Homeಮುಖಪುಟ75% ಖಾಸಗಿ ವಲಯದ ಉದ್ಯೋಗ ಸ್ಥಳೀಯರಿಗೆ: ಜಾರ್ಖಂಡ್ ಸಚಿವ ಸಂಪುಟ ನಿರ್ಧಾರ

75% ಖಾಸಗಿ ವಲಯದ ಉದ್ಯೋಗ ಸ್ಥಳೀಯರಿಗೆ: ಜಾರ್ಖಂಡ್ ಸಚಿವ ಸಂಪುಟ ನಿರ್ಧಾರ

ಮಾರ್ಚ್ 2 ರಂದು ಹರ್ಯಾಣ ಸರ್ಕಾರ ಕೂಡಾ ಇಂತಹದ್ದೇ ನಿರ್ಧಾರವನ್ನು ತೆಗೆದುಕೊಂಡಿತ್ತು.

- Advertisement -
- Advertisement -

ಹರಿಯಾಣವು ರಾಜ್ಯದ ನಿವಾಸಗಳಿಗೆ ಖಾಸಗಿ ವಲಯದ ಕೈಗಾರಿಕೆಗಳಲ್ಲಿ 75% ರಷ್ಟು ಮೀಸಲಾತಿ ನೀಡುವ ನೀತಿಯನ್ನು ಅಂಗೀಕರಿಸಿದ ಕೆಲವೆ ದಿನಗಳ ಅಂತರದಲ್ಲಿ, ಜಾರ್ಖಂಡ್‌ ಸಚಿವ ಸಂಪುಟ ಕೂಡಾ 30 ಸಾವಿರ ವೇತನದವರೆಗಿನ ಖಾಸಗಿ ವಲಯದ 75% ಉದ್ಯೋಗಗಳು ಸ್ಥಳೀಯ ಅಭ್ಯರ್ಥಿಗಳಿಗೆ ಮಾತ್ರ ನೀಡಬೇಕು ಎಂಬ ನೀತಿಯನ್ನು ಶುಕ್ರವಾರ ಅಂಗೀಕರಿಸಿದೆ.

ಮುಖ್ಯಮಂತ್ರಿ ಕಚೇರಿಯ ಮೂಲಗಳ ಪ್ರಕಾರ ಜಾರ್ಖಂಡ್ ಅಸೆಂಬ್ಲಿಯಲ್ಲಿ ನಡೆಯುತ್ತಿರುವ ಬಜೆಟ್ ಅಧಿವೇಶನದಲ್ಲಿ ಇದನ್ನು ಘೋಷಿಸುವ ಸಾಧ್ಯತೆಯಿದೆ ಎಂದು ಎನ್ನಲಾಗಿದೆ.

“ಕ್ಯಾಬಿನೆಟ್‌ನಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಭಾವಿಸಲಾಗಿದೆ, ಕೆಲವು ವಿಧಾನಗಳನ್ನು ಇನ್ನೂ ನಿರ್ಧರಿಸಲಾಗಿಲ್ಲ. ಮಾರ್ಚ್ 17 ರಂದು ನಡೆಯಲಿರುವ ವಿಧಾನಸಭಾ ಅಧಿವೇಶನದಲ್ಲಿ ಮುಖ್ಯಮಂತ್ರಿ ಈ ನಿರ್ಧಾರವನ್ನು ಪ್ರಕಟಿಸುವ ಸಾಧ್ಯತೆಯಿದೆ” ಎಂದು ಮುಖ್ಯಮಂತ್ರಿ ಕಚೇರಿಯ ಹಿರಿಯ ಅಧಿಕಾರಿಯೊಬ್ಬರ ಹೇಳಿಕೆಯನ್ನು ಉಲ್ಲೇಖಿಸಿ TNIE ಪತ್ರಿಕೆ ವರದಿ ಮಾಡಿದೆ.

ಇದನ್ನೂ ಓದಿ: ಉದ್ಯೋಗ ಕೊಡದಿದ್ದರೆ ಮೋದಿಜಿಯನ್ನು ಮನೆಗೆ ಕಳಿಸುತ್ತೇವೆ: ನೋ ಜಾಬ್, ನೋ ವೋಟ್ ಟ್ವಿಟರ್ ಟ್ರೆಂಡಿಂಗ್

ಖಾಸಗಿ ವಲಯದಲ್ಲಿ ಸ್ಥಳೀಯರಿಗೆ ಉದ್ಯೋಗ ಖಾತರಿಪಡಿಸುವ ನೀತಿಯನ್ನು ತಮ್ಮ ಸರ್ಕಾರ ಚಿಂತಿಸುತ್ತಿದೆ ಎಂದು ಮುಖ್ಯಮಂತ್ರಿ ಹಲವಾರು ಸಂದರ್ಭಗಳಲ್ಲಿ ಇದರ ಬಗ್ಗೆ ಸುಳಿವು ನೀಡಿದ್ದರು. ವಿಶೇಷವೆಂದರೆ, ಖಾಸಗಿ ಉದ್ಯೋಗಗಳಲ್ಲಿ ಸ್ಥಳೀಯ ಯುವಕರಿಗೆ ಆದ್ಯತೆ ನೀಡುವ ಪ್ರಸ್ತಾಪವು 2019 ರ ವಿಧಾನಸಭಾ ಚುನಾವಣೆಯಲ್ಲಿ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ದ ಪ್ರಣಾಳಿಕೆಯ ಒಂದು ಭಾಗವಾಗಿತ್ತು. ಇದೀಗ ಜೆಎಂಎಂ ನೇತೃತ್ವದ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಈ ನೀತಿಯನ್ನು ಜಾರಿಗೆ ತರಲು ಪ್ರಯತ್ನಿಸುತ್ತಿದೆ.

ಲಾಕ್‌ಡೌನ್ ಸಮಯದಲ್ಲಿ ಹೆಚ್ಚಿನ ಸಂಖ್ಯೆಯ ಯುವ ವಲಸೆ ಕಾರ್ಮಿಕರು ತಮ್ಮ ಮನೆಗಳಿಗೆ ಹಿಂತಿರುಗಿದ್ದರು. ಈ ಸಮಯದಲ್ಲೇ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ. ಮೇ 2020 ರಲ್ಲಿ ಕೊರೊನಾ ಸಾಂಕ್ರಾಮಿಕದ ಸಮಯದಲ್ಲಿ ರಾಜ್ಯದ ನಿರುದ್ಯೋಗ ದರವು 59.2 ಕ್ಕೆ ಏರಿತ್ತು. ಈ ದರವು 2021 ರ ಜನವರಿಯಲ್ಲಿ 11.3% ಕ್ಕೆ ಇಳಿದಿದೆ ಎಂದು ಆರ್ಥಿಕ ಸಮೀಕ್ಷೆ ಬಹಿರಂಗಪಡಿಸಿದೆ. ಜನವರಿ 2020 ರಲ್ಲಿ ರಾಜ್ಯದ ನಿರುದ್ಯೋಗ ದರವು 10.6% ಆಗಿತ್ತು.

ಇದನ್ನೂ ಓದಿ: 75% ಖಾಸಗಿ ಉದ್ಯೋಗಗಳು ಸ್ಥಳೀಯರಿಗೆ ಮೀಸಲು – ಹರಿಯಾಣ ಸರ್ಕಾರ ಅನುಮೋದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...