Homeಮುಖಪುಟ65 ಶಾಸಕರು ಯಡಿಯೂರಪ್ಪನವರ ಪರವಿದ್ದಾರೆ: ಎಂ.ಪಿ ರೇಣುಕಾಚಾರ್ಯ

65 ಶಾಸಕರು ಯಡಿಯೂರಪ್ಪನವರ ಪರವಿದ್ದಾರೆ: ಎಂ.ಪಿ ರೇಣುಕಾಚಾರ್ಯ

- Advertisement -
- Advertisement -

ಸಿಎಂ ಬಿಎಸ್ ಯಡಿಯೂರಪ್ಪ ಅವರು ನಮ್ಮ ನಾಯಕ. ಅವರನ್ನು ಬೆಂಬಲಿಸಿ 65 ಕ್ಕೂ ಹೆಚ್ಚು ಶಾಸಕರು ಪತ್ರ ಬರೆದಿದ್ದಾರೆ ಎಂದು ಸಿಎಂ ರವರ ರಾಜಕೀಯ ಕಾರ್ಯದರ್ಶಿ ಮತ್ತು ಶಾಸಕ ಎಂ.ಪಿ ರೇಣುಕಾಚಾರ್ಯರವರು ತಿಳಿಸಿದ್ದಾರೆ.

ನಾನು ನಮ್ಮ ರಾಷ್ಟ್ರೀಯ ನಾಯಕ ಅರುಣ್ ಸಿಂಗ್ ಅವರೊಂದಿಗೆ ಮಾತನಾಡಿದ್ದೇನೆ. ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮತ್ತು ಇತರರ ಜೊತೆ ಮಾತನಾಡಿದ್ದು, ಅವರೆಲ್ಲರೂ ಸಿಎಂ ಯಡಿಯೂರಪ್ಪ ಅವರಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಇನ್ನೊಂದೆಡೆ ಸಿಎಂ ಯಡಿಯೂರಪ್ಪನವರು ಶಾಸಕರು ಯಾವುದೇ ರಾಜಕೀಯ ಹೇಳಿಕೆ ನೀಡಬಾರದೆಂದು ಮನವಿ ಮಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, “ಕೋವಿಡ್ ಸಾಂಕ್ರಾಮಿಕದಿಂದ ಜನ ಸಂಕಷ್ಟಗಳನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ, ಪ್ರತಿಯೊಬ್ಬ ಬಿಜೆಪಿ ಶಾಸಕರು ತಮ್ಮ ತಮ್ಮ ಕ್ಷೇತ್ರದಲ್ಲಿ ಕೋವಿಡ್ ನಿಯಂತ್ರಣ ಕಾರ್ಯಗಳಿಗೆ ಆದ್ಯತೆ ನೀಡಬೇಕು.ಯಾರೂ ಕೂಡ ಸಹಿ ಸಂಗ್ರಹಿಸುವುದಾಗಲಿ, ರಾಜಕೀಯ ಹೇಳಿಕೆಗಳನ್ನು ನೀಡುವುದಾಗಲಿ ಮಾಡದೆ, ಸಂಕಷ್ಟದಲ್ಲಿರುವ ಜನರಿಗೆ ನೆರವಾಗಬೇಕು ಎಂದು ವಿನಂತಿಸುತ್ತೇನೆ’ ಎಂದಿದ್ದಾರೆ.

ರಾಜ್ಯ ರಾಜಕೀಯದಲ್ಲಿ ಪ್ರತಿದಿನ ಸಿಎಂ ಬದಲಾವಣೆಯ ಮಾತು ಕೇಳಿ ಬರುತ್ತಿದೆ. ಲಾಕ್‌ಡೌನ್ ಮುಗಿದ ಕೂಡಲೇ ಬಿ.ಎಸ್ ಯಡಿಯೂರಪ್ಪನವರನ್ನು ಕೆಳಗಿಳಿಸಲಾಗುತ್ತದೆ. ಮತ್ತೊಬ್ಬ ಲಿಂಗಾಯತ ನಾಯಕ ಸಿಎಂ ಆಗುತ್ತಾರೆ ಎಂಬ ಊಹಾಪೋಹಗಳು ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಮೇಲಿನ ಹೇಳಿಕೆಗಳು ವ್ಯಕ್ತವಾಗಿವೆ. ನಿನ್ನೆ ಯಡಿಯೂರಪ್ಪನವರು ಹೈಕಮಾಂಡ್ ಸೂಚಿಸಿದರೆ ರಾಜೀನಾಮೆ ನೀಡಲು ಸಿದ್ದ ಎಂಬ ಹೇಳಿಕೆ ನೀಡಿದ್ದರು.


ಇದನ್ನೂ ಓದಿ: ಹೈಕಮಾಂಡ್ ಸೂಚಿಸಿದರೆ ರಾಜೀನಾಮೆ ನೀಡುತ್ತೇನೆ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಭಾರತ್ ಜೋಡೋ ಯಾತ್ರೆಗೆ ಬಿಜೆಪಿ ನಡುಗಿದೆಯಂತಲ್ಲಾ

0
ಮುಂದೆ ಎದುರಿಸಲಿರುವ ಚುನಾವಣೆಯ ವಿಷಯವಾಗಿ, ಜನರ ಬಳಿಗೆ ತೆಗೆದುಕೊಂಡು ಹೋಗಲು ಗುರುತರದಾದ ಯಾವುದೇ ಸಾಧನೆಯಿಲ್ಲದಿರುವುದನ್ನು ಮನಗಂಡ ಬಿಜೆಪಿಗಳು ರಾಷ್ಟ್ರದಾದ್ಯಂತ ಮುಸ್ಲಿಂ ಸಂಘಟನೆಯ ಮೇಲೆ ದಾಳಿ ಮಾಡಿ ಬೀಗ ಜಡಿದದ್ದೂ ಅಲ್ಲದೆ ಕೆಲವು ಸಂಘಟನೆಗಳ...