಗಳು ಪೊಲೀಸರಿಗೆ ಶರಣು

ತೆಲಂಗಾಣ | 64 ಮಾವೋವಾದಿಗಳು ಪೊಲೀಸರಿಗೆ ಶರಣು

- Advertisement -
- Advertisement -

ತೆಲಂಗಾಣದ ಭದ್ರಾದ್ರಿ ಕೊಥಗುಡೆಮ್ ಜಿಲ್ಲೆಯಲ್ಲಿ ಶನಿವಾರ (ಮಾ.15) ನಿಷೇಧಿತ ಸಿಪಿಐ (ಮಾವೋವಾದಿ) ಸಂಘಟನೆಯ ಒಟ್ಟು 64 ಸದಸ್ಯರು ಪೊಲೀಸರ ಮುಂದೆ ಶರಣಾಗಿದ್ದಾರೆ ಎಂದು ವರದಿಯಾಗಿದೆ.

ಛತ್ತೀಸ್‌ಗಢ ಮತ್ತು ತೆಲಂಗಾಣದ ಗಡಿ ಗ್ರಾಮಗಳ ಪ್ರದೇಶ ಸಮಿತಿ ಸದಸ್ಯ (ಎಸಿಎಂ) ಸೇರಿದಂತೆ ವಿವಿಧ ಕೇಡರ್‌ಗಳಿಗೆ ಸೇರಿದ 64 ಮಾವೋವಾದಿಗಳು ನಕ್ಸಲಿಸಂನ ಹಾದಿಯನ್ನು ತ್ಯಜಿಸಿ ತಮ್ಮ ಕುಟುಂಬಗಳೊಂದಿಗೆ ಶಾಂತಿಯುತ ಜೀವನವನ್ನು ನಡೆಸಲು ನಿರ್ಧರಿಸಿದ್ದಾರೆ. ಪೊಲೀಸ್ ಪ್ರಕಟಣೆಯ ಪ್ರಕಾರ, ಅವರು ಐಜಿಪಿ ಬಹು-ವಲಯ I ಮತ್ತು ಜಿಲ್ಲಾ ಪೊಲೀಸರ ಮುಂದೆ ಶರಣಾಗಿದ್ದಾರೆ ಎಂದು ವರದಿಗಳು ಹೇಳಿವೆ.

ಭದ್ರಾದ್ರಿ ಕೊಥಗುಡೆಮ್ ಜಿಲ್ಲಾ ಪೊಲೀಸರು ಮತ್ತು ಸಿಆರ್‌ಪಿಎಫ್‌ನಿಂದ ಆಪರೇಷನ್ ‘ಚೆಯುತ’ ಕಾರ್ಯಕ್ರಮದಡಿಯಲ್ಲಿ ಶರಣಾದ ಮಾವೋವಾದಿಗಳಿಗೆ ಜಾರಿಗೆ ತರಲಾಗುತ್ತಿರುವ ಕಲ್ಯಾಣ ಕ್ರಮಗಳು ಹಾಗೂ ಬುಡಕಟ್ಟು (ಆದಿವಾಸಿ) ಸಮುದಾಯಗಳ ಅಭಿವೃದ್ಧಿ ಮತ್ತು ಕಲ್ಯಾಣ ಚಟುವಟಿಕೆಗಳ ಬಗ್ಗೆ ತಿಳಿದುಕೊಂಡ ನಂತರ, ಅನೇಕ ಮಾವೋವಾದಿಗಳು ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಶರಣಾಗುತ್ತಿದ್ದಾರೆ ಎಂದು ಪೊಲೀಸರ ಪ್ರಕಟಣೆ ತಿಳಿಸಿದೆ.

ಇಂದು ಶರಣಾದ 64 ಜನರು ಸೇರಿದಂತೆ ಒಟ್ಟು 122 ಮಾವೋವಾದಿಗಳು ಕಳೆದ ಎರಡೂವರೆ ತಿಂಗಳಿನಲ್ಲಿ ಶರಣಾಗಿದ್ದಾರೆ ಎಂದು ಭದ್ರಾದ್ರಿ ಕೊಥಗುಡೆಮ್ ಪೊಲೀಸ್ ವರಿಷ್ಠಾಧಿಕಾರಿ ಬಿ ರೋಹಿತ್ ರಾಜು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

“ನಿಷೇಧಿತ ಸಿಪಿಐ (ಮಾವೋವಾದಿ) ಪಕ್ಷವು ಹಳೆಯ ಸಿದ್ಧಾಂತವನ್ನು ಅನುಸರಿಸುತ್ತಿದೆ ಮತ್ತು ಬುಡಕಟ್ಟು ಜನರ ನಂಬಿಕೆ ಮತ್ತು ಬೆಂಬಲವನ್ನು ಕಳೆದುಕೊಂಡಿದೆ ಎಂದು ಶರಣಾದವರು ಅರಿತುಕೊಂಡಿದ್ದಾರೆ” ಎಂದು ಎಸ್‌ಪಿ ತಿಳಿಸಿದ್ದಾರೆ.

“ಇತ್ತೀಚೆಗೆ, ಮಾವೋವಾದಿಗಳು ಇಟ್ಟಿದ್ದ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟದಿಂದಾಗಿ ಬುಡಕಟ್ಟು ಮಹಿಳೆಯೊಬ್ಬರು ತಮ್ಮ ಕಾಲು ಕಳೆದುಕೊಂಡಿದ್ದಾರೆ. ಮಾವೋವಾದಿ ನಾಯಕರ ಇಂತಹ ಕೃತ್ಯಗಳಿಂದಾಗಿ, ಬುಡಕಟ್ಟು ಸಮುದಾಯಗಳು ಮೂಲಭೂತ ಸೌಲಭ್ಯಗಳನ್ನು ಸಹ ಪಡೆಯಲು ಹೆಣಗಾಡುತ್ತಿವೆ” ಎಂದು ಪೊಲೀಸರು ಹೇಳಿದ್ದಾರೆ.

ಶರಣಾಗಲು ಮತ್ತು ಸಾಮಾನ್ಯ ಜೀವನ ನಡೆಸಲು ಬಯಸುವ ಮಾವೋವಾದಿಗಳು ತಮ್ಮ ಹತ್ತಿರದ ಪೊಲೀಸ್ ಠಾಣೆ ಅಥವಾ ಜಿಲ್ಲಾ ಅಧಿಕಾರಿಗಳನ್ನು ತಮ್ಮ ಕುಟುಂಬ ಸದಸ್ಯರ ಮೂಲಕ ಅಥವಾ ನೇರವಾಗಿ ಸಂಪರ್ಕಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.

ಕಸ್ಟಡಿಯಲ್ಲಿ ಯುವಕ ಸಾವು; ಪೊಲೀಸರಿಂದ ಚಿತ್ರಹಿಂಸೆ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...