Homeಮುಖಪುಟ2018-2022ರ ನಡುವೆ 79% ಸವರ್ಣಿಯರು ಹೈಕೋರ್ಟ್ ನ್ಯಾಯಾಧೀಶರಾಗಿ ನೇಮಕ: ಪ್ರಾತಿನಿಧ್ಯದ ಪ್ರಶ್ನೆಗೆ ಉತ್ತರ ಸಿಗುವುದೇ?

2018-2022ರ ನಡುವೆ 79% ಸವರ್ಣಿಯರು ಹೈಕೋರ್ಟ್ ನ್ಯಾಯಾಧೀಶರಾಗಿ ನೇಮಕ: ಪ್ರಾತಿನಿಧ್ಯದ ಪ್ರಶ್ನೆಗೆ ಉತ್ತರ ಸಿಗುವುದೇ?

- Advertisement -
- Advertisement -

ಈ ಅಂಕಿಅಂಶವು ಸಚಿವಾಲಯದಿಂದ ಬಿಡುಗಡೆ ಆಗಿದೆ. ನ್ಯಾಯಾಧೀಶರ ನೇಮಕಾತಿಯಲ್ಲಿ ಎಲ್ಲಾ ಸಮುದಾಯದ ಪ್ರಾತಿನಿಧ್ಯವನ್ನು ಖಾತರಿಪಡಿಸುವಲ್ಲಿ ಕೊಲಿಜಿಯಂ ವಿಫಲವಾಗಿದೆ ಎಂದು ಎತ್ತಿ ತೋರುತ್ತಿದೆ.
ಇಂದಿರಾ ಜೈನ್‌ಸಿಂಗ್ ಅವರು ಡಿಸೆಂಬರ್ 26ರಂದು ಲೀಫ್‌ಲೆಟ್ ಅಂತರ್ಜಾಲ ಪತ್ರಿಕೆಗೆ ಬರೆದ ಲೇಖನದ ಅನುಸಾರ, “ಸರ್ಕಾರದ ನಿರಂತರ ದಾಳಿಯಿಂದಾಗಿ ಸುಪ್ರೀಂಕೋರ್ಟ್ ತನ್ನ ಅಸ್ತಿತ್ವದ ಬಿಕ್ಕಟ್ಟು ಎದುರಿಸುತ್ತಿದೆ. ಇತ್ತೀಚಿಗೆ ಕೇಂದ್ರ ಕಾನೂನು ಸಚಿವರು ಮತ್ತು ಉಪ ರಾಷ್ಟ್ರಪತಿಗಳು ಮಾಡಿದ ಭಾಷಣದಿಂದ ಇದು ಇನ್ನಷ್ಟು ಸ್ಪಷ್ಟವಾಗಿದೆ. ನ್ಯಾಯಾಂಗ ನೇಮಕಾತಿಗಳಲ್ಲಿ ಪ್ರಾತಿನಿಧ್ಯ ಮುಖ್ಯವಾದ ಅಗತ್ಯವಾಗಿದ್ದರೂ, ಕಾಯಿಲೆಗಿಂತಲೂ ಚಿಕಿತ್ಸೆಯೇ ಕೆಟ್ಟದಾಗಿದೆ”.

ಈ ಹಿನ್ನಲೆಯಲ್ಲಿ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯ ವರದಿಯ ಪ್ರಕಾರ, ಕಳೆದ 5 ವರ್ಷಗಳಲ್ಲಿ (2018ರಿಂದ 2022ರ ಅವಧಿಯಲ್ಲಿ) ಹೈಕೋರ್ಟ್‌ಗೆ ನೇಮಕಗೊಂಡ ನ್ಯಾಯಧೀಶರ ಪೈಕಿ ಶೇ. 79 ಪ್ರಮಾಣದಷ್ಟು ಬಲಾಢ್ಯ ಜಾತಿಗಳೇ ಇದ್ದಾರೆಂಬುದು ಹಿಂದುಳಿದ ಮತ್ತು ಅಲ್ಪಸಂಖ್ಯಾತ ಸಮುದಾಯದ ಅಸಮಾನ ಪ್ರಾತಿನಿಧ್ಯವನ್ನು ಸ್ಪಷ್ಟಪಡಿಸುತ್ತದೆ. ಸಂಸದೀಯ ಸಮಿತಿ ಮುಂದೆ ಕೇಂದ್ರ ಕಾನೂನು ಸಚಿವಾಲಯವು ಈ ಅಂಕಿಅಂಶಗಳನ್ನು ಮಂಡಿಸಿದೆ.

ಕಾನೂನು ಮತ್ತು ನ್ಯಾಯದ ಸಂಸದೀಯ ಸ್ಥಾಯಿ ಸಮಿತಿಯ ಎದುರು ಕಾನೂನು ಸಚಿವಾಲಯ ಈ ವಿಷಯವನ್ನು ಬಹಿರಂಗಪಡಿಸಿದೆ; ಉನ್ನತ ನ್ಯಾಯಾಂಗದಲ್ಲಿ ಎಲ್ಲ ಸಮುದಾಯದವರಿಗೆ ಪ್ರಾತಿನಿಧ್ಯ ನೀಡಬೇಕು ಎಂದು ಸುಪ್ರೀಂಕೋರ್ಟ್ ಮೊದಲಿಗೆ ಮಾರ್ಗಸೂಚಿಯನ್ನು ರೂಪಿಸಲಾಗಿತ್ತು; ಕೊಲಿಜಿಯಂ ವ್ಯವಸ್ಥೆಯು 30 ವರ್ಷಗಳಿಂದ ಅಸ್ತಿತ್ವದಲ್ಲಿ ಇದ್ದರು ಕೂಡ ನ್ಯಾಯಾಧೀಶರುಗಳ ನೇಮಕಾತಿಯಲ್ಲಿ ಮಾರ್ಗಸೂಚಿಯ ಅನಿಷ್ಠಾನ ಕಾಣೆಯಾಗಿದೆ ಎಂದು ಕೂಡ ಹೇಳಿದೆ.

ಇದನ್ನೂ ಓದಿರಿ: ಮಾಧ್ಯಮಗಳ ಮೇಲೆ ಬೆದರಿಕೆ ಸಲ್ಲದು: ಬಿಬಿಸಿ ಮೇಲಿನ ಐಟಿ ದಾಳಿಗೆ ಎಡಿಟರ್ಸ್ ಗಿಲ್ಡ್ ಖಂಡನೆ

ದೇಶದ ಎಲ್ಲಾ 25 ಹೈಕೋರ್ಟ್‌‌ಗಳಲ್ಲಿ ನೇಮಕ ಆದ ನ್ಯಾಯಾಮೂರ್ತಿಗಳಲ್ಲಿ ಹೆಚ್ಚಿನವರೆಲ್ಲಾ ಸವರ್ಣೀಯ ಜಾರಿಯವರು ಎಂಬ ಅಂಶ ಅಘಾತಕಾರಿಯಾಗಿದೆ. ನ್ಯಾಯಾಂಗ ನೇಮಕಾತಿಯಲ್ಲಿ ‘ತಾರತಮ್ಯ’ ಆಗಿದೆ; ದೇಶದಲ್ಲಿ ಹಿಂದುಳಿದ ವರ್ಗದವರು (ಒಬಿಸಿ) 35% ಜನಸಂಖ್ಯೆ ಹೊಂದಿದ್ದಾರೆ. ಆದರೆ ಆ ವರ್ಗದಿಂದ ನ್ಯಾಯಪೀಠ ಸ್ಥಾನದಲ್ಲಿ 11%ಕ್ಕಿಂತ ಕಡಿಮೆ ನ್ಯಾಯಾಧೀಶರು ನೇಮಕ ಆಗಿದ್ದಾರೆ. ಮತ್ತೊಂದು ತಾರತಮ್ಯದ ಆರೋಪವೆಂದರೆ ದೇಶದ ಎಲ್ಲಾ ಹೈಕೋರ್ಟ್‌ಗಳಲ್ಲಿ 2018ರಿಂದ ಒಟ್ಟು 537 ನ್ಯಾಯಾಧೀಶರುಗಳು ನೇಮಕ ಆಗಿದ್ದಾರೆ. ಅವರಲ್ಲಿ ಅಲ್ಪಸಂಖ್ಯಾತ ಸಮುದಾಯದವರು 2.6%, ಪರಿಶಿಷ್ಟ ಜಾತಿಯವರು 2.8%, ಪರಿಶಿಷ್ಟ ಪಂಗಡದವರು ಕೇವಲ 1.3% ನೇಮಕ ಆಗಿದ್ದಾರೆ.

ಕಾನೂನು ಸಚಿವಾಲಯದ ಪ್ರಕಾರ, “ಪ್ರಾತಿನಿಧ್ಯ ಮತ್ತು ಸಾಮಾಜಿಕ ನ್ಯಾಯದ ಪ್ರಶ್ನೆಯನ್ನು ನ್ಯಾಯಾಲಯದ ನೇಮಕಾತಿ ಪ್ರಕ್ರಿಯೆಯಲ್ಲಿ ಸರಿಯಾಗಿ ನಿಭಾಯಿಸುವ ಪ್ರಾಥಮಿಕ ಹೊಣೆಗಾರಿಕೆಯು ಸುಪ್ರೀಂಕೋರ್ಟ್‌ನ ಕೊಲಿಜಿಯಂ ಹಾಗೂ ಹೈಕೋರ್ಟ್‌ನ ಕೊಲಿಜಿಯಂದು ಆಗಿರುತ್ತದೆ”.

ಮೇಲಿನ ಹೇಳಿಕೆಯನ್ನು ಸ್ಥಾಯಿ ಸಮಿತಿ ಮುಂದೆ ನೀಡುವ ಮೂಲಕ ಕಾನೂನು ಸಚಿವಾಲಯವು ತನ್ನ ಅಸಹಾಯಕತೆಯನ್ನು ವ್ಯಕ್ತಪಡಿಸುತ್ತದೆ. ನ್ಯಾಯಾಂಗವು ನ್ಯಾಯಾಧೀಶರ ನೇಮಕಾತಿಯಲ್ಲಿ ಪ್ರಾತಿನಿಧ್ಯದ ಪ್ರಶ್ನೆಯನ್ನು ಆದ್ಯತೆಯಾಗಿ ಮಾಡಿಕೊಳ್ಳಬೇಕು. ಆದ್ದರಿಂದ ಇದನ್ನು ನ್ಯಾಯಾಂಗವೇ ಸ್ವತಃ ಪರಿಹರಿಸಬೇಕಾಗಿದೆ.

ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್‌ಗಳು ಎಂದು ನ್ಯಾಯಾಧೀಶರ ಕೊಲಿಜಿಯಂ ಎರಡು ಹಂತಗಳಲ್ಲಿ ಕಾರ್ಯ ನಿರ್ವಹಿಸುತ್ತದೆ. ಭಾರತದ ಮುಖ್ಯ ನ್ಯಾಯಾಧೀಶರ ನೇತೃತ್ವದ 4 ಸದಸ್ಯರ ಸುಪ್ರೀಂಕೋರ್ಟ್‌‍ನ ಕೊಲಿಜಿಯಂ ಸರ್ವೋಚ್ಚ ನ್ಯಾಯಾಲಯಕ್ಕೆ ನ್ಯಾಯಾಧೀಶರನ್ನು ನೇಮಕ ಮಾಡಲು ಪ್ರಸ್ತಾಪವನ್ನು ತಯಾರು ಮಾಡುತ್ತದೆ. ಮುಖ್ಯ ನ್ಯಾಯಾಧೀಶರ ನೇತೃತ್ವದ 3 ಸದಸ್ಯರ ಹೈಕೋರ್ಟ್ ಕೊಲಿಜಿಯಂ ಹೆಸರುಗಳನ್ನು ಶಿಫಾರಸು ಮಾಡುತ್ತದೆ.

ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರಗಳನ್ನು ಬರೆಯುವ ಮೂಲಕ ಕಾನೂನು ಸಚಿವಾಲಯವು ಉನ್ನತ ನ್ಯಾಯಾಂಗದಲ್ಲಿ “ಸಾಮಾಜಿಕ ಪ್ರಾತಿನಿಧ್ಯ ಮತ್ತು ಸಾಮಾಜಿಕ ನ್ಯಾಯದ ಸಮಸ್ಯೆಯನ್ನು ಪರಿಹರಿಸುವ” ಅಗತ್ಯವನ್ನು ಒತ್ತಿ ಹೇಳಿದೆ. ಕೊಲಿಜಿಯಂನ ಮುಖ್ಯ ಕೆಲಸಗಳಲ್ಲಿ ಒಂದಾದ ನ್ಯಾಯಾಧೀಶರ ನೇಮಕಾತಿಯಲ್ಲಿ ಅಸಮಾನತೆಯನ್ನು ತೊಡೆದುಹಾಕಲು ಅದಕ್ಕೆ ಸಾಧ್ಯವಾಗಿಲ್ಲ ಎಂದು ಕಾನೂನಿನ ಸಂಸದೀಯ ಸ್ಥಾಯಿ ಸಮಿತಿ ಮುಂದೆ ಕಾನೂನು ಸಚಿವಾಲಯ ಹೇಳಿದೆ.

“ಸರ್ಕಾರವು ಆಯಾ ನ್ಯಾಯಾಲಯದ ಕೊಲಿಜಿಯಂನಿಂದ ಶಿಫಾರಸು ಮಾಡಲ್ಪಟ್ಟ ಜನರನ್ನು ಮಾತ್ರ ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್‌ಗಳ ನ್ಯಾಯಾಧೀಶರನ್ನಾಗಿ ನೇಮಿಸುತ್ತದೆ” ಎಂದು ಕೂಡ ಸಚಿವಾಲಯ ಹೇಳಿದೆ.

ಆದಾಗ್ಯೂ, ಸಚಿವಾಲಯವು ಹೈಕೋರ್ಟ್ ನ್ಯಾಯಾಧೀಶರನ್ನು ನೇಮಕ ಮಾಡುವ ನೀತಿಗಳನ್ನೂ ಸ್ಪಷ್ಟಪಡಿಸಿತು. ಸಂವಿಧಾನದ 217 ಮತ್ತು 224 ವಿಧಿಗಳ ಪ್ರಕಾರ ಯಾವುದೇ ಜಾತಿ ಅಥವಾ ವರ್ಗದ ವ್ಯಕ್ತಿಗಳಿಗೆ ಮೀಸಲಾತಿಯನ್ನು ಒದಗಿಸುವುದಿಲ್ಲ. ನ್ಯಾಯಾಧೀಶರ ನೇಮಕಾತಿಗೆ ಪ್ರಸ್ತಾವನೆಗಳನ್ನು ಕಳುಹಿಸುವಾಗ ಸಾಮಾಜಿಕ ಪ್ರಾತಿನಿಧ್ಯವನ್ನು ಖಚಿತಪಡಿಸಿಕೊಳ್ಳಲು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು ಮತ್ತು ಮಹಿಳೆಯರು ಸೇರಿದ ಸೂಕ್ತ ಅಭ್ಯರ್ಥಿಗಳನ್ನು ಪರಿಗಣಿಸಿ ಪಟ್ಟಿ ನೀಡಬೇಕು ಎಂದು ಮುಖ್ಯ ನ್ಯಾಯಾಧೀಶರುಗಳನ್ನು ಕಾಲಕಾಲಕ್ಕೆ ಸಚಿವಾಲಯ ಆಗ್ರಹಿಸುತ್ತಿದೆ ಎಂದಿದೆ.

ಸರ್ವೋಚ್ಚ ನ್ಯಾಯಾಲಯದ ಕೊಲಿಜಿಯಂ ಕಳಿಸಿದ ಶಿಫಾರಸುಗಳನ್ನು ಕಾನೂನು ಸಚಿವಾಲಯವು ಪರಿಶೀಲಿಸುತ್ತದೆ. ಗುಪ್ತಚರ ಇಲಾಖೆಯು ಶಿಫಾರಸ್ಸು ಮಾಡಲಾದ ಈ ಅಭ್ಯರ್ಥಿಗಳ ಹಿನ್ನಲೆಯನ್ನು ಪರಿಶೀಲಿಸುತ್ತದೆ. ನಂತರ ಹೈಕೋರ್ಟ್ ಕೊಲಿಜಿಯಂನ ಶಿಫಾರಸುಗಳನ್ನು ಒಳಗೊಂಡಂತೆ ವಿವರವಾದ ವರದಿಯನ್ನು ಸುಪ್ರೀಂಕೋರ್ಟ್ ಕೊಲಿಜಿಯಂಗೆ ಅವರ ಸಲಹೆಗಾಗಿ ಕಳುಹಿಸಲಾಗುತ್ತದೆ. ನಂತರ ಸರ್ವೋಚ್ಚ ನ್ಯಾಯಾಲಯದ ಕೊಲಿಜಿಯಂನಿಂದ ಹೆಸರುಗಳು ಅಂತಿಮಗೊಳ್ಳುತ್ತದೆ, ಕೇಂದ್ರ ಸರ್ಕಾರ ನೇಮಕಾತಿಗಳ ಅಧಿಸೂಚನೆ ಪ್ರಕಟಿಸುತ್ತದೆ.

ಒಂದು ವೇಳೆ ಸರ್ಕಾರ ಮತ್ತು ಸುಪ್ರೀಂಕೋರ್ಟ್ ನಡುವೆ ಭಿನ್ನಾಭಿಪ್ರಾಯ ಬಂದರೆ, ಸರ್ಕಾರವು ಅಂತಹ ಹೆಸರುಗಳನ್ನು ಮರುಪರಿಶೀಲನೆ ಮಾಡಲು ಸುಪ್ರೀಂಕೋರ್ಟ್ ಕೊಲಿಜಿಯಂಗೆ ವಾಪಾಸು ಕಳಿಸುತ್ತದೆ. ಆದರೆ ಅಸ್ತಿತ್ವದಲ್ಲಿರುವ ಕೊಲಿಜಿಯಂ ವ್ಯವಸ್ಥೆ ಪ್ರಕಾರ ಸುಪ್ರೀಂಕೋರ್ಟ್‌ನ ಕೊಲಿಜಿಯಂ ಅದೇ ಹೆಸರುಗಳನ್ನು ಪುನರುಚ್ಚರಿಸಿದರೆ ಅವರನ್ನು ನ್ಯಾಯಾಧೀಶರನ್ನಾಗಿ ನೇಮಕ ಮಾಡುವುದಕ್ಕೆ ಸರ್ಕಾರವು ಬದ್ಧವಾಗಿರಬೇಕಿರುತ್ತದೆ.

ಇದನ್ನೂ ಓದಿರಿ: ಅದಾನಿ ಹಗರಣ ವಿಚಾರ: ಹೂಡಿಕೆದಾರರ ರಕ್ಷಣೆಗೆ ಸಮಿತಿ ರಚಿಸಲು ಅಭ್ಯಂತರವಿಲ್ಲ ಎಂದ ಕೇಂದ್ರ

ಈ ಪರಿಸ್ಥಿತಿ ನ್ಯಾಯಾಲಯದಲ್ಲಿ ಮಾತ್ರವಲ್ಲ, ಮೀಸಲಾತಿ ಇಲ್ಲದ ಎಲ್ಲಾ ವಲಯಗಳಲ್ಲಿ ಇದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಹಿಳೆಯರು, ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳ ಮೇಲಿನ ತಾರತಮ್ಯವು ಸಾಂಸ್ಥಿಕವಾದದ್ದು ಮತ್ತು ವ್ಯವಸ್ಥಿತವಾದದ್ದು ಆಗಿದೆ. ದೇಶ ಸ್ವತಂತ್ರಗೊಂಡ ಇಷ್ಟು ವರ್ಷಗಳ ನಂತರ ಇಂದಿಗೂ ದುರ್ಬಲ ವರ್ಗಗಳು ತಮ್ಮ ಅಸ್ತಿತ್ವಕ್ಕಾಗಿ, ಪ್ರಾತಿನಿಧ್ಯಗಾಗಿ ಹೋರಾಡಲೇ ಬೇಕಾದಂತಹ ಪರಿಸ್ಥಿತಿ ಇದೆ. ಉನ್ನತ ನ್ಯಾಯಾಂಗದಲ್ಲಿನ ಈ ತಾರತಮ್ಯ ಪ್ರಜಾಪ್ರಭುತ್ವದ ಅಡಿಪಾಯವನ್ನೆ ಅಣಕಿಸುತ್ತಿದೆ. ಸಂವಿಧಾನದ ಅನುಷ್ಠಾನ ಮತ್ತು ಪಾಲನೆ ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್‌ಗಳ ಪ್ರಧಾನ ಕರ್ತವ್ಯ.

ಸಮಾಜದ ಎಲ್ಲಾ ರಂಗಗಳಲ್ಲಿ ದುರ್ಬಲ ವರ್ಗಗಳಿಗೆ ಸಮಾನ ಪ್ರಾತಿನಿಧ್ಯ ಕಲ್ಪಿಸಿಕೊಡಬೇಕು ಎಂಬುದು ಸಂವಿಧಾನದ ಆಶಯ ಆಗಿದೆ. ಕಲ್ಪಿಸಿ ಕೊಡುವುದು ಉನ್ನತ ನ್ಯಾಯಾಲಯದ ಕರ್ತವ್ಯ. ಸುಪ್ರೀಂಕೋರ್ಟ್ ಈ ತಾರತಮ್ಯ ಹೋಗಲಾಡಿಸಲು ಮುಂದಾಗಬೇಕಿದೆ. ಇತ್ತೀಚಿನ ವರ್ಷಗಳಲ್ಲಿ ನ್ಯಾಯಾಂಗವನ್ನು ಸರ್ಕಾರವು ತನ್ನ ನಿಯಂತ್ರಣಕ್ಕೆ ತೆಗೆದುಕೊಳ್ಳುವ ಪ್ರಯತ್ನವನ್ನು ಮಾಡುತ್ತಿದೆ. ನಮಗೆ ಸ್ವತಂತ್ರ ನ್ಯಾಯಾಂಗ ವ್ಯವಸ್ಥೆಯು ಬೇಕಿದೆ. ಸ್ವತಂತ್ರ ನ್ಯಾಯಾಂಗದೊಳಗೆ ಸಮಾನ ಪ್ರಾತಿನಿಧ್ಯವು ಬೇಕಿದೆ. ಆಗ ಮಾತ್ರ ಸಂವಿಧಾನದ ಆಶಯ ಈಡೇರುತ್ತದೆ.

ಲೇಖನ: ಮಹೇಶ್ ಕುಮಾರ್
ಅನುವಾದ: ಸಂಜಯ್
ಮೂಲ: ನ್ಯೂಸ್‌ಕ್ಲಿಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...