Homeಮುಖಪುಟಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

- Advertisement -
- Advertisement -

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ.

ಘಟನೆಯಲ್ಲಿ ಐದು ಬೋಗಿಗಳು ಮತ್ತು ರೈಲಿನ ಇಂಜಿನ್ ಹಳಿತಪ್ಪಿದ್ದು, ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ಈಶಾನ್ಯ ಗಡಿ ರೈಲ್ವೆ (ಎನ್‌ಎಫ್‌ಆರ್) ವಕ್ತಾರರು ತಿಳಿಸಿದ್ದಾರೆ.

ನವದೆಹಲಿಗೆ ತೆರಳುತ್ತಿದ್ದ ರೈಲು ಬೆಳಗಿನ ಜಾವ 2.17ರ ಸುಮಾರಿಗೆ ಆನೆಗಳ ಹಿಂಡಿಗೆ ಡಿಕ್ಕಿ ಹೊಡೆದಿದೆ ಎಂದು ಹೇಳಿದ್ದಾರೆ.

ಹೊಜೈ ಜಿಲ್ಲೆಯ ಚಾಂಗ್ಜುರೈ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ನಾಗಾಂವ್ ವಿಭಾಗೀಯ ಅರಣ್ಯ ಅಧಿಕಾರಿ ಸುಹಾಶ್ ಕದಮ್ ಹೇಳಿರುವುದಾಗಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಸುಹಾಶ್ ಕದಮ್ ಮತ್ತು ಇತರ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ತಲುಪಿದ್ದಾರೆ ಎಂದು ಪಿಟಿಐ ಉಲ್ಲೇಖಿಸಿದೆ.

ಘಟನೆ ಹಿನ್ನೆಲೆ, ಜಮುನಾಮುಖ್-ಕಂಪುರ ವಿಭಾಗದ ಮೂಲಕ ಹಾದುಹೋಗಬೇಕಿದ್ದ ರೈಲುಗಳನ್ನು ಯುಪಿ ಮಾರ್ಗದ ಮೂಲಕ ತಿರುಗಿಸಲಾಗಿದ್ದು, ಪುನಃಸ್ಥಾಪನೆ ಕಾರ್ಯ ನಡೆಯುತ್ತಿದೆ ಸುಹಾಶ್ ಕದಮ್ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಣಿ ತುಮಕೂರು ಅಸ್ಪೃಶ್ಯತೆ ಆಚರಣೆ ಪ್ರಕರಣ: ತಹಶೀಲ್ದಾರ್ ಸಮ್ಮುಖದಲ್ಲಿ ದೇಗುಲ ಪ್ರವೇಶಿಸಿದ ನವ ದಂಪತಿ

ಕಳೆದ ವಾರ ಭಾರಿ ಚರ್ಚೆಗೆ ಗ್ರಾಸವಾಗಿದ್ದ ದಲಿತ ನವ ದಂಪತಿ ದೇಗುಲ  ಪ್ರವೇಶ ಹಾಗೂ ದಲಿತ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತುರುವೇಕೆರೆ ತಾಲೂಕು ಗೋಣಿ ತುಮಕೂರು ಗ್ರಾಮದಲ್ಲಿರುವ ಸವರ್ಣೀಯ ಮತ್ತು ದಲಿತ ಜನಾಂಗದ ನಡುವೆ...

ದ್ವೇಷ ಭಾಷಣ ಆರೋಪ: ವಿಜಯಪುರ ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ಎಫ್ಐಆರ್ 

ಯಾದಗಿರಿ ಜಿಲ್ಲೆಯಲ್ಲಿ ನಡೆದ ಶಿವಾಜಿ ಜಯಂತಿ ಆಚರಣೆಯ ಸಂದರ್ಭದಲ್ಲಿ ದ್ವೇಷಪೂರಿತ ಭಾಷಣ ಮಾಡಿದ ಆರೋಪದ ಮೇಲೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಜಿಲ್ಲೆಯ ಗುರ್ಮಿತ್ಕಲ್ ಪಟ್ಟಣದಲ್ಲಿ ಈ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ಬಂಧನ, ವಿವಿ ವಿದ್ಯಾರ್ಥಿಗಳಿಂದ ಕೌಂಟರ್ ಪ್ರೊಟೆಸ್ಟ್

ಬೆಂಗಳೂರಿನ ಸರ್ಜಾಪುರದಲ್ಲಿರುವ ಅಜೀಂ ಪ್ರೇಮ್ ಜಿ ವಿಶ್ವವಿದ್ಯಾಲಯದಲ್ಲಿ ಎಬಿವಿಪಿ ಸದಸ್ಯರು ಮಂಗಳವಾರ (ಫೆ.24) ಸಂಜೆ ದಾಂಧಲೆ ನಡೆಸಿರುವ ಕುರಿತು ವರದಿಯಾಗಿದೆ. ಆಲ್ ಇಂಡಿಯಾ ಸ್ಟೂಡೆಂಟ್ ಅಸೋಸಿಯೇಷನ್ (ಎಐಎಸ್‌ಎ) ಜೊತೆ ಸಂಯೋಜಿತವಾಗಿರುವ ವಿವಿಯ ವಿದ್ಯಾರ್ಥಿ ಸಂಘಟನೆ...

ಹೈಕೋರ್ಟ್ ನ್ಯಾಯಾಧೀಶರಿಗೆ ಸಿನಿಮಾ ತೋರಿಸಲು ಹಿಂದೇಟು ಹಾಕಿದ ‘ಕೇರಳ ಸ್ಟೋರಿ-2’ ತಂಡ

'ದಿ ಕೇರಳ ಸ್ಟೋರಿ-2 ಗೋಸ್ ಬಿಯಾಂಡ್' ತಂಡ ಕೇರಳ ಹೈಕೋರ್ಟ್ ನ್ಯಾಯಾಧೀಶರಿಗೆ ಸಿನಿಮಾ ತೋರಿಸಲು ಹಿಂದೇಟು ಹಾಕಿದೆ. ಮಂಗಳವಾರ (ಫೆ.24) ಬೆಳಗ್ಗಿನ ಅವಧಿಯ ವಿಚಾರಣೆಯ ವೇಳೆ ನ್ಯಾಯಮೂರ್ತಿ ಬಿಚು ಕುರಿಯನ್ ಥಾಮಸ್ ಅವರು, "ಸಿನಿಮಾದ...

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...