Homeಮುಖಪುಟ75ನೇ ಸ್ವಾತಂತ್ರ್ಯ ದಿನಾಚರಣೆ: ಪ್ರಧಾನಿ ಮೋದಿ ಭಾಷಣದ ಪ್ರಮುಖಾಂಶಗಳು

75ನೇ ಸ್ವಾತಂತ್ರ್ಯ ದಿನಾಚರಣೆ: ಪ್ರಧಾನಿ ಮೋದಿ ಭಾಷಣದ ಪ್ರಮುಖಾಂಶಗಳು

- Advertisement -
- Advertisement -

75ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು, ದೇಶವನ್ನುದ್ದೇಶಿಸಿ ಮಾತನಾಡಿದ್ದಾರೆ. ಕೊರೊನಾ ಆತಂಕದ ನಡುವೆ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಗಿದೆ.

ಭಾಷಣದಲ್ಲಿ ದೇಶದ ಯೋಜನೆಗಳು ಶೇ 100 ರಷ್ಟು ಜನರಿಗೆ ತಲುಪಬೇಕು ಎಂದಿರುವ ಪ್ರಧಾನಿ, ಎರಡು ವರ್ಷ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಗೆ ಕರೆ ನೀಡಿದ್ದಾರೆ.

ಸ್ವಾತಂತ್ರ್ಯಕ್ಕಾಗಿ ಸುದೀರ್ಘ ಮತ್ತು ಕಠಿಣ ಹೋರಾಟವನ್ನು ನಡೆಸಿದೆ ಎಲ್ಲಾ ಹಿಂದಿನ ನಾಯಕರಿಗೆ ಪ್ರಧಾನಿ ಗೌರವ ಸಲ್ಲಿಸಿದ್ದಾರೆ. ಜವಾಗಹರ್‌ ಲಾಲ್ ನೆಹರೂ, ಸರ್ದಾರ್ ಪಟೇಲ್, ಬಾಬಾಸಾಹೇಬ್ ಅಂಬೇಡ್ಕರ್, ಮಹಾತ್ಮ ಗಾಂಧಿ, ಚಂದ್ರಶೇಖರ್ ಆಜಾದ್, ಕಿತ್ತೂರು ರಾಣಿ ಚೆನ್ನಮ್ಮ ಮುಂತಾದ ಮಹನೀಯರನ್ನು ಸ್ಮರಿಸಿದ್ದಾರೆ. ಭಾರತಕ್ಕೆ ಭವಿಷ್ಯದ ಹಾದಿಯನ್ನು ತೋರಿಸಿದ ಇವರುಗಳಿಗೆ ದೇಶವು ಋಣಿಯಾಗಿದೆ ಎಂದಿದ್ದಾರೆ.

“ನಮ್ಮ ಹಳ್ಳಿಗಳಿಗೆ 100% ರಸ್ತೆಗಳಿವೆ, ಶೇ.100 ರಷ್ಟು ಮನೆಗಳಿಗೆ ಬ್ಯಾಂಕ್ ಖಾತೆಗಳಿವೆ, ಶೇ.100 ರಷ್ಟು ಫಲಾನುಭವಿಗಳಿಗೆ ಆಯುಷ್ಮಾನ್ ಭಾರತ್ ಕಾರ್ಡ್ ಇದೆ, ಶೇ.100 ರಷ್ಟು ಅರ್ಹ ವ್ಯಕ್ತಿಗಳಿಗೆ ಉಜ್ವಲ ಅನಿಲ ಯೋಜನೆಯ ಸಂಪರ್ಕವಿದೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಇದನ್ನೂ ಓದಿ: ಮಾತಾಡಿ ಪ್ರಧಾನಿಗಳೇ ಮಾತನಾಡಿ: ಸ್ವಾತಂತ್ರ್ಯ ದಿನದ ಪಿಎಂ ಭಾಷಣಕ್ಕೆ ಸಲಹೆಗಳ ಸುರಿಮಳೆ

ಉತ್ಪಾದನೆ ಮತ್ತು ಉದ್ಯೋಗವನ್ನು ಉತ್ತೇಜಿಸಲು ಸರ್ಕಾರವು 100 ಕೋಟಿ ರೂ.ಮೌಲ್ಯದ ಗತಿ ಶಕ್ತಿ ಯೋಜನೆಯನ್ನು ಆರಂಭಿಸಲಿದೆ. “ಎಲ್ಲಾ ತಯಾರಕರು ಜಾಗತಿಕ ಮಾರುಕಟ್ಟೆಯನ್ನು ಗುರಿಯಾಗಿಸಿಕೊಳ್ಳಬೇಕು. ಭಾರತವು ಜಾಗತಿಕ ಮಾರುಕಟ್ಟೆಯ ಕೇಂದ್ರವಾಗಬೇಕು” ಎಂದು ಎಂದು ಪ್ರಧಾನಿ ಹೇಳಿದ್ದಾರೆ.

ಬಾಲಕಿಯರಿಗಾಗಿ ಸೈನಿಕ ಶಾಲೆಗಳನ್ನು ತೆರೆಯಲಾಗುವುದು. 75 ವಂದೇ ಭಾರತ್ ರೈಲುಗಳು ಅಮೃತ್ ಹಬ್ಬದ 75 ವಾರಗಳಲ್ಲಿ ದೇಶದ ಮೂಲೆ ಮೂಲೆಯನ್ನು ಸಂಪರ್ಕಿಸಲಿವೆ. ಇನ್ನು ಮುಂದೆ, ಆಗಸ್ಟ್ 14 ಅನ್ನು “ವಿಭಜನೆಯ ಕರಾಳ ದಿನ” ಎಂದು ಆಚರಿಸಲಾಗುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಹಾಜರಿದ್ದ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ. ” ಒಲಂಪಿಕ್ಸ್ ನಲ್ಲಿ ನಮಗೆ ಹೆಮ್ಮೆ ತಂದ ಕ್ರೀಡಾಪಟುಗಳು ಇಂದು ನಮ್ಮ ನಡುವೆ ಇದ್ದಾರೆ. ಅವರ ಸಾಧನೆಯನ್ನು ಶ್ಲಾಘಿಸುವಂತೆ ನಾನು ರಾಷ್ಟ್ರವನ್ನು ಒತ್ತಾಯಿಸುತ್ತೇನೆ. ಅವರು ನಮ್ಮ ಹೃದಯವನ್ನು ಗೆಲ್ಲುವುದಲ್ಲದೆ ಭವಿಷ್ಯದ ಪೀಳಿಗೆಗೂ ಸ್ಫೂರ್ತಿ ನೀಡಿದ್ದಾರೆ” ಎಂದು ಹೇಳಿದ್ದಾರೆ.

“ಮುಂದಿನ 25 ವರ್ಷಗಳಲ್ಲಿ ಭಾರತದಲ್ಲಿ ಸ್ವಾತಂತ್ರ್ಯ ಶತಮಾನೋತ್ಸವ ಆಚರಿಸಲಾಗುತ್ತದೆ. ಅಲ್ಲಿಯವರೆಗೆ ನಮ್ಮ ಗುರಿ ಭಾರತದ ನಿರ್ಮಾಣ ಆಗಿರಬೇಕು. ಯಾವ ರಾಷ್ಟ್ರಕ್ಕೂ ನಾವು ಕಡಿಮೆ ಇಲ್ಲ ಎನ್ನುವಂತೆ ಬೆಳೆಯಬೇಕು. ನಮ್ಮ ಎಲ್ಲಾ ಗುರಿಗಳ ಸಾಧನೆಗೆ ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್ ಮತ್ತು ಸಬ್ ಕಾ ಪ್ರಯಾಸ್ ಬಹಳ ಮುಖ್ಯವಾಗಿದೆ” ಎಂದರು.

ರಾಷ್ಟ್ರೀಯ ಹೈಡ್ರೋಜನ್‌ ಮಿಷನ್‌ ಘೋಷಣೆ. ನಾವು ಭಾರತವನ್ನು ಹಸಿರು ಜಲಜನಕದ ಉತ್ಪಾದನೆ ಮತ್ತು ರಫ್ತು ಮಾಡುವ ಕೇಂದ್ರವನ್ನಾಗಿಸಬೇಕು. ಈಶಾನ್ಯ ಭಾಗ, ಹಿಮಾಲಯ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಕರಾವಳಿ ಪ್ರದೇಶ ಮತ್ತು ಬುಡಕಟ್ಟು ಪ್ರದೇಶಗಳು ಭವಿಷ್ಯದಲ್ಲಿ ಭಾರತದ ಅಭಿವೃದ್ಧಿಗೆ ಅಡಿಪಾಯಗಳಾಗಲಿವೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಗಡಿ ನಿರ್ಣಯದ ಆಯೋಗವನ್ನು ರಚಿಸಲಾಗಿದೆ ಎಂದು ಹೇಳಿದ್ದಾರೆ.

ದೇಶದಲ್ಲಿ 54 ಕೋಟಿ ಜನರು ಲಸಿಕೆ ಪಡೆದಿದ್ದಾರೆ. ಎಲ್ಲಾ ಪ್ರಯತ್ನಗಳ ಹೊರತಾಗಿಯೂ ನಾವು ಅನೇಕ ಜನರನ್ನು ಉಳಿಸಲು ಸಾಧ್ಯವಾಗಲಿಲ್ಲ. ಅನೇಕ ಮಕ್ಕಳು ತಮ್ಮ ಪೋಷಕರನ್ನು ಕಳೆದುಕೊಂಡಿದ್ದಾರೆ ಎಂದಿದ್ದಾರೆ.


ಇದನ್ನೂ ಓದಿ: ರಾಜೀವ್ ಗಾಂಧಿ ಖೇಲ್ ರತ್ನ ಇನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ: ಪ್ರಧಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...