Homeಮುಖಪುಟನೇಪಾಳದ ಕಠ್ಮಂಡುವಿನಲ್ಲಿ ಪ್ರಬಲ ಭೂಕಂಪ : ಬಿಹಾರ, ದೆಹಲಿ-ಎನ್​ಸಿಆರ್‌ನಲ್ಲೂ ಕಂಪಿಸಿದ ಭೂಮಿ

ನೇಪಾಳದ ಕಠ್ಮಂಡುವಿನಲ್ಲಿ ಪ್ರಬಲ ಭೂಕಂಪ : ಬಿಹಾರ, ದೆಹಲಿ-ಎನ್​ಸಿಆರ್‌ನಲ್ಲೂ ಕಂಪಿಸಿದ ಭೂಮಿ

- Advertisement -
- Advertisement -

ಇಂದು (ಜ.7) ಬೆಳಿಗ್ಗೆ 6.50ರ ಸುಮಾರಿಗೆ ನೇಪಾಳದ ಕಠ್ಮಂಡುವಿನಲ್ಲಿ 7.1ರಷ್ಟು ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಭಾರತದ ಬಿಹಾರ, ದೆಹಲಿ-ಎನ್​ಸಿಆರ್​ ಪ್ರದೇಶಗಳಲ್ಲೂ ಕಂಪನದ ಅನುಭವವಾಗಿದೆ ಎಂದು ವರದಿಯಾಗಿದೆ.

ಭೂಕಂಪದ ಕೇಂದ್ರ ಬಿಂದು ನೇಪಾಳದ ಲೋಬುಚೆ ಪ್ರದೇಶದಿಂದ 93 ಕಿಲೋ ಮೀಟರ್ ದೂರದ ಚೀನಾ-ಟಿಬೆಟ್ ಗಡಿ ಪ್ರದೇಶ ಡಿಂಗ್ಗಿಯಲ್ಲಿ ಪತ್ತೆಯಾಗಿದೆ ಎಂದು ರಾಷ್ಟ್ರೀಯ ಭೂಕಂಪ ಮಾಪನ ಕೇಂದ್ರ ಹೇಳಿದೆ.

ಭೂಕಂಪದ ವೇಳೆ ಕಠ್ಮಂಡುವಿನಲ್ಲಿ ಜನರು ಭಯಭೀತರಾಗಿ ತಮ್ಮ ಮನೆಗಳಿಂದ ಹೊರ ಬಂದಿದ್ದಾರೆ. ಕಠ್ಮಂಡುವಿನ ನೆರೆಯ ಕಾವ್ರೆಪಲಾಂಚ್‌ವೋಕ್ ಮತ್ತು ಧಾಡಿಂಗ್ ಜಿಲ್ಲೆಗಳಲ್ಲಿಯೂ ಕಂಪನದ ಅನುಭವವಾಗಿದೆ ಎಂದು ವರದಿಗಳು ಹೇಳಿವೆ.

ಈ ಸುದ್ದಿ ಬರೆಯುವ ಹೊತ್ತಿಗೆ (ಬೆಳಿಗ್ಗೆ 9 ಗಂಟೆ) ಭೂಕಂಪದಿಂದ ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿರಲಿಲ್ಲ.

“ಇಲ್ಲಿ ಜೋರಾಗಿ ಭೂಮಿ ಕಂಪಿಸಿದ ಅನುಭವಾಗಿದೆ. ಎಲ್ಲರೂ ಬಹಳ ಎಚ್ಚರದಿಂದ ಇದ್ದಾರೆ. ಯಾವುದೇ ಹಾನಿ ಸಂಭವಿಸಿದ ಬಗ್ಗೆ ನಮಗೆ ಇನ್ನೂ ಮಾಹಿತಿ ಬಂದಿಲ್ಲ” ಎಂದು ನೇಪಾಳದ ನಾಮ್ಚೆ ಪ್ರದೇಶದ ಸರ್ಕಾರಿ ಅಧಿಕಾರಿ ಜಗತ್ ಪ್ರಸಾದ್ ಭೂಸಲ್ ಹೇಳಿದ್ದಾಗಿ ದಿ ಹಿಂದೂ ವರದಿ ಮಾಡಿದೆ. ನಾಮ್ಚೆ ಪ್ರದೇಶ ಎವರೆಸ್ಟ್‌ ಪರ್ವತದ ಹತ್ತಿರದಲ್ಲಿದೆ.

ಚೀನಾ ನಿಯಂತ್ರಣದ ಟಿಬೆಟ್‌ನ ಪವಿತ್ರ ನಗರದಲ್ಲಿ ಭೂಕಂಪ

ಇಂದು (ಜ.7) ಬೆಳಿಗ್ಗೆ ಚೀನಾದ ನಿಯಂತ್ರಣದಲ್ಲಿರುವ ಟಿಬೆಟ್‌ನ ಪವಿತ್ರ ನಗರ ಶಿಗಾಟ್ಸೆಯಲ್ಲಿ 6.8 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಚೀನಾದ ಭೂಕಂಪ ನೆಟ್‌ವರ್ಕ್ ಕೇಂದ್ರವು ತಿಳಿಸಿದೆ. ಘಟನೆಯಲ್ಲಿ ಕಟ್ಟಡಗಳಿಗೆ ಹಾನಿಯಾಗಿದೆ. ನೇಪಾಳ ಮತ್ತು ಭಾರತದಲ್ಲಿ ಕೂಡ ಭೂಕಂಪನ ಸಂಭವಿಸಿದ್ದು, ಜನರು ಮನೆಗಳಿಂದ ಹೊರ ಬಂದಿದ್ದಾರೆ ಎಂದಿದೆ.

ಇದನ್ನೂ ಓದಿ : ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ರಾಜೀನಾಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...

ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರದಿಂದ ಬೆಂಬಲ, ಭರವಸೆ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್

ನವದೆಹಲಿ: ರಾಜ್ಯದಿಂದ ಕಾರ್ಯಸಾಧ್ಯತಾ ವರದಿ ಬಂದ ನಂತರ, ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣಕ್ಕೆ ಅಗತ್ಯವಿರುವ ಎಲ್ಲಾ ಅನುಮತಿಗಳನ್ನು ಕೇಂದ್ರವು ನೀಡಲಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು...

ಮಧ್ಯಪ್ರದೇಶ| ಪ್ರಬಲಜಾತಿ ಗುಂಪಿನಿಂದ ಹಲ್ಲೆ-ಜಾತಿನಿಂದನೆ; ನ್ಯಾಯ ಸಿಗದಿದ್ದರೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದ ದಲಿತ ಕುಟುಂಬ

ಮಧ್ಯಪ್ರದೇಶದ ನೀಮಚ್ ಜಿಲ್ಲೆಯ ದಲಿತ ಕುಟುಂಬವೊಂದರ ಮೇಲೆ ಗ್ರಾಮದ ಪ್ರಬಲಜಾತಿ ಗುಂಪೊಂದು ಜಾತಿ ಆಧಾರಿತ ನಿಂದನೆ ಮಾಡಿ ಹಲ್ಲೆ ನಡೆಸಿದ್ದಾರೆ. ದೂರ ನೀಡಿದರೂ ಕ್ರಮ ತಗೆದುಕೊಂಡಿದ್ದ ಎಂದು ಆರೋಪಿಸಿರುವ ಕುಟುಂಬ, ಪೊಲೀಸರು ನಿಷ್ಕ್ರಿಯತೆ...

ವಿಶ್ವದ ಅತಿದೊಡ್ಡ ಎಲ್‌ಎನ್‌ಜಿ ಹಬ್ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ

ವಿಶ್ವದ ಅತಿದೊಡ್ಡ ಲಿಕ್ವಿಫೈಡ್ ನ್ಯಾಚುರಲ್ ಗ್ಯಾಸ್ (ಎಲ್‌ಎನ್‌ಜಿ) ರಫ್ತು ಕೇಂದ್ರಗಳಲ್ಲಿ ಒಂದಾದ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಈ ದಾಳಿಯಿಂದಾಗಿ ಅಲ್ಲಿನ ಅನಿಲ ಸೌಲಭ್ಯಗಳಲ್ಲಿ...

ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ : ತನಿಖಾ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಧರ್ಮಸ್ಥಳ ಗ್ರಾಮದಲ್ಲಿ 1990ರಿಂದ 2021ರ ನಡುವೆ ಸಂಭವಿಸಿದೆ ಎನ್ನಲಾದ 74 ಅಸಹಜ ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬುಧವಾರ (ಮಾ.18) ನಿರ್ದೇಶಿಸಿದೆ ಎಂದು barandbench.com ವರದಿ ಮಾಡಿದೆ....

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...