Homeಕರ್ನಾಟಕಹೊಸಕೋಟೆ ಭೀಕರ ಅಪಘಾತದಲ್ಲಿ 7 ಮಂದಿ ಸಾವು: ಮೃತರಲ್ಲಿ 6 ಮಂದಿ 17-18 ವರ್ಷದ ವಿದ್ಯಾರ್ಥಿಗಳು!

ಹೊಸಕೋಟೆ ಭೀಕರ ಅಪಘಾತದಲ್ಲಿ 7 ಮಂದಿ ಸಾವು: ಮೃತರಲ್ಲಿ 6 ಮಂದಿ 17-18 ವರ್ಷದ ವಿದ್ಯಾರ್ಥಿಗಳು!

- Advertisement -
- Advertisement -

ಬೆಂಗಳೂರು: ಫೆಬ್ರವರಿ 13, ಶುಕ್ರವಾರ ಬೆಳಗಿನ ಜಾವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಹೊರವಲಯದಲ್ಲಿ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ.

ಪೊಲೀಸರ ಪ್ರಕಾರ, ಹೊಸಕೋಟೆ – ದಾಬಸ್ಪೇಟೆ ರಾಷ್ಟ್ರೀಯ ಹೆದ್ದಾರಿಯ ಎಂ. ಸತ್ಯವಾರ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ.

ಹೊಸಕೋಟೆಯಿಂದ ದೇವನಹಳ್ಳಿ ಕಡೆಗೆ ಹೋಗುತ್ತಿದ್ದ ಎಕ್ಸ್‌ಯುವಿ 700 ಕಾರು (ಕೆಎ 03 ಎನ್‌ಡಬ್ಲ್ಯೂ 0138) ಮೊದಲು ಮುಂದೆ ಸಾಗುತ್ತಿದ್ದ ಮೋಟಾರ್‌ಸೈಕಲ್‌ಗೆ ಡಿಕ್ಕಿ ಹೊಡೆದಿದೆ. ನಂತರ ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಆ ನಂತರದ ಅವ್ಯವಸ್ಥೆಯಲ್ಲಿ ಮತ್ತೊಂದು ಕಾರು ಸಿಲುಕಿಕೊಂಡ ಪರಿಣಾಮವಾಗಿ ಎರಡು ಕಾರುಗಳು, ಒಂದು ಕ್ಯಾಂಟರ್ ಮತ್ತು ಒಂದು ಮೋಟಾರ್ ಸೈಕಲ್ ನಡುವೆ ತೀವ್ರ ಸರಪಳಿ ಡಿಕ್ಕಿಯಾಗಿದೆ. 

XUV ಕಾರಿನಲ್ಲಿದ್ದ ಆರು ಮಂದಿ ಮತ್ತು ಮೋಟಾರ್ ಸೈಕಲ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತದೇಹಗಳನ್ನು ಹೊಸಕೋಟೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಪೊಲೀಸರು ಘಟನೆಯ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಹೆಚ್ಚಿನವರು ವಿದ್ಯಾರ್ಥಿಗಳಾಗಿದ್ದು, ಮೃತ ವಿದ್ಯಾರ್ಥಿಗಳ ವಿವರಗಳು ಈ ಕೆಳಕಂಡಂತಿವೆ:

  • ಅಶ್ವಿನ್ ನಾಯರ್ (17) – ಆರ್‌ವಿ ಪಿಯು ಕಾಲೇಜ್ ವಿದ್ಯಾರ್ಥಿ, ಕೊತ್ತನೂರು ನಿವಾಸಿ
  • ಅರ್ಹನ್ ಶರೀಫ್ – ಸಿಎಂಆರ್ ಶಾಲೆ ವಿದ್ಯಾರ್ಥಿ, ಹೆಚ್‌ವಿಆರ್ ಲೇಔಟ್ ನಿವಾಸಿ
  • ಅಯನ್ ಅಲಿ (17) – ಸಿಎಂಆರ್ ಶಾಲೆ ವಿದ್ಯಾರ್ಥಿ
  • ಭರತ್ (18) – ಸಿಎಂಆರ್ ಕಾಲೇಜ್ ವಿದ್ಯಾರ್ಥಿ, ಫ್ರೇಜರ್ ಟೌನ್ ನಿವಾಸಿ
  • ಈತನ್ ಜಾರ್ಜ್ (17) – ಆರ್‌ವಿ ಪ್ರಥಮ ಪಿಯು ಕಾಲೇಜ್ ವಿದ್ಯಾರ್ಥಿ, ಹುಳಿಮಾವು ನಿವಾಸಿ
  • ಬಾಬಿ – ಮೃತಪಟ್ಟ ಮತ್ತೊಬ್ಬ ಯುವಕ
  • ಗಗನ್ (26) – ಮೃತ ಬೈಕ್ ಸವಾರ, ಸಫಲ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. 

ಅಪಘಾತಕ್ಕೀಡಾದ ಎಕ್ಸ್‌ಯುವಿ ಕಾರು ಅಯನ್ ಅಲಿ ಎಂಬ ಯುವಕನಿಗೆ ಸೇರಿದೆ ಎಂಬುದು ತನಿಖೆಯಿಂದ ತಿಳಿದುಬಂದಿದೆ. ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಮೃತರ ಕುಟುಂಬಸ್ಥರು ಸ್ಥಳಕ್ಕೆ ಆಗಮಿಸಿ ಆಕ್ರಂದನ ಮುಗಿಲು ಮುಟ್ಟಿದೆ. ಯುವ ವಯಸ್ಸಿನ ವಿದ್ಯಾರ್ಥಿಗಳ ಸಾವಿಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಘಾತ ಮತ್ತು ದುಃಖ ವ್ಯಕ್ತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಈ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನಿಸಿದ್ದೇವೆ : ಸಿಎಂ ಸಿದ್ದರಾಮಯ್ಯ

ಈ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ತೃತೀಯ ಭಾಷೆ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನ ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು (ಮಾ.28) ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಶಿಕ್ಷಣದಲ್ಲಿ ದ್ವಿಭಾಷಾ ನೀತಿ ಜಾರಿ ಮತ್ತು...

ಇರಾನ್‌ನ ಸರ್ವೋಚ್ಚ ನಾಯಕನನ್ನು ‘ನಿರ್ಮೂಲನೆ’ ಮಾಡಲಾಗಿದೆ; ನಮ್ಮ ಮುಂದಿನ ಗುರಿ ಕ್ಯೂಬಾ: ಡೊನಾಲ್ಡ್‌ ಟ್ರಂಪ್

ಪಶ್ಚಿಮ ಏಷ್ಯಾದಾದ್ಯಂತ ಯುದ್ಧ ಮುಂದುವರೆದಿದ್ದರೂ ಮತ್ತು ರಾಜತಾಂತ್ರಿಕ ಪ್ರಯತ್ನಗಳು ಅನಿಶ್ಚಿತವಾಗಿದ್ದರೂ ಸಹ, ಇರಾನ್‌ನ ಉನ್ನತ ನಾಯಕರು ಮತ್ತು ಅದರ ಹೆಚ್ಚಿನ ಮಿಲಿಟರಿ ಸಾಮರ್ಥ್ಯ ನಾಶವಾಗಿದೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಮಿಯಾಮಿಯಲ್ಲಿ ಸೌದಿ...

ತೆಲಂಗಾಣ| ನಿಗದಿತ ವೇತನ-ಉದ್ಯೋಗ ಭದ್ರತೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರಿಂದ ಸರ್ಕಾರದ ವಿರುದ್ಧ ಪ್ರತಿಭಟನೆ

ಹೈದರಾಬಾದ್‌ನ ಧರಣಾ ಚೌಕ್‌ನಲ್ಲಿ ಇಂದು ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯರು ನಡೆಸುತ್ತಿದ್ದ ಪ್ರತಿಭಟನೆ ಸಂದರ್ಭದಲ್ಲಿ ಅವರನ್ನು ಬಂಧಿಸಲಾಯಿತು. ಸರ್ಕಾರವು 18,000 ರೂ.ಗಳ ಮಾಸಿಕ ನಿಗದಿತ ವೇತನ ಮತ್ತು ಉದ್ಯೋಗ ಭದ್ರತೆಯ ಚುನಾವಣಾ...

2001-2006 ರ ಚುನಾವಣೆ ಗೆಲ್ಲಲು ವಿ.ಡಿ. ಸತೀಸನ್ ಆರ್‌ಎಸ್‌ಎಸ್ ಬೆಂಬಲ ಕೋರಿದ್ದರು: ಸಂಘದ ನಾಯಕನಿಂದ ಆರೋಪ

ಕೇರಳದ ಯುಡಿಎಫ್ ಅಧ್ಯಕ್ಷ ವಿ ಡಿ ಸತೀಸನ್ 2001 ಮತ್ತು 2006 ರಲ್ಲಿ ವಿಧಾನಸಭಾ ಚುನಾವಣೆಗಳಲ್ಲಿ ಗೆಲ್ಲಲು ರಾಷ್ಟ್ರೀಯ ಸ್ವಯಂಸೇವಕ ಸಂಘದ ನಾಯಕರ ಬೆಂಬಲ ಕೋರಿದ್ದರು ಎಂದು ಸಂಘ ಪರಿವಾರದ ಹಿರಿಯ ನಾಯಕ...

ಚರ್ಚ್‌ಗಳಲ್ಲಿ ಧರ್ಮಾಧ್ಯಕ್ಷರಾಗಲು ಕನ್ನಡ ಕಲಿತು ಬರಬೇಕು: ಡಾ.ಎಲ್.ಹನುಮಂತಯ್ಯ

ಬೆಂಗಳೂರು, ಮಾ.28: ಇತರೇ ರಾಜ್ಯಗಳಿಂದ ಕರ್ನಾಟಕದ ಚರ್ಚ್‌ಗಳಲ್ಲಿ ಧರ್ಮಾಧ್ಯಕ್ಷರಾಗಲು ಬರುವವರು ಕಡ್ಡಾಯವಾಗಿ ಕನಿಷ್ಠ ಆರು ತಿಂಗಳು ವ್ಯಾವಹಾರಿಕ ಕನ್ನಡವನ್ನು ಕಲಿತು ಬರಬೇಕು. ಇಲ್ಲದಿದ್ದರೆ ಇಲ್ಲಿನ ಧರ್ಮಾಧ್ಯಕ್ಷರ ಸ್ಥಾನಕ್ಕೆ ಗೌರವ ಉಳಿಯುವುದಿಲ್ಲ ಎಂದು ಸಾಹಿತಿ...

‘ಮಾನವಶಕ್ತಿ ಕೊರತೆಯಿಂದಾಗಿ ಇಸ್ರೇಲ್ ರಕ್ಷಣಾ ಪಡೆಗಳು ಒತ್ತಡ ಎದುರಿಸಬಹುದು..’; ಸೇನಾ ಮುಖ್ಯಸ್ಥರಿಂದ ಸರ್ಕಾರಕ್ಕೆ ಎಚ್ಚರಿಕೆ

ಹೆಚ್ಚುತ್ತಿರುವ ಮಾನವಶಕ್ತಿ ಕೊರತೆಯಿಂದಾಗಿ ಇಸ್ರೇಲ್ ರಕ್ಷಣಾ ಪಡೆಗಳು ಕಾರ್ಯಾಚರಣೆಯ ಗಂಭೀರ ಒತ್ತಡವನ್ನು ಎದುರಿಸಬಹುದು ಎಂದು ಸೇನಾ ಮುಖ್ಯಸ್ಥ ಇಯಾಲ್ ಜಮೀರ್ ಭದ್ರತಾ ಕ್ಯಾಬಿನೆಟ್ ಸಭೆಯಲ್ಲಿ ಸರ್ಕಾರಕ್ಕೆ ಎಚ್ಚರಿಸಿದ್ದಾರೆ ಎಂದು ಇಸ್ರೇಲ್ ಮಾಧ್ಯಮ ವರದಿಗಳನ್ನು...

ಯೆಮೆನ್‌ನಿಂದ ಹಾರಿದ ಮೊದಲ ಕ್ಷಿಪಣಿ ಎದುರಿಸಿದ ಇಸ್ರೇಲ್; ಪಶ್ಚಿಮ ಏಷ್ಯಾ ಸಂಘರ್ಷಕ್ಕೆ ಹೌತಿ ಪ್ರವೇಶ?

ಕಳೆದ ತಿಂಗಳು ಮಧ್ಯಪ್ರಾಚ್ಯದಲ್ಲಿ ಯುದ್ಧ ಭುಗಿಲೆದ್ದ ನಂತರ, ಮಾರ್ಚ್ 28 ರಂದು ಯೆಮೆನ್‌ನಿಂದ ಹಾರಿಸಲಾದ ಕ್ಷಿಪಣಿಯೊಂದನ್ನು ಇಸ್ರೇಲ್ ಮೊದಲಬಾರಿಗೆ ಎದುರಿಸಿದೆ. ಕಳೆದ ತಿಂಗಳು ಮಧ್ಯಪ್ರಾಚ್ಯದಲ್ಲಿ ಯುದ್ಧ ಭುಗಿಲೆದ್ದ ನಂತರ ಯೆಮೆನ್‌ನಿಂದ ಮೊದಲ ಬಾರಿಗೆ...

ಬಿಜೆಪಿಗೆ ಮತ ಹಾಕುವುದು ವ್ಯರ್ಥ; ಬದಲಿಗೆ ಕಾಂಗ್ರೆಸ್‌ಗೆ ಹಾಕಿ: ಸಂಸದ ಶಶಿ ತರೂರ್

ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಮತ ಹಾಕುವುದು ವ್ಯರ್ಥ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಕೇರಳದಲ್ಲಿ ಹೇಳಿದ್ದಾರೆ. ರಾಜ್ಯದ ಚುನಾವಣಾ ಸ್ಪರ್ಧೆ ಪ್ರಾಥಮಿಕವಾಗಿ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಮತ್ತು ಎಡ...

ಅಬುಧಾಬಿ | ಭದ್ರತಾ ಪಡೆಗಳು ಹೊಡೆದುರುಳಿಸಿದ ಕ್ಷಿಪಣಿಯ ಅವಶೇಷಗಳು ಬಿದ್ದು ಐವರು ಭಾರತೀಯರಿಗೆ ಗಾಯ

ಯುಎಇ ರಾಜಧಾನಿ ಅಬುಧಾಬಿ ಸೇರಿದಂತೆ ವಿವಿಧ ಪ್ರದೇಶಗಳ ಮೇಲೆ ಇರಾನ್ ನಡೆಸಿದ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳ ಸಂದರ್ಭದಲ್ಲಿ, ಕ್ಷಿಪಣಿಗಳ ಅವಶೇಷಗಳು ಬಿದ್ದ ಪರಿಣಾಮ ಐವರು ಭಾರತೀಯರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅಬುಧಾಬಿಯ ಸರ್ಕಾರಿ...

ಧುರಂಧರ್-2 ಬಿಜೆಪಿಯ ದೊಡ್ಡ ಬಜೆಟ್‌ನ ರಾಜಕೀಯ ಜಾಹೀರಾತು: ಧ್ರುವ ರಾಥೀ

ಚಲನಚಿತ್ರ ನಿರ್ಮಾಪಕ ಆದಿತ್ಯ ಧರ್ ಅವರ ಆಕ್ಷನ್ ಎಂಟರ್‌ಟೈನರ್ ಧುರಂಧರ್‌ನ ಮುಂದುವರಿದ ಭಾಗವು ಬಾಕ್ಸ್ ಆಫೀಸ್‌ನಲ್ಲಿ ಭಾರಿ ಗಳಿಕೆಯ ಜೊತೆಗೆ ಬಲಪಂಥೀಯ ವರ್ಗದ ಪ್ರೇಕ್ಷಕರ ಪ್ರತಿಕ್ರಿಯೆಯನ್ನು ಗಳಿಸುತ್ತಿದೆ. ಆದರೂ, ಈ ಚಿತ್ರವು ಸಾಕಷ್ಟು...