Homeಮುಖಪುಟಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಅತಿ ಹೆಚ್ಚು ದ್ವೇಷ ಭಾಷಣ: ವರದಿ

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಅತಿ ಹೆಚ್ಚು ದ್ವೇಷ ಭಾಷಣ: ವರದಿ

- Advertisement -
- Advertisement -

ಭಾರತದಲ್ಲಿನ ದ್ವೇಷ ಭಾಷಣದಲ್ಲಿ 2023ರ ದ್ವಿತೀಯಾರ್ಧದಲ್ಲಿ ಸಾರ್ವಕಾಲಿಕ ಹೆಚ್ಚಳವಾಗಿದೆ ಎಂದು ವಾಷಿಂಗ್ಟನ್ ಮೂಲದ ಸಂಶೋಧನಾ ಸಂಸ್ಥೆ ‘ಇಂಡಿಯಾ ಹೇಟ್ ಲ್ಯಾಬ್’ ವರದಿಯನ್ನು ಮಾಡಿದ್ದು, ಅದರಲ್ಲಿ ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಧಾರ್ಮಿಕ ಅಲ್ಪಸಂಖ್ಯಾತರಾದ ಮುಸ್ಲಿಮರ ವಿರುದ್ಧ ಅತಿ ಹೆಚ್ಚು ದ್ವೇಷ ಭಾಷಣವನ್ನು ಮಾಡಲಾಗಿದೆ ಎಂದು ವರದಿ ತಿಳಿಸಿದೆ.

2023ರ ದ್ವಿತೀಯಾರ್ಧದಲ್ಲಿ ಭಾರತದಲ್ಲಿ ಮುಸ್ಲಿಂ ವಿರೋಧಿ ದ್ವೇಷದ ಭಾಷಣವು ಶೇಕಡಾ 62ರಷ್ಟು ಹೆಚ್ಚಾಗಿದೆ ಎಂದು ‘ಇಂಡಿಯಾ ಹೇಟ್ ಲ್ಯಾಬ್’ ವರದಿ ತಿಳಿಸಿದೆ. 2023ರಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡ 668 ದ್ವೇಷ ಭಾಷಣ ಘಟನೆಗಳನ್ನು ಉಲ್ಲೇಖಿಸಿದೆ. ಅದರಲ್ಲಿ 255 ವರ್ಷದ ಮೊದಲಾರ್ಧದಲ್ಲಿ ಸಂಭವಿಸಿದೆ ಮತ್ತು 2023ರ ಕೊನೆಯ ಆರು ತಿಂಗಳಲ್ಲಿ 413 ಘಟನೆಗಳು ನಡೆದಿವೆ ಎಂದು ಸಂಶೋಧನಾ ಸಮಿತಿ ಸೋಮವಾರ ಬಿಡುಗಡೆ ಮಾಡಿದ ವರದಿಯಲ್ಲಿ ತಿಳಿಸಿದೆ.

ಇಂಡಿಯಾ ಹೇಟ್ ಲ್ಯಾಬ್ ಹಿಂದೂ ರಾಷ್ಟ್ರೀಯತಾವಾದಿ ಗುಂಪುಗಳ ಆನ್‌ಲೈನ್ ಚಟುವಟಿಕೆಯನ್ನು  ಟ್ರ್ಯಾಕ್ ಮಾಡಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ದ್ವೇಷ ಭಾಷಣದ ವೀಡಿಯೊಗಳನ್ನು ಪರಿಶೀಲಿಸಿದೆ ಮತ್ತು ಭಾರತೀಯ ಮಾಧ್ಯಮಗಳು ವರದಿ ಮಾಡಿದ ಪ್ರತ್ಯೇಕ ಘಟನೆಗಳ ದಾಖಲೆಯನ್ನು ಸಂಗ್ರಹಿಸಿ ವರದಿಯನ್ನು ಸಿದ್ದಪಡಿಸಿದೆ.

ರಾಜಸ್ಥಾನ, ಮಧ್ಯಪ್ರದೇಶ, ತೆಲಂಗಾಣ ಮತ್ತು ಛತ್ತೀಸ್‌ಗಢ ವಿಧಾನಸಭೆ ಚುನಾವಣೆಗೆ ಸಿದ್ಧವಾಗುತ್ತಿರುವ ಆಗಸ್ಟ್‌ನಿಂದ ನವೆಂಬರ್‌ವರೆಗಿನ ಅವಧಿಯಲ್ಲಿ ದ್ವೇಷದ ಭಾಷಣದ ಘಟನೆಗಳು ಉತ್ತುಂಗಕ್ಕೇರಿದವು ಎಂದು ವರದಿಯು ಗಮನಿಸಿದೆ. ಮಹಾರಾಷ್ಟ್ರ (118), ಉತ್ತರ ಪ್ರದೇಶ (104), ಮಧ್ಯಪ್ರದೇಶ (65), ರಾಜಸ್ಥಾನ (64), ಹರಿಯಾಣ (48), ಉತ್ತರಾಖಂಡ (41), ಕರ್ನಾಟಕ (40), ಗುಜರಾತ್ (31), ಛತ್ತೀಸ್‌ಗಢ (21), ಮತ್ತು ಬಿಹಾರ ( 18) ದ್ವೇಷದ ಭಾಷಣದ ಘಟನೆಯನ್ನು ವರದಿ ಮಾಡಿದೆ. ಇದರಲ್ಲಿ ಕರ್ನಾಟಕವನ್ನು ಹೊರತುಪಡಿಸಿ ಬೇರೆ ಎಲ್ಲಾ ರಾಜ್ಯಗಳಲ್ಲಿ ಬಿಜೆಪಿ ಆಡಳಿತವನ್ನು ಹೊಂದಿದೆ.

ವರದಿಯ ಪ್ರಕಾರ, ಸುಮಾರು 75 ಪ್ರತಿಶತ ಅಥವಾ 498 ಘಟನೆಗಳು ಭಾರತೀಯ ಜನತಾ ಪಕ್ಷ (ಬಿಜೆಪಿ) ಆಡಳಿತವಿರುವ ರಾಜ್ಯಗಳಲ್ಲಿ ನಡೆದಿವೆ. ಮಹಾರಾಷ್ಟ್ರ, ಉತ್ತರಪ್ರದೇಶ ಮತ್ತು ಮಧ್ಯಪ್ರದೇಶ ರಾಜ್ಯಗಳಲ್ಲಿ ಹೆಚ್ಚು ದ್ವೇಷಪೂರಿತ ಭಾಷಣಗಳನ್ನು ಮಾಡಲಾಗಿದೆ. ಈ ರಾಜ್ಯಗಳಲ್ಲಿ ಬಿಜೆಪಿ ಆಡಳಿತವನ್ನು ಹೊಂದಿದೆ. ಉತ್ತರಪ್ರದೇಶ ಮತ್ತು ಮಧ್ಯಪ್ರದೇಶ ರಾಜ್ಯದಲ್ಲಿ ಸರಕಾರದ ಮುಸ್ಲಿಂ ವಿರೋಧಿ ನಿಲುವುಗಳು ಹಲವು ಬಾರಿ ಸಾರ್ವಜನಿಕಗೊಂಡಿದ್ದವು, ಮುಸ್ಲಿಮರ ಧಾರ್ಮಿಕ ಕೇಂದ್ರಗಳ ಮೇಲೆ ದಾಳಿ, ಮುಸ್ಲಿಮರ ಮೇಲಿನ ಕಾನೂನು ದೌರ್ಜನ್ಯ, ಮನೆಗಳ ಧ್ವಂಸ, ಎನ್‌ಕೌಂಟರ್‌ ಪ್ರಕರಣಗಳು ಈ ರಾಜ್ಯಗಳಲ್ಲಿ ಹೆಚ್ಚು ವರದಿಯಾಗಿದ್ದವು.

ಮುಸ್ಲಿಮರ ವಿರುದ್ಧ ಹಿಂಸಾಚಾರದ ನೇರ ಕರೆಯನ್ನು ಕೆಲವು ದ್ವೇಷ ಭಾಷಣಗಳು ಒಳಗೊಂಡಿವೆ, ಲವ್ ಜಿಹಾದ್, ಲ್ಯಾಂಡ್ ಜಿಹಾದ್, ಹಲಾಲ್ ಜಿಹಾದ್ ಮತ್ತು ಜನಸಂಖ್ಯೆಯ ಜಿಹಾದ್‌ ಇದರಲ್ಲಿ ಒಳಗೊಂಡಿವೆ. ಸುಮಾರು 25% ಜನರು ಮುಸ್ಲಿಂ ಆರಾಧನಾ ಸ್ಥಳಗಳನ್ನು ಗುರಿಯಾಗಿಸಿಕೊಂಡು ದ್ವೇಷ ಭಾಷಣಗಳನ್ನು ಮಾಡಿದ್ದಾರೆ.

ಅಕ್ಟೋಬರ್ 7ರಂದು ಹಮಾಸ್‌ ಸಶಸ್ತ್ರ ಗುಂಪು ಮತ್ತು ಇಸ್ರೇಲ್‌ ನಡುವೆ ಯುದ್ಧ ಘೋಷಣೆ ಬಳಿಕ ಭಾರತೀಯ ಮುಸ್ಲಿಮರ ವಿರುದ್ಧ ದ್ವೇಷದ ಭಾಷಣದ 41 ಘಟನೆಗಳು ವರದಿಯಾಗಿದೆ. ಅಂದರೆ 2023ರ ಕೊನೆಯ ಮೂರು ತಿಂಗಳಲ್ಲಿ ಸುಮಾರು 20 ಪ್ರತಿ ಶತದಷ್ಟು ದ್ವೇಷ ಭಾಷಣ ಪ್ರಕರಣಗಳು ವರದಿಯಾಗಿದೆ ಎಂದು ಸಂಶೋಧನೆಯು ಉಲ್ಲೇಖಿಸಿದೆ. ಅಕ್ಟೋಬರ್ 7ರ ಇಸ್ರೇಲ್‌ ಯುದ್ಧ ಘೋಷಣೆ ದಿನ ಮತ್ತು ಡಿಸೆಂಬರ್ 31ರ ನಡುವೆ ನಡೆದ 193 ದ್ವೇಷ ಭಾಷಣ ಘಟನೆಗಳಲ್ಲಿ, ಭಾರತೀಯ ಮುಸ್ಲಿಮರ ಬಗ್ಗೆ ಭಯ ಮತ್ತು ದ್ವೇಷವನ್ನು ಹೆಚ್ಚಿಸಲು ಯುದ್ಧವನ್ನು ಬಳಸಿಕೊಳ್ಳಲಾಗಿದೆ. ಮುಸ್ಲಿಮರು ಸ್ವಾಭಾವಿಕವಾಗಿ ಹಿಂಸಾತ್ಮಕವಾಗಿದ್ದಾರೆ ಮತ್ತು ಹಿಂದೂಗಳಿಗೆ ಬೆದರಿಕೆಯನ್ನು ಒಡ್ಡುತ್ತಿದ್ದಾರೆ ಎಂದು ಬಲಪಂಥೀಯ ನಾಯಕರು ಪ್ರತಿಪಾದಿಸುತ್ತಾ ಬಂದಿದ್ದಾರೆ. ಜುಲೈ 2023ರಲ್ಲಿ ಹರಿಯಾಣದ ನುಹ್ ಮತ್ತು ಜೂನ್ 2023ರಲ್ಲಿ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ನಡೆದ ಹಿಂಸಾಚಾರವು ಈ ರೀತಿಯ ಪ್ರತಿಪಾದನೆಯಿಂದ ಉಂಟಾಗಿದೆ ಎನ್ನುವುದನ್ನು ಗಮನಿಸಬಹುದಾಗಿದೆ.

ಸಂಶೋಧನೆಯ ವೇಳೆ ಧರ್ಮ, ಜನಾಂಗೀಯತೆ, ರಾಷ್ಟ್ರೀಯತೆ, ಜನಾಂಗ ಅಥವಾ ಲಿಂಗದ ಆಧಾರದ ಮೇಲೆ ವ್ಯಕ್ತಿ ಅಥವಾ ಗುಂಪಿನ ಬಗ್ಗೆ ಪೂರ್ವಾಗ್ರಹ ಪೀಡಿತ ಅಥವಾ ತಾರತಮ್ಯದ ಭಾಷೆಯ ಬಳಕೆ ಎಂಬ ವಿಶ್ವಸಂಸ್ಥೆಯ ವ್ಯಾಖ್ಯಾನದಂತೆ ದ್ವೇಷ ಭಾಷಣವನ್ನು ಪತ್ತೆಹಚ್ಚಲಾಗಿದೆ ಎಂದು ಸಂಶೋಧನೆಯು ಬಹಿರಂಗಪಡಿಸಿದೆ. 2014ರಲ್ಲಿ ಪ್ರಧಾನಿಯಾಗಿ ಮೋದಿ ಅಧಿಕಾರವನ್ನು ಸ್ವೀಕರಿಸಿದ ಬಳಿಕ ಮೋದಿ ಆಡಳಿತದಲ್ಲಿ ಮುಸ್ಲಿಮರ ಮೇಲೆ ಅನ್ಯಾಯ ನಡೆಸಲಾಗಿದೆ ಎಂದು ಹೇಳಿದೆ.

ಅವರು UN ಮಾನವ ಹಕ್ಕುಗಳ ಕಚೇರಿ ಮೂಲಭೂತವಾಗಿ ತಾರತಮ್ಯ ಎಂದು ಕರೆಯುವ 2019ರ ಪೌರತ್ವ ಕಾನೂನು, ಮತಾಂತರ-ವಿರೋಧಿ ಶಾಸನ ಮತ್ತು ಮುಸ್ಲಿಂ ಬಹುಸಂಖ್ಯಾತ ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಹಿಂಪಡೆದಿರುವುದು ಸೇರಿದಂತೆ ವಿವಿಧ ವಿಚಾರಗಳನ್ನು ಉಲ್ಲೇಖಿಸಲಾಗಿದೆ. ಅಕ್ರಮ ಕಟ್ಟಡಗಳನ್ನು ತೆಗೆದುಹಾಕುವ ಹೆಸರಿನಲ್ಲಿ ಮುಸ್ಲಿಂ ಆಸ್ತಿಗಳನ್ನು ಧ್ವಂಸಗೊಳಿಸಲಾಗಿದೆ ಮತ್ತು ಕರ್ನಾಟಕದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ತರಗತಿಯಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಲಾಗಿದೆ ಎಂದು ಸಮಿತಿಯ ವರದಿಯು ಉಲ್ಲೇಖಿಸಿದೆ.

ಇದನ್ನು ಓದಿ: ಲೋಕಸಭೆಯಲ್ಲಿ ಅಂಗವಿಕಲರಿಗೆ ಮೀಸಲಾತಿ ಕೋರಿ ಸಲ್ಲಿಸಿದ್ದ PIL ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...