Homeಕರ್ನಾಟಕಸ್ವಾತಂತ್ರ್ಯದ ಅಮೃತ ಮಹೋತ್ಸವ:’ಅಮೃತ’ ಯೋಜನೆಗಳನ್ನು ಘೋಷಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಸ್ವಾತಂತ್ರ್ಯದ ಅಮೃತ ಮಹೋತ್ಸವ:’ಅಮೃತ’ ಯೋಜನೆಗಳನ್ನು ಘೋಷಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಅಮೃತ ಗ್ರಾಮೀಣ ವಸತಿ ಯೋಜನೆಯಲ್ಲಿ ಆಯ್ದ 750 ಗ್ರಾಮಗಳಲ್ಲಿ ವಸತಿರಹಿತರನ್ನು ಗುರುತಿಸಿ ವಸತಿ ಕಲ್ಪಸಿಕೊಡಲಾಗುವುದು

- Advertisement -
- Advertisement -

ಕೊರೊನಾ ಆತಂಕದ ಮಧ್ಯೆಯೇ ಭಾರತವು ಭಾನುವಾರ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದೆ. ಸ್ವಾತಂತ್ರ್ಯ ಅಮೃತ ಮಹೋತ್ಸವದ ಭಾಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ‘ಅಮೃತ’ ಎಂಬ ಹೆಸರಿನೊಂದಿಗೆ ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ.

ಬೆಂಗಳೂರಿನ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾಹೋರಾಹಣ ನೆರವೇರಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ’ಕರ್ನಾಟಕ ನಾಡು, ನುಡಿ, ನೆಲ, ಜಲದ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದ ದುಡಿಯುತ್ತೇನೆ. ರೈತರು, ನೇಕಾರರು ಸೇರಿದಂತೆ ವಿವಿಧ ಸಮುದಾಯಗಳ ಏಳಿಗೆಗಾಗಿ ಶ್ರಮಿಸುತ್ತೇನೆ’ ಎಂದು ಹೇಳಿದ್ದಾರೆ.

“ರೈತರು, ನೇಕಾರರು ಮತ್ತು ಮೀನುಗಾರರ ಉತ್ಪನ್ನಗಳ ಉತ್ಪಾದನೆ ಮತ್ತು ಮಾರಾಟ ಉತ್ತೇಜಿಸಲು 750 ಅಮೃತ ರೈತ ಉತ್ಪಾದಕ ಸಂಸ್ಥೆಗಳನ್ನು ಪ್ರಾರಂಭಿಸಲಾಗುವುದು. ಇದಕ್ಕಾಗಿ 225 ಕೋಟಿ ರೂಪಾಯಿ ಮೂಲ ಬಂಡವಾಳವನ್ನು ಒದಗಿಸಿ, ಪ್ರತಿ ಸಂಸ್ಥೆಗೂ 30 ಲಕ್ಷ ರೂ ನೀಡಲಾಗುವುದು” ಎಂದು ಬೊಮ್ಮಾಯಿ ಪ್ರಕಟಿಸಿದ್ದಾರೆ.

ರೈತರಿಗೆ ನೀರಾವರಿ ವ್ಯವಸ್ಥೆ ಕಲ್ಪಿಸುವುದಕ್ಕಾಗಿ ಅಪ್ಪರ್‌ ಕೃಷ್ಣ 3ನೇ ಹಂತವನ್ನು ಮಾಡಿ 5.5 ಲಕ್ಷ ಹೆಕ್ಟೇರ್ ಜಮೀನಿಗೆ ನೀರಾವರಿ ವ್ಯವಸ್ಥೆಯನ್ನು ಕಲ್ಪಿಸಲಾಗುವುದು. ಅದಕ್ಕೆ, ಸುಪ್ರೀಂ ಕೋರ್ಟ್‌ನಲ್ಲಿ ಕಾನೂನು ಹೋರಾಟದ ಅಗತ್ಯವಿದೆ. ಅದರೊಂದಿಗೆ ಯೋಜನೆಯನ್ನು ಜಾರಿಗೊಳಿಸಲು ಪ್ರಯತ್ನಿಸುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: 3ನೇ ಅಲೆ ಆತಂಕ: ಸೆಪ್ಟೆಂಬರ್‌ ವೇಳೆಗೆ ರಾಜ್ಯದಲ್ಲಿ ಕೊರೊನಾ ಪ್ರಕರಣ 30 ಲಕ್ಷಕ್ಕೆ ಏರಿಕೆ

“ಮೇಕೆದಾಟು ಮತ್ತು ಮಹಾದಾಯಿ ಯೋಜನೆಗಳನ್ನು ಪ್ರಾರಂಭಿಸಬೇಕಾಗಿದೆ. ಮೇಕೆದಾಟು ಬಗ್ಗೆ ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಿ, ಕಾನೂನಿನ ಎಲ್ಲಾ ಆಯಾಮಗಳನ್ನು ಅವರಿಗೆ ಮನವರಿಗೆ ಮಾಡಿ, ಪರವಾನಗಿ ಪಡೆದು, ಯೋಜನೆಯನ್ನ ಪ್ರಾರಂಭಿಸುತ್ತೇವೆ. ಬೆಂಗಳೂರು ಮತ್ತು ಹಲವು ಗ್ರಾಮಗಳಿಗೆ ಕುಡಿಯುವ ನೀರು ತರುತ್ತೇವೆ” ಎಂದು ಹೇಳಿದ್ದಾರೆ.

ಅಮೃತ ಗ್ರಾಮೀಣ ವಸತಿ ಯೋಜನೆಯಲ್ಲಿ ಆಯ್ದ 750 ಗ್ರಾಮಗಳಲ್ಲಿ ವಸತಿರಹಿತರನ್ನು ಗುರುತಿಸಿ ಎಲ್ಲರಿಗೂ ವಸತಿ ಕಲ್ಪಸಿಕೊಡಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ.

ಅಮೃತ ಗ್ರಾಮ ಪಂಚಾಯತಿ ಯೋಜನೆಯ ಅಡಿಯಲ್ಲಿ ಆಯ್ದ 750 ಗ್ರಾಮ ಪಂಚಾಯಿತಿಗಳಿಗೆ ಪ್ರತಿ ಮನೆಗೆ ಕುಡಿಯುವ ನೀರು, ಘನತ್ಯಾಜ್ಯ ವಿತರಣೆ, ವಿದ್ಯುತ್‌, ಡಿಜಿಟಲ್‌ ಲೈಬ್ರರಿಗಳನ್ನ ತೆರೆಯುತ್ತೇವೆ ಎಂದು ಹೇಳಿದ್ದಾರೆ.

ಅಮೃತ ನಿರ್ಮಲ ನಗರ ಯೋಜನೆಯಡಿ 75 ನಗರಗಳನ್ನು ಆಯ್ಕೆ ಮಾಡಿ, ಅವುಗಳ ಸ್ವಚ್ಛತೆ ಕಾಪಾಡಲು ಮತ್ತು ಸೌಂದರ್ಯ ವೃದ್ಧಿಗಾಗಿ ಪ್ರತಿ ನಗರಕ್ಕೂ ಒಂದು ಕೋಟಿ ರೂಪಾಯಿ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ರದ್ದಾದ ಕಾನೂನಿನ ಅಡಿಯಲ್ಲಿ ಪ್ರಕರಣ ದಾಖಲು!; ರಾಜ್ಯ ಮತ್ತು ಕೇಂದ್ರಾಡಳಿತಕ್ಕೆ ಸುಪ್ರೀಂ ನೋಟಿಸ್‌‌

ಶಾಲಾ ಸೌಲಭ್ಯ ಯೋಜನೆಯಡಿ 750 ಶಾಲೆಗಳಿಗೆ 75 ಕೋಟಿ ರೂಪಾಯಿ ಮೀಸಲಿಡಲಾಗುವುದು. ಈ ಪೈಕಿ ಪ್ರತಿ ಶಾಲೆಗಳಿಗೂ 10 ರೂಗಳನ್ನು ಒದಗಿಸಿ ಸುಸಜ್ಜಿತ ಕಟ್ಟಡ, ಪ್ರಯೋಗಾಲಯ, ಗ್ರಂಥಾಲಯ, ಶೌಚಾಲಯ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಅಮೃತ ಅಂಗನವಾಡಿ ಕೇಂದ್ರಗಳ ನಿರ್ಮಾಣ ಯೋಜನೆಯಡಿ 750 ಅಂಗನವಾಡಿ ಕೇಂದ್ರಗಳ ಮೂಲಸೌಕರ್ಯ ಅಭಿವೃದ್ಧಿಗೆ ತಲಾ 1 ಲಕ್ಷ ರೂಪಾಯೊ ಒದಗಿಸಲಾಗುತ್ತದೆ. ಬೆಂಗಳೂರಿನ 75 ಕೊಳೆಗೇರಿಗಳ ಸುಧಾರಣೆ ಮತ್ತು 75 ಕೆರೆಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು.

ಅಮೃತ ಆರೋಗ್ಯ ಮೂಲಸೌಕರ್ಯ ಉನ್ನತೀಕರಣ ಯೋಜನೆಯಡಿ 750 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮೂಲಸೌಕರ್ಯಗಳ್ನು ಅಭಿವೃದ್ಧಿ ಪಡಿಸಲಾಗುವುದು. ಇದಕ್ಕಾಗಿ ತಲಾ 20 ಲಕ್ಷ ರೂ.ಗಳಂತೆ 150 ಕೋಟಿ ರೂ ವೆಚ್ಚ ಮಾಡಲಾಗುವುದು.

ಅಮೃತ ಕೌಶಲ ತರಬೇತಿ ಯೋಜನೆಗೆ 112 ಕೋಟಿ ನೀಡಲಾಗಿವುದು. ಈ ಯೋಜನೆಯ ಅಡಿಯಲ್ಲಿ 75,000 ಯುವಕ ಯುವತಿಯರಿಗೆ  ಕೌಶಲ್ಯ ತರಬೇತಿ ನೀಡಲಾಗುವುದು. ಅಮೃತ ಕ್ರೀಡಾ ಪ್ರೋತ್ಸಾಹ ಯೋಜನೆ ಅಡಿಯಲ್ಲಿ 76 ಕ್ರೀಡಾಪಟುಗಳನ್ನು ದತ್ತು ಪಡೆದುಕೊಂಡು ತರಬೇತಿ ನೀಡಲಾಗುವುದು. ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಕ್ಷೇತ್ರದ 75 ನವೋದ್ಯಮಗಳಿಗೆ ಪ್ರೋತ್ಸಾಹ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.


ಇದನ್ನೂ ಓದಿ: ಸಾರ್ವಜನಿಕವಾಗಿ ಟೆಂಟ್ ಹಾಕಿ ಗಣೇಶ ಕೂರಿಸುವಂತಿಲ್ಲ: ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...