Homeಕರ್ನಾಟಕದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಟು ತಿಂಗಳಲ್ಲಿ 71 ಕೋಮುದ್ವೇಷ ಪ್ರಕರಣ: ಪೊಲೀಸ್ ವೈಫಲ್ಯ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಟು ತಿಂಗಳಲ್ಲಿ 71 ಕೋಮುದ್ವೇಷ ಪ್ರಕರಣ: ಪೊಲೀಸ್ ವೈಫಲ್ಯ

ಪೀಪಲ್ಸ್‌ ಯೂನಿಯನ್ ಫಾರ್‌ ಲಿಬರ್ಟೀಸ್‌ ಕರ್ನಾಟಕ, ಆಲ್‌ ಇಂಡಿಯಾ ಲಾಯರ್ಸ್ ಅಸೋಸಿಯೇಷನ್‌ ಫಾರ್‌ ಜಸ್ಟಿಸ್‌, ಆಲ್‌ ಇಂಡಿಯಾ ಪೀಪಲ್ಸ್ ಫೋರಮ್‌‌ ಮತ್ತು ಗೌರಿ ಲಂಕೇಶ್‌ ನ್ಯೂಸ್‌.ಕಾಂ ಬಿಡುಗಡೆ ಮಾಡಿರುವ ವರದಿಯು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ‘ಕೋಮುದ್ವೇಷ ಅಪರಾಧ’ಗಳ ಕುರಿತು ಬೆಳಕು ಚೆಲ್ಲಿದೆ.

- Advertisement -
- Advertisement -

ಹಣ್ಣು ಮತ್ತು ತರಕಾರಿಗಳನ್ನು ಮಾರುವ ಮುಸ್ಲಿಮರ ವಿರುದ್ಧ ರಾಜ್ಯದ ಕರಾವಳಿ ನಗರವಾದ ಮಂಗಳೂರಿನಲ್ಲಿ ಕಳೆದ ಜನವರಿ 3ರಂದು ಆಕ್ರಮಣಾಕಾರಿ ಪ್ರಚಾರ ಸಾಮಾಜಿಕ ಮಾಧ್ಯಮದಲ್ಲಿ ನಡೆಯಿತು. ಈ ಸಂದೇಶ ವಿವಿಧ ಸಾಮಾಜಿಕ ಮಾಧ್ಯಮಗಳ ಹರಿದಾಡಿತು. ಯಾರೂ ಬ್ಯಾರಿಗಳಿಂದ (ಅಂದರೆ ಮುಸ್ಲಿಮರಿಂದ) ಏನನ್ನೂ ಖರೀದಿಸಬೇಡಿ. ಹಿಂದೂಗಳನ್ನು ಕೊಲ್ಲಲು ಮುಸ್ಲಿಮರು ವಿಷವನ್ನು ಬೆರೆಸುತ್ತಿದ್ದಾರೆ. ಇವರಿಗೆ ಚೀನಾದವರು ಆರ್ಥಿಕ ಸಹಕಾರ ನೀಡುತ್ತಿದ್ದಾರೆ ಎಂದು ಅಪಪ್ರಚಾರ ಮಾಡಲಾಯಿತು.

ಪೀಪಲ್ಸ್‌ ಯೂನಿಯನ್ ಫಾರ್‌ ಲಿಬರ್ಟೀಸ್‌ ಕರ್ನಾಟಕ (ಪಿಯುಸಿಎಲ್‌-ಕ) ಆಲ್‌ ಇಂಡಿಯಾ ಲಾಯರ್ಸ್ ಅಸೋಸಿಯೇಷನ್‌ ಫಾರ್‌ ಜಸ್ಟಿಸ್‌ (ಎಐಎಲ್‌ಎಜೆ), ಆಲ್‌ ಇಂಡಿಯಾ ಪೀಪಲ್ಸ್ ಫೋರಮ್‌‌ (ಎಐಪಿಎಫ್‌) ಮತ್ತು ಗೌರಿ ಲಂಕೇಶ್‌ ನ್ಯೂಸ್‌.ಕಾಂ (gaurilankeshnews.com) ಬಿಡುಗಡೆ ಮಾಡಿರುವ ವರದಿಯು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ‘ಕೋಮುದ್ವೇಷ ಅಪರಾಧ’ಗಳ ಕುರಿತು ಆತಂಕ ವ್ಯಕ್ತಪಡಿಸಿದೆ.

“2021ರ ಮೊದಲ ತ್ರೈಮಾಸಿಕ ಅವಧಿಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋಮುದ್ವೇಷ ಘಟನೆಗಳ ಕುರಿತು ಮಾಧ್ಯಮಗಳು (ಪತ್ರಿಕೆಗಳು ಮತ್ತು ಆನ್‌ಲೈನ್‌) ಹೆಚ್ಚಿನ ಮಟ್ಟದಲ್ಲಿ ವರದಿ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಸತ್ಯಶೋಧನೆಯನ್ನು ಕೈಗೊಳ್ಳಲಾಯಿತು. ಜನರ ಹಕ್ಕುಗಳಿಗಾಗಿ ಹೋರಾಟ ಮಾಡುವ ಅನೇಕ ಸಂಘ-ಸಂಸ್ಥೆಗಳು, ಅದರಲ್ಲೂ ರಾಜ್ಯದ ರಾಜಧಾನಿಯಲ್ಲಿ ಈ ಸಮಸ್ಯೆಯನ್ನು ಕೈಗೆತ್ತಿಕೊಂಡ ನಂತರ, ಈ ಘಟನೆಗಳನ್ನು ಎಲ್ಲ ದಿಕ್ಕಿನಲ್ಲಿ ಅಧ್ಯಯನ ಮಾಡಿ ಅರ್ಥಮಾಡಿಕೊಂಡು ಪರಿಹಾರ ಕಂಡುಕೊಳ್ಳುವುದಕ್ಕಾಗಿ ಸತ್ಯಶೋಧನಾ ತಂಡವನ್ನು ರಚಿಸಲಾಯಿತು” ಎಂದು ಪಿಯುಸಿಎಲ್‌-ಕ, ಎಐಎಲ್‌ಎಜೆ, ಗೌರಿ ಲಂಕೇಶ್‌ ನ್ಯೂಸ್‌.ಕಾಂ, ಎಐಪಿಎಫ್‌ ನೀಡಿರುವ ಪತ್ರಿಕಾ ಪ್ರಕಟಣೆ ತಿಳಿಸಿದೆ.

ಕರಾವಳಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯರವರು ಮತೀಯ ಗೂಂಡಾಗಿರಿಯನ್ನು ಬಹಿರಂಗವಾಗಿ ಸಮರ್ಥಿಸಿ ಹೇಳಿಕೆ ನೀಡಿದ್ದನ್ನು, ಸಾಮಾಜಿಕ ಸಂಘಟನೆಗಳು, ನಾಗರಿಕರು, ವಿದ್ಯಾರ್ಥಿಗಳು, ವಕೀಲರು ಮತ್ತು ವಿರೋಧ ಪಕ್ಷದ ನಾಯಕರುಗಳು ತೀವ್ರವಾಗಿ ವಿರೋಧಿಸಿದ್ದರು. ಈ ಹಿನ್ನೆಲೆಯಲ್ಲಿ ಎಂತಹ ಗಂಭೀರ ಪರಿಸ್ಥಿತಿಯಲ್ಲಿ ನಾವು ಇದ್ದೇವೆ ಎನ್ನುವುದನ್ನು ಈ ವರದಿಯು ಉಲ್ಲೇಖಿಸುತ್ತದೆ.

ಇದನ್ನೂ ಓದಿರಿ: ಮಂಗಳೂರಿನಲ್ಲಿ ಮತೀಯ ಗೂಂಡಾಗಿರಿ: ಅನ್ಯಧರ್ಮದ ಗೆಳತಿಯನ್ನು ಡ್ರಾಪ್ ಮಾಡುತ್ತಿದ್ದ ಮುಸ್ಲಿಂ ಯುವಕನ ಮೇಲೆ ಹಲ್ಲೆ

ಈ ವರದಿಯು ದಕ್ಷಿಣ ಕನ್ನಡದಲ್ಲಿ ಜನವರಿ 2021ರಿಂದ ಸೆಪ್ಟೆಂಬರ್‌ 2021ರವರೆಗೆ ನಡೆದ ಮತೀಯ ಗೂಂಡಾಗಿರಿ ಮತ್ತು ದ್ವೇಷದ ಅಪರಾಧಿಕ ಘಟನೆಗಳನ್ನು ವಿಶ್ಲೇಷಿಸದೆ. ಜೊತೆಗೆ ಆರು ವಿಭಿನ್ನ ಮಾದರಿಯ ಘಟನೆಗಳನ್ನು ಗುರುತಿಸುತ್ತದೆ. ಅವುಗಳೆಂದರೆ, 1. ಸಾಮಾಜಿಕ ಪ್ರತ್ಯೇಕತೆಯನ್ನು ಜಾರಿಗೊಳಿಸುವುದು 2. ಆತ್ಮೀಯ ಸಂಬಂಧಗಳನ್ನು ನಿಯಂತ್ರಿಸುವುದು. 3. ಆರ್ಥಿಕ ಸಾಮಾಜಿಕ ಬಹಿಷ್ಕಾರ. 4. ಗೋವಿನ ಹೆಸರಲ್ಲಿ ದಾಳಿಗಳು. 5. ಧಾರ್ಮಿಕ ಸ್ವಾತಂತ್ರ್ಯವನ್ನು ನಿಗ್ರಹಿಸುವುದು. 6. ದ್ವೇಷ ಹರಡುವ ಭಾಷಣಗಳನ್ನು ಮಾಡುವುದು.

ಕೋಮುದ್ವೇಷವನ್ನು ತಡೆಯುವಲ್ಲಿ ಪೊಲೀಸರ ಪಾತ್ರವನ್ನು ಈ ವರದಿ ಉಲ್ಲೇಖಿಸಿದೆ. ಜೊತೆಗೆ ಪೊಲೀಸರ ತಪ್ಪುಗಳನ್ನು ವರದಿ ಉಲ್ಲೇಖಿಸಿದೆ. ಅಂತರ ಧರ್ಮೀಯ ಸಂಬಂಧಗಳಿಗೆ ತೊಂದರೆಯುಂಟುಮಾಡಿದ ಹೆಚ್ಚಿನ ಸಂಖ್ಯೆಯ ಪ್ರಕರಣಗಳಲ್ಲಿ ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಿಲ್ಲ. ಬದಲಾಗಿ ಅಂತರ ಧರ್ಮೀಯ ಸ್ನೇಹಿತರು ಅಥವಾ ದಂಪತಿಗಳನ್ನೇ ಪೊಲೀಸ್ ಠಾಣೆಗೆ ಕರೆಸಲಾಗುತ್ತಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಒಂದೆಡೆ ಹಿಂಸಾಚಾರ ಎಸಗಿದವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿದ್ದರೂ ಪೊಲೀಸರು ಒಂದು ಹೆಜ್ಜೆ ಮುಂದೆ ಹೋಗಿ ಸಂತ್ರಸ್ತರನ್ನು ಠಾಣೆಗೆ ಕರೆದೊಯ್ದು ಪ್ರಶ್ನಿಸುವ ಮೂಲಕ ತಪ್ಪಿತಸ್ಥರೆಂದು ಪರಿಗಣಿಸುತ್ತಾರೆ. ಈ ಹಿನ್ನೆಲೆಯಲ್ಲಿ ಅಂತರ ಧರ್ಮೀಯ ಸಂಬಂಧಗಳನ್ನು ಬಲವಂತವಾಗಿ ಪ್ರತ್ಯೇಕಿಸುವ ಪ್ರಕ್ರಿಯೆಯಲ್ಲಿ ಪೊಲೀಸರು ಆರೋಪಿಗಳ ಮಿತ್ರರಾಗಿದ್ದಾರೆ ಎಂದು ವರದಿಯು ಆತಂಕ ವ್ಯಕ್ತಪಡಿಸಿದೆ.

ಪೊಲೀಸರ ವರ್ತನೆ ಕಾನೂನಿಗೆ ವಿರುದ್ಧವಾಗಿದ್ದು, ತೆಹ್ಸೀನ್ ಪೂನಾವಾಲಾ ವರ್ಸಸ್‌‌ ಯೂನಿಯನ್‌ ಆಫ್‌ ಇಂಡಿಯಾ ಪ್ರಕರಣದಲ್ಲಿ ಸವೋಚ್ಚ ನ್ಯಾಯಾಲಯ ನೀಡಿದ ಆದೇಶಕ್ಕೆ ವಿರುದ್ಧವಾಗಿದೆ. ಈ ಪ್ರಕರಣದಲ್ಲಿ, ‘ಅವ್ಯವಸ್ಥೆ ಮತ್ತು ಅರಾಜಕತೆಯ ಸಮಯದಲ್ಲಿ ರಾಜ್ಯವು ತನ್ನ ನಾಗರಿಕರಿಗೆ ಸಾಂವಿಧಾನಿಕ ಭರವಸೆಗಳನ್ನು ರಕ್ಷಿಸಲು ಮತ್ತು ಭದ್ರಪಡಿಸಲು ಧನಾತ್ಮಕವಾಗಿ, ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು’ ಎಂದು ಕೋರ್ಟ್ ಆದೇಶಿಸಿದೆ ಎಂದು ವರದಿ ಉಲ್ಲೇಖಿಸಿದೆ.

ರಾಜ್ಯ ಸರ್ಕಾರಕ್ಕೆ ಈ ವರದಿಯು ಹಲವು ಶಿಫಾರಸ್ಸುಗಳನ್ನು ಮಾಡಿದೆ. ಸರ್ವೋಚ್ಚ ನ್ಯಾಯಾಲಯದ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವುದನ್ನು ಖಚಿತಪಡಿಸಿಕೊಳ್ಳಬೇಕು. ಸರ್ವೋಚ್ಚ ನ್ಯಾಯಾಲಯ ವಿವರಿಸಿರುವ ಪ್ರೀತಿಯ ಹಕ್ಕು ಸೇರಿದಂತೆ ಆಯ್ಕೆ ಮಾಡುವ ಹಕ್ಕನ್ನು ಎತ್ತಿಹಿಡಿಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಲತಾ ಸಿಂಗ್ ವಿರುದ್ಧ ಸ್ಟೇಟ್ ಆಫ್‌ ಯು.ಪಿ. ಮತ್ತು ಇತರರು ಪ್ರಕರಣದಲ್ಲಿ ಸರ್ವೋಚ್ಚ ನ್ಯಾಯಾಲಯ ನೀಡಿರುವ ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲಾಗುತ್ತಿದೆಯ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ವರದಿ ರಾಜ್ಯ ಸರ್ಕಾರಕ್ಕೆ ತಿಳಿಸಿದೆ.

ಅಂತರ ಜಾತಿ ಅಥವಾ ಅಂತರ್‌ ಧಾರ್ಮಿಕ ದಂಪತಿ ಯಾರಿಂದಲೂ ಕಿರುಕುಳಕ್ಕೊಳಗಾಗುವುದಿಲ್ಲ ಅಥವಾ ಬೆದರಿಕೆಗಳು ಅಥವಾ ಹಿಂಸಾಚಾರ ಕೃತ್ಯಗಳಿಗೆ ಒಳಗಾಗುವುದಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ಆರುಮುಗಂ ಸರ್ವೈ ವಿರುದ್ಧ ತಮಿಳುನಾಡು ಸರ್ಕಾರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಪಾಲನೆ ಮಾಡಲಾಗುತ್ತಿದೆಯಾ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ಅಂತರ್‌ ‌ಧರ್ಮೀಯ ಅಥವಾ ಅಂತರ್‌ ಜಾತಿ ವಿವಾಹ ದಂಪತಿಗೆ ಕಿರುಕುಳ ನೀಡುವ ಯಾವುದೇ ಘಟನೆಗಳು ಸಂಭವಿಸಿದ್ದಲ್ಲಿ ಅಂತ ದುಷ್ಕತ್ಯಗಳಿಗೆ ಕಾರಣರಾದವರ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ದಾಖಲು ಮಾಡಬೇಕು. ಹೀಗೆ ಹಲವು ಶಿಫಾರಸ್ಸುಗಳನ್ನು ಈ ವರದಿ ಮಾಡಿದೆ.

ಇದನ್ನೂ ಓದಿರಿ: ಶನಿವಾರಪೇಟೆ: ಬುರ್ಖಾ ಧರಿಸಿದಕ್ಕೆ ಅಮಾಯಕ ಬಾಲಕಿಯರ ಮೇಲೆ ಮತೀಯ ಗೂಂಡಾಗಿರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇದು ಕೇವಲ ಪೊಲೀಸರ ವೈಪಲ್ಯ ಮಾತ್ರವಲ್ಲ. ಮಾನವೀಯತೆಯ ಸೋಲು ಹೌದು. ಬುದ್ದಿವಂತರ ಜಿಲ್ಲೆ ಎಂದು ಕರೆಸಿಕೊಂಡಿದ್ದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೀಗಾಗಿರುವುದು ನಮ್ಮ ದುರಂತ.

LEAVE A REPLY

Please enter your comment!
Please enter your name here

- Advertisment -

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...