Homeಮುಖಪುಟಪ.ಬಂಗಾಳದಲ್ಲಿ 8 ಹಂತದ ಮತದಾನ: ಚುನಾವಣಾ ಆಯೋಗದ ನಿರ್ಧಾರ ಪ್ರಶ್ನಿಸಿದ್ದ ಅರ್ಜಿ ವಜಾ

ಪ.ಬಂಗಾಳದಲ್ಲಿ 8 ಹಂತದ ಮತದಾನ: ಚುನಾವಣಾ ಆಯೋಗದ ನಿರ್ಧಾರ ಪ್ರಶ್ನಿಸಿದ್ದ ಅರ್ಜಿ ವಜಾ

ವಕೀಲರಾದ ಎಂ.ಎಲ್. ಶರ್ಮಾ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮಾ.1 ರಂದು ಸಲ್ಲಿಸಿರುವ ಮನವಿಯಲ್ಲಿ, ರಾಜ್ಯದಲ್ಲಿ ಎಂಟು ಹಂತದ ಚುನಾವಣೆಗಳನ್ನು ನಡೆಸದಂತೆ ತಡೆಯಬೇಕು ಎಂದು ಕೋರಿದ್ದರು

- Advertisement -
- Advertisement -

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯನ್ನು 8 ಹಂತಗಳಲ್ಲಿ ನಡೆಸಬೇಕು ಎಂಬ ಚುನಾವಣಾ ಆಯೋಗದ ಆದೇಶವನ್ನು ಪ್ರಶ್ನಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ವಕೀಲರಾದ ಎಂ.ಎಲ್. ಶರ್ಮಾ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮಾ.1 ರಂದು ಸಲ್ಲಿಸಿರುವ ಮನವಿಯಲ್ಲಿ, ರಾಜ್ಯದಲ್ಲಿ ಸುದೀರ್ಘ ಎಂಟು ಹಂತದ ಚುನಾವಣೆಗಳನ್ನು ನಡೆಸದಂತೆ ತಡೆಯಲು ಸುಪ್ರೀಂ ಕೋರ್ಟ್ ಮತದಾನ ಸಮಿತಿಗೆ ‌ನಿರ್ದೇಶನ ನೀಡಬೇಕು ಎಂದು ಕೋರಿದ್ದರು.

ಚುನಾವಣಾ ಆಯೋಗವು ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ತಮಿಳುನಾಡು ಮತ್ತು ಪುದುಚೇರಿಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಫೆಬ್ರವರಿ 26 ರಂದು ಪ್ರಕಟಿಸಿತ್ತು.

ಇದನ್ನೂ ಓದಿ: ತಮಿಳುನಾಡಿನ 154 ಸ್ಥಾನಗಳಲ್ಲಿ ಎಂಎನ್‌ಎಂ ಸ್ಪರ್ಧೆ- ಕಮಲ್ ಹಾಸನ್

ಪಶ್ಚಿಮ ಬಂಗಾಳದಲ್ಲಿ ಮಾರ್ಚ್ 27 ರಿಂದ ಏಪ್ರಿಲ್ 29 ರವರೆಗೆ ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ತಮಿಳುನಾಡು, ಕೇರಳ ಮತ್ತು ಪುದುಚೇರಿಯಲ್ಲಿ ಏಪ್ರಿಲ್ 6 ರಂದು ಒಂದೇ ಹಂತದಲ್ಲಿ ಮತ್ತು ಅಸ್ಸಾಂನಲ್ಲಿ ಮೂರು ಹಂತಗಳಲ್ಲಿ ನಡೆಯಲಿದೆ.

ಕೆಲವೇ ದಿನಗಳಲ್ಲಿ ವಿಚಾರಣೆಗೆ ಬರಬಹುದಾದ ಈ ಮನವಿಯಲ್ಲಿ, “ಪಶ್ಚಿಮ ಬಂಗಾಳದಲ್ಲಿ ಚುನಾವಣೆಯ ಸಂದರ್ಭದಲ್ಲಿ ಧಾರ್ಮಿಕ ಘೋಷಣೆಗಳನ್ನು ಕೂಗಿರುವ ಆರೋಪದ ಮೇಲೆ ಎಫ್‌ಐಆರ್ ದಾಖಲಿಸುವಂತೆ ಸಿಬಿಐಗೆ ನಿರ್ದೇಶನ ನೀಡಬೇಕು” ಎಂದು ಕೋರಲಾಗಿತ್ತು.

“ಜೈ ಶ್ರೀ ರಾಮ್ ಮತ್ತು ಇತರ ಧಾರ್ಮಿಕ ಘೋಷಣೆಗಳು ವಿಘಟನೆಯನ್ನು ಸೃಷ್ಟಿಸುತ್ತಿವೆ” ಎಂದೂ, ಇದು ಭಾರತೀಯ ದಂಡಸಂಹಿತೆ ಮತ್ತು ಜನರ ಪ್ರಾತಿನಿಧ್ಯ ಕಾಯ್ದೆ 1951 ರ ಅಡಿಯಲ್ಲಿ ಅಪರಾಧವಾಗಿದೆ ಎಂದೂ ಮನವಿಯಲ್ಲಿ ತಿಳಿಸಲಾಗಿತ್ತು.


ಇದನ್ನೂ ಓದಿ: ವಿಮಾನದಲ್ಲಿ ಮೋದಿ ಭಕ್ತನೊಬ್ಬನ ಗಲಾಟೆ: ಬಲ್ಗೇರಿಯಾದಲ್ಲಿ ತುರ್ತು ಲ್ಯಾಂಡಿಂಗ್ – ಬಂಧನ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚುನಾವಣೆಯಲ್ಲಿ ಬೆಂಬಲಿಸಿಲ್ಲ ಎಂದು ದಲಿತರ ಮೇಲೆ ಹಲ್ಲೆ ಪ್ರಕರಣ: YSRCP ಮುಖಂಡನಿಗೆ ಜೈಲು

0
1996ರಲ್ಲಿ ನಡೆದಿದ್ದ ದಲಿತರ ಮೇಲಿನ ದೌರ್ಜನ್ಯ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ (ವೈಎಸ್‌ಆರ್‌ಸಿಪಿ) ಮುಖಂಡ ತೋಟ ತ್ರಿಮೂರ್ತಿಲು ಸೇರಿದಂತೆ ಒಂಬತ್ತು ಮಂದಿಯನ್ನು ವಿಶಾಖಪಟ್ಟಣ ನ್ಯಾಯಾಲಯವು ದೋಷಿ ಎಂದು ಘೋಷಿಸಿ...