Homeಮುಖಪುಟಆಂಧ್ರ ಪ್ರದೇಶ ವಿಧಾನಸಭೆಯಿಂದ 8 ಶಾಸಕರು ಅನರ್ಹ

ಆಂಧ್ರ ಪ್ರದೇಶ ವಿಧಾನಸಭೆಯಿಂದ 8 ಶಾಸಕರು ಅನರ್ಹ

- Advertisement -
- Advertisement -

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿರುವ ಆಂಧ್ರ ಪ್ರದೇಶದಲ್ಲಿ ರಾಜಕೀಯ ಮೇಲಾಟ ಗರಿಗೆದರಿದೆ. ಸ್ಪೀಕರ್ ತಮ್ಮಿನೇನಿ ಸೀತಾರಾಂ ಅವರು ಮಂಗಳವಾರ ಆಡಳಿತಾರೂಢ ವೈಎಸ್‌ಆರ್ ಕಾಂಗ್ರೆಸ್ ಮತ್ತು ಪ್ರತಿಪಕ್ಷ ತೆಲುಗು ದೇಶಂ ಪಾರ್ಟಿಯ (ಟಿಡಿಪಿ) ತಲಾ ನಾಲ್ವರು ಸೇರಿ ಒಟ್ಟು 8 ಮಂದಿ ಶಾಸಕರನ್ನು ವಿಧಾನಸಭೆಯಿಂದ ಅನರ್ಹಗೊಳಿಸಿದ್ದಾರೆ.

ಪಕ್ಷದ ಶಿಸ್ತು ಉಲ್ಲಂಘಿಸಿದ್ದಾರೆ ಮತ್ತು ಪಕ್ಷದ ತತ್ವಗಳಿಗೆ ವಿರುದ್ಧವಾದ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂದು ಆಯಾ ಪಕ್ಷಗಳು ನೀಡಿದ್ದ ದೂರುಗಳ ಆಧಾರದ ಮೇಲೆ ಶಾಸಕರನ್ನು ಅನರ್ಹಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.

“ಭಾರತದ ಸಂವಿಧಾನದ ಶೆಡ್ಯೂಲ್ 10ರ ಅಡಿಯಲ್ಲಿ ಮತ್ತು ಆಂಧ್ರ ಪ್ರದೇಶ ವಿಧಾನಸಭೆಯ ಸದಸ್ಯರ ನಿಯಮ (ಪಕ್ಷಾಂತರ ಮತ್ತು ಅನರ್ಹತೆ ನಿಯಮಗಳು) 1986ರ ಆಧಾರದ ಮೇಲೆ ಆಂಧ್ರ ಪ್ರದೇಶ ವಿಧಾನಸಭೆಯಿಂದ ಈ ಕೆಳಗಿನ ಸದಸ್ಯರನ್ನು ಫೆಬ್ರವರಿ 26 ರಂದು ಗೌರವಾನ್ವಿತ ಸ್ಪೀಕರ್ ಅನರ್ಹಗೊಳಿಸಿದ್ದಾರೆ” ಎಂದು ಸ್ಪೀಕರ್ ಕಚೇರಿಯ ಸುತ್ತೋಲೆ ಹೇಳಿದೆ.

ಅನರ್ಹಗೊಂಡ ಶಾಸಕರಲ್ಲಿ ವೈಎಸ್‌ಆರ್‌ ಕಾಂಗ್ರೆಸ್ ಪಕ್ಷದ ಶಾಸಕರಾದ ಆನಂ ರಾಮನಾರಾಯಣ ರೆಡ್ಡಿ, ಮೇಕಪತಿ ಚಂದ್ರಶೇಖರ್ ರೆಡ್ಡಿ, ಕೋಟಂ ರೆಡ್ಡಿ ಶ್ರೀಧರ್ ರೆಡ್ಡಿ ಮತ್ತು ಉಂಡವಳ್ಳಿ ಶ್ರೀದೇವಿ ಸೇರಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ (ಸಿಎಂಒ) ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

ತೆಲುಗು ದೇಶಂ ಪಕ್ಷದ ಶಾಸಕರಾದ ಮದ್ದಲಗಿರಿ, ಕರಣಂ ಬಲರಾಮ್, ವಲ್ಲಭನೇನಿ ವಂಶಿ ಮತ್ತು ವಾಸುಪಲ್ಲಿ ಗಣೇಶ್ ವಿಧಾನಸಭೆಯಿಂದ ಅನರ್ಹಗೊಂಡಿದ್ದಾರೆ.

ಅನರ್ಹಗೊಂಡ ಶಾಸಕರು ತಮ್ಮ ಮೂಲ ಪಕ್ಷಗಳಿಂದ ಇತರ ರಾಜಕೀಯ ಪಕ್ಷಗಳ ಕಡೆ ತಮ್ಮ ನಿಷ್ಠೆ ಬದಲಾಯಿಸಿದ್ದಾರೆ. ಇದು ಸ್ಪೀಕರ್ ದೃಷ್ಟಿಯಲ್ಲಿ ಪ್ರಜಾಪ್ರಭುತ್ವದ ರಚನೆ ಮತ್ತು ಮತದಾರರ ಆದೇಶವನ್ನು ದುರ್ಬಲಗೊಳಿಸುತ್ತದೆ ಎಂದು ವರದಿಗಳು ಹೇಳಿವೆ.

ಅನರ್ಹಗೊಳಿಸುವ ಮುನ್ನ ಎಲ್ಲಾ 8 ಶಾಸಕರು ತಮ್ಮ ಅಭಿಪ್ರಾಯ ತಿಳಿಸುವಂತೆ ಸ್ಪೀಕರ್ ನೋಟಿಸ್ ನೀಡಿದ್ದರು. ಇನ್ನು ಕೆಲವೇ ವಾರಗಳಲ್ಲಿ ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆ ನಡೆಯುವ ನಿರೀಕ್ಷೆಯಿರುವುದರಿಂದ ಶಾಸಕರ ಅನರ್ಹತೆಗೆ ಸಂಬಂಧಪಟ್ಟಂತೆ ಉಪ ಚುನಾವಣೆ ನಡೆಯುವ ಸಾಧ್ಯತೆ ಇಲ್ಲ ಎನ್ನಲಾಗಿದೆ.

ಇದನ್ನೂ ಓದಿ: ಬಿಜೆಪಿ ಪರ ಅಡ್ಡ ಮತದಾನ: ಹಿಮಾಚಲ ಪ್ರದೇಶ ವಿಧಾನಸಭೆಯಿಂದ 6 ಕಾಂಗ್ರೆಸ್‌ ಶಾಸಕರು ಅನರ್ಹ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...