Homeಮುಖಪುಟಕೇರಳದಿಂದ ರಾಜ್ಯಕ್ಕೆ ಪ್ರವೇಶಿಸುವವರಿಗೆ 7 ದಿನಗಳ ಸಾಂಸ್ಥಿಕ ಕ್ವಾರಂಟೈನ್‌ ಕಡ್ಡಾಯ

ಕೇರಳದಿಂದ ರಾಜ್ಯಕ್ಕೆ ಪ್ರವೇಶಿಸುವವರಿಗೆ 7 ದಿನಗಳ ಸಾಂಸ್ಥಿಕ ಕ್ವಾರಂಟೈನ್‌ ಕಡ್ಡಾಯ

- Advertisement -
- Advertisement -

ಕೇರಳದಿಂದ ರಾಜ್ಯಕ್ಕೆ ಪ್ರವೇಶಿಸುವ ಜನರಿಗೆ ರಾಜ್ಯ ಸರ್ಕಾರವು ಸಾಂಸ್ಥಿಕ ಕ್ವಾರಂಟೈನ್‌ ಅನ್ನು ಕಡ್ಡಾಯಗೊಳಿಸಿದೆ. ಕೇರಳದ ಪ್ರಯಾಣಿಕರು ಅಲ್ಲಿ ಒಂದು ವಾರದವರೆಗೆ ಕ್ವಾರಂಟೈನ್‌ನಲ್ಲಿ ಇರಬೇಕಾಗುತ್ತದೆ ಎಂದು ಕರ್ನಾಟಕ ಆರೋಗ್ಯ ಸಚಿವ ಕೆ ಸುಧಾಕರ್ ಮಂಗಳವಾರ ಹೇಳಿದ್ದಾರೆ.

ಲಸಿಕೆ ಹಾಕಿದ ಮತ್ತು ಆರ್‌ಟಿ-ಪಿಸಿಆರ್ ನಗೆಟಿವ್‌‌ ಪರೀಕ್ಷಾ ವರದಿಯನ್ನು ಹೊಂದಿರುವವರಿಗೂ ಈ ನಿಯಮ ಅನ್ವಯವಾಗುತ್ತದೆ ಎಂದು ಸುಧಾಕರ್ ತಿಳಿಸಿದ್ದಾರೆ.

ಇದನ್ನೂ ಓದಿ: ತೆಲಂಗಾಣದಲ್ಲಿ ಬೃಹತ್ ಪಾದಯಾತ್ರೆ ಆರಂಭಿಸಿದ ಬಿಜೆಪಿ: ಕೋವಿಡ್ ಉಲ್ಬಣದ ಆತಂಕ!

ಕೇರಳದಿಂದ ವಿಮಾನದಲ್ಲಿ ಕರ್ನಾಟಕಕ್ಕೆ ಆಗಮಿಸುವ ಪ್ರಯಾಣಿಕರು ಕಡ್ಡಾಯವಾಗಿ ಏಳು ದಿನಗಳ ಕ್ವಾರಂಟೈನ್‌ಗೆ ಒಳಗಾಗಬೇಕಾಗುತ್ತದೆ. ಸಾಂಸ್ಥಿಕ ಕ್ವಾರಂಟೈನ್‌‌ಗೆ ಗೊತ್ತುಪಡಿಸಲಾಗಿರುವ ತಮ್ಮ ಆಯ್ಕೆಯ ಹೋಟೆಲ್ ಅನ್ನು ಈ ಪ್ರಯಾಣಿಕರು ಆಯ್ಕೆ ಮಾಡಿಕೊಳ್ಳಬಹುದು ಎಂದು ಸುಧಾಕರ್ ಹೇಳಿದ್ದಾರೆ.

ಸಾಂಸ್ಥಿಕ ಕ್ವಾರಂಟೈನ್‌ಗೆ ಒಳಪಡುವ ಇಂತಹ ಪ್ರಯಾಣಿಕರನ್ನು ಆರನೇ ದಿನದಂದು ಪರೀಕ್ಷಿಸಲಾಗುತ್ತದೆ ಮತ್ತು ಏಳನೇ ದಿನದಲ್ಲಿ ಕೊರೊನಾ ವರದಿ ನಗೆಟಿವ್‌‌ ಬಂದರೆ, ಅವರನ್ನು ಹೋಗಲು ಅನುಮತಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಕೇರಳದಲ್ಲಿ ಕೊರೊನಾ ಪ್ರಕರಣಗಳ ಏರಿಕೆಯಿಂದಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸೋಮವಾರದಂದು ಕೇರಳದಲ್ಲಿ 19,622 ಹೊಸ ಪ್ರಕರಣಗಳು ಮತ್ತು 132 ಕೊರೊನಾ ಸಾವುಗಳು ದಾಖಲಾಗಿವೆ. ಭಾನುವಾರದಂದು ಅಲ್ಲಿ 29,836 ಹೊಸ ಪ್ರಕರಣಗಳು ಮತ್ತು 75 ಸಂಬಂಧಿತ ಸಾವುಗಳು ದಾಖಲಾಗಿದ್ದವು.

ಇದನ್ನೂ ಓದಿ: ಬೆಳಗಾವಿ: ಪಾಲಿಕೆ ಚುನಾವಣೆಗೆ ಉಚಿತ ಶವಸಂಸ್ಕಾರದ ಭರವಸೆ ನೀಡಿದ ಬಿಜೆಪಿ!

ರಾಜ್ಯ ಸರ್ಕಾರವು ದಕ್ಷಿಣ ಕನ್ನಡ, ಉಡುಪಿ ಮತ್ತು ಚಾಮರಾಜನಗರದಂತಹ ಕೇರಳದ ಗಡಿ ಜಿಲ್ಲೆಗಳಲ್ಲಿ ಕೊರೊನಾ ತಡೆಗಟ್ಟುವಿಕೆಯನ್ನು ಮತ್ತಷ್ಟು ಬಲಪಡಿಸುವ ಕುರಿತು ತಜ್ಞರೊಂದಿಗೆ ಸಮಾಲೋಚಿಸಿ ಕಾರ್ಯತಂತ್ರ ರೂಪಿಸುತ್ತಿದೆ ಎಂದು ಸುಧಾಕರ್ ತಿಳಿಸಿದ್ದಾರೆ.

ಕೊರೊನಾ ಹರಡುವುದನ್ನು ನಿಯಂತ್ರಿಸಲು ಗಡಿ ಜಿಲ್ಲೆಗಳಲ್ಲಿ ಮತ್ತಷ್ಟು ಕಠಿಣ ಕ್ರಮಗಳನ್ನು ಸರ್ಕಾರ ತೆಗೆದುಕೊಳ್ಳಲಿದೆ ಎಂದು ಅವರು ಹೇಳಿದ್ದಾರೆ.

ಮುಂಬರುವ ಗಣೇಶ ಹಬ್ಬದ ಸಮಯದಲ್ಲಿ ಕೊರೊನಾ ಸಂಬಂಧಿತ ನಿರ್ಬಂಧಗಳಿವೆಯೇ ಎಂಬ ಪ್ರಶ್ನೆಗೆ ಉತ್ತರಿಸಿರುವ ಅವರು, “ಆ ಸಮಯದಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವುದರಿಂದ ಸಾಂಕ್ರಾಮಿಕ ರೋಗ ಹರಡುವ ಭೀತಿ ಹೆಚ್ಚಾಗಿದೆ. ಯಾವುದೇ ಸಾರ್ವಜನಿಕ ಸಮಾರಂಭಗಳು ನಡೆಯದಂತೆ ಆರೋಗ್ಯ ಇಲಾಖೆಯು ಒತ್ತಾಯಿಸುತ್ತಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಮಗೊಂಡನಹಳ್ಳಿ: ತಮ್ಮ ನೆಲವನ್ನು ಕಸಿಯುತ್ತಿರುವ ಸರ್ಕಾರದ ವಿರುದ್ಧ ಪ್ರತಿಭಟಿಸಿದ ದನಗಳು!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚಾಮರಾಜನಗರ: ರೈತ ಮುಖಂಡರ ಮೇಲೆ ಬಿಜೆಪಿಗರಿಂದ ಹಲ್ಲೆ

0
ರೈತ ಮುಖಂಡರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿ ಬೆದರಿಕೆ ಹಾಕಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಬಿಜೆಪಿ ಗುಂಡಾಗಳು ಅವಾಚ್ಯವಾಗಿ ನಿಂದಿಸಿ ತಳ್ಳಾಟ ನಡೆಸಿದ್ದಾರೆ, ರೈತರ ಸ್ವಾಭಿಮಾನವಾದ ಹಸಿರು ಟವಲನ್ನು ಕಿತ್ತು ಅವಮಾನಿಸಿದ್ದಾರೆ...