HomeUncategorized75% ಖಾಸಗಿ ಉದ್ಯೋಗಗಳು ಸ್ಥಳೀಯರಿಗೆ ಮೀಸಲು - ಹರಿಯಾಣ ಸರ್ಕಾರ ಅನುಮೋದನೆ

75% ಖಾಸಗಿ ಉದ್ಯೋಗಗಳು ಸ್ಥಳೀಯರಿಗೆ ಮೀಸಲು – ಹರಿಯಾಣ ಸರ್ಕಾರ ಅನುಮೋದನೆ

- Advertisement -
- Advertisement -

ಶೇಕಡಾ 75 ರಷ್ಟು ಖಾಸಗಿ ಉದ್ಯೋಗಗಳನ್ನು ರಾಜ್ಯದ ಸ್ಥಳೀಯರಿಗೆ ಮೀಸಲಿರಿಸುವ ಮಸೂದೆಗೆ ಹರಿಯಾಣ ರಾಜ್ಯಪಾಲರು ಅನುಮೋದನೆ ನೀಡಿದ್ದಾರೆ ಎಂದು ಉಪಮುಖ್ಯಮಂತ್ರಿ ದುಶ್ಯಂತ್ ಚೌತಲಾ ಮಂಗಳವಾರ ಮಾಹಿತಿ ನೀಡಿದ್ದಾರೆ. ಈ ಮಸೂದೆಯನ್ನು ಕಳೆದ ವರ್ಷ ರಾಜ್ಯ ವಿಧಾನಸಭೆ ಅಂಗೀಕರಿಸಿತ್ತು.

“ಇದು ರಾಜ್ಯದ ಯುವಕರಿಗೆ ಬಹಳ ಸಂತೋಷದ ದಿನವಾಗಿದೆ. ರಾಜ್ಯದ ಯುವಕರಿಗೆ ಈಗ ಖಾಸಗಿ ಉದ್ಯೋಗಗಳಲ್ಲಿ ಶೇಕಡಾ 75 ರಷ್ಟು ಮೀಸಲಾತಿ ಸಿಗುತ್ತದೆ” ಎಂದು ಅವರು ಹೇಳಿದರು.

ಸ್ಥಳೀಯರಿಗೆ ಖಾಸಗಿ ಉದ್ಯೋಗಗಳಲ್ಲಿ ಮೀಸಲಾತಿ ನೀಡುವುದು ದುಶ್ಯಂತ್ ಚೌತಲಾ ಅವರ ಜನ್‌ನಾಯಕ್ ಜನತಾ ಪಕ್ಷದ ಚುನಾವಣಾ ಪ್ರಣಾಳಿಕೆಯ ಮುಖ್ಯ ಭರವಸೆಯಾಗಿತ್ತು. ಚುನಾವಣೆಯಲ್ಲಿ 90 ಸ್ಥಾನಗಳಲ್ಲಿ 10 ಸ್ಥಾನಗಳನ್ನು ಗೆದ್ದ ನಂತರ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ರಾಜ್ಯದಲ್ಲಿ ಸರ್ಕಾರ ರಚಿಸಿತ್ತು.

ಕಳೆದ ವರ್ಷ ದುಶ್ಯಂತ್ ಚೌತಲಾ ಅವರು ಮಂಡಿಸಿದ ಈ ಮಸೂದೆಯ ಪ್ರಕಾರ, ಖಾಸಗಿ ಕಂಪೆನಿಗಳು ಶೇಕಡಾ 75 ರಷ್ಟು ಉದ್ಯೋಗಗಳನ್ನು ಮತ್ತು ತಿಂಗಳಿಗೆ ₹ 50,000 ರೂ.ಗಳ ವರೆಗಿನ ವೇತನವನ್ನು ಹರಿಯಾಣದ ಸ್ಥಳೀಯರಿಗೆ ಕಾಯ್ದಿರಿಸುವುದು ಕಡ್ಡಾಯವಾಗಿದೆ.


ಇದನ್ನೂ ಓದಿ: ದೆಹಲಿ ಹಿಂಸಾಚಾರ: ಮಾಧ್ಯಮಗಳಿಗೆ ಮಾಹಿತಿ ಸೋರಿಕೆ – ಪೊಲೀಸರಿಗೆ ಹೈಕೋರ್ಟ್ ತರಾಟೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. 50000/- ರೂಪಾಯಿಗಿಂತ ಕಡಿಮೆ ಸಂಬಳದ ಎಲ್ಲಾ ಕೆಲಸಗಳು ಹರಿಯಾಣದವರಿಗೆ ಮೀಸಲು?

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...