Homeಅಂತರಾಷ್ಟ್ರೀಯಅಮೆರಿಕದ ಅಲಾಸ್ಕಾದಲ್ಲಿ 7.3 ತೀವ್ರತೆಯ ಪ್ರಬಲ ಭೂಕಂಪ

ಅಮೆರಿಕದ ಅಲಾಸ್ಕಾದಲ್ಲಿ 7.3 ತೀವ್ರತೆಯ ಪ್ರಬಲ ಭೂಕಂಪ

- Advertisement -
- Advertisement -

ಅಮೆರಿಕದ ಅಲಾಸ್ಕಾ ರಾಜ್ಯದ ಕರಾವಳಿಯಲ್ಲಿ ಬುಧವಾರ 7.3 ತೀವ್ರತೆಯ ಭೂಕಂಪ ಸಂಭವಿಸಿದ್ದು, ಸುನಾಮಿ ಎಚ್ಚರಿಕೆ ನೀಡಲಾಗಿತ್ತು. ನಂತರ ಅದನ್ನು ಹಿಂಪಡೆಯಲಾಗಿದೆ ಎಂದು ಯುಎಸ್ ಭೂವೈಜ್ಞಾನಿಕ ಸಮೀಕ್ಷೆ (ಯುಎಸ್‌ಜಿಎಸ್) ತಿಳಿಸಿದೆ.

ಸ್ಥಳೀಯ ಸಮಯ ಮಧ್ಯಾಹ್ನ ಸುಮಾರು 12:37 ಕ್ಕೆ ಭೂಮಿ ಕಂಪಿಸಿದ್ದು, ಇದರ ಕೇಂದ್ರ ಬಿಂದುವು ದ್ವೀಪ ಪಟ್ಟಣವಾದ ಸ್ಯಾಂಡ್ ಪಾಯಿಂಟ್‌ನಿಂದ ಸುಮಾರು 54 ಮೈಲುಗಳು (87 ಕಿಲೋಮೀಟರ್) ದಕ್ಷಿಣದಲ್ಲಿ, 12.5 ಮೈಲುಗಳಷ್ಟು ಭೂಮಿಯ ಆಳದಲ್ಲಿ ಪತ್ತೆಯಾಗಿದೆ ಯುಎಸ್‌ಜಿಎಸ್ ಹೇಳಿದೆ.

ಭೂಕಂಪದ ನಂತರ ಅಧಿಕಾರಿಗಳು ಆರಂಭದಲ್ಲಿ ದಕ್ಷಿಣ ಅಲಾಸ್ಕಾ ಮತ್ತು ಅಲಾಸ್ಕಾ ಪರ್ಯಾಯ ದ್ವೀಪಕ್ಕೆ ಸುನಾಮಿ ಎಚ್ಚರಿಕೆಯನ್ನು ನೀಡಿದ್ದರು. ಆದರೆ ನಂತರ ಅದನ್ನು ಸಂಪೂರ್ಣವಾಗಿ ಹಿಂತೆಗೆದುಕೊಂಡರು ಎಂದು ವರದಿಯಾಗಿದೆ.

“ದಕ್ಷಿಣ ಅಲಾಸ್ಕಾ ಮತ್ತು ಅಲಾಸ್ಕಾ ಪರ್ಯಾಯ ದ್ವೀಪದ ಕರಾವಳಿ ಪ್ರದೇಶಗಳಿಗೆ ನೀಡಲಾಗಿದ್ದ ಸುನಾಮಿ ಎಚ್ಚರಿಕೆಯನ್ನು ಹಿಂಪಡೆಯಲಾಗಿದೆ” ಎಂದು ಭೂಕಂಪದ ಸುಮಾರು ಎರಡು ಗಂಟೆಗಳ ನಂತರ ಬಿಡುಗಡೆ ಮಾಡಿದ ಸಂದೇಶದಲ್ಲಿ ರಾಷ್ಟ್ರೀಯ ಸುನಾಮಿ ಎಚ್ಚರಿಕೆ ಕೇಂದ್ರ (ಎನ್‌ಟಿಡಬ್ಲ್ಯುಸಿ) ತಿಳಿಸಿದೆ.

ಆರಂಭದ 7.3 ತೀವ್ರತೆಯ ಭೂಕಂಪದ ನಂತರ, 10ಕ್ಕೂ ಅಧಿಕ ಬಾರಿ ಭೂಮಿ ಕಂಪಿಸಿದೆ. ಅವುಗಳಲ್ಲಿ 5.2 ತೀವ್ರತೆ ಅತೀ ಹೆಚ್ಚು ಎಂದು ಯುಎಸ್‌ಜಿಎಸ್‌ ಮಾಹಿತಿ ನೀಡಿದೆ.

ಸುನಾಮಿ ಎಚ್ಚರಿಕೆ ಅಥವಾ ಸಲಹೆಯನ್ನು ಅಲಾಸ್ಕನ್ ಕರಾವಳಿಯ ಪ್ರದೇಶಗಳಿಗೆ ಮಾತ್ರ ನೀಡಲಾಗಿತ್ತು. ಭೂಕಂಪನ ದೂರದ ಪ್ರದೇಶಗಳ ಮೇಲೆ ಯಾವುದೇ ಪರಿಣಾಮ ಬೀರಿಲ್ಲ ಎಂದು ಎನ್‌ಟಿಡಬ್ಲ್ಯುಸಿ ತಿಳಿಸಿದೆ.

ಸ್ಯಾಂಡ್ ಪಾಯಿಂಟ್‌ನಲ್ಲಿ ಗರಿಷ್ಠ 0.2 ಅಡಿ (6.1 ಸೆಂಟಿಮೀಟರ್) ಎತ್ತರದ ಸುನಾಮಿ ಅಲೆಗಳು ಕಂಡುಬಂದಿವೆ. ಸುನಾಮಿಯ ಅಪಾಯಕ್ಕೆ ಸದ್ಯಕ್ಕೆ ಇಲ್ಲದಿದ್ದರೂ, ಭೂಕಂಪ ಸಂಭವಿಸಿದ ಪ್ರದೇಶದ ನಿವಾಸಿಗಳು ಅಪಾಯದ ಬಗ್ಗೆ ಎಚ್ಚರದಿಂದಿರಬೇಕು ಎಂದು ಎನ್‌ಟಿಡಬ್ಲ್ಯುಸಿ ಸಲಹೆ ನೀಡಿದೆ.

“ಸ್ಥಳೀಯ ತುರ್ತು ಅಧಿಕಾರಿಗಳು ಸುರಕ್ಷಿತ ಎಂದು ಸೂಚಿಸುವವರೆಗೆ ಅಪಾಯದ ವಲಯಗಳಿಗೆ ಹಿಂದಿರುಗಬೇಡಿ” ಎಂದು ಸೂಚಿಸಿದೆ.

ಅಲಾಸ್ಕಾ ಭೂಕಂಪ ವಲಯ ಎಂದು ಗುರುತಿಸಿರುವ ಪೆಸಿಫಿಕ್ ರಿಂಗ್ ಆಫ್ ಫೈರ್‌ನಲ್ಲಿ ಬರುತ್ತದೆ. ಅಮೆರಿಕದ ಈ ದೂರದ ರಾಜ್ಯವು ಮಾರ್ಚ್ 1964ರಲ್ಲಿ 9.2 ತೀವ್ರತೆಯ ಭೂಕಂಪಕ್ಕೆ ತುತ್ತಾಗಿತ್ತು. ಇದು ಉತ್ತರ ಅಮೆರಿಕಾದಲ್ಲಿ ದಾಖಲಾದ ಅತ್ಯಂತ ಪ್ರಬಲ ಭೂಕಂಪವಾಗಿತ್ತು.

ಈ ಭೂಕಂಪದಿಂದ ಸುನಾಮಿ ಉಂಟಾಗಿತ್ತು. ಪರಿಣಾಮ ಆಂಕಾರೇಜ್ ನಗರದ ಮೇಲೆ ಸಂಪೂರ್ಣ ನಾಮವಶೇಷ ಆಗಿತ್ತು. ಸುನಾಮಿ ಅಲೆಗಳು ಅಲಾಸ್ಕಾ ಕೊಲ್ಲಿ, ಅಮೆರಿಕದ ಪಶ್ಚಿಮ ಕರಾವಳಿ ಮತ್ತು ಹವಾಯಿ ತೀರಕ್ಕೆ ಅಪ್ಪಳಿಸಿತ್ತು. ಹಲವಾರು ಜನರು ಪ್ರಾಣ ಕಳೆದುಕೊಂಡಿದ್ದರು ಮತ್ತು 400 ಮಿಲಿಯನ್‌ ಡಾಲರ್‌ಗಿಂತಲೂ ಹೆಚ್ಚು ಆಸ್ತಿ ನಷ್ಟ ಆಗಿತ್ತು.

ಜುಲೈ 2023ರಲ್ಲಿ ಅಲಾಸ್ಕಾ ಪರ್ಯಾಯ ದ್ವೀಪದಲ್ಲಿ 7.2 ತೀವ್ರತೆಯ ಭೂಕಂಪ ಸಂಭವಿಸಿತ್ತು. ಈ ಕಂಪನದಿಂದ ಯಾವುದೇ ದೊಡ್ಡ ಹಾನಿ ಸಂಭವಿಸಿರಲಿಲ್ಲ.

ಗಾಜಾ ನರಮೇಧಕ್ಕೆ ಸಹಭಾಗಿತ್ವ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ IPSP ಸಂಘಟನೆಯಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...