Homeಕರ್ನಾಟಕಏಳನೇ ವೇತನ ಆಯೋಗದ ವರದಿ ಸಲ್ಲಿಕೆ: ಶೇ.27.5ರಷ್ಟು ವೇತನ ಹೆಚ್ಚಳಕ್ಕೆ ಶಿಫಾರಸ್ಸು

ಏಳನೇ ವೇತನ ಆಯೋಗದ ವರದಿ ಸಲ್ಲಿಕೆ: ಶೇ.27.5ರಷ್ಟು ವೇತನ ಹೆಚ್ಚಳಕ್ಕೆ ಶಿಫಾರಸ್ಸು

- Advertisement -
- Advertisement -

ಸುಧಾಕರ ರಾವ್ ನೇತೃತ್ವದ 7ನೇ ವೇತನ ಆಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ತನ್ನ ವರದಿಯನ್ನು ಸಲ್ಲಿಸಿದ್ದು, ಮೂಲ ವೇತನದ ಶೇ.27.5ರಷ್ಟು ಹೆಚ್ಚಳ ಮಾಡಲು ಶಿಫಾರಸು ಮಾಡಿದೆ.

ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ಆಯೋಗದ ಸದಸ್ಯರಾದ ಪಿ.ಬಿ.ರಾಮಮೂರ್ತಿ, ಶ್ರೀಕಾಂತ್ ವನಹಳ್ಳಿ ಸೇರಿದಂತೆ ಇನ್ನಿತರರು ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಡಾ.ಕೆ.ವಿ. ತ್ರಿಲೋಕಚಂದ್ರ, ಹಣಕಾಸು ಇಲಾಖೆ ಕಾರ್ಯದರ್ಶಿ ಡಾ. ಪಿ.ಸಿ. ಜಾಫರ್, ವೇತನ ಆಯೋಗದ ಸದಸ್ಯ ಕಾರ್ಯದರ್ಶಿ ಹೆಫ್ಸಿಬಾರಾಣಿ ಕೊರ್ಲಪಾಟಿ ಉಪಸ್ಥಿತರಿದ್ದರು.

ವರದಿಯನ್ನು ಸ್ವೀಕರಿಸಿದ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ವರದಿಯನ್ನು ಪರಿಶೀಲಿಸಿ ಸರಕಾರ ಸೂಕ್ತ ತೀರ್ಮಾನ ಕೈಗೊಳ್ಳಲಿದೆ. ವೇತನ ಆಯೋಗದ ಅವಧಿಯನ್ನು 3 ತಿಂಗಳು ವಿಸ್ತರಿಸಲಾಗಿತ್ತು. ಈ ಅವಧಿಯು ಮಾ.15ರಂದು ಮುಕ್ತಾಯಗೊಂಡ ಹಿನ್ನೆಲೆ ಇಂದು ವರದಿಯನ್ನು ಸ್ವೀಕರಿಸಲಾಗಿದೆ. ವರದಿಯಲ್ಲಿ ಕನಿಷ್ಠ ಮೂಲ ವೇತನವನ್ನು 17,000ರೂ.ಗಳಿಂದ 27 ಸಾವಿರ ರೂ.ಗಳಿಗೆ ಹೆಚ್ಚಿಸುವಂತೆ ಶಿಫಾರಸು ಮಾಡಲಾಗಿದೆ. ಇದಲ್ಲದೆ ಇನ್ನೂ ಅನೇಕ ಶಿಫಾರಸ್ಸುಗಳಿದ್ದು, ವರದಿಯನ್ನು ಆರ್ಥಿಕ ಇಲಾಖೆಗೆ ನೀಡಲಾಗಿದೆ. ಆರ್ಥಿಕ ಇಲಾಖೆಯು ವರದಿಯನ್ನು ಅಧ್ಯಯನ ಮಾಡಿದ ಬಳಿಕ ನೀಡುವ ಸಲಹೆಗಳ ಆಧಾರದಲ್ಲಿ ಸರಕಾರ ತೀರ್ಮಾನ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.

ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಸರಕಾರದ ಮಾಜಿ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್ ನೇತೃತ್ವದಲ್ಲಿ7ನೇ ವೇತನ ಆಯೋಗವನ್ನು ರಚಿಸಲಾಗಿತ್ತು. ಸುಧಾಕರ್ ರಾವ್ ನೇತೃತ್ವದಲ್ಲಿ 2022ರ ನವೆಂಬರ್ 19ರಂದು ರಾಜ್ಯ ಸರ್ಕಾರ ಆಯೋಗವನ್ನು ರಚಿಸಿ ಆರು ತಿಂಗಳಲ್ಲಿ ವರದಿ ನೀಡುವಂತೆ ಆದೇಶ ನೀಡಿತ್ತು. 2023ರ ಮೇ 15ರಂದು ಮತ್ತೆ ಆರು ತಿಂಗಳ ಅವಧಿಗೆ ಆಯೋಗದ ಅವಧಿಯನ್ನು ವಿಸ್ತರಣೆ ಮಾಡಿತ್ತು. 2023ರ ನವೆಂಬರ್ 6ರಂದು ಆಯೋಗದ ಅವಧಿಯನ್ನು ಮಾರ್ಚ್ 15, 2024ರವರೆಗೆ ವಿಸ್ತರಣೆ ಮಾಡಲಾಗಿತ್ತು.

ಇದನ್ನು ಓದಿ:IT ದಾಳಿ ಬೆನ್ನಲ್ಲಿ 55 ಕೋಟಿ ಮೌಲ್ಯದ ಬಾಂಡ್‌ ಖರೀದಿಸಿದ್ದ ನವಯುಗ ಕಂಪೆನಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮುಸ್ಲಿಮರ ಬಗ್ಗೆ ಅವಹೇಳನಾಕಾರಿಯಾಗಿ ಅನಿಮೇಟೆಡ್ ವೀಡಿಯೊ ಹಂಚಿಕೊಂಡ ಬಿಜೆಪಿ: ತರಾಟೆಗೆ ತೆಗದುಕೊಂಡ ಎಕ್ಸ್‌ ಬಳಕೆದಾರರು

0
ಮುಸ್ಲಿಮರ ಬಗ್ಗೆ ಕೆಟ್ಟದಾಗಿ ಬಿಂಬಿಸುವ ಅನಿಮೇಟೆಡ್ ವೀಡಿಯೊವೊಂದನ್ನು ಬಿಜೆಪಿ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ವ್ಯಾಪಕ ಟೀಕೆಗೆ ಗುರಿಯಾಗಿದೆ. ಎಚ್ಚರ..ಎಚ್ಚರ..ಎಚ್ಚರ.. ಎಂಬ ತಲೆ ಬರಹದಲ್ಲಿ ಬಿಜೆಪಿ ವಿಡಿಯೋವನ್ನು ಹಂಚಿಕೊಂಡಿದ್ದು, ಇದರಲ್ಲಿ ರಾಹುಲ್‌...