Homeಚಳವಳಿಇಂದು 7 ನೇ ಸುತ್ತಿನ ಮಾತುಕತೆ: ಎರಡು ಪ್ರಮುಖ ಅಂಶಗಳ ಬಗ್ಗೆ ಚರ್ಚೆ

ಇಂದು 7 ನೇ ಸುತ್ತಿನ ಮಾತುಕತೆ: ಎರಡು ಪ್ರಮುಖ ಅಂಶಗಳ ಬಗ್ಗೆ ಚರ್ಚೆ

- Advertisement -
- Advertisement -

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ಹೊಸ ಕೃಷಿ ಕಾನೂನಿನ ವಿರುದ್ದ ರೈತರು ನಡೆಸುತ್ತಿರುವ ಪ್ರತಿಭಟನೆ ಇಂದಿಗೆ 40 ನೇ ದಿನಕ್ಕೆ ಕಾಲಿಟ್ಟಿದೆ. ಇದುವರೆಗೂ 6 ಸುತ್ತಿನ ಮಾತುಕತೆ ನಡೆದರೂ ಎಲ್ಲವೂ ವಿಫಲಾಗಿದೆ. ರೈತರ ಪ್ರಧಾನ ಬೇಡಿಕೆಯಾದ ಕೃಷಿ ಕಾನೂನುಗಳ ರದ್ದತಿ ಮತ್ತು ಕನಿಷ್ಠ ಬೆಂಬಲ ಬೆಲೆ ಕಾನೂನಿನ ಬಗ್ಗೆ ಸರ್ಕಾರ ಇನ್ನೂ ತೀರ್ಮಾನಕ್ಕೆ ಬಂದಿಲ್ಲ. ಆದರೆ ರೈತರು ತಮ್ಮ ಹೋರಾಟದ ನಿರ್ಧಾರವನ್ನು ಇನ್ನೂ ಗಟ್ಟಿಗೊಳಿಸಿದ್ದು ಬೇಡಿಕೆಗಳು ಈಡೇರುವವರೆಗೆ ಪ್ರತಿಭಟನೆಗಳು ಮುಂದುವರೆಯುತ್ತದೆ ಎಂದು ಘೋಷಿಸಿದ್ದಾರೆ. ಈ ನಡುವೆ ಸೋಮವಾರ(ಇಂದು) ಏಳನೇ ಸುತ್ತಿನ ಮಾತುಕತೆಗೆ ರೈತರನ್ನು ಸರ್ಕಾರ ಆಹ್ವಾನಿಸಿದೆ.

ದೆಹಲಿಯಿಂದ ಘಾಜಿಯಾಬಾದ್‌ ಹಾಗೂ ನೋಯ್ಡಾ ಮೂಲಕ ಘಾಜಿಯಾಪುರ ಸಂಪರ್ಕಿಸುವ ರಸ್ತೆಗಳನ್ನು ಬಂದ್‌ ಮಾಡಿರುವುದಾಗಿ ದೆಹಲಿ ಸಂಚಾರಿ ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಅವರು ಸರಣಿ ಟ್ವೀಟ್‌ಗಳನ್ನು ಮಾಡಿದ್ದು, ಈಗಾಗಲೇ ದೆಹಲಿಯ ಸಿಂಘು, ಟಿಕ್ರಿ, ಧಂನ್ಸಾ ಗಡಿಭಾಗಗಳನ್ನು ಬಂದ್ ಮಾಡಲಾಗಿದೆ. ಪ್ರಯಾಣಿಕರು ದೆಹಲಿ ತಲುಪಲು ಆನಂದ್ ವಿಹಾರ್, ಡಿಎನ್‌ಡಿ, ಭೋಪ್ರಾ ಮತ್ತು ಲೋನಿ ಗಡಿಭಾಗದ ಮಾರ್ಗಗಳನ್ನು ಬಳಸುವಂತೆ ಸೂಚಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ-6 ನೇ ಸುತ್ತಿನ ಮಾತುಕತೆಯು ವಿಫಲ; ಹೋರಾಟ ಮುಂದುವರೆಯಲಿದೆ

ಆರನೇ ಸುತ್ತಿನ ಮಾತುಕತೆಯಲ್ಲಿ ಒಕ್ಕೂಟ ಸರ್ಕಾರವು ವಿದ್ಯುತ್ ತಿದ್ದುಪಡಿ ಕಾಯ್ದೆ ಮತ್ತು ವಾಯುಮಾಲಿನ್ಯ ಕಾಯ್ದೆಯನ್ನು ಪರಿಶೀಲನೆ ನಡೆಸುತ್ತೇವೆ ಎಂದು ಹೇಳಿತ್ತು. ಇಂದು ನಡೆಯುವ ಮಾತುಕತೆಯಲ್ಲಿ ಮುಖ್ಯವಾಗಿ ಮೂರು ಕೃಷಿ ಕಾನೂನುಗಳನ್ನು ರದ್ದುಪಡಿಸುವುದು ಮತ್ತು ಕನಿಷ್ಠ ಬೆಂಬಲ ಬೆಲೆ ಖಾತರಿಗೆ ಕಾನೂನುಗಳನ್ನು ಜಾರಿಗೆ ತರುವ ಬಗ್ಗೆ ಚರ್ಚೆ ನಡೆಯುತ್ತದೆ. ದೆಹಲಿಯ ಕೊರೆಯುವ ಚಳಿ ಹಾಗೂ ಪ್ರತಿಭಟನೆ ನಡೆಸುತ್ತಿರುವ ರೈತರು, ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಗಣರಾಜ್ಯೋತ್ಸವದಂದು ಟ್ರ್ಯಾಕ್ಟರ್ ರ್‍ಯಾಲಿ ನಡೆಸುತ್ತೇವೆ ಎಂದು ಎಚ್ಚರಿಸಿದ್ದಾರೆ.

ದೆಹಲಿ ಚಲೋ
PC: RAVAN KHOSA/Twitter

ಒಕ್ಕೂಟ ಸರ್ಕಾರವು ಆರನೇ ಸುತ್ತಿನ ಸಭೆಯಲ್ಲಿ, ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಿಲ್ಲ ಹಾಗೂ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಜಾರಿಗೊಳಿಸುವ ಕಾನೂನು ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿತ್ತು. ಆದರೆ ಈ ಬಗ್ಗೆ ಪರಿಶೀಲಿಸಲು ಸಮಿತಿಯನ್ನು ರಚಿಸಬಹುದು ಎಂದು ಅದು ಹೇಳಿದೆ.

ಇಂದಿನ ಸಭೆಯಲ್ಲಿ ತಮ್ಮ ಬೇಡಿಕೆಗಳು ಈಡೇರದಿದ್ದರೆ ಜನವರಿ 6 ರಂದು ಜಿಟಿ-ಕರ್ನಲ್ ರಸ್ತೆಯಲ್ಲಿ ಟ್ರ್ಯಾಕ್ಟರ್ ರ್‍ಯಾಲಿ ನಡೆಸುವುದಾಗಿ ರೈತರು ಹೇಳಿದ್ದಾರೆ. ಈ ಬಗ್ಗೆ ಮಾತನಾಡಿದ್ದ ಸ್ವರಾಜ್ ಇಂಡಿಯಾ ಮುಖ್ಯಸ್ಥ ಯೋಗೇಂದ್ರ ಯಾದವ್‌ “ನಮ್ಮ ಬೇಡಿಕೆಗಳಿಗೆ ಸರ್ಕಾರ ಒಪ್ಪದಿದ್ದರೆ, ನಾವು ಮುಂದಿನ ವಾರ ಶಹಜಹಾನ್‌ಪುರ ಗಡಿಯಿಂದ ದೆಹಲಿ ಕಡೆಗೆ ಮೆರವಣಿಗೆ ಪ್ರಾರಂಭಿಸುತ್ತೇವೆ”  ಎಂದು ಹೇಳಿದ್ದಾರೆ.

ಇದನ್ನೂ ಓದಿ: ರೈತರ ವಿರುದ್ಧವೂ ಝಳಪಿಸಿದ ಹತಾರ: ’ದೇಶದ್ರೋಹ’ವೆಂಬ ಹಳೆಯ ಹುನ್ನಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...