Homeಮುಖಪುಟಸಿರಿಯಾ, ಟರ್ಕಿಯಲ್ಲಿ 7.8 ತೀವ್ರತೆಯ ಭೂಕಂಪನ; 300 ಕ್ಕೂ ಹೆಚ್ಚು ಸಾವು

ಸಿರಿಯಾ, ಟರ್ಕಿಯಲ್ಲಿ 7.8 ತೀವ್ರತೆಯ ಭೂಕಂಪನ; 300 ಕ್ಕೂ ಹೆಚ್ಚು ಸಾವು

- Advertisement -
- Advertisement -

ಟರ್ಕಿ ಮತ್ತು ಸಿರಿಯಾದಲ್ಲಿ ಸೋಮವಾರ 7.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಅನೇಕ ಜನರು ಸಾವನ್ನಪ್ಪಿದ್ದಾರೆ, ಜನರು ನಿದ್ದೆಯಲ್ಲಿರುವಾಗಲೇ ಕಟ್ಟಡಗಳು ನೆಲಸಮಗೊಂಡಿವೆ. ಸೈಪ್ರಸ್ ದ್ವೀಪದಷ್ಟು ದೂರದವರೆಗೂ ಭೂಮಿ ಕಂಪಿಸಿದೆ.

ಟರ್ಕಿಯ ಸ್ಥಳೀಯ ಅಧಿಕಾರಿಗಳು ಆರಂಭಿಕ ಸಾವಿನ ಸಂಖ್ಯೆ 53 ಎಂದು ಹೇಳಿದ್ದಾರೆ. ಆದರೆ ಇದು ಗಣನೀಯವಾಗಿ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಏಕೆಂದರೆ ಎಲ್ಲರೂ ಮನೆಯಲ್ಲಿ ಮಲಗಿರುವಾಗ ಈ ಅವಾಂತರ ಸಂಭವಿಸಿರುವುದರಿಂದ ಕಟ್ಟಡ ನೆಲಸಮಗೊಂಡಿವೆ ಹಾಗಾಗಿ ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಉತ್ತರ ಸಿರಿಯಾದ ಸರ್ಕಾರಿ ನಿಯಂತ್ರಿತ ಭಾಗಗಳಲ್ಲಿ ಕನಿಷ್ಠ 42 ಜನರು ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಮಾಧ್ಯಮ ತಿಳಿಸಿದೆ.

ಹಾನಿಗೊಳಗಾದ ಮನೆಗಳ ಅವಶೇಷಗಳ ಅಡಿಯಲ್ಲಿ ಅಗೆದು ಮೃತದೇಹಗಳನ್ನು ರಕ್ಷಕರು ಹೊರತೆಗೆಯುತ್ತಿರುವುದನ್ನು ಟರ್ಕಿಯ ಜನರು ಹಿಮದಲ್ಲಿ ನಿಂತು ಆತಂಕದಲ್ಲಿ ನೋಡುತ್ತಿದ್ದಾರೆ.

ಸುಮಾರು 17.9 ಕಿಲೋಮೀಟರ್ (11 ಮೈಲುಗಳು) ಪ್ರದೇಶದಲ್ಲಿ ಸ್ಥಳೀಯ ಸಮಯ (0117 GMT) 04:17 ಕ್ಕೆ ಈ ಭೂಕಂಪ ಸಂಭವಿಸಿದೆ. 15 ನಿಮಿಷಗಳ ನಂತರ 6.7-ತೀವ್ರತೆಯ ಭೂಕಂಪನ ಸಂಭವಿಸಿದೆ ಎಂದು US ಏಜೆನ್ಸಿ ತಿಳಿಸಿದೆ.

ಟರ್ಕಿಯ ಎಎಫ್‌ಎಡಿ ತುರ್ತು ಸೇವಾ ಕೇಂದ್ರವು ಮೊದಲ ಭೂಕಂಪದ ತೀವ್ರತೆಯನ್ನು 7.4 ಎಂದು ಹೇಳಿದೆ.

ಈ ಪ್ರದೇಶದಲ್ಲಿ ಸಂಭವಿಸಿದ ಇವತ್ತಿನ ಭೂಕಂಪನವು, ಕನಿಷ್ಠ ಒಂದು ಶತಮಾನದಲ್ಲೇ ಅತ್ಯಂತ ಭಯಾನಕ ಭೂಕಂಪನ ಇದಾಗಿದೆ.

”ಭೂಕಂಪದಿಂದ ಸಂತ್ರಸ್ತರಾದ ನಮ್ಮ ಎಲ್ಲಾ ನಾಗರಿಕರ ಜೊತೆ ನಾವಿದ್ದೇವೆ. ನಾವು ಸಾಧ್ಯವಾದಷ್ಟು ಬೇಗ ಮತ್ತು ಕನಿಷ್ಠ ಹಾನಿಯೊಂದಿಗೆ ಈ ದುರಂತದ ಮೂಲಕ ಹೊರಬರುತ್ತೇವೆ ಎಂದು ನಾವು ಭಾವಿಸುತ್ತೇವೆ” ಎಂದು ಟರ್ಕಿಶ್ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೋಗನ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಅದಾನಿ ವಿಚಾರವಾಗಿ ಪ್ರತಿದಿನ ಕಾಂಗ್ರೆಸ್‌ನಿಂದ ಮೋದಿಗೆ ಮೂರು ಪ್ರಶ್ನೆ

ದಕ್ಷಿಣ ಟರ್ಕಿ ಮತ್ತು ನೆರೆಯ ಸಿರಿಯಾದ ಪ್ರಮುಖ ನಗರಗಳಾದ್ಯಂತ ಅನೇಕ ಕಟ್ಟಡಗಳು ಈ ಭೂಕಂಪನದಿಂದ ನೆಲಸಮಗೊಂಡವು. ಈ ಪ್ರದೇಶ ಈಗಾಗಲೇ ಅತಿ ಹೆಚ್ಚು ಹಿಂಸಾಚಾರದಿಂದ ನಲುಗಿಹೋಗಿದೆ. ಅನೇಕರ ಸಾವುನೋವುಗಳು ಸಂಭವಿಸಿವೆ. ಇದೀಗ ಭೂಕಂಪನದ ದುರಂತವೊಂದು ನಡೆದಿದೆ.

ಟರ್ಕಿಶ್ ಮಾಧ್ಯಮಗಳು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿನ ಚಿತ್ರಗಳು ಕಹ್ರಮನ್ಮರಸ್ ಮತ್ತು ನೆರೆಯ ಗಜಿಯಾಂಟೆಪ್ ನಗರದಲ್ಲಿ ನೆಲಸಮವಾದ ಕಟ್ಟಡಗಳ ಅವಶೇಷಗಳ ಮೂಲಕ ರಕ್ಷಕರು ಅಗೆಯುವುದನ್ನು ತೋರಿಸುತ್ತಿವೆ.

ಕಹ್ರಮನ್ಮರಸ್‌ನ ಒಂದು ಚಿತ್ರದಲ್ಲಿ ಆಕಾಶದೆತ್ತರಕ್ಕೆ ಬೆಂಕಿಯು ಹೊತ್ತಿಕೊಂಡಿರುವುದು ಕಂಡುಬಂದಿದೆ ಆದರೆ ಅದರ ಮೂಲವು ಸ್ಪಷ್ಟವಾಗಿ ತಿಳಿದುಬಂದಿಲ್ಲ.

ಅದ್ಯಾಮಾನ್, ಮಾಲತ್ಯ ಮತ್ತು ದಿಯರ್‌ಬಕಿರ್ ನಗರಗಳಲ್ಲಿ ಕಟ್ಟಡಗಳು ಕುಸಿದಿವೆ ಎಂದು NTV ಮಾಧ್ಯಮ ಹೇಳಿದೆ..

ಮಧ್ಯ ಟರ್ಕಿಯ ಕೆಲವು ಭಾಗಗಳಲ್ಲಿ ಮತ್ತು ರಾಜಧಾನಿ ಅಂಕಾರಾದಲ್ಲಿಯೂ ಭೂಕಂಪದ ಅನುಭವವಾಗಿದೆ ಎಂದು ಸಿಎನ್‌ಎನ್ ಟರ್ಕ್ ಮಾಧ್ಯಮ ಹೇಳಿದೆ.

‘ಅತಿದೊಡ್ಡ ಭೂಕಂಪ’

ಸಿರಿಯಾದ ಪಶ್ಚಿಮ ಕರಾವಳಿಯಲ್ಲಿರುವ ಲಟಾಕಿಯಾ ಬಳಿ ಕಟ್ಟಡವೊಂದು ಕುಸಿದಿದೆ ಎಂದು ಸಿರಿಯನ್ ಸ್ಟೇಟ್ ಮಾಧ್ಯಮ ವರದಿ ಮಾಡಿದೆ.

ಮಧ್ಯ ಸಿರಿಯಾದ ಹಮಾದಲ್ಲಿ ಹಲವಾರು ಕಟ್ಟಡಗಳು ಭಾಗಶಃ ಕುಸಿದಿದ್ದು, ನಾಗರಿಕ ರಕ್ಷಣಾ ಮತ್ತು ಅಗ್ನಿಶಾಮಕ ಸಿಬ್ಬಂದಿಗಳು ಅವಶೇಷಗಳಿಂದ ಬದುಕುಳಿದವರನ್ನು ಹೊರತೆಗೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಸರ್ಕಾರದ ಪರ ಮಾಧ್ಯಮಗಳು ತಿಳಿಸಿವೆ.

”ಐತಿಹಾಸಿಕವಾಗಿ, ಕೇಂದ್ರದ ಇತಿಹಾಸದಲ್ಲಿ ದಾಖಲಾದ ಅತಿದೊಡ್ಡ ಭೂಕಂಪವಿದು” ಎಂದು ಸರ್ಕಾರದ ಪರ ರೇಡಿಯೊಗೆ ಸಿರಿಯಾದ ರಾಷ್ಟ್ರೀಯ ಭೂಕಂಪ ಕೇಂದ್ರದ ಮುಖ್ಯಸ್ಥರಾದ ರೇಡ್ ಅಹ್ಮದ್ ತಿಳಿಸಿದರು.

ಟರ್ಕಿಯ ಅಕಾಡೆಮಿ ಆಫ್ ಸೈನ್ಸಸ್‌ನ ಭೂಕಂಪ ತಜ್ಞ ನಾಸಿ ಗೊರೂರ್ ಅವರು, ಇದರಿಂದ ಮುಂದೆ ಯಾವುದೇ ಪ್ರವಾಹಗಳು ಆಗದಂತೆ ತಪ್ಪಿಸಲು ಆ ಪ್ರದೇಶದ ಅಣೆಕಟ್ಟುಗಳು ಬಿರುಕುಬಿಟ್ಟಿರುವ ಬಗ್ಗೆ ತಕ್ಷಣವೇ ಪರಿಶೀಲಿಸುವಂತೆ ಸ್ಥಳೀಯ ಅಧಿಕಾರಿಗಳನ್ನು ಒತ್ತಾಯಿಸಿದರು.

ವಿಶ್ವದ ಅತ್ಯಂತ ಸಕ್ರಿಯ ಭೂಕಂಪ ವಲಯಗಳಲ್ಲಿ ಟರ್ಕಿ ಕೂಡ ಒಂದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...