Homeಕರ್ನಾಟಕಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ : ತನಿಖಾ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌...

ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ : ತನಿಖಾ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

- Advertisement -
- Advertisement -

ಧರ್ಮಸ್ಥಳ ಗ್ರಾಮದಲ್ಲಿ 1990ರಿಂದ 2021ರ ನಡುವೆ ಸಂಭವಿಸಿದೆ ಎನ್ನಲಾದ 74 ಅಸಹಜ ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬುಧವಾರ (ಮಾ.18) ನಿರ್ದೇಶಿಸಿದೆ ಎಂದು barandbench.com ವರದಿ ಮಾಡಿದೆ.

ಧರ್ಮಸ್ಥಳದಲ್ಲಿ 2012ರಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾದ ವಿದ್ಯಾರ್ಥಿನಿ ಸೌಜನ್ಯಾ ಅವರ ತಾಯಿ ಕುಸುಮಾವತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿಎಂ ಪೂಣಚ್ಚ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿದೆ.

ಕುಸುಮಾವತಿ ಅವರ ಪರ ನ್ಯಾಯಾಲಯದಲ್ಲಿ ವಾದ ಮಂಡಿಸಿದ ಹಿರಿಯ ವಕೀಲ ಎಸ್‌ ಬಾಲನ್‌ ಅವರು, ಅಸಹಜವಾಗಿ ಸಾವನ್ನಪ್ಪಿದವರ ಪಟ್ಟಿಯನ್ನು ನ್ಯಾಯಾಲಯದ ಮುಂದೆ ಇಡಲಾಗಿದೆ. ಪ್ರಕ್ರಿಯೆ ಪಾಲಿಸದೇ ಶವಗಳ ಸಂಸ್ಕಾರ ಮಾಡಲಾಗಿದೆ. ಅಸಹಜವಾಗಿ ಸಾವನ್ನಪ್ಪಿದವರ 74 ಪ್ರಕರಣಗಳಲ್ಲಿ ಪಂಚನಾಮೆ ಪ್ರಕ್ರಿಯೆ ನಡೆಸಲಾಗಿಲ್ಲ. ಶವಗಳ ಮರಣೋತ್ತರ ಪರೀಕ್ಷೆ ನಡೆಸಿಲ್ಲ. ಪೊಲೀಸರು ಶವಗಳ ಸಂಸ್ಕಾರಕ್ಕೆ ಸಂಬಂಧಿಸಿದಂತೆ ಪಂಚಾಯಿತಿಗೆ ಶಿಫಾರಸ್ಸು ಮಾಡಿದ್ದಾರೆ. ಶವ ಸಂಸ್ಕಾರ ಮಾಡಿದ್ದಾರೆಯೇ, ಸುಟ್ಟಿದ್ದಾರೆಯೇ ಎಂಬುವುದರ ಮಾಹಿತಿ ಇಲ್ಲ. ಈ ಸಂಬಂಧ ಎಲ್ಲಾ ದಾಖಲೆಗಳನ್ನು ಸಂಗ್ರಹಿಸಲಾಗಿದೆ. ಹಲವು ಪ್ರಕರಣಗಳಲ್ಲಿ ಮಹಿಳೆಯರು ಲಾಡ್ಜ್‌ನಲ್ಲಿ ಉಳಿದುಕೊಂಡು, ನಾಪತ್ತೆಯಾಗಿದ್ದಾರೆ. ಆದರೆ, ಈ ಪ್ರಕರಣದಲ್ಲಿ ತನಿಖೆ ನಡೆಸಲಾಗಿಲ್ಲ. ಶವಗಳನ್ನು ಸಂಸ್ಕಾರ ಮಾಡಲಾಗಿದೆ. ಆದರೆ, ಯಾವುದೇ ಎಫ್‌ಐಆರ್‌ ದಾಖಲಿಸಿ, ತನಿಖೆ ನಡೆದಿಲ್ಲ. ಹಾಗಾಗಿ 74 ಎಫ್‌ಐಆರ್‌ ದಾಖಲಿಸಿ, ತನಿಖೆ ನಡೆಸಬೇಕು ಎಂಬುವುದಾಗಿ ಮನವಿ ಮಾಡಿದ್ದಾರೆ ಎಂದು barandbench.com ವರದಿ ತಿಳಿಸಿದೆ.

ಸರ್ಕಾರದ ಪರ ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ್‌ ಶೆಟ್ಟಿ ಅವರು ವಾದ ಮಂಡಿಸಿ, ಅರ್ಜಿದಾರರು ಪ್ರಸ್ತಾಪಿಸಿರುವ ಪ್ರಕರಣಗಳು 2002ರಲ್ಲಿ ನಡೆದಿವೆ. 74 ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲಾಗಿದ್ದು, ಯುಡಿಆರ್‌ ದಾಖಲಿಸಲಾಗಿದೆ. ಸದ್ಯ ರಚಿಸಲಾಗಿರುವ ವಿಶೇಷ ತನಿಖಾ ದಳಕ್ಕೆ ಪ್ರಕರಣಗಳನ್ನು ವರ್ಗಾಯಿಸುವಂಥದ್ದು ಏನೂ ಇಲ್ಲ. ಯುಡಿಆರ್‌ಗಳಿಗೆ ಸಂಬಂಧಿಸಿದಂತೆ ಯಾವುದಾದರೂ ದಾಖಲೆ ಸಲ್ಲಿಸಿದರೆ ಅಥವಾ ದೂರು ದಾಖಲಿಸಿದರೆ, ಅದನ್ನು ತನಿಖೆಗೆ ಒಳಪಡಿಸಲಾಗುವುದು. ಇದೊಂದು ಸಾಮಾನ್ಯ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಾಗಿದೆ. ಅರ್ಜಿದಾರೆಯ ಸಹೋದರನನ್ನು ಧರ್ಮಸ್ಥಳ ಸಾಮೂಹಿಕ ದಹನ ಪ್ರಕರಣದಲ್ಲಿ ತನಿಖೆಗೆ ಒಳಪಡಿಸಲಾಗಿತ್ತು. ಇದರ ಸಂಬಂಧಿತ ಎಲ್ಲಾ ದಾಖಲೆಗಳನ್ನು ನ್ಯಾಯಾಲಯದ ಮುಂದೆ ಇಡಲಾಗುವುದು ಎಂಬುವುದಾಗಿ ಹೇಳಿದ್ದಾರೆ ಎಂದು ವರದಿ ವಿವರಿಸಿದೆ.

ವರದಿಯ ಪ್ರಕಾರ, ಬಾಲನ್ ಅವರು 2002ರಲ್ಲಿ ಬಾಲಕಿಯೊಬ್ಬಳ ಶವ ಪತ್ತೆಯಾದ ಪ್ರಕರಣವನ್ನು ಉಲ್ಲೇಖಿಸಿದ್ದು, “6.5.2002ರಂದು 12.30ರ ವೇಳೆಗೆ ಗುರುತಿಲ್ಲದ ಬಾಲಕಿಯ ಶವವು ಧರ್ಮಸ್ಥಳ ಸಮೀಪದ ಬೈಲೂರು ಸೇತುವೆ ಬಳಿ ಸಿಕ್ಕಿತ್ತು. ಇದು ಅಸಹಜವಾಗಿದ್ದು, ಸಿಆರ್‌ಪಿಸಿ ಸೆಕ್ಷನ್‌ 174ರ ಅಡಿ ಮಹಜರು ಪ್ರಕ್ರಿಯೆ ನಡೆಸಬೇಕು. ಆದರೆ, ಮಹಜರು ಪ್ರಕ್ರಿಯೆ ನಡೆಸಿಲ್ಲ. ಮರಣೋತ್ತರ ಪರೀಕ್ಷೆಯಾಗಿಲ್ಲ. ಎಲ್ಲಿ ಶವ ಸಂಸ್ಕಾರ ಮಾಡಲಾಗಿದೆ ಎಂಬ ಮಾಹಿತಿ ಇಲ್ಲ. ಲಾಡ್ಜ್‌ನಲ್ಲಿ ಉಳಿದುಕೊಂಡಿದ್ದ ಕೆಲವರು ನಾಪತ್ತೆಯಾಗಿದ್ದಾರೆ” ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಅಡ್ವೊಕೇಟ್‌ ಜನರಲ್‌, “6.5.2002ರಂದು ಸಿಕ್ಕಿದ್ದ ಬಾಲಕಿಯ ಶವಕ್ಕೆ ಸಂಬಂಧಿಸಿದಂತೆ ಯುಡಿಆರ್‌ ದಾಖಲಿಸಿ, ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಶವ ಸಂಸ್ಕಾರ ನಡೆಸಿರುವುದು, ಲುಕ್‌ಔಟ್‌ ನೋಟಿಸ್‌ ಜಾರಿ ಮಾಡಿರುವುದು, ಅಂತಿಮ ವರದಿ, ವೈದ್ಯರ ಅಭಿಪ್ರಾಯ ಎಲ್ಲವೂ ಇದೆ” ಎಂದು ಹೇಳಿದ್ದಾರೆ.

ಆಗ ಪೀಠವು “ತನಿಖಾ ವರದಿ ಎಲ್ಲಿದೆ? ಹಲವು ಅಸಹಜ ಸಾವಿನ ಪ್ರಕರಣದಲ್ಲಿ ತನಿಖೆಯೇ ನಡೆಯುವುದಿಲ್ಲ. ಸಾವಿಗೆ ಕಾರಣ ಏನು ಎಂಬ ಇರಬೇಕಲ್ಲವೇ?” ಎಂದಿದೆ.

ಇದಕ್ಕೆ ಅಡ್ವೊಕೇಟ್‌ ಜನರಲ್‌ ಅವರು “ಮಹಜರು, ಮರಣೋತ್ತರ ಪರೀಕ್ಷೆ, ವೈದ್ಯರ ಹೇಳಿಕೆ ಎಲ್ಲವೂ ಇದೆ. ಇಡೀ ದಾಖಲೆಯನ್ನು ನ್ಯಾಯಾಲಯದ ಮುಂದೆ ಇಡಲಾಗುವುದು. ತನಿಖೆಯ ವಿವರ, ಏನು ಮಾಡಲಾಗಿದೆ ಎಂವುದನ್ನು ವಿಸ್ತೃತವಾದ ಆಕ್ಷೇಪಣೆಯಲ್ಲಿ ಸಲ್ಲಿಸಲಾಗುವುದು. ಸರ್ಕಾರದ ಸುತ್ತೋಲೆಯ ಪ್ರಕಾರ 2010ರವರೆಗಿನ ದಾಖಲೆಗಳನ್ನು ನಾಶಪಡಿಸಲಾಗಿದೆ. 20 ವರ್ಷಗಳ ಬಳಿಕ ಅಸಹಜ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಪಿಐಎಲ್‌ ಸಲ್ಲಿಸಲಾಗಿದೆ. 2002ರ ದಾಖಲೆಗಳು ಇಲ್ಲ. 2023ರ ನವೆಂಬರ್‌ 23ರಂದು ಸರ್ಕಾರ ಹೊರಡಿಸಿರುವ ಸುತ್ತೋಲೆಯ ಪ್ರಕಾರ ಹಳೆಯ ದಾಖಲೆಗಳನ್ನು ನಾಶಪಡಿಸಲಾಗಿದೆ. ಅರ್ಜಿದಾರರು ಎತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕಾನೂನಿನ ಅಡಿ ಏನೆಲ್ಲಾ ಮಾಡಬಹುದು ಅದನ್ನು ಮಾಡಲಾಗಿದೆ” ಎಂದು ತಿಳಿಸಿದ್ದಾರೆ.

ಇದನ್ನು ಆಲಿಸಿದ ಪೀಠವು “ಈ ಹಂತದಲ್ಲಿ ಯಾವುದೇ ದಾಖಲೆ ಇಲ್ಲದೇ ಸರ್ಕಾರ ಹೇಗೆ ತನಿಖೆ ಮಾಡುತ್ತದೆ? ಕೆಲವು ದಾಖಲೆಗಳನ್ನು ನಾಶಪಡಿಸಲಾಗಿದೆ ಎಂದು ಸರ್ಕಾರ ಹೇಳುತ್ತಿದೆ. ಅದನ್ನು ಹೇಗೆ ಹಾಜರುಪಡಿಸಲಾಗುತ್ತದೆ?” ಎಂದು ಪ್ರಶ್ನಿಸಿದೆ.

ಈ ಹಂತದಲ್ಲಿ ಬಾಲನ್ ಅವರು “ಎಲ್ಲಾ ದಾಖಲೆಗಳನ್ನು ಸರ್ಕಾರ ನಾಶಪಡಿಸಿದೆ. ಯುಡಿಆರ್‌ ದಾಖಲಿಸಿದ್ದು, ಸಿಆರ್‌ಪಿಸಿ ಸೆಕ್ಷನ್‌ 174ರ ಅಡಿ ಪ್ರಕ್ರಿಯೆ ಪಾಲಿಸಲಾಗಿಲ್ಲ. ಎಸ್‌ಐಟಿ ರಚಿಸಲಾಗಿದೆ. ನಾವು ಪ್ರಸ್ತಾಪಿಸಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಸರ್ಕಾರ ಏನು ತನಿಖೆ ಮಾಡಿದೆ ಎಂಬುದನ್ನು ತಿಳಿಸಲಿ. ಲಾಡ್ಜ್‌ನಲ್ಲಿ ಇದ್ದ ಬಾಲಕಿ ನಾಪತ್ತೆಯಾಗಿದ್ದಳು. ಆನಂತರ ಶವ ಪತ್ತೆಯಾಗಿದೆ. ಇದೆಲ್ಲಕ್ಕೂ ಸಂಬಂಧಿಸಿದ ದಾಖಲೆ ಸಲ್ಲಿಸಬೇಕು” ಎಂದಿದ್ದಾರೆ.

ಆಗ ಅಡ್ವೊಕೇಟ್‌ ಜನರಲ್‌ ಅವರು “ಅರ್ಜಿದಾರೆಯ ಸಹೋದರ ದೂರು ನೀಡಿದ್ದು, ಆತ ದಾಖಲೆ ತಿರುಚಿರುವ ಕೃತ್ಯದಲ್ಲಿ ಭಾಗಿಯಾಗಿದ್ದಾರೆ. ಈ ಆರೋಪಗಳಿಗಾಗಿ ಎಸ್‌ಐಟಿ ರಚಿಸಲಾಗಿದೆ” ಎಂದು ಹೇಳಿದ್ದಾರೆ.

ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯ “74 ಪ್ರಕರಣಗಳಿಗೆ ಸಂಬಂಧಿಸಿದಂತೆ ನಡೆಸಿರುವ ತನಿಖಾ ವರದಿಯನ್ನು ಸಲ್ಲಿಸಬೇಕು” ಎಂದ ನಿರ್ದೇಶಿಸಿ, ವಿಚಾರಣೆಯನ್ನು ಜುಲೈ 7ಕ್ಕೆ ಮುಂದೂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...