Homeಮುಖಪುಟ'ಟೈಮ್ಸ್‌' 100 ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಸ್ಥಾನ ಪಡೆದ ಸಾಕ್ಷಿ ಮಲಿಕ್ ಸೇರಿ 8 ಭಾರತೀಯರು

‘ಟೈಮ್ಸ್‌’ 100 ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಸ್ಥಾನ ಪಡೆದ ಸಾಕ್ಷಿ ಮಲಿಕ್ ಸೇರಿ 8 ಭಾರತೀಯರು

- Advertisement -
- Advertisement -

ಒಲಿಂಪಿಕ್ ಪದಕ ವಿಜೇತ ಭಾರತೀಯ ಕುಸ್ತಿಪಟು ಸಾಕ್ಷಿ ಮಲಿಕ್ ಸೇರಿ 8 ಮಂದಿ ಭಾರತೀಯರು ಟೈಮ್ಸ್‌ ನಿಯತಕಾಲಿಕದ 2024ರ 100 ಅತ್ಯಂತ ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಸಾಕ್ಷಿ ಮಲಿಕ್‌ ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳದ ವಿರುದ್ಧ ನಿರಂತರ ಹೋರಾಟ ಮಾಡಿ ಭಾರತದ ಮಾಜಿ ರೆಸ್ಲಿಂಗ್ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಕುಸ್ತಿ ಫೆಡರೇಶನ್‌ಗೆ ರಾಜೀನಾಮೆ ನೀಡುವಂತೆ ಮಾಡಿದ್ದಾರೆ. ಎರಡು ಬಾರಿ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕ ವಿಜೇತ ವಿನೇಶ್ ಫೋಗಟ್ ಮತ್ತು ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ವಿಜೇತ ಭಜರಂಗ್ ಪುನಿಯಾ ಅವರೊಂದಿಗೆ ಸಾಕ್ಷಿ ಮಲಿಕ್‌ ಅವರು ನವದೆಹಲಿಯ ಜಂತರ್ ಮಂತರ್‌ನಲ್ಲಿ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆಯನ್ನು ಮುನ್ನಡೆಸಿದ್ದರು. ಮಹಿಳಾ ಕುಸ್ತಿ ಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿ ಅವರನ್ನು ಬಂಧಿಸುವಂತೆ ಪಟ್ಟು ಹಿಡಿದಿದ್ದರು. ಇವರ ಪ್ರತಿಭಟನೆ ಭಾರತದಲ್ಲಿ ಮಾತ್ರವಲ್ಲದೆ ವಿದೇಶಗಳಲ್ಲಿ ಕೂಡ ಭಾರೀ ಬೆಂಬಲವನ್ನು ಪಡೆದಿತ್ತು ಮತ್ತು ಗಮನವನ್ನು ಸೆಳೆದಿತ್ತು.

ಈ ಹೋರಾಟವು ಭಾರತದ ಮಹಿಳಾ ಕುಸ್ತಿಪಟುಗಳಿಗೆ ಮಾತ್ರವಲ್ಲ, ಭಾರತದ ಹೆಣ್ಣುಮಕ್ಕಳಿಗಾಗಿ ಎಂದು ಸಾಕ್ಷಿ ಮಲಿಕ್‌ ಹೇಳಿದ್ದರು. ಸಿಂಗ್ ಕುಸ್ತಿ ಪೆಢರೇಶನ್‌ ಹುದ್ದೆಯನ್ನು ತ್ಯಜಿಸಿದ ಕೆಲವೇ ದಿನಗಳಲ್ಲಿ ಅವರ ನಿಕಟವರ್ತಿ ಸಂಜಯ್ ಸಿಂಗ್ ಅವರನ್ನು ಕುಸ್ತಿಫೆಡರೇಶನ್‌ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿತ್ತು. ಸಂಜಯ್ ಸಿಂಗ್ ಡಬ್ಲ್ಯುಎಫ್‌ಐನ ಜವಾಬ್ದಾರಿ ವಹಿಸಿಕೊಂಡ ದಿನವೇ ಸಾಕ್ಷಿ ಮಲಿಕ್‌ ಕ್ರೀಡೆಯನ್ನು ತೊರೆಯುವುದಾಗಿ ಘೋಷಿಸಿ ತನ್ನ ಪ್ರತಿಭಟನೆಯನ್ನು ವ್ಯಕ್ತಪಡಿಸಿದ್ದರು.

ಟೈಮ್ಸ್‌ ನಿಯತಕಾಲಿಕ 2024ರ 100 ಅತ್ಯಂತ ಪ್ರಭಾವಿ ವ್ಯಕ್ತಿಗಳ ಪಟ್ಟಿಯನ್ನು ಪ್ರಕಟಿಸಿದೆ ಅದರಲ್ಲಿ ನಟಿ ಆಲಿಯಾ ಭಟ್, ಇಂಡೋ-ಬ್ರಿಟಿಷ್ ನಟ ದೇವ್ ಪಟೇಲ್ ಮತ್ತು ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ ಸೇರಿದ್ದಾರೆ.

ಆಲಿಯಾ ಭಟ್
ಬಾಲಿವುಡ್ ನಟಿ ಆಲಿಯಾ ಭಟ್ ಅವರ “ಅಸಾಧಾರಣ ಪ್ರತಿಭೆ” ಮತ್ತು ಲೋಕೋಪಕಾರಿ ಕೆಲಸಗಳಿಗಾಗಿ ಗುರುತಿಸಲ್ಪಟ್ಟಿದ್ದಾರೆ. ಭಾರತೀಯ ಚಲನಚಿತ್ರೋದ್ಯಮದಲ್ಲಿ ಅವರು ಕಳೆದ ಒಂದು ದಶಕದಿಂದ ಗುರುತಿಸಿಕೊಂಡಿದ್ದಾರೆ.

ಸತ್ಯ ನಾಡೆಲ್ಲಾ

ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ ಮೂರನೇ ಬಾರಿಗೆ ಪಟ್ಟಿಯಲ್ಲಿ ತಮ್ಮ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಕೃತಕ ಬುದ್ಧಿಮತ್ತೆಯ (AI) ಭವಿಷ್ಯವನ್ನು ರೂಪಿಸುವಲ್ಲಿ ಅವರ ಪ್ರಭಾವಶಾಲಿ ಪಾತ್ರಕ್ಕಾಗಿ ನಾಡೆಲ್ಲಾ ಅವರನ್ನು ಶ್ಲಾಘಿಸಲಾಗಿದೆ.

ದೇವ್ ಪಟೇಲ್
ಭಾರತೀಯ ಮೂಲದ ಬ್ರಿಟೀಷ್ ನಟ, ದೇವ್ ಪಟೇಲ್, ನಟ ಮತ್ತು ನಿರ್ದೇಶಕರಾಗಿ ಸಿನಿಮಾ ಕ್ಷೇತ್ರಕ್ಕೆ ಅಭೂತಪೂರ್ವ ಕೊಡುಗೆ ನೀಡಿದ್ದಾರೆ.

ಪ್ರಿಯಂವದಾ ನಟರಾಜನ್
ಶೈಕ್ಷಣಿಕ ಕ್ಷೇತ್ರದಲ್ಲಿ ಪ್ರಿಯಂವದಾ ನಟರಾಜನ್ ಅವರನ್ನು ಗುರುತಿಸಲಾಗಿದೆ. ಯೇಲ್ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರಾದ ಪ್ರಿಯಂವದಾ ನಟರಾಜನ್ ಅವರು ಖಗೋಳಶಾಸ್ತ್ರದಲ್ಲಿ, ವಿಶೇಷವಾಗಿ ಡಾರ್ಕ್ ಮ್ಯಾಟರ್ ಮತ್ತು ಡಾರ್ಕ್ ಎನರ್ಜಿಯ ಅಧ್ಯಯನದಲ್ಲಿ ತಮ್ಮ ಅದ್ಭುತ ಸಂಶೋಧನೆಗಾಗಿ ಗುರುತಿಸಲ್ಪಟ್ಟಿದ್ದಾರೆ.

ಅಸ್ಮಾ ಖಾನ್
ಅಸ್ಮಾ ಖಾನ್, ಭಾರತೀಯ ಮೂಲದ ಬ್ರಿಟಿಷ್ ರೆಸ್ಟೊರೆಟರ್, ಅವರು ಪಾಕಶಾಲೆಯ ಕೌಶಲ್ಯ ಮತ್ತು ಪಾಕಪದ್ಧತಿಯ ನವೀನ ವಿಧಾನಕ್ಕಾಗಿ ಗುರುತಿಸಲ್ಪಟ್ಟಿದ್ದಾರೆ.

ಜಿಗರ್ ಶಾ

ಜಿಗರ್ ಷಾ ಅವರು US ಇಂಧನ ಇಲಾಖೆಯಲ್ಲಿ ಉನ್ನತ ಅಧಿಕಾರಿಯಾಗಿದ್ದಾರೆ. ಜಿಗರ್ ಶಾ ಜಾಗತಿಕ ಮಟ್ಟದಲ್ಲಿ ಆರ್ಥಿಕ ಅಭಿವೃದ್ಧಿ ಉಪಕ್ರಮಗಳನ್ನು ಮುನ್ನಡೆಸುವಲ್ಲಿ ಪ್ರಮುಖ ಪಾತ್ರಕ್ಕಾಗಿ ಗುರುತಿಸಲ್ಪಟ್ಟಿದ್ದಾರೆ.

ಇದನ್ನು ಓದಿ: ಬಿಜೆಪಿ ಪ್ರಣಾಳಿಕೆಯಲ್ಲಿ ‘ಅಲ್ಪಸಂಖ್ಯಾತರು’ ಎಂಬ ಪದ ಕೂಡ ಬಳಸಿಲ್ಲ: ಓವೈಸಿ ವಾಗ್ಧಾಳಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...