Homeಮುಖಪುಟ7 ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ: BJP 4, RJD, TRS, ಶಿವಸೇನೆ ತಲಾ ಒಂದು ಕ್ಷೇತ್ರಗಳಲ್ಲಿ...

7 ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ: BJP 4, RJD, TRS, ಶಿವಸೇನೆ ತಲಾ ಒಂದು ಕ್ಷೇತ್ರಗಳಲ್ಲಿ ಮುನ್ನಡೆ

- Advertisement -
- Advertisement -

ಆರು ರಾಜ್ಯಗಳ 7 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಮತ ಎಣಿಕೆ ಇಂದು ಆರಂಭಗೊಂಡಿದೆ. ಆರಂಭಿಕ ಸುತ್ತಿನ ಮತ ಎಣಿಕೆಯಲ್ಲಿ BJP 4, RJD, TRS, ಶಿವಸೇನೆ ತಲಾ ಒಂದು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ.

ಉತ್ತರ ಪ್ರದೇಶದ ಗೋಲ ಗೋಕರ್ಣನಾಥ, ಹರಿಯಾಣದ ಆದಂಪುರ, ಬಿಹಾರದ ಗೋಪಾಲ್‌ಗಂಜ್ ಮತ್ತು ಒಡಿಶಾದ ಧಮ್‌ನಗರ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಬಿಹಾರದ ಮೊಕಾಮಾದಲ್ಲಿ ತೇಜಸ್ವಿ ಯಾದವ್ ನೇತೃತ್ವದ ರಾಷ್ಟ್ರೀಯ ಜನತಾ ದಳ ಮುಂದಿದೆ. ತೆಲಂಗಾಣದ ಮುನುಗೋಡಿನಲ್ಲಿ ಕೆ ಚಂದ್ರಶೇಖರ್ ರಾವ್ ಅವರ ತೆಲಂಗಾಣ ರಾಷ್ಟ್ರೀಯ ಸಮಿತಿ ಮತ್ತು ಮುಂಬೈನ ಅಂಧೇರಿ ಪೂರ್ವ ಕ್ಷೇತ್ರದಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣ ಗೆಲುವಿನ ನಿರೀಕ್ಷೆಯಲ್ಲಿದೆ.

ಏಳು ಸ್ಥಾನಗಳಲ್ಲಿ ಈ ಮೊದಲು ಬಿಜೆಪಿ ಮೂರು, ಕಾಂಗ್ರೆಸ್ ಎರಡು, ಶಿವಸೇನೆ ಮತ್ತು ಆರ್‌ಜೆಡಿ ತಲಾ ಒಂದು ಸ್ಥಾನಗಳನ್ನು ಹೊಂದಿದ್ದವು. ಸದ್ಯದ ಮುನ್ನಡೆ ಆಧಾರದಲ್ಲಿ ಬಿಜೆಪಿ ಮತ್ತು ಟಿಆರ್‌ಎಸ್ ಒಂದು ಅಧಿಕ ಸ್ಥಾನ ಗೆಲ್ಲುವತ್ತ ಮುನ್ನಡೆ ಸಾಧಿಸಿವೆ. ಕಾಂಗ್ರೆಸ್ ಎರಡು ಸ್ಥಾನಗಳನ್ನು ಕಳೆದುಕೊಂಡು ಮುಖಭಂಗ ಅನುಭವಿಸಿದೆ.

ಇದನ್ನೂ ಓದಿ; ಮತ್ತೊಂದು ವಿವಾದಕ್ಕೆ ರಂಗಾಯಣ ನಿರ್ದೇಶಕರ ರೂಪುರೇಷೆ; ‘ಟಿಪ್ಪು’ ಕುರಿತ ನಾಟಕ ಪ್ರದರ್ಶನಕ್ಕೆ ಸಿದ್ಧ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ.ಬಂಗಾಳ: ತನ್ನ ವಿರುದ್ಧದ ತನಿಖೆಗೆ ಸಹಕರಿಸದಂತೆ ರಾಜಭವನದ ಸಿಬ್ಬಂದಿಗಳಿಗೆ ಸೂಚಿಸಿದ ಗವರ್ನರ್‌

0
ಪ.ಬಂಗಾಳದ ರಾಜ್ಯಪಾಲ ಸಿವಿ ಆನಂದ ಬೋಸ್ ವಿರುದ್ಧ ರಾಜಭವನದ ಮಹಿಳಾ ಉದ್ಯೋಗಿಯೋರ್ವರು ಲೈಂಗಿಕ ದೌರ್ಜನ್ಯದ ಆರೋಪದಲ್ಲಿ ಪ್ರಕರಣ ದಾಖಲಿಸಿದ್ದರು. ಈ ಕುರಿತು ತನಿಖೆ ನಡೆಸಲು ಕೋಲ್ಕತ್ತಾ ಪೊಲೀಸರು ತಂಡವನ್ನು ರಚಿಸಿದ್ದಾರೆ. ಇದರ ಬೆನ್ನಲ್ಲಿ...