Homeಕರ್ನಾಟಕಮೂರು ವರ್ಷಗಳಲ್ಲಿ ರಾಜ್ಯದಲ್ಲಿ 6635 ಎಸ್‌ಸಿ, ಎಸ್‌ಟಿ ದೌರ್ಜನ್ಯ ಪ್ರಕರಣ: ಸಿಎಂ ಸಿದ್ದರಾಮಯ್ಯ

ಮೂರು ವರ್ಷಗಳಲ್ಲಿ ರಾಜ್ಯದಲ್ಲಿ 6635 ಎಸ್‌ಸಿ, ಎಸ್‌ಟಿ ದೌರ್ಜನ್ಯ ಪ್ರಕರಣ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಕಳೆದ ಮೂರು ವರ್ಷಗಳಲ್ಲಿ (2023ರಿಂದ) ರಾಜ್ಯದಲ್ಲಿ ಒಟ್ಟು 6,635 ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. ಈ ಪೈಕಿ 4,149 ಪ್ರಕರಣಗಳಲ್ಲಿ ಮಾತ್ರ 60 ದಿನಗಳ ಒಳಗೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದರು.

ನೋಂದಣಿಯಾದ ಒಟ್ಟು ಪ್ರಕರಣಗಳಲ್ಲಿ 60 ದಿನಗಳ ಒಳಗಾಗಿ ಶೇಕಡ 63ರಷ್ಟು ಪ್ರಕರಣಗಳಲ್ಲಿ ಮಾತ್ರ ದೋಷಾರೋಪಣೆ ಪಟ್ಟಿ ಸಲ್ಲಿಕೆಯಾಗಿದೆ. ಈ ಪೈಕಿ ಕೇವಲ 36 ಪ್ರಕರಣಗಳಲ್ಲಿ ಶಿಕ್ಷೆಯಾಗಿವೆ. ತನಿಖಾ ಹಂತದಲ್ಲಿ ಸುಮಾರು 679 ಪ್ರಕರಣಗಳಿವೆ ಎಂದು ತಿಳಿಸಿದರು.

2025-26ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಠ ಪಂಗಡಗಳ (ದೌರ್ಜನ್ಯ ನಿಯಂತ್ರಣ) ಜಾಗೃತ ಹಾಗೂ ಉಸ್ತುವಾರಿ ಸಮಿತಿ ಸಭೆ ಸಿಎಂ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸೋಮವಾರ (ಆ.25) ನಡೆಯಿತು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ 60 ದಿನಗಳ ಒಳಗಾಗಿ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಸೂಚನೆ ನೀಡಲಾಗಿದ್ದು, ಕಳೆದ ಆರು ತಿಂಗಳಲ್ಲಿ ಶೇ.84 ರಷ್ಟು ಮಾತ್ರ ಪ್ರಕರಣಗಳಲ್ಲಿ ನಿಗದಿತ ಅವಧಿಯ ಒಳಗಾಗಿ ಆರೋಪಪಟ್ಟಿ ಸಲ್ಲಿಸಲಾಗಿದೆ. ಶೇ.100 ಪ್ರಕರಣಗಳಲ್ಲಿ 60 ದಿನಗಳ ಒಳಗಾಗಿ ಕಡ್ಡಾಯವಾಗಿ ಆರೋಪಪಟ್ಟಿ ಸಲ್ಲಿಸಲು ಕ್ರಮ ಕೈಗೊಳ್ಳಬೇಕು ಎಂದು ಸಭೆಯಲ್ಲಿ ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪೊಲೀಸರು ಇದರಲ್ಲಿ ಯಾವುದೇ ನೆಪ ಹೇಳಬಾರದು. ನ್ಯಾಯಾಲಯದಲ್ಲಿ 56 ಪ್ರಕರಣಗಳಲ್ಲಿ ತಡೆಯಾಜ್ಞೆ ಇದ್ದು, ಇದನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದರು.

ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ಪ್ರಕರಣಗಳ ತ್ವರಿತ ವಿಚಾರಣೆಗಾಗಿ 11 ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲಾಗಿದೆ. ಪ್ರಕರಣಗಳ ಸರಿಯಾದ ವಿಚಾರಣೆ ನಡೆಸಿ, ತ್ವರಿತವಾಗಿ ನ್ಯಾಯ ಒದಗಿಸಲು ಕ್ರಮ ಕೈಗೊಳ್ಳಬೇಕು. ಪ್ರಸ್ತುತ ಶಿಕ್ಷೆಯ ಪ್ರಮಾಣ ಶೇ.10ರಷ್ಟಿದ್ದು, ಇದು ಹೆಚ್ಚಾಗಬೇಕು. ಆರೋಪಿಗಳೊಂದಿಗೆ ಪೊಲೀಸರು ಶಾಮೀಲಾಗಿರುವುದು ಕಂಡು ಬಂದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಹೇಳಿದರು.

ರಾಜ್ಯದಲ್ಲಿ 33 ಡಿಸಿಆರ್‌ಇ ಪೊಲೀಸ್‌ ಠಾಣೆಗಳನ್ನು ತೆರೆಯಲಾಗಿದ್ದು, ಇಲ್ಲಿ ಸಿಬ್ಬಂದಿ ಕೊರತೆಯಿದ್ದರೆ ಭರ್ತಿ ಮಾಡಲು ಕ್ರಮ ಕೈಗೊಳ್ಳಬೇಕು. ಈ ಕುರಿತು ಸರ್ಕಾರಕ್ಕೆ ಸೂಕ್ತ ಪ್ರಸ್ತಾವನೆ ಸಲ್ಲಿಸಬೇಕು ಎಂದರು.

ದೌರ್ಜನ್ಯ ಪ್ರಕರಣಗಳಲ್ಲಿ ಪ್ರತಿ ದೂರು ದಾಖಲಿಸುವ ಪ್ರವೃತ್ತಿ ಹೆಚ್ಚುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಅಂತಹ ಪ್ರಕರಣಗಳಲ್ಲಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ದೂರಿನಲ್ಲಿ ಸತ್ಯಾಂಶವಿದ್ದರೆ ಮಾತ್ರ ಎಫ್‌ಐಆರ್‌ ದಾಖಲಿಸಬೇಕು ಎಂದು ಸಿಎಂ ಸೂಚನೆ ನೀಡಿದರು.

ದೌರ್ಜ್ಯನ್ಯ ಪ್ರಕರಣಗಳಲ್ಲಿ ಅಂಗವೈಕಲ್ಯತೆ ಉಂಟಾದಲ್ಲಿ ನೀಡಲಾಗುವ ವೈದ್ಯಕೀಯ ಪರಿಹಾರದ ಮೊತ್ತವನ್ನು ಹೆಚ್ಚಿಸುವ ಕುರಿತು ಪರಿಶೀಲನೆ ಮಾಡಲಾಗುವುದು ಎಂದು ಸಿಎಂ ಭರವಸೆ ನೀಡಿದರು.

ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣಗಳಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು. ನ್ಯಾಯಾಲಯಗಳಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣಗಳ ಕುರಿತು ತೀರ್ಪು ಬಂದರೂ, ತೀರ್ಪು ಜಾರಿಗೆ ಯಾಕೆ ಬಾಕಿ ಇದೆ. ಪ್ರಸ್ತುತ ಸುಳ್ಳು ಜಾತಿ ಪ್ರಮಾಣ ಪತ್ರ ಸಾಬೀತಾಗಿರುವ 170 ಪ್ರಕರಣಗಳಲ್ಲಿದ್ದು, ತಕ್ಷಣ ಕ್ರಮ ಕೈಗೊಳ್ಳಬೇಕು. ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಸರ್ಕಾರದ ಸೌಲಭ್ಯಗಳನ್ನು ಪಡೆದಿರುವುದು ಸಾಬೀತಾದರೆ ಅದನ್ನು ಮರಳಿ ಪಡೆಯಲು ಕ್ರಮ ಕೈಗೊಳ್ಳಬೇಕು. ಈ ಕುರಿತು ಇಲಾಖೆಗಳ ನಡುವೆ ಸಮನ್ವಯತೆ ಅಗತ್ಯವಿದ್ದು, ಸಮಗ್ರ ವರದಿಯನ್ನು ಸಲ್ಲಿಸಿ ಎಂದು ಸಿಎಂ ಅಧಿಕಾರಿಗಳಿಗೆ ಸೂಚಿಸಿದರು.

ಸಚಿವರಾದ ಹೆಚ್.ಕೆ ಪಾಟೀಲ್, ಡಾ.ಹೆಚ್.ಸಿ ಮಹಾದೇವಪ್ಪ, ಕೆ.ಎಚ್.ಮುನಿಯಪ್ಪ, ಆರ್.ಬಿ.ತಿಮ್ಮಾಪುರ, ಶಾಸಕರಾದ ಎ.ಸಿ ಶ್ರೀನಿವಾಸ್‌, ಎಚ್.ವಿ ವೆಂಕಟೇಶ್‌, ಸುಧಾಮ್‌ ದಾಸ್, ಎ.ಆರ್ ಕೃಷ್ಣಮೂರ್ತಿ, ನರೇಂದ್ರ ಸ್ವಾಮಿ, ಡಿ.ತಿಮ್ಮಯ್ಯ, ಭಾಗೀರಥಿ, ಶಾಂತಾರಾಮ್‌ ಸಿದ್ದಿ, ಬಸವರಾಜ್‌, ಬಿಎಂ.ನಾಗರಾಜ್, ಎನ್.ಟಿ.ಶ್ರೀನಿವಾಸ್, ಬಸನಗೌಡ ತುರವಿಹಾಳ್‌, ರಾಜು ವೇಣುಗೋಪಾಲ ನಾಯಕ್‌, ಡಾ.ಉಮೇಶ್‌ ಜಾಧವ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ದಲಿತ ಇಂಜಿನಿಯರ್‌ಗೆ ಶೂನಿಂದ ಹಲ್ಲೆ: ಬಿಜೆಪಿ ಕಾರ್ಯಕರ್ತನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...