Homeಮುಖಪುಟಯುಪಿ: ಕಾರಿನ ಮೇಲೆ ಮರಳು ತುಂಬಿದ್ದ ಲಾರಿ ಬಿದ್ದು 8 ಮಂದಿ ದುರ್ಮರಣ

ಯುಪಿ: ಕಾರಿನ ಮೇಲೆ ಮರಳು ತುಂಬಿದ್ದ ಲಾರಿ ಬಿದ್ದು 8 ಮಂದಿ ದುರ್ಮರಣ

ಲಾರಿಯ ಟೈರ್ ಸ್ಫೋಟಗೊಂಡಿದ್ದರಿಂದ ಅಪಘಾತ ಸಂಭವಿಸಿದೆ. ಮತ್ತಿಬ್ಬರು ಲಾರಿಯಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

- Advertisement -
- Advertisement -

ಉತ್ತರಪ್ರದೇಶದ ಕೌಶಂಬಿ ಜಿಲ್ಲೆಯಲ್ಲಿ ಇಂದು ಮುಂಜಾನೆ ಮರಳು ತುಂಬಿದ ಲಾರಿಯೊಂದು, ರಸ್ತೆ ಬದಿ ನಿಲ್ಲಿಸಿದ್ದ ಕಾರಿನ ಮೇಲೆ ಪಲ್ಟಿಯಾಗಿ, 8 ಮಂದಿ ಸಾವನ್ನಪ್ಪಿರೋ ದಾರುಣ ಘಟನೆ ನಡೆದಿದೆ.

ಕಾರಿನಲ್ಲಿದ್ದ ಎಂಟು ಪ್ರಯಾಣಿಕರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕನಿಷ್ಠ ಇಬ್ಬರು ಪ್ರಯಾಣಿಕರು ಲಾರಿಯ ಕೆಳಗೆ ಸಿಲುಕಿರಬಹುದಾದ ಶಂಕೆ ವ್ಯಕ್ತವಾಗಿದೆ ಎಂದು ಎಎನ್‌ಐ ವರದಿ ಮಾಡಿದೆ.

 

ಇದನ್ನೂ ಓದಿ: ತೆಲುಗು, ತಮಿಳು, ಮರಾಠಿ, ಮಲಯಾಳಂ: ಇದು ಎಲ್ಲರ ಕರ್ನಾಟಕ – ಪ್ರೊ.ರಹಮತ್ ತರೀಕೆರೆ

“ಮುಂಜಾನೆ 3:30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಸ್ಕಾರ್ಪಿಯೋ ಕಾರಿನೊಳಗೆ 8 ಜನರು ಇದ್ದರು, ಅದರ ಮೇಲೆ ಲಾರಿ ಪಲ್ಟಿಯಾಗಿದೆ. ಚಾಲಕ ಸೇರಿದಂತೆ ಏಳು ಜನರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮರಳು ತುಂಬಿದ್ದ ಲಾರಿಯ ಟೈರ್ ಸ್ಫೋಟಗೊಂಡಿದ್ದರಿಂದ ಅಪಘಾತ ಸಂಭವಿಸಿದೆ. ಘಟನೆ ಕುರಿತು ಮತ್ತಷ್ಟು ತನಿಖೆ ನಡೆಯುತ್ತಿದೆ’ ಎಂದು ಕೌಶಂಬಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಹೇಳಿಕೆಯನ್ನು ಎಎನ್ಐ ಉಲ್ಲೇಖಿಸಿದೆ.

ಮೃತರೆಲ್ಲರೂ ಒಂದೇ ಹಳ್ಳಿಯವರಾಗಿದ್ದು, ವಿವಾಹ ಸಮಾರಂಭದಿಂದ ಹಳ್ಳಿಗೆ ಹಿಂದಿರುಗುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪೊಲೀಸರು ಘಟನಾ ಸ್ಥಳಕ್ಕೆ ತಲುಪಿ, ಲಾರಿ ಅಡಿಯಲ್ಲಿ ಸಿಲುಕಿರುವ ಪ್ರಯಾಣಿಕರನ್ನು ರಕ್ಷಿಸುವ ಕೆಲಸ ಮಾಡುತ್ತಿದ್ದಾರೆ.

ಘಟನೆ ಕುರಿತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ವ್ಯಕ್ತಪಡಿಸಿದ್ದು, ಗಾಯಾಳುಗಳಿಗೆ ಸರಿಯಾದ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ ಎಂದು ತಿಳಿಸಲಾಗಿದೆ.


ಇದನ್ನೂ ಓದಿ: ನಮ್ಮ ಪ್ರೀತಿಯ ಮುಂದೆ ನಿಮ್ಮ ದ್ವೇಷದ ಸೋಲು ನಿಶ್ಚಯ- ಲವ್ ಜಿಹಾದ್ ವಿರೋಧಿಸಿ, ಪ್ರೀತಿಗಾಗಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಅಧಿಕಾರಕ್ಕೆ ಬಂದರೆ ‘ಪಿತ್ರಾರ್ಜಿತ ಆಸ್ತಿ ತೆರಿಗೆ’ ಜಾರಿಗೊಳಿಸುವುದಾಗಿ ಕಾಂಗ್ರೆಸ್ ಹೇಳಿಲ್ಲ

0
ಕಳೆದ ಎರಡು ದಿನಗಳಿಂದ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' (Inheritance Tax) ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' ಜಾರಿಗೆ ತರಲಿದೆ. ಈ...