Homeಮುಖಪುಟಕನ್ನಡದ ಅಕ್ಷಿ ಚಿತ್ರಕ್ಕೆ ಪ್ರಶಸ್ತಿ: ನಟ ಧನುಷ್‌ಗೆ 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ

ಕನ್ನಡದ ಅಕ್ಷಿ ಚಿತ್ರಕ್ಕೆ ಪ್ರಶಸ್ತಿ: ನಟ ಧನುಷ್‌ಗೆ 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ

- Advertisement -
- Advertisement -

2019 ರಲ್ಲಿ ಬಿಡುಗಡೆಯಾದ ಚಿತ್ರಗಳಿಗೆ ತಡವಾಗಿ ರಾಷ್ಟ್ರೀಯ ಪ್ರಶಸ್ತಿಗಳನ್ನು ಸೋಮವಾರ (ಮಾರ್ಚ್ 22) ನವದೆಹಲಿಯಲ್ಲಿ ಪ್ರಕಟಿಸಲಾಗಿದೆ. ಕಳೆದ ವರ್ಷ ಅಸಹಜ ಸಾವಿಗೀಡಾದ ನಟ ಸುಶಾಂತ್ ಸಿಂಗ್ ರಜ‌ಪೂತ್ ಅಭಿನಯದ ಚಿಚೋರೆ ಅತ್ಯುತ್ತಮ ಹಿಂದಿ ಚಲನಚಿತ್ರ ಪ್ರಶಸ್ತಿ ಪಡೆದಿದೆ.

ಕನ್ನಡದ ಮನೋಜ್ ಕುಮಾರ್ ನಿರ್ದೇಶನದ ಅಕ್ಷಿ ಕನ್ನಡದ ಉತ್ತಮ ಚಲನಚಿತ್ರ ಪ್ರಶಸ್ತಿ ಪಡೆದಿದೆ. ಉತ್ತಮ ನಟ ಪ್ರಶಸ್ತಿಯನ್ನು ಭೋಂಸ್ಲೆ ಚಿತ್ರಕ್ಕಾಗಿ ನಟ ಮನೋಜ್ ಬಾಜಪೇಯಿ ಮತ್ತು ಅಸುರನ್ ನಟನೆಗಾಗಿ ಧನುಷ್ ಪಡೆದುಕೊಂಡಿದ್ದಾರೆ. ಅತ್ಯುತ್ತಮ ತಮಿಳು ಚಿತ್ರ ಪ್ರಶಸ್ತಿಯನ್ನು ಅಸುರನ್ ಪಡೆದಿದೆ.

ಮಣಿಕರ್ಣಿಕಾ ಮತ್ತು ಪಂಗಾ ಚಿತ್ರಗಳ ಅಭಿನಯಕ್ಕಾಗಿ ಅತ್ಯತ್ತಮ ನಟಿ ಪ್ರಶಸ್ತಿಯನ್ನು ಕಂಗನಾ ರಾಣಾವತ್ ಪಡೆದುಕೊಂಡಿದ್ದಾರೆ. ಸೂಪರ್ ಡಿಲಕ್ಸ್ ಚಿತ್ರದ ಅಭಿನಯಕ್ಕಾಗಿ ವಿಜಯ್ ಸೇತುಪತಿ ಅತ್ಯುತ್ತಮ ಪೋಷಕ ನಟ ಮತ್ತು ಪಲ್ಲವಿ ಜೋಶಿ ದಿ ತಾಷ್ಕೆಂಟ್ ಫೈಲ್ಸ್ ಚಿತ್ರಕ್ಕೆ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ ಪಡೆದಿದ್ದಾರೆ.

ಇದನ್ನೂ ಓದಿ: ‘ಬಾಂಬೆ ತಂಡ’ದ ಶಾಸಕರ ಕ್ಷೇತ್ರಗಳು ಭೂಲೋಕದ ಸ್ವರ್ಗಗಳಾಗಿವೆಯೇ: ಸಿಎಂಗೆ ಕುಮಾರಸ್ವಾಮಿ ಪ್ರಶ್ನೆ

ಮಲಯಾಳಂ ಭಾಷೆಯ Marakkar Arabikadalinte Simham ಅತ್ಯುತ್ತಮ ಚಿತ್ರ ಪ್ರಶಸ್ತಿ ಪಡೆದಿದೆ. ಸಿಕ್ಕಿಂ ರಾಜ್ಯವನ್ನು ಅನ್ನು ಅತ್ಯಂತ ಚಲನಚಿತ್ರ ಸ್ನೇಹಿ ರಾಜ್ಯವೆಂದು ಘೋಷಿಸಲಾಗಿದೆ.

ನೇತಾಜಿ ಸುಭಾಷ್ ಬೋಸ್ ಆಧಾರಿತ ಗುಮ್ನಾಮಿ ಅತ್ಯುತ್ತಮ ಬಂಗಾಳಿ ಚಲನಚಿತ್ರ ಮತ್ತು ಅತ್ಯುತ್ತಮ ಚಿತ್ರಕಥೆಯನ್ನು ಗೆದ್ದಿದ್ದಾರೆ. ಈ ವರ್ಷ ಭಾರತದಿಂದ ಆಸ್ಕರ್ ಪ್ರವೇಶ ಪಡೆದ ಜಲ್ಲಿಕಟ್ಟು ಅತ್ಯುತ್ತಮ ಛಾಯಾಗ್ರಹಣ ಗೆದ್ದಿದ್ದಾರೆ. COVID-19 ಸಾಂಕ್ರಾಮಿಕ ರೋಗದಿಂದಾಗಿ ಚಲನಚಿತ್ರೋತ್ಸವಗಳ ನಿರ್ದೇಶನಾಲಯವು ನೀಡಿದ ರಾಷ್ಟ್ರೀಯ ಪ್ರಶಸ್ತಿಗಳನ್ನು ಕಳೆದ ವರ್ಷ ಘೋಷಿಸಲಾಗಿಲ್ಲ.

ಪ್ರಶಸ್ತಿ ಪಟ್ಟಿ ಹೀಗಿದೆ.

ಅತ್ಯುತ್ತಮ ಚಲನಚಿತ್ರ: Marakkar Arabikadalinte Simham (ಮಲಯಾಳಂ)

ಅತ್ಯುತ್ತಮ ನಿರ್ದೇಶನ: ಬಹಟ್ಟರ್ ಹುರೈನ್

ಅತ್ಯುತ್ತಮ ನಟಿ: ಕಂಗನಾ ರಾಣಾವತ್ (ಮಣಿಕರ್ಣಿಕಾ, ಪಂಗಾ)

ಅತ್ಯುತ್ತಮ ನಟ: ಮನೋಜ್ ಬಾಜಪೇಯಿ (ಭೋಂಸ್ಲೆ) ಮತ್ತು ಧನುಷ್ ( ಅಸುರನ್)

ಅತ್ಯುತ್ತಮ ಪೋಷಕ ನಟಿ:  ಪಲ್ಲವಿ ಜೋಶಿ (ದಿ ತಾಷ್ಕೆಂಟ್ ಫೈಲ್ಸ್)

ಅತ್ಯುತ್ತಮ ಪೋಷಕ ನಟ: ವಿಜಯ ಸೇತುಪತಿ (ಸೂಪರ್ ಡಿಲಕ್ಸ್)

ಅತ್ಯುತ್ತಮ ಮಕ್ಕಳ ಚಿತ್ರ: ಕಸ್ತೂರಿ (ಹಿಂದಿ)

ನಿರ್ದೇಶಕರ ಅತ್ಯುತ್ತಮ ಚೊಚ್ಚಲ ಚಿತ್ರಕ್ಕಾಗಿ ಇಂದಿರಾ ಗಾಂಧಿ ಪ್ರಶಸ್ತಿ: ಹೆಲೆನ್ (ಮಲಯಾಳಂ)

ವಿಶೇಷವಾಗಿ ಉಲ್ಲೇಖಿತ ಸಿನಿಮಾಗಳು: ಬಿರಿಯಾನಿ (ಮಲಯಾಳಂ), ಜೊನಕಿ ಪೊರುವಾ (ಅಸ್ಸಾಮೀಸ್), ಲತಾ ಭಗವಾನ್ ಕರೇ (ಮರಾಠಿ), ಪಿಕಾಸೊ (ಮರಾಠಿ)

ಅತ್ಯುತ್ತಮ ತುಳು ಚಿತ್ರ: ಪಿಂಗರಾ

ಅತ್ಯುತ್ತಮ ಪಾನಿಯಾ ಚಿತ್ರ: ಕೆಂಜೀರಾ

ಅತ್ಯುತ್ತಮ ಮಿಶಿಂಗ್ ಚಿತ್ರ: ಅನು ರುವಾಡ್

ಅತ್ಯುತ್ತಮ ಖಾಸಿ ಚಲನಚಿತ್ರ: Lewduh

ಅತ್ಯುತ್ತಮ ಹರಿಯಾಣಿ ಚಿತ್ರ: ಚೋರಿಯನ್ ಚೋರೊನ್ ಸೆ ಕಾಮ್ ನಹಿ ಹೋತಿ

ಅತ್ಯುತ್ತಮ ಛತ್ತೀಸ್‌ಗಢ ಚಲನಚಿತ್ರ: ಭೂಲನ್ ದಿ ಮೇಜ್

ಅತ್ಯುತ್ತಮ ತೆಲುಗು ಚಲನಚಿತ್ರ: ಜರ್ಸಿ

ಅತ್ಯುತ್ತಮ ತಮಿಳು ಚಿತ್ರ: ಅಸುರನ್

ಅತ್ಯುತ್ತಮ ಪಂಜಾಬಿ ಚಲನಚಿತ್ರ: ರಬ್ ಡಾ ರೇಡಿಯೋ 2

ಅತ್ಯುತ್ತಮ ಒಡಿಯಾ ಚಿತ್ರ: ಸಲಾ ಬುಧರ್ ಬದ್ಲಾ ಮತ್ತು ಕಲಿರಾ ಅತಿತಾ

ಅತ್ಯುತ್ತಮ ಮಣಿಪುರಿ ಚಿತ್ರ: ಈಗಿ ಕೋನಾ

ಅತ್ಯುತ್ತಮ ಮಲಯಾಳಂ ಚಿತ್ರ: ಕಳ್ಳಾ ನೋಟಂ

ಅತ್ಯುತ್ತಮ ಮರಾಠಿ ಚಿತ್ರ: ಬಾರ್ಡೋ

ಅತ್ಯುತ್ತಮ ಕೊಂಕಣಿ ಚಲನಚಿತ್ರ: ಕಾಜ್ರೊ

ಅತ್ಯುತ್ತಮ ಕನ್ನಡ ಚಿತ್ರ: ಅಕ್ಷಿ

ಅತ್ಯುತ್ತಮ ಹಿಂದಿ ಚಲನಚಿತ್ರ: ಚಿಚೋರೆ

ಅತ್ಯುತ್ತಮ ಬಂಗಾಳಿ ಚಲನಚಿತ್ರ: ಗುಮ್ನಾಮಿ

ಅತ್ಯುತ್ತಮ ಅಸ್ಸಾಮೀಸ್ ಚಲನಚಿತ್ರ: ರೋನುವಾ- ಹೂ ನೆವರ್‌ ಸರೆಂಡರ್‌

ಅತ್ಯುತ್ತಮ ಸಾಹಸ: ಅವನೇ ಶ್ರೀಮನ್ನಾರಾಯಣ (ಕನ್ನಡ)

ಅತ್ಯುತ್ತಮ ನೃತ್ಯ ಸಂಯೋಜನೆ: ಮಹರ್ಷಿ (ತೆಲುಗು)

ಅತ್ಯುತ್ತಮ ಸ್ಪೆಷಲ್ ಎಫೆಕ್ಟ್: Marakkar Arabikadalinte Simham (ಮಲಯಾಳಂ)

ವಿಶೇಷ ತೀರ್ಪುಗಾರರ ಪ್ರಶಸ್ತಿ: Oththa Seruppu Size-7 (ತಮಿಳು)

ಅತ್ಯುತ್ತಮ ಸಾಹಿತ್ಯ: ಕೋಲಾಂಬಿ (ಮಲಯಾಳಂ)

ಅತ್ಯುತ್ತಮ ಸಂಗೀತ ನಿರ್ದೇಶನ ಹಾಡುಗಳು: ವಿಶ್ವಾಸಂ (ತಮಿಳು)

ಸಂಗೀತ ನಿರ್ದೇಶನ: Jyeshthoputro

ಅತ್ಯುತ್ತಮ ಮೇಕಪ್ : ಹೆಲೆನ್ (ಮಲಯಾಳಂ)


ಇದನ್ನೂ ಓದಿ: ಎಲ್ಲೆಲ್ಲೋ ಬಟ್ಟೆಬಿಚ್ಚಿ ಮರ್ಯಾದೆ ಕಳೆಯುತ್ತಿರುವ ಬಿಜೆಪಿ ನಾಯಕರಿಗಾಗಿ ಬಟ್ಟೆ ಖರೀದಿ- ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...