Homeಮುಖಪುಟ66 ವರ್ಷದ ಆಂಟಿ ಸಂಯಮದಿಂದಿರಬೇಕು: ಮಮತಾ ಬ್ಯಾನರ್ಜಿ ವಿರುದ್ಧ ಸುವೇಂಧು ಅಧಿಕಾರಿ ಟೀಕೆ

66 ವರ್ಷದ ಆಂಟಿ ಸಂಯಮದಿಂದಿರಬೇಕು: ಮಮತಾ ಬ್ಯಾನರ್ಜಿ ವಿರುದ್ಧ ಸುವೇಂಧು ಅಧಿಕಾರಿ ಟೀಕೆ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನ ಇಂದು ಆರಂಭವಾಗಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಅವರ ಹತ್ತಿರದ ಮುಖಂಡನಾಗಿದ್ದ ಮತ್ತು ಈಗ ಬಿಜೆಪಿ ಸೇರಿ ಅಭ್ಯರ್ಥಿಯಾಗಿರುವ ಸುವೇಂಧು ಅಧಿಕಾರಿಯವರ ಕ್ಷೇತ್ರ ನಂದಿಗ್ರಾಮದಲ್ಲಿ ಇಂದು ಚುನಾವಣೆ ನಡೆಯಲಿದ್ದು ಕಾವೇರಿದ ವಾತಾವರಣ ನಿರ್ಮಾಣವಾಗಿದೆ. ಅದೇ ಸಂದರ್ಭದಲ್ಲಿ ಆರೋಪ-ಪ್ರತ್ಯಾರೋಪಗಳು ಮುಗಿಲು ಮುಟ್ಟಿದ್ದು, 66 ವರ್ಷದ ಆಂಟಿ ಸಂಯಮದಿಂದಿರಬೇಕು ಎಂದು ಮಮತಾ ಬ್ಯಾನರ್ಜಿ ವಿರುದ್ಧ ಸುವೇಂಧು ಅಧಿಕಾರಿ ಟೀಕಾಪ್ರಹಾರ ನಡೆಸಿದ್ದಾರೆ.

“ಅವರು ಮುಖ್ಯಮಂತ್ರಿಯಾಗಿರುವುದರಿಂದ ಸ್ವಲ್ಪ ಸಂಯಮವನ್ನು ತೋರಿಸಬೇಕು. ಅವರು ಪ್ರಧಾನಿಗೆ ಹೊಲಸು ಭಾಷೆ ಬಳಸುತ್ತಾರೆ. ಅವರು 66 ವರ್ಷದ ಆಂಟಿ. ವಿಧಾನಸಭಾ ಚುನಾವಣೆಯ ಎರಡನೇ ಹಂತದಲ್ಲಿ ಮತದಾನ ನಡೆಯುತ್ತಿರುವಾಗ ಅವರು ಗೂಂಡಾಗಿರಿಯಲ್ಲಿ ಪಾಲ್ಗೊಳ್ಳಬಾರದು” ಎಂದು ಅಧಿಕಾರಿ ಹೇಳಿದ್ದಾರೆ.

ಮತದಾನಕ್ಕೂ ಮುನ್ನ ಮಾತನಾಡಿದ್ದ ಮಮತಾ ಬ್ಯಾನರ್ಜಿ, “ನಂದಿಗ್ರಾಮದಲ್ಲಿ ನನ್ನ ಮೇಲೆ ಹಲ್ಲೆ ನಡೆಸಿದವರ ವಿಡಿಯೋ ಮತ್ತು ಫೋಟೊಗಳು ಲಭ್ಯವಿವೆ. ನಾನೆಂದು ಅವರನ್ನು ಕ್ಷಮಿಸುವುದಿಲ್ಲ. ಚುನಾವಣಾ ನಡೆಯುತ್ತಿರುವುದರಿಂದ ಸುಮ್ಮನಿದ್ದೇನೆ. ಚುನಾವಣೆ ಮುಗಿದ ನಂತರ ಅವರಿಗೆ ತಕ್ಕ ಪಾಠ ಕಲಿಸುತ್ತೇನೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಈ ಕುರಿತು ಪ್ರತಿಕ್ರಿಯಿಸಿರುವ ಅಧಿಕಾರಿ, ಮಮತಾ ಬ್ಯಾನರ್ಜಿಯವರು ಚುನಾವಣಾ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ. ಅವರು ಹೂಗ್ಲಿಯಲ್ಲಿ ಕಾನೂನುಬಾಹಿರವಾಗಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ನಂದಿಗ್ರಾಮ್ ಹೆಸರಿಸಿದ್ದಾರೆ. ನಂದಿಗ್ರಾಮದಲ್ಲಿಯೂ ಪತ್ರಿಕಾಗೋಷ್ಠಿ ನಡೆಸಿ ಮತದಾರರ ಮೇಲೆ ಪ್ರಭಾವ ಬೀರುವ ಕೆಲಸ ಮಾಡುತ್ತಿದ್ದಾರೆ. ಅವರು ಯಾವುದೇ ಹಿಂಸಾಚಾರವನ್ನು ಮಾಡಬಾರದು ಎಂದು ನಾವು ನಿರೀಕ್ಷಿಸುತ್ತೇವೆ. ಇಲ್ಲಿ ಎಲ್ಲರೂ ಸಕ್ರಿಯರಾಗಿದ್ದಾರೆ, ಕೇಂದ್ರ ಪಡೆಗಳು ಇಲ್ಲಿವೆ, 14 ಡ್ರೋನ್‌ಗಳನ್ನು ಬಳಸಲಾಗುತ್ತಿದೆ, 76 ಬೂತ್‌ಗಳನ್ನು ತ್ವರಿತ ಪ್ರತಿಕ್ರಿಯೆ ತಂಡ ಮತ್ತು ಇತರ ಪಡೆಗಳು ನಿರ್ವಹಿಸುತ್ತವೆ. ಶಾಂತಿಯುತವಾಗಿರುವುದಕ್ಕೆ ನನಗೆ ಸಂತೋಷವಾಗಿದೆ” ಎಂದಿದ್ದಾರೆ.


ಇದನ್ನೂ ಓದಿ; ಬಿಜೆಪಿಯೇತರ ವಿರೋಧ ಪಕ್ಷಗಳಿಗೆ ಪತ್ರ ಬರೆದ ಬಂಗಾಳ ಮುಖ್ಯಮಂತ್ರಿ ಮಮತಾ ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...