Homeಮುಖಪುಟದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

- Advertisement -
- Advertisement -

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ ಎಂದು ವರದಿಯಾಗಿದೆ.

ರೇಸ್ ಕೋರ್ಸ್ ರಸ್ತೆಯಲ್ಲಿರುವ ಭಾಯಿ ರಾಮ್ ಕ್ಯಾಂಪ್, ಮಸೀದಿ ಕ್ಯಾಂಪ್ ಮತ್ತು ಡಿಐಡಿ ಕ್ಯಾಂಪ್ ನಿವಾಸಿಗಳಿಗೆ ಗುರುವಾರ (ಫೆ.19) ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ (ಎಂಒಹೆಚ್‌ಯುಎ) ಭೂ ಮತ್ತು ಅಭಿವೃದ್ಧಿ ಕಚೇರಿ (ಎಲ್‌&ಡಿಒ) ಮೂಲಕ ಪುನರ್ವಸತಿ ನೋಟಿಸ್‌ಗಳನ್ನು ನೀಡಿದೆ. ಈ ಕೊಳಗೇರಿ ಗುಂಪುಗಳು (ಕ್ಲಸ್ಟರ್‌ಗಳು) ಎಲ್ & ಡಿಒ ವ್ಯಾಪ್ತಿಯಲ್ಲಿರುವ ಸರ್ಕಾರಿ ಭೂಮಿಯಲ್ಲಿವೆ ಎಂದು ವರದಿ ಹೇಳಿದೆ.

ನೋಟಿಸ್ ಪ್ರಕಾರ, ಕೇಂದ್ರ ದೆಹಲಿಯಿಂದ ಸುಮಾರು 45 ಕಿ.ಮೀ ದೂರದಲ್ಲಿರುವ ಸಾವ್ಡಾ ಘೇವ್ರಾದ ದೆಹಲಿ ನಗರ ಆಶ್ರಯ ಸುಧಾರಣಾ ಮಂಡಳಿ (ಡಿಯುಎಸ್‌ಐಬಿ) ಕಾಲೋನಿಯಲ್ಲಿ ಸ್ಥಳಾಂತರಗೊಳ್ಳುವ ಕೊಳಗೇರಿ ನಿವಾಸಿಗಳಿಗೆ ಫ್ಲಾಟ್‌ಗಳನ್ನು ನೀಡಲಾಗಿದೆ. ಮಂಡಳಿಯ ಪುನರ್ವಸತಿ ನೀತಿಯಡಿಯಲ್ಲಿ ಎಲ್‌&ಡಿಒ ಮತ್ತು ದೆಹಲಿ ಅಭಿವೃದ್ಧಿ ಪ್ರಾಧಿಕಾರ (ಡಿಡಿಎ) ಜನವರಿ 2024ರಲ್ಲಿ ನಡೆಸಿದ ಜಂಟಿ ಸಮೀಕ್ಷೆಯ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

ಅದಾಗ್ಯೂ, ಸರ್ಕಾರದ ನೋಟಿಸ್ ಜನರ ವಿರೋಧಕ್ಕೆ ಕಾರಣವಾಗಿದೆ. ವಿಶೇಷವಾಗಿ ಶಾಲಾ ಬೋರ್ಡ್ ಪರೀಕ್ಷೆಗಳು ನಡೆಯುತ್ತಿರುವಾಗ ನೋಟಿಸ್ ನೀಡಿರುವುದು ಜನರಲ್ಲಿ ಆತಂಕ, ಗೊಂದಲ ಮತ್ತು ಆಕ್ರೋಶವನ್ನು ಹುಟ್ಟುಹಾಕಿದೆ ಎಂದು ವರದಿ ಉಲ್ಲೇಖಿಸಿದೆ.

“15 ದಿನಗಳಲ್ಲಿ ಮನೆ ಖಾಲಿ ಮಾಡುವಂತೆ ನೋಟಿಸ್ ನೀಡಿದರೆ ನಾವು ಏನು ಮಾಡುವುದು?, ನಾವಿಲ್ಲಿ ದಶಕಗಳಿಂದ ವಾಸುತ್ತಿದ್ದೇವೆ” ಎಂದು ಕೆಲವರು ಆಕ್ರೋಶ ವ್ಯಕ್ತಪಡಿಸಿದರೆ, ಇನ್ನೂ ಕೆಲವರು “ನಾವಿಲ್ಲಿ ಮನೆಗಳನ್ನು ನಿರ್ಮಿಸಲು ಲಕ್ಷಾಂತರ ರೂಪಾಯಿ ಖರ್ಚು ಮಾಡಿದ್ದೇವೆ. ಈಗ ಆ ಮನೆಗಳನ್ನು ಬಿಟ್ಟು ಹೋದರೆ ನಮಗೆ ನಷ್ಟ ಉಂಟಾಗಲಿದೆ. ಅಲ್ಲದೆ, ಸ್ಥಳಾಂತಗೊಳ್ಳಲು ನಮ್ಮಲ್ಲಿ ಹಣವೂ ಇಲ್ಲ” ಎಂದು ಅಳಲು ತೋಡಿಕೊಂಡಿರುವುದಾಗಿ ವರದಿಗಳು ಹೇಳಿವೆ.

ಪ್ರಧಾನಿ ನಿವಾಸವು ಈ ಕೊಳಗೇರಿಗಳಿಂದ ಕೆಲವೇ ಕಿಲೋಮೀಟರ್ ದೂರದಲ್ಲಿದೆ. ಇದು ಈ ಪ್ರದೇಶವನ್ನು ರಾಜಧಾನಿಯ ಅತ್ಯಂತ ಹೈ-ಪ್ರೊಫೈಲ್ ಜುಗ್ಗಿ ಜೋಪ್ಡಿ (ಜೆಜೆ) ಕಾಲೋನಿಗಳಲ್ಲಿ ಒಂದನ್ನಾಗಿ ಮಾಡಿದೆ. ಅರ್ಹ ನಿವಾಸಿಗಳನ್ನು ನಿಯಮಾನುಸಾರ ಪುನರ್ವಸತಿಗೊಳಿಸಲಾಗುತ್ತಿದೆ ಎಂದು ಅಧಿಕಾರಿಗಳು ಪ್ರತಿಪಾದಿಸುತ್ತಿದ್ದರೂ, ಹಠಾತ್ ಗಡುವು ಮತ್ತು ಸ್ಥಳಾಂತರದ ದೂರವು ತಮ್ಮ ಜೀವನೋಪಾಯ, ಮಕ್ಕಳ ಶಿಕ್ಷಣ ಮತ್ತು ಸಾಮಾಜಿಕ ಬಾಂಧವ್ಯಗಳಿಗೆ ಸಂಚಕಾರ ತಂದೊಡ್ಡಿದೆ ಎಂದು ಸ್ಥಳೀಯರು ಅಳಲು ತೋಡಿಕೊಂಡಿದ್ದಾರೆ.

ಈ ವಿಷಯ ದೆಹಲಿ ಹೈಕೋರ್ಟ್‌ನಲ್ಲಿಯೂ ಬಾಕಿ ಇರುವುದರಿಂದ ಮತ್ತು ತೆರವು ವಿರುದ್ಧ ಮಧ್ಯಂತರ ರಕ್ಷಣೆ ಇನ್ನೂ ಜಾರಿಯಲ್ಲಿರುವುದರಿಂದ, ಭಾಯಿ ರಾಮ್ ಕ್ಯಾಂಪ್, ಮಸೀದಿ ಕ್ಯಾಂಪ್ ಮತ್ತು ಡಿಐಡಿ ಕ್ಯಾಂಪ್‌ನಲ್ಲಿ ಅನಿಶ್ಚಿತತೆ ಹೆಚ್ಚಾಗಿದೆ ಎಂದು ವರದಿಗಳು ಹೇಳಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...