HomeಚಳವಳಿManual Scavenging: ಮಲದ ಗುಂಡಿ ಸ್ವಚ್ಛಗೊಳಿಸುವವರಲ್ಲಿ 73.31% ಪರಿಶಿಷ್ಟ ಜಾತಿಯವರು

Manual Scavenging: ಮಲದ ಗುಂಡಿ ಸ್ವಚ್ಛಗೊಳಿಸುವವರಲ್ಲಿ 73.31% ಪರಿಶಿಷ್ಟ ಜಾತಿಯವರು

- Advertisement -
- Advertisement -

ಭಾರತದಲ್ಲಿ ಇಂದಿಗೂ 58,098 ಮ್ಯಾನುಯಲ್ ಸ್ಕ್ಯಾವೆಂಜರ್‌ಗಳಿದ್ದು (ಮಲದ ಗುಂಡಿ ಸ್ವಚ್ಛಗೊಳಿಸುವವರು), ಅವರಲ್ಲಿ 42,594 (73.31%) ಮಂದಿ ಪರಿಶಿಷ್ಟ ಜಾತಿಗೆ ಸೇರಿದವರು ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ರಾಮದಾಸ್ ಅಠಾವಳೆ ತಿಳಿಸಿದ್ದಾರೆ.

ರಾಜ್ಯಸಭೆಯಲ್ಲಿ ಆರ್‌ಜೆಡಿ ಸದಸ್ಯ ಮನೋಜ್ ಕುಮಾರ್ ಝಾ ಅವರ ಪ್ರಶ್ನೆಗೆ ಲಿಖಿತ ಉತ್ತರದಲ್ಲಿ ಈ ವಿಷಯ ತಿಳಿಸಿದ್ದು, ಮ್ಯಾನ್ಯುವಲ್ ಸ್ಕ್ಯಾವೆಂಜಿಂಗ್ ಕಾಯ್ದೆ ತಿದ್ದುಪಡಿ 2013ರ ಅನ್ವಯ ನಡೆದ ಸಮೀಕ್ಷೆಯನ್ನು ಆಧರಿಸಿ ಈ ಉತ್ತರ ನೀಡಿದ್ದಾರೆ.

ಈ ಸಮೀಕ್ಷೆಯಿಂದ ತಿಳಿದುಬರುವ ಪ್ರಮುಖ ವಿಷಯವೆಂದರೆ ಇಂದಿಗೂ ಮ್ಯಾನುಯಲ್ ಸ್ಕ್ಯಾವೆಂಜರ್‌ ಕೆಲಸ ಮಾಡುತ್ತಿರುವವರು ಬಹುಪಾಲು ಜನರು (58,098) ಪರಿಶಿಷ್ಟ ಜಾತಿಗೆ ಸೇರಿದ್ದಾರೆ. 431 ಮ್ಯಾನುಯಲ್ ಸ್ಕ್ಯಾವೆಂಜರ್‌ಗಳು OBC ಗಳು, 421 ಪರಿಶಿಷ್ಟ ಪಂಗಡದವರು ಮತ್ತು 351 ಮ್ಯಾನುಯಲ್ ಸ್ಕ್ಯಾವೆಂಜರ್‌ಗಳು “ಇತರ” ವರ್ಗಕ್ಕೆ ಸೇರಿದ್ದಾರೆ ಎಂದು ಇಂಡಿಯನ್ಸ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಮ್ಯಾನುಯಲ್ ಸ್ಕ್ಯಾವೆಂಜರ್‌ಗಳ ಪುನರ್ವಸತಿಗಾಗಿ ಸರ್ಕಾರವು ಕೇಂದ್ರೀಯ ಉದ್ಯೋಗ ಯೋಜನೆಯನ್ನು ಜಾರಿಗೆ ತರುತ್ತಿದೆ. ಇದು ಒಂದು ಬಾರಿಗೆ 40,000 ರೂ ನಗದು ಸಹಾಯವನ್ನು ನೀಡುತ್ತದೆ ಮತ್ತು ವ್ಯಕ್ತಿ ಮತ್ತು ಅವರ ಅವಲಂಬಿತರಿಗೆ ತಿಂಗಳಿಗೆ ರೂ 3,000 ಸ್ಟೈಫಂಡ್‌ನೊಂದಿಗೆ ಕೌಶಲ್ಯ ತರಬೇತಿಯನ್ನು ನೀಡುತ್ತದೆ (ತರಬೇತಿ ಅವಧಿಯವರೆಗೆ). ಅಲ್ಲದೆ 5 ಲಕ್ಷ ರೂ ವರೆಗೂ ಇದು ಬಂಡವಾಳ ಸಬ್ಸಿಡಿಯನ್ನು ಸಹ ಒದಗಿಸುತ್ತದೆ ಎನ್ನಲಾಗಿದೆ.

ದೇಶದ ಎಲ್ಲಾ ಮ್ಯಾನುಯಲ್ ಸ್ಕ್ಯಾವೆಂಜರ್‌ಗಳಿಗೆ ಒಂದು ಬಾರಿ ನಗದು ಪಾವತಿಯನ್ನು ನೀಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ. 18,199 ಮಂದಿಗೆ ಕೌಶಲ್ಯ ತರಬೇತಿ ಮತ್ತು 1,562 ಜನರಿಗೆ ಬಂಡವಾಳ ಸಹಾಯಧನ ನೀಡಲಾಗಿದೆ ಎಂದು ಹೇಳಿದೆ. 2013 ರಲ್ಲಿ ಮ್ಯಾನುಯಲ್ ಸ್ಕ್ಯಾವೆಂಜಿಂಗ್ ಅನ್ನು ನಿಷೇಧಿಸಲಾಗಿದ್ದು, ಅಂದಿನಿಂದ ಯಾವುದೇ ಹೊಸ ನೇಮಕಾತಿ ಮಾಡಿಕೊಳ್ಳುತ್ತಿಲ್ಲ.

ಜುಲೈನಲ್ಲಿ ನಡೆದ ಅಧಿವೇಶನದ ಸಂದರ್ಭದಲ್ಲಿ ಕಳೆದ ಐದು ವರ್ಷಗಳಲ್ಲಿ ಮಲದ ಗುಂಡಿಗಳನ್ನು (Manual Scavenging) ಸ್ವಚ್ಛಗೊಳಿಸುವಾಗ ಯಾವುದೇ ಸಾವುಗಳು ಸಂಭವಿಸಿಲ್ಲ ಎಂದು ಸಚಿವರು ಹೇಳಿ ಟೀಕೆಗೆ ಒಳಗಾಗಿದ್ದರು. ಅಲ್ಲದೆ ಹೆಚ್ಚಿನ ಜನ ಮ್ಯಾನುಯಲ್ ಸ್ಕ್ಯಾವೆಂಜರ್‌ಗಳು ಉತ್ತರ ಪ್ರದೇಶದಲ್ಲಿದ್ದಾರೆ ಎಂದು ತಿಳಿಸಿದ್ದರು.


ಇದನ್ನೂ ಓದಿ: ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌: ಪ್ರಶ್ನಿಸಿದ್ದಕ್ಕೆ ‘ಈ ಕೆಲಸ ಮಾಡಲೆಂದೇ ಜಾತಿಗಳಿವೆ’ ಎಂದ ಇಂಜಿನಿಯರ್‌‌‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...