ಇಂದು (ಸೆ.17) 74ನೇ ಕಲ್ಯಾಣ ಕರ್ನಾಟಕ ಉತ್ಸವ. ಉತ್ಸವದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಲಬುರಗಿ ನಗರದ ಡಿ.ಆರ್ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನಡೆಸಿ, ಹೈದರಾಬಾದ್ ಕರ್ನಾಟಕದ ವಿಮೋಚನೆಗೆ ಕಾರಣರಾದ, ದೇಶದ ಮೊದಲ ಗೃಹ ಸಚಿವ ಸರ್ದಾರ್ ವಲ್ಲಭಭಾಯ್ ಪಟೇಲ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ್ದಾರೆ.
ಪೊಲೀಸ್ ಪೆರೇಡ್ ಮೈದಾನದಲ್ಲಿ ಆಯೋಜಿಸಿರುವ ಉತ್ಸವದಲ್ಲಿ ಮಾತನಾಡಿರುವ ಸಿಎಂ ಬಸವರಾಜ ಬೊಮ್ಮಾಯಿ, ‘ಸರ್ದಾರ್ ವಲ್ಲಭಭಾಯಿ ಪಟೇಲರು ಮೊದಲ ಉಕ್ಕಿನ ಮನುಷ್ಯರಾದರೆ, ಈ ಭಾಗಕ್ಕೆ ಕಲ್ಯಾಣ ಕರ್ನಾಟಕ ಎಂದು ನಾಮಕರಣ ಮಾಡಿದ ಬಿ.ಎಸ್. ಯಡಿಯೂರಪ್ಪ ಅವರು ಇನ್ನೊಬ್ಬ ಉಕ್ಕಿನ ಮನುಷ್ಯ’ ಎಂದಿದ್ದಾರೆ.
ಜೊತೆಗೆ ಕಲ್ಯಾಣ ಕರ್ನಾಟಕ ಭಾಗಕ್ಕೆ ನೀಡಲಾಗುತ್ತಿರುವ 1,500 ಕೋಟಿ ರೂಪಾಯಿ ಅನುದಾನಕ್ಕೆ ಹೆಚ್ಚುವರಿಯಾಗಿ 1,500 ಕೋಟಿ ರೂಪಾಯಿ ನೀಡಲಾಗುವುದು ಎಂದು ಘೋಷಿಸಿದ್ದಾರೆ. ಈ ಮೂಲಕ ಈ ಭಾಗಕ್ಕೆ ನೀಡಲಾಗುವ ಅನುದಾನ 3 ಸಾವಿರ ಕೋಟಿ ರೂಪಾಯಿಯಾಗಲಿದೆ.
ಇದನ್ನೂ ಓದಿ: ನರೇಂದ್ರ ಮೋದಿ ಸ್ಟೇಡಿಯಂ ಟ್ರೋಲ್: ಸರ್ದಾರ್ ಪಟೇಲ್‌ಗೆ ಅವಮಾನ ಎಂದ ನೆಟ್ಟಿಗರು!
ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @BSBommai ಅವರು ಇಂದು ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಕಲಬುರ್ಗಿಯಲ್ಲಿ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ನಂತರ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. #ಕಲ್ಯಾಣಕರ್ನಾಟಕಉತ್ಸವ pic.twitter.com/CFOXnDn7ri
— BJP Karnataka (@BJP4Karnataka) September 17, 2021
ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದ, ರಾಜ್ಯ ಸರ್ಕಾರ ಇಲ್ಲಿಯವರೆಗೆ 8 ಸಾವಿರ ಕೋಟಿಗೂ ಅಧಿಕ ಮೊತ್ತವನ್ನು ಬಿಡುಗಡೆ ಮಾಡಿದೆ ಎಂದಿದ್ದಾರೆ. ಈ ಪೈಕಿ 6 ಸಾವಿರ ಕೋಟಿ ಖರ್ಚಾಗಿದೆ. ಉಳಿದ 2 ಸಾವಿರ ಕೋಟಿಯನ್ನು ಬರುವ ಮಾರ್ಚ್ ಒಳಗೆ ಖರ್ಚು ಮಾಡಬೇಕು. ಹೀಗಾದರೇ ಮಾತ್ರ, ಹೆಚ್ಚುವರಿ 1,500 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡುವುದಾಗಿ ಘೋಷಿಸಿದ್ದಾರೆ.
371 (ಜೆ) ಕಲಂನಿಂದ ಹೈದರಾಬಾದ್ ಕರ್ನಾಟಕ ಭಾಗದ ಲಕ್ಷಾಂತರ ಜನರಿಗೆ ಉದ್ಯೋಗ, ಶೈಕ್ಷಣಿಕ ಕ್ಷೇತ್ರದಲ್ಲಿ ಅವಕಾಶ ಸಿಕ್ಕಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಸ್ವಾತಂತ್ರ ನಂತರ 1948ರ ಸೆಪ್ಟೆಂಬರ್ 17 ರಂದು ಈ ಹೈದರಾಬಾದ್ ಸಂಸ್ಥಾನ ಭಾರತ ಒಕ್ಕೂಟದಲ್ಲಿ ವೀಲಿನವಾಯಿತು. ಈ ಭಾಗದ ಆರು ಜಿಲ್ಲೆಗಳು ಕರ್ನಾಟಕದ ಭಾಗವಾದವು. ಅಂದಿನಿಂದ ಪ್ರತಿವರ್ಷ ಸೆ.17 ಅನ್ನು ’ಕಲ್ಯಾಣ ಕರ್ನಾಟಕ ಉತ್ಸವ ದಿನ’ ಎಂದು ಆಚರಣೆ ಮಾಡಲಾಗುತ್ತಿದೆ.
ಇದನ್ನೂ ಓದಿ: ಸರ್ದಾರ್ ಪಟೇಲ್ ಕ್ರೀಡಾಂಗಣಕ್ಕೆ ನರೇಂದ್ರ ಮೋದಿ ಹೆಸರಿಟ್ಟ ಸರ್ಕಾರ!


