HomeUncategorizedತಮಿಳುನಾಡು: ಬಸ್‌ ಪ್ರಪಾತಕ್ಕೆ ಬಿದ್ದು 8 ಮಂದಿ ದುರ್ಮರಣ, 42 ಮಂದಿಗೆ ಗಾಯ

ತಮಿಳುನಾಡು: ಬಸ್‌ ಪ್ರಪಾತಕ್ಕೆ ಬಿದ್ದು 8 ಮಂದಿ ದುರ್ಮರಣ, 42 ಮಂದಿಗೆ ಗಾಯ

- Advertisement -
- Advertisement -

ಟೂರಿಸ್ಟ್ ಬಸ್‌ ಪ್ರಪಾತಕ್ಕೆ ಬಿದ್ದ ಪರಿಣಾಮ 8 ಮಂದಿ ಪ್ರಯಾಣಿಕರು ಮೃತಪಟ್ಟು, 42 ಮಂದಿ ಗಾಯಗೊಂಡ ಘಟನೆ ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರ್ ಬಳಿ ನಡೆದಿದೆ.

ಇಬ್ಬರು ಚಾಲಕರು ಸೇರಿದಂತೆ 59 ಪ್ರಯಾಣಿಕರಿದ್ದ ಬಸ್ ಅಪಘಾತ ಸಂಭವಿಸಿದೆ. ಮೃತಪಟ್ಟವರಲ್ಲಿ ನಾಲ್ವರು ಮಹಿಳೆಯರು ಮತ್ತು ಒಬ್ಬ ಬಾಲಕ ಸೇರಿದ್ದಾನೆ.

ತೆಂಕಾಸಿ ಜಿಲ್ಲೆಯ ಕಡಯಂ ಮೂಲದವರಾದ ಇವರು ಊಟಿಗೆ ಪ್ರವಾಸಕ್ಕೆ ತೆರಳಿದ್ದು ಮನೆಗೆ ವಾಪಸ್ಸಾಗುತ್ತಿದ್ದಾಗ ಚಾಲಕನ ನಿಯಂತ್ರಣ ಕಳೆದುಕೊಂಡು ಬಸ್ ಪ್ರಪಾತಕ್ಕೆ ಉರುಳಿದೆ. ಮಾಹಿತಿ ತಿಳಿದು ಸ್ಥಳೀಯರು, ಪೊಲೀಸ್ ಸಿಬ್ಬಂದಿ, ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಕೊಯಮತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ಮೃತರ ಕುಟುಂಬಕ್ಕೆ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಗಾಯಗೊಂಡವರಿಗೆ ಒಂದು ಲಕ್ಷ ಹಾಗೂ ಸಣ್ಣ ಪುಟ್ಟ ಗಾಯಗಳಾಗಿರುವವರಿಗೆ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಇದನ್ನು ಓದಿ: ಸಾಹಿತಿಗಳಿಗೆ ಪತ್ರದ ಮೂಲಕ ಜೀವ ಬೆದರಿಕೆ ಪ್ರಕರಣ: ಸಂಘಪರಿವಾರದ ಕಾರ್ಯಕರ್ತನ ಬಂಧನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...