Homeಮುಖಪುಟಕಂಗನಾ ವಿರುದ್ಧ ವಿಡಿಯೋ ಮಾಡಲು 65 ಲಕ್ಷ ಹಣ ಪಡೆಯಲಾಗಿದೆ: ಧೃವ್ ರಾಠೀ ಕೊಟ್ಟ ಉತ್ತರವೇನು?

ಕಂಗನಾ ವಿರುದ್ಧ ವಿಡಿಯೋ ಮಾಡಲು 65 ಲಕ್ಷ ಹಣ ಪಡೆಯಲಾಗಿದೆ: ಧೃವ್ ರಾಠೀ ಕೊಟ್ಟ ಉತ್ತರವೇನು?

ಈ ಯೂಟ್ಯೂಬರ್ ಯಾವುದೇ ವಿಡಿಯೋಗೆ 30 ರಿಂದ 40 ಲಕ್ಷ ಪಡೆಯುತ್ತಾರೆ. ಆದರೆ, ಕಂಗನಾ ಮತ್ತು ಅರ್ನಾಬ್ ವಿರುದ್ಧದ ವಿಡಿಯೋಗೆ ತಲಾ 35 ಲಕ್ಷ ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

- Advertisement -
- Advertisement -

ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆಯ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಸದಾ ಒಂದಿಲ್ಲೊಂದು ವಿವಾದದಲ್ಲಿರುವ ಬಾಲಿವುಡ್ ಖ್ಯಾತ ನಟಿ ಕಂಗನಾ ರಣಾವತ್ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಖ್ಯಾತ ಯೂಟ್ಯೂಬರ್, ಯುವಚಿಂತಕ ಧೃವ್ ರಾಠೀ ನನ್ನ ಚಾರಿತ್ರ್ಯ ಹರಣ ಮಾಡುವ ವಿಡಿಯೋ ಮಾಡಲು 65 ಲಕ್ಷ ಹಣ ಪಡೆದಿದ್ದಾರೆ ಎಂದು ಕಂಗನಾ ಆರೋಪಿಸಿದ್ದಾರೆ.

ಅಸಲಿಗೆ ಈ ಜಟಾಪಟಿ ಆರಂಭವಾದದ್ದೇ ನಿರ್ದೇಶಕ ಎರೆ ಕ್ಯಾಥರ್ ಮಾಡಿದ್ದ ಟ್ವೀಟ್ ಮೂಲಕ. ಅಕ್ಟೋಬರ್ 31 ರಂದು ಟ್ವೀಟ್ ಮೂಲಕ ಯೂಟ್ಯೂಬರ್ ಧೃವ್ ರಾಠೀ ವಿರುದ್ಧ ಅವರ ಹೆಸರನ್ನು ಉಲ್ಲೇಖಿಸದೆ ಆರೋಪ ಮಾಡಿದ್ದ ಎರೆ ಕ್ಯಾಥರ್, “ದಿವಂಗತ ನಟ ಸುಶಾಂತ್ ಸಿಂಗ್ ಸಾವಿನ ಹಿಂದೆ ಆತನ ಕುಟುಂಬಸ್ಥರ ಪಾತ್ರ ಎಂಬ ಹೆಸರಿನಲ್ಲಿ 40 ಲಕ್ಷ ಚಂದಾದಾರರನ್ನು ಹೊಂದಿರುವ ಖ್ಯಾತ ಯೂಟ್ಯೂಬರ್ ಓರ್ವ ವಿಶ್ಲೇಷನಾತ್ಮಕ ವಿಡಿಯೋ ಒಂದನ್ನು ಮಾಡಲು ಮುಂದಾಗಿದ್ದಾರೆ. ಅಲ್ಲದೆ, ಈ ವಿಡಿಯೋ ಮಾಡಲು ಅವರು 65 ಲಕ್ಷ ಹಣ ಸ್ವೀಕರಿಸಿದ್ದಾರೆ. ಇದೇ ಯೂಟ್ಯೂಬರ್ ಈ ಹಿಂದೆ ನಟಿ ಕಂಗನಾ ಮತ್ತು ಅರ್ನಾಬ್ ವಿರುದ್ಧವೂ ವಿಡಿಯೋ ಮಾಡಿದ್ದರು” ಎಂದು ಆರೋಪಿಸಿದ್ದರು.

ಅಲ್ಲದೆ ಎರೆ ಕ್ಯಾಥರ್ ಮತ್ತೊಂದು ಟ್ವೀಟ್‌ನಲ್ಲಿ, “ಈ ಯೂಟ್ಯೂಬರ್ ಯಾವುದೇ ವಿಡಿಯೋಗೆ 30 ರಿಂದ 40 ಲಕ್ಷ ಪಡೆಯುತ್ತಾರೆ. ಆದರೆ, ಕಂಗನಾ ಮತ್ತು ಅರ್ನಾಬ್ ವಿರುದ್ಧದ ವಿಡಿಯೋಗೆ ತಲಾ 35 ಲಕ್ಷ ಪಡೆದಿದ್ದಾರೆ” ಎಂದು ಆರೋಪಿಸಿದ್ದರು.

ನಿರ್ದೇಶಕ ಎರೆ ಕ್ಯಾಥರ್ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಯೂಟ್ಯೂಬರ್ ಧೃವ್ ರಾಠೀ, “ನನ್ನನ್ನು ಹೆಸರಿಸಿ ಈ ಸುಳ್ಳು ಸುದ್ದಿಯನ್ನು ಬರೆಯಲಾಗಿದೆ. ಮೊದಲನೇಯದಾಗಿ ನಟಿ ಕಂಗನಾ ವಿರುದ್ಧ ನಾನು ಮಾಡಿದ್ದ ವಿಡಿಯೋಗೆ ಯಾರಿಂದಲೂ ಹಣ ಪಡೆದಿಲ್ಲ. ಎರಡನೇಯದಾಗಿ ಮೃತ ನಟ ಸುಶಾಂತ್ ಸಿಂಗ್ ಸಾವಿನ ಕುರಿತು ವಿಡಿಯೋ ಮಾಡುವ ಯಾವ ಉದ್ದೇಶವೂ ನನಗಿಲ್ಲ. ಮೂರನೇಯದಾಗಿ ನಾನು ಮಾಡುವ ವಿಡಿಯೋಗಳಿಗೆ 30 ಲಕ್ಷ ಹಣದ ಪ್ರಾಯೋಜತ್ವ ಸಿಗಲಿ ಎಂದು ನಾನು ಆಶಿಸುತ್ತೇನೆ. ಅಷ್ಟು ಹಣ ಸಿಕ್ಕರೆ ನಾನು ಎಷ್ಟು ಶ್ರೀಮಂತ ವ್ಯಕ್ತಿಯಾಗಬಹುದು” ಎಂದು ಉತ್ತರಿಸಿದ್ದಾರೆ.

ಇದನ್ನೂ ಓದಿ: ರಾಜಕೀಯಾರ್ಥಿಕ ವಿಶ್ಲೇಷಕ ಧೃವ್ ರಾಠೀ ಬಗ್ಗೆ ನಿಮಗೆಷ್ಟು ಗೊತ್ತು?

ಈ ನಡುವೆ ಕಂಗನಾ ರಣಾವತ್, “ಎರೆ ಕ್ಯಾಥರ್ ಸರಿಯಾಗಿಯೇ ಹೇಳಿದ್ದಾರೆ. ಈತ ಹಣ ಪಡೆದು ನನ್ನ ವಿರುದ್ಧ ವಿಡಿಯೋಗಳನ್ನು ಮಾಡಿ ಯೂಟ್ಯೂಬ್‌ನಲ್ಲಿ ಹರಿಬಿಟ್ಟಿದ್ದಾನೆ. ಮುಂಬೈ ಮಹಾನಗರ ಪಾಲಿಕೆ ನನ್ನ ಕಚೇರಿಯನ್ನು ಧ್ವಂಸಗೊಳಿಸಿದ್ದ ಪ್ರಕರಣದ ಕುರಿತು ಈತ 60 ಲಕ್ಷ ಹಣ ಪಡೆದು ಸುಳ್ಳು ವಿಡಿಯೋ ಮಾಡಿದ್ದಾನೆ. ಈತನನ್ನು ನಾನು ಕಂಬಿ ಎಣಿಸುವಂತೆ ಮಾಡುತ್ತೇನೆ. ಸರ್ಕಾರ ಮತ್ತು ಹಣದ ಬಲ ಇಲ್ಲದೆ ಓರ್ವ ವ್ಯಕ್ತಿ ಹೀಗೆ ಕಾನೂನಾತ್ಮಕ ವಿಚಾರಗಳ ಬಗ್ಗೆ ಬಹಿರಂಗವಾಗಿ ಸುಳ್ಳು ಹೇಳಲು ಸಾಧ್ಯವೇ?” ಎಂದು ಹೇಳುವ ಮೂಲಕ ನಟಿ ಕಂಗನಾ ಮಹಾರಾಷ್ಟ್ರ ಸರ್ಕಾರದ ವಿರುದ್ಧವೂ ಮತ್ತೊಮ್ಮೆ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಧೃವ್ ರಾಠೀ “ನೀವು ಈ ವೀಡಿಯೊ ಬಗ್ಗೆ ಮಾತನಾಡುತ್ತಿದ್ದೀರಾ? ಸ್ನೇಹಿತರೆ, ಅವರು ಈ ವೀಡಿಯೊದ ಬಗ್ಗೆ ಮಾತನಾಡುತ್ತಿದ್ದಾರೋ, ಇಲ್ಲವೋ ಎಂದು ತಿಳಿಯಲು ದಯವಿಟ್ಟು ಈ ವೀಡಿಯೊವನ್ನು ವೀಕ್ಷಿಸಿ ಮತ್ತು ಹಂಚಿಕೊಳ್ಳಬಹುದೇ? ಏಕೆಂದರೆ ನಾನು ಯಾವುದೇ ಹಣವನ್ನು ಸ್ವೀಕರಿಸಿಲ್ಲ” ಎಂದು ತಮ್ಮ ವಿಡಿಯೋವನ್ನು ಟ್ವೀಟ್ ಮಾಡಿದ್ದಾರೆ.

ಅಲ್ಲದೇ “ನನ್ನ ಮೇಲೆ ಸುಳ್ಳು ಆರೋಪ ಹೊರಿಸುವ ಮೂಲಕ, ನನ್ನ ಕಂಗನಾ ವಿಡಿಯೋಗೆ ಹೆಚ್ಚಿನ ಪ್ರಚಾರ ನೀಡಿದ ನಂತರ ಇಂದು 1 ಲಕ್ಷಕ್ಕೂ ಹೆಚ್ಚು ಜನರು ಅದನ್ನು ನೋಡಿದ್ದಾರೆ. ಇದನ್ನು ‘ಸ್ಟ್ರೈಸೆಂಡ್ ಎಫೆಕ್ಟ್’ (ಯಾವುದಾದರೂ ಮಾಹಿತಿಯನ್ನು ಮರೆಮಾಚಲು, ತೆಗೆದುಹಾಕಲು ಅಥವಾ ಸೆನ್ಸಾರ್ ಮಾಡಲು ಪ್ರಯತ್ನಿಸಿದಾಗ ಆ ಮಾಹಿತಿಯು ಇಂಟರ್ನೆಟ್‌ನಲ್ಲಿ ಮತ್ತಷ್ಟು ಪ್ರಚಾರ ಪಡೆದು ವೈರಲ್ ಆಗುವುದು) ಎಂದು ಕರೆಯಲಾಗುತ್ತದೆ” ಎಂದು ತಮ್ಮ ವಿಡಿಯೋ ವೀಕ್ಷಣೆಯ ಅನಾಲಿಟಿಕ್ ಗ್ರಾಫ್ ಅನ್ನು ಷೇರ್ ಮಾಡಿದ್ದಾರೆ.

ಕಂಗಾನಾ ಕುರಿತು ಧೃವ್ ರಾಠೀ ಮಾಡಿರುವ ಆ ವಿಡಿಯೋವನ್ನು ಇದುವರೆಗೂ 39 ಲಕ್ಷಕ್ಕೂ ಹೆಚ್ಚು ಜನರು ವೀಕ್ಷಿಸಿದ್ದು, 4.4 ಲಕ್ಷ ಜನ ಲೈಕ್ ಮಾಡಿದ್ದಾರೆ.


ಇದನ್ನೂ ಓದಿ: ಕೆಲವರು ಮುಂಬೈಗೆ ಬಂದು ದ್ರೋಹವೆಸಗುತ್ತಾರೆ: ಕಂಗನಾ ವಿರುದ್ಧ ಉದ್ಧವ್ ಠಾಕ್ರೆ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...