Homeಮುಖಪುಟಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ.

ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್ ಲಾಮಾ ಅವರನ್ನು ಬೆಂಬಲಿಸಿ ಸಿಲಿಗುರಿಯ ಮತಿಗರಾದಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಬ್ಯಾನರ್ಜಿ, “2021ರ ವಿಧಾನಸಭಾ ಚುನಾವಣೆಯಲ್ಲಿ ಎಂಟು ಹಂತಗಳಲ್ಲಿ ಮತದಾನ ನಡೆದಾಗ ಇದೇ ರೀತಿಯ ಘಟನೆ ಸಂಭವಿಸಿದೆ. ಅದರ ನಂತರ, ರಾಜ್ಯದಲ್ಲಿ ಸಾಂಕ್ರಾಮಿಕ ರೋಗದ ಹೊಸ ಅಲೆ ಅಪ್ಪಳಿಸಿತು” ಎಂದರು.

“2021ರಲ್ಲಿ ಉಲ್ಬಣಗೊಳ್ಳುತ್ತಿದ್ದ ಸಾಂಕ್ರಾಮಿಕ ರೋಗದಿಂದ ಉಂಟಾಗುವ ಅಪಾಯಗಳನ್ನೂ ಪರಿಗಣಿಸದೆ, ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರವು ಪಶ್ಚಿಮ ಬಂಗಾಳದಲ್ಲಿ ಎಂಟು ಹಂತಗಳ ವಿಧಾನಸಭಾ ಚುನಾವಣೆಯನ್ನು ನಡೆಸಲು ಚುನಾವಣಾ ಆಯೋಗವನ್ನು ಒತ್ತಾಯಿಸಿತು. ನಂತರ ಏನಾಯಿತು ಎಂಬುದು ನಿಮಗೆಲ್ಲರಿಗೂ ತಿಳಿದಿದೆ; ಮತ್ತೊಂದು ಅಲೆ ಬಂದು ಅನೇಕ ಜೀವಗಳನ್ನು ಬಲಿ ತೆಗೆದುಕೊಂಡಿತು, ಈ ಜೀವಹಾನಿಗೆ ಹೊಣೆ ಯಾರು” ಎಂದು ಅಭಿಷೇಕ್ ಪ್ರಶ್ನಿಸಿದರು.

“ಬಿಜೆಪಿಯ ಆಜ್ಞೆಯ ಮೇರೆಗೆ ಚುನಾವಣಾ ಆಯೋಗವು ಈ ಬಾರಿ ಏಳು ಹಂತಗಳ ಚುನಾವಣೆಯನ್ನು ಆಯೋಜಿಸಿದೆ. ಇದರಿಂದಾಗಿ ದೆಹಲಿಯ ಬಿಜೆಪಿ ನಾಯಕರು ಪ್ರಚಾರದಲ್ಲಿ ಭಾಗವಹಿಸಲು ಸಾಧ್ಯವಾಗುತ್ತದೆ. ಏಳು ಹಂತದ ಚುನಾವಣೆಗಳು ನಡೆಯುತ್ತಿವೆ, ಇದರಿಂದ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಪ್ರತಿ ಹಂತದ ಮೊದಲು ಪ್ರಚಾರ ಮಾಡಬಹುದು. ಆದರೆ, ಅವರ ಸುಳ್ಳನ್ನು ಜನರು ತಿರಸ್ಕರಿಸುತ್ತಾರೆ” ಎಂದು ಅವರು ಹೇಳಿದರು.

ತಮ್ಮ ಪಕ್ಷಕ್ಕೆ ಸತತ ನಾಲ್ಕನೇ ಅವಧಿಗೆ ಸ್ಥಾನವನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿರುವ ಹಾಲಿ ಬಿಜೆಪಿ ಸಂಸದ ರಾಜು ಬಿಸ್ತಾ ವಿರುದ್ಧ ಟಿಎಂಸಿ ಲಾಮಾ ಅವರನ್ನು ಕಣಕ್ಕಿಳಿಸಿದೆ. ಲಾಮಾ ಅವರನ್ನು “ಭೂಮಿಪುತ್ರ” ಅಥವಾ ಮಣ್ಣಿನ ಮಗ ಎಂದು ಬಣ್ಣಿಸಿದ ಬ್ಯಾನರ್ಜಿ, ಬಿಸ್ತಾರನ್ನು “ವಲಸೆ ಹಕ್ಕಿ” ಎಂದು ಕರೆದರು.

ಸಾಂಕ್ರಾಮಿಕ ಸಮಯದಲ್ಲಿ ಬಿಸ್ತಾ ಜನರಿಗೆ ಸಹಾಯ ಮಾಡಲಿಲ್ಲ ಮತ್ತು ದೆಹಲಿಯಲ್ಲಿಯೇ ಇದ್ದರು. ಆದರೆ, ಆ ಸಮಯದಲ್ಲಿ ಟಿಎಂಸಿ ಕಾರ್ಯಕರ್ತರು ಸಾಧ್ಯವಿರುವ ಎಲ್ಲ ರೀತಿಯಲ್ಲಿ ಜನರನ್ನು ಬೆಂಬಲಿಸಿದರು ಎಂದರು.

11 ಗೂರ್ಖಾ ಜನಾಂಗಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಭರವಸೆಯನ್ನು ಬಿಜೆಪಿ ಈಡೇರಿಸಿಲ್ಲ ಎಂದು ಆರೋಪಿಸಿದರು.

ಮೊದಲ ಹಂತದ ಚುನಾವಣೆಗಳಲ್ಲಿ ಬಿಜೆಪಿಯ ಸಾಧನೆ ಕಳಪೆಯಾಗಿತ್ತು ಮತ್ತು ನಂತರದ ಹಂತಗಳಲ್ಲಿ ಅದು ಭಿನ್ನವಾಗಿರುವುದಿಲ್ಲ ಎಂದು ಬ್ಯಾನರ್ಜಿ ಹೇಳಿದ್ದಾರೆ.

ನಂತರ, ಮಾಲ್ಡಾದ ಬೈಸ್ನಾಬ್‌ನಗರದಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಬ್ಯಾನರ್ಜಿ, ಮಾಲ್ಡಾ ದಕ್ಷಿಣದ ಕಾಂಗ್ರೆಸ್ ಸಂಸದರಾಗಲೀ ಅಥವಾ ಮಾಲ್ಡಾ ಉತ್ತರದ ಬಿಜೆಪಿ ಸಂಸದರಾಗಲೀ ಕೇಂದ್ರದೊಂದಿಗೆ ಎಂಜಿಎನ್‌ಆರ್‌ಇಜಿಎ ಬಾಕಿಯ ವಿಷಯವನ್ನು ಪ್ರಸ್ತಾಪಿಸಲಿಲ್ಲ ಎಂದು ಆರೋಪ ಮಾಡಿದರು.

ಕಾಂಗ್ರೆಸ್‌ನ ಬಹರಂಪುರ ಸಂಸದ ಅಧೀರ್ ರಂಜನ್ ಚೌಧರಿ ಅವರು ರಾಜ್ಯದಲ್ಲಿ ಟಿಎಂಸಿ ಸರ್ಕಾರವನ್ನು ಅಪಖ್ಯಾತಿಗೊಳಿಸಲು ಬಿಜೆಪಿಯೊಂದಿಗೆ ಕೈಜೋಡಿಸಿದ್ದಾರೆ. ಕೇಂದ್ರೀಯ ಸಂಸ್ಥೆಗಳಿಂದ ಟಿಎಂಸಿ ನಾಯಕರಿಗೆ ಕಿರುಕುಳ ನೀಡುವ ಬಿಜೆಪಿಯ ಕಾರ್ಯಸೂಚಿಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಬೆಂಬಲಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

2021ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಟಿಎಂಸಿಯನ್ನು ವಿಭಜಿಸಲು ಬಿಜೆಪಿ ಪಿತೂರಿ ನಡೆಸಿದೆ. ಆದರೆ, ಪ್ರಯತ್ನಗಳನ್ನು ವಿಫಲಗೊಳಿಸಲಾಯಿತು ಎಂದರು.

ಇದನ್ನೂ ಓದಿ; ಸೊರೇನ್ ಜಾಮೀನು ಅರ್ಜಿಗೆ ಉತ್ತರಿಸಲು ಇಡಿಗೆ ಕಾಲಾವಕಾಶ ನೀಡಿದ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...