Homeಕರ್ನಾಟಕಪರಿಶಿಷ್ಟರಿಗೆ ಮೀಸಲಾಗಿದ್ದ ಅನುದಾನದಲ್ಲಿ 7,885.32 ಕೋಟಿ ರೂ. ಇತರೆ ಕಾಮಗಾರಿಗೆ ಬಳಕೆ

ಪರಿಶಿಷ್ಟರಿಗೆ ಮೀಸಲಾಗಿದ್ದ ಅನುದಾನದಲ್ಲಿ 7,885.32 ಕೋಟಿ ರೂ. ಇತರೆ ಕಾಮಗಾರಿಗೆ ಬಳಕೆ

- Advertisement -
- Advertisement -

ಎಸ್‌ಸಿ, ಎಸ್‌ಟಿ ಕಲ್ಯಾಣಕ್ಕಾಗಿ ಮೀಸಲಾಗಿದ್ದ ಹಣದಲ್ಲಿ 7,885.32 ಕೋಟಿ ರೂ.ಗಳನ್ನು ಕುಡಿಯುವ ನೀರಿನ ಯೋಜನೆಗಳು, ಒಳಚರಂಡಿ ದುರಸ್ತಿ, ನೀರಾವರಿ ಮತ್ತು ಇತರ ಸಿವಿಲ್ ಕಾಮಗಾರಿಗಳಿಗೆ ರಾಜ್ಯ ಸರ್ಕಾರ ಬಳಸಿರುವುದನ್ನು ಅಧಿಕೃತ ಅಂಕಿ-ಅಂಶಗಳು ತೆರೆದಿಟ್ಟಿವೆ ಎಂದು ಡೆಕ್ಕನ್‌ ಹೆರಾಲ್ಡ್‌ ವರದಿ ಮಾಡಿದೆ.

ಪರಿಶಿಷ್ಟ ಜಾತಿಗಳ ಉಪ ಯೋಜನೆ ಮತ್ತು ಬುಡಕಟ್ಟು ಉಪ ಯೋಜನೆ (SCSP-TSP) ಅಡಿಯಲ್ಲಿ ನಿಗದಿಯಾದ ಹಣ ಇದಾಗಿದೆ. ಸಾಮಾಜಿಕವಾಗಿ ಹಿಂದುಳಿದ ಸಮುದಾಯಗಳಿಗೆ ಕಡ್ಡಾಯವಾಗಿ ಖರ್ಚು ಮಾಡಬೇಕಾದ ಹಣ, ಇತರ ಕಾಮಗಾರಿಗಳಿಗೆ ಬಿಜೆಪಿ ಸರ್ಕಾರ ಬಳಸಿದೆ. 2018 ಮತ್ತು 2021ರ ನಡುವೆ, ನೀರಾವರಿ, ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (RDPR) ಇಲಾಖೆಗಳು ತಮ್ಮ ಯೋಜನೆಗಳಿಗೆ SCSP-TSP ನಿಧಿಯನ್ನು ಬಳಸಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕರ್ನಾಟಕ ಪರಿಶಿಷ್ಟ ಜಾತಿಗಳ ಉಪ ಯೋಜನೆ ಮತ್ತು ಬುಡಕಟ್ಟು ಉಪ ಯೋಜನೆ (ಹಣಕಾಸಿನ ಸಂಪನ್ಮೂಲಗಳ ಯೋಜನೆ, ಹಂಚಿಕೆ ಮತ್ತು ಬಳಕೆ) ಕಾಯಿದೆಯಡಿಯಲ್ಲಿ ಶೇ. 14.84 ಹಣವನ್ನು ಬಜೆಟ್‌ನಲ್ಲಿ ಮೀಸಲಿಡಬೇಕು. ಕಾನೂನಿನ ಸಮಸ್ಯಾತ್ಮಕ ಭಾಗವೆಂದರೆ ಸೆಕ್ಷನ್ 7 (ಡಿ). ಇದರ ಅಡಿಯಲ್ಲಿ ಬೇರೆ ಬೇರೆ ಕಾಮಗಾರಿಗಳಿಗೆ ಹಣ ಹೋಗುತ್ತಿದೆ.

“ಕಾಯ್ದೆಯ ಸೆಕ್ಷನ್‌ 7ಡಿ ಕಾಲಂ ತೆಗೆದು ಹಾಕಬೇಕಿದೆ ಎಂಬ ಆಗ್ರಹ ಮೊದಲಿನಿಂದಲೂ ಇದೆ. ನೀರಾವರಿ ಯೋಜನೆಗಳಿಗೆ ಪರಿಶಿಷ್ಟರ ಹಣ ವಿನಿಯೋಗಿಸುವಾಗ ಏನು ಹೇಳುತ್ತಾರೆ? ಈ ನೀರು ಎಸ್‌ಟಿ, ಎಸ್‌ಟಿಗಳ ಹೊಲಗಳಿಗೂ ಹೋಗುತ್ತದೆ ಎಂದಲ್ಲವೇ? ಎಸ್‌ಸಿ, ಎಸ್‌ಟಿಗಳ ಹೊಲಗಳನ್ನು ಸುಲಭವಾಗಿ ಗುರುತಿಸಬಹುದಲ್ಲ? ಸಾವಿರ ಎಕರೆಯಲ್ಲಿ ಎಸ್‌ಸಿ, ಎಸ್‌ಟಿ ಸಮುದಾಯದವರ ಜಮೀನು ಸುಮಾರು 40 ಎಕರೆ ಇದ್ದರೆ, ಅಷ್ಟು ಜಾಗಕ್ಕೆ ಎಷ್ಟು ಹಣ ಬೇಕಾಗುತ್ತದೆಯೋ ಅಷ್ಟನ್ನು ಮಾತ್ರ ತೆಗೆದುಕೊಳ್ಳಬೇಕಲ್ಲವೇ?” ಎಂಬುದು ದಲಿತ ನಾಯಕರ ಆಗ್ರಹ.

ಇದನ್ನೂ ಓದಿರಿ: ವಿಶೇಷ ವರದಿ: ವರ್ಷ ವರ್ಷವೂ ಎಸ್‌ಸಿ, ಎಸ್‌ಟಿಗಳ ಅನುದಾನ ಗೋತಾ; ಸರ್ಕಾರಕ್ಕಿಲ್ಲ ದಲಿತರ ಮೇಲೆ ಕಾಳಜಿ

ಸೆಕ್ಷನ್‌ 7 (ಡಿ) ಅಡಿಯಲ್ಲಿ ಎಷ್ಟು ಹಣ ಹೋಗುತ್ತಿದೆ ಎಂಬ ಸ್ಪಷ್ಟತೆ ಇಲ್ಲ. ಉಪಯೋಜನೆಯ ಹಣದಲ್ಲಿ ನಾವು ಕುಡಿಯುವ ನೀರು ಅಥವಾ ರಸ್ತೆಗಳನ್ನು ಒದಗಿಸಿದರೆ, ಅದು ಎಲ್ಲರಿಗೂ ಉಪಯೋಗವಾಗುತ್ತದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ್ ಕಾರಜೋಳ ಡೆಕ್ಕನ್‌ ಹೆರಾಲ್ಡ್‌ಗೆ ತಿಳಿಸಿದ್ದಾರೆ.

ಸೆಕ್ಷನ್‌ 7(ಡಿ) ನಿಬಂಧನೆಯು ಸಮಸ್ಯಾತ್ಮಕವಾಗಿದೆ. ಬಿಜೆಪಿಯ ಸ್ವಂತ ಎಸ್‌ಸಿ, ಎಸ್‌ಟಿ ಶಾಸಕರಾದ ಪಿ ರಾಜೀವ್, ಎನ್‌ವೈ ಗೋಪಾಲಕೃಷ್ಣ, ಎಂಪಿ ಕುಮಾರಸ್ವಾಮಿ ಮತ್ತು ಇತರರು ವಿರೋಧಿಸಿದ್ದಾರೆ ಎಂದು ಕಾರಜೋಳ ತಿಳಿದಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಆರ್ಥಿಕ ವರ್ಷದಲ್ಲಿ ಉಪಯೋಜನೆಯಡಿ 28,234 ಕೋಟಿ ರೂ.ಗಳನ್ನು ನೀಡಿದ್ದಾರೆ.

“ಉಪಯೋಜನೆ ಹಣದಲ್ಲಿ ಸಂಪೂರ್ಣ ಮೇಲ್ಸೇತುವೆ ನಿರ್ಮಿಸಿ ನಂತರ ಎಸ್‌ಸಿ/ಎಸ್‌ಟಿಗಳು ಸಹ ಅದನ್ನು ಬಳಸುತ್ತಾರೆ ಎಂದು ಹೇಳುವುದು ಸರಿಯೇ?” ಎಂದು ಪ್ರಶ್ನಿಸಿದ್ದಾರೆ ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಎಸಿ ಎಸ್ಟಿ ಅನುದಾನ ಎಲ್ಲರಿಗೂ ಬಳಕೆ ಯಾಗುತ್ತದೆ ಎಂದಾಗ ಕೇವಲ ನಾಮಕಾವಸ್ಥೆಗಾಗಿ ಯಾಕೆ ಎಸಿ, ಎಸ್ಟಿ ಹೆಸರಲ್ಲಿ ಅನುದಾನವನ್ನು ಮೀಸಲು ಇಡ್ತೀರಿ…. ಈ ರೀತಿ ಮಾಡಿದಾಗ ಅಷ್ಪ್ರಶ್ಯರು ಬಡತನ ರೇಖೆಯಿಂದ ಮೇಲೆ ಬರೋದು ಯಾವಾಗ…? ಕಾನೂನಿನ ದುರ್ಬಳಕೆಯಾಗಿಲ್ಲವೇ…ವಿರೋಧ ಪಕ್ಷಗಳು ಸಹ ಹೊಣೆಯಲ್ಲವೇ…?

LEAVE A REPLY

Please enter your comment!
Please enter your name here

- Advertisment -

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...