Homeಮುಖಪುಟಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ, ಸುನಾಮಿ ಎಚ್ಚರಿಕೆ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ, ಸುನಾಮಿ ಎಚ್ಚರಿಕೆ

- Advertisement -
- Advertisement -

ಇಂದು(ಜ.1) ಉತ್ತರ ಮಧ್ಯ ಜಪಾನ್‌ನಲ್ಲಿ 7.6 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಮಾಧ್ಯಮ ವರದಿಗಳು ಹೇಳಿವೆ.

ಇಶಿಕಾವಾ, ನಿಗಾಟಾ ಮತ್ತು ಟೊಯಾಮಾ ಪ್ರಾಂತ್ಯಗಳ ಕರಾವಳಿ ಪ್ರದೇಶಗಳಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ಜಪಾನ್ ಹವಾಮಾನ ಸಂಸ್ಥೆ ಸುನಾಮಿ ಎಚ್ಚರಿಕೆಯನ್ನು ನೀಡಿದೆ ಎಂದು ವರದಿಗಳು ತಿಳಿಸಿವೆ.

ಹೊಕುರಿಕು ಎಲೆಕ್ಟ್ರಿಕ್ ಪವರ್ ತನ್ನ ಪರಮಾಣು ವಿದ್ಯುತ್ ಸ್ಥಾವರಗಳಲ್ಲಿ ಭೂಕಂಪದಿಂದ ಏನಾದರು ಹಾನಿ ಸಂಭವಿಸಿದಾ? ಎಂದು ಪರಿಶೀಲಿಸುತ್ತಿದೆ ಎಂದು ಜಪಾನಿನ ಎನ್‌ಹೆಚ್‌ಕೆ ಟಿವಿ ವರದಿ ಮಾಡಿದೆ.

ಪೆಸಿಫಿಕ್‌ ಸಾಗರದ “ರಿಂಗ್ ಆಫ್ ಫೈರ್” ಎಂದು ಕರೆಯಲ್ಪಡುವ ಜಪಾನ್ ದೇಶವು, ವಿಶ್ವದ ಅತ್ಯಂತ ಭೂಕಂಪನ ಪೀಡಿತ ದೇಶಗಳಲ್ಲಿ ಒಂದಾಗಿದೆ. ಮಾರ್ಚ್ 11,2011 ರಂದು ಜಪಾನ್‌ನ ಈಶಾನ್ಯ ಕರಾವಳಿಯಲ್ಲಿ ಸಂಭವಿಸಿದ 9.0 ತೀವ್ರತೆಯ ಭೂಕಂಪದಿಂದ ಸುನಾಮಿ ಬಂದಿತ್ತು. ಈ ಅವಘಡದಲ್ಲಿ 18,000ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದರು ಮತ್ತು ಪರಮಾಣು ದುರಂತದ ಅಪಾಯ ಉಂಟು ಮಾಡಿತ್ತು.

2011ರ ಸುನಾಮಿ ವೇಳೆ ಸಮುದ್ರದಲ್ಲಿ 10 ಮೀಟರ್ ಎತ್ತರದ ಅಲೆಗಳು ಎದ್ದಿತ್ತು. ಇಂದಿನ ಭೂಕಂಪನದ ತೀವ್ರತೆ ಗಮನಿಸಿದರೆ 5 ಮೀಟರ್ ಎತ್ತರದ ಅಲೆಗಳು ಎಳುವ ಸಾಧ್ಯತೆ ಇದೆ. ಜನರನ್ನು ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚಿಸಲಾಗಿದೆ ಎಂದು ವರದಿಗಳು ಹೇಳಿವೆ.

ಇದನ್ನೂ ಓದಿ : ಕಪ್ಪು ಕುಳಿಗಳ ಅಧ್ಯಯನಕ್ಕೆ ಇಸ್ರೋದಿಂದ ಎಕ್ಸ್‌ಪೋಸ್ಯಾಟ್ ಉಪಗ್ರಹ ಉಡಾವಣೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣ: ಕೇಜ್ರಿವಾಲ್ ಸಹಾಯಕ ಬಂಧನ

0
ಎಎಪಿ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಮತ್ತು ಮಾಜಿ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರನ್ನು ಶನಿವಾರ ದೆಹಲಿ...