Homeಕರ್ನಾಟಕಮೂರೂವರೆ ವರ್ಷದಲ್ಲಿ 752 ಕೋಮು ಪ್ರಕರಣಗಳನ್ನು ಕಂಡ ’ಸೌಹಾರ್ದ ಕರ್ನಾಟಕ’

ಮೂರೂವರೆ ವರ್ಷದಲ್ಲಿ 752 ಕೋಮು ಪ್ರಕರಣಗಳನ್ನು ಕಂಡ ’ಸೌಹಾರ್ದ ಕರ್ನಾಟಕ’

- Advertisement -
- Advertisement -

ರಾಜ್ಯವೂ ಕಳೆದ ಮೂರೂವರೆ ವರ್ಷಗಳಲ್ಲಿ 700ಕ್ಕೂ ಹೆಚ್ಚು ಕೋಮು ಘರ್ಷಣೆಗಳು ಮತ್ತು ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿರುವ ಪ್ರಕರಣಗಳಿಗೆ ಸಾಕ್ಷಿಯಾಗಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಬಹಿರಂಗಪಡಿಸಿದೆ.

ಕಳೆದ 40 ತಿಂಗಳುಗಳಲ್ಲಿ ಧಾರ್ಮಿಕ ಮತ್ತು ಕೋಮು ವಿಷಯಗಳಿಗೆ ಸಂಬಂಧಿಸಿದ 700 ಕ್ಕೂ ಹೆಚ್ಚು ಅಪರಾಧ ಪ್ರಕರಣಗಳನ್ನು ರಾಜ್ಯವು ಕಂಡಿದೆ ಎಂದು ವರದಿ ತಿಳಿಸುತ್ತದೆ. ಕರ್ನಾಟಕ ರಾಜ್ಯ ಪೊಲೀಸರ ಮೂಲಗಳ ಪ್ರಕಾರ, ರಾಜ್ಯದಲ್ಲಿ ಕೇವಲ 3.4 ವರ್ಷಗಳ ಅವಧಿಯಲ್ಲಿ (ಜನವರಿ 2019 ರಿಂದ ಏಪ್ರಿಲ್ 2022) ಜಾತಿ, ಧರ್ಮ ಸೇರಿದಂತೆ ಕೋಮು ಸಂಬಂಧಿಸಿದ 752 ಕ್ಕೂ ಹೆಚ್ಚು ಪ್ರಕರಣಗಳು (IPC 295 ರಿಂದ 297) ದಾಖಲಾಗಿವೆ.

ಧರ್ಮಕ್ಕೆ ಸಂಬಂಧಿಸಿದ ಅಪರಾಧಗಳು (IPC 295 ರಿಂದ 297 ರ ಅಡಿಯಲ್ಲಿ ಪ್ರಕರಣ ದಾಖಲಿಸಿಲಾಗಿದೆ) 2019 ರಲ್ಲಿ 197 ರಷ್ಟಿತ್ತು. ಆದರೆ ನಂತರದ ಎರಡು ವರ್ಷಗಳಲ್ಲಿ 212 ಮತ್ತು 204 ಕ್ಕೆ ಏರಿದೆ. ಈ ವರ್ಷ ಕೇವಲ ನಾಲ್ಕು ತಿಂಗಳಲ್ಲಿ 97 ಕ್ಕೂ ಹೆಚ್ಚು ಪ್ರಕರಣಗಳು ಈಗಾಗಲೇ ದಾಖಲಾಗಿವೆ ಎಂಬ ಆತಂಕದ ವರದಿಯನ್ನು ಬಹಿರಂಗಪಡಿಸಿದೆ.

ಒಟ್ಟಾರೆ ರಾಷ್ಟ್ರಕವಿ ಕುವೆಂಪು ಅವರು ‘ಸರ್ವ ಜನಾಂಗದ ಶಾಂತಿಯ ತೋಟ’ ಎಂದು ಬಣ್ಣಿಸಿದ ನಮ್ಮ ರಾಜ್ಯದಲ್ಲಿ, ದಿನೇ ದಿನೇ ಕೋಮು ಪ್ರಕರಣಗಳು ಹೆಚ್ಚಾಗುತ್ತಿದ್ದು,  ಶಾಂತಿಯ ತೋಟ ಎಂಬ ಹೆಸರನ್ನು ಕಳೆದುಕೊಳ್ಳುತ್ತಿದೆ.


ಇದನ್ನೂ ಓದಿ: ಸಂವಿಧಾನ ಒಬ್ಬರೇ ಬರೆದಿದ್ದು ಎಂದು ಹೇಗೆ ಹೇಳುತ್ತೀರಿ?: ಪಠ್ಯದಿಂದ ‘ಸಂವಿಧಾನ ಶಿಲ್ಪಿ’ ಪದ ಕೈಬಿಟ್ಟಿದ್ದಕ್ಕೆ ಪಠ್ಯ ಪರಿಶೀಲನೆ ಸಮಿತಿ ಸದಸ್ಯನ ಸಮರ್ಥನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...