Homeಮುಖಪುಟಛತ್ತೀಸ್‌ಗಢ: ಎನ್‌ಕೌಂಟರ್‌ನಲ್ಲಿ 8 ನಕ್ಸಲೀಯರ ಹತ್ಯೆ; ಓರ್ವ ಯೋಧ ಹುತಾತ್ಮ

ಛತ್ತೀಸ್‌ಗಢ: ಎನ್‌ಕೌಂಟರ್‌ನಲ್ಲಿ 8 ನಕ್ಸಲೀಯರ ಹತ್ಯೆ; ಓರ್ವ ಯೋಧ ಹುತಾತ್ಮ

- Advertisement -
- Advertisement -

ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯ ಅಬುಜ್‌ಮಾರ್‌ನಲ್ಲಿ ಶನಿವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಕನಿಷ್ಠ ಎಂಟು ನಕ್ಸಲೀಯರು ಬಲಿಯಾಗಿದ್ದಾರೆ. ಗುಂಡಿನ ಚಕಮಕಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದು, ಇನ್ನಿಬ್ಬರು ಗಾಯಗೊಂಡಿದ್ದಾರೆ.

ಮಾದ್ ಮತ್ತು ನಾರಾಯಣಪುರ ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ಭದ್ರತಾ ಪಡೆಗಳು ಮತ್ತು ನಕ್ಸಲೀಯರ ನಡುವೆ ಎನ್‌ಕೌಂಟರ್ ನಡೆಯುತ್ತಿದೆ. ನಾರಾಯಣಪುರ-ಕೊಂಡಗಾಂವ್-ಕಂಕೇರ್-ದಂತೇವಾಡ ಡಿಆರ್‌ಜಿ, ಎಸ್‌ಟಿಎಫ್ ಮತ್ತು ಐಟಿಬಿಪಿ 53ನೇ ಬೆಟಾಲಿಯನ್ ಪಡೆಗಳು ಜಂಟಿ ಕಾರ್ಯಾಚರಣೆಯಲ್ಲಿ ತೊಡಗಿವೆ.

ಎನ್‌ಕೌಂಟರ್ ಕುರಿತು ಹೇಳಿಕೆ ನೀಡಿದ ಛತ್ತೀಸ್‌ಗಢ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ, ನಕ್ಸಲೀಯರನ್ನು ನಿರ್ಮೂಲನೆ ಮಾಡಲು ಸರ್ಕಾರ ಸಂಪೂರ್ಣ ಸಿದ್ಧವಾಗಿದೆ ಎಂದು ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಮಾಹಿತಿ ನೀಡಿದ ಛತ್ತೀಸ್‌ಗಢ ಸಿಎಂ ವಿಷ್ಣು ದೇವ್ ಸಾಯಿ,  ನಾರಾಯಣಪುರ ಜಿಲ್ಲೆಯ ಪಿಎಸ್ ಓರ್ಚಾ ಫರಸ್ಬೇಡ-ಧೂರ್ಬೆಡಾ ನಡುವೆ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ 8 ನಕ್ಸಲೀಯರು ಸಾವನ್ನಪ್ಪಿದ ಬಗ್ಗೆ ಮಾಹಿತಿ ಇದೆ. ಎನ್‌ಕೌಂಟರ್‌ನಲ್ಲಿ ಓರ್ವ ಎಸ್‌ಟಿಎಫ್ ಜವಾನ್ ಹುತಾತ್ಮರಾಗಿದ್ದಾರೆ ಮತ್ತು ಇಬ್ಬರು ಜವಾನರು ಗಾಯಗೊಂಡಿರುವ ದುಃಖದ ಸುದ್ದಿಯೂ ಇದೆ. ಗಾಯಗೊಂಡ ಯೋಧರನ್ನು ಚಿಕಿತ್ಸೆಗಾಗಿ ತಕ್ಷಣವೇ ರಾಯ್‌ಪುರಕ್ಕೆ ರವಾನಿಸಲಾಗುತ್ತಿದೆ. ಹುತಾತ್ಮ ಯೋಧರ ಆತ್ಮಕ್ಕೆ ಶಾಂತಿ ಮತ್ತು ಗಾಯಗೊಂಡ ಯೋಧರು ಶೀಘ್ರ ಚೇತರಿಸಿಕೊಳ್ಳಲಿ ಎಂದು ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ. ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದರಿಂದ ನಕ್ಸಲೀಯರು ವಿಚಲಿತರಾಗಿದ್ದಾರೆ. ನಮ್ಮ ಸರ್ಕಾರ ಅವುಗಳನ್ನು ತೊಡೆದುಹಾಕಲು ಸಂಪೂರ್ಣವಾಗಿ ಸಿದ್ಧವಾಗಿದೆ ಮತ್ತು ಗುರಿಯನ್ನು ಸಾಧಿಸುವವರೆಗೆ ನಾವು ಸುಮ್ಮನಿರುವುದಿಲ್ಲ ಎಂದು ಹೇಳಿದ್ದಾರೆ.

ಭದ್ರತಾ ಪಡೆಗಳು “ಕೆಂಪು ಕಾರಿಡಾರ್”ಗಳಲ್ಲಿ ನಕ್ಸಲೀಯರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿವೆ ಮತ್ತು ನಕ್ಸಲ್ ವಿರೋಧಿ ಕಾರ್ಯಾಚರಣೆಯನ್ನು ಬಲಪಡಿಸಿವೆ. ಛತ್ತೀಸ್‌ಗಢದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ, ನಕ್ಸಲೀಯರ ವಿರುದ್ಧ ಕ್ರಮಗಳು ಹೆಚ್ಚಿವೆ ಮತ್ತು ನಾವು ಅವರ ವಿರುದ್ಧ ಪ್ರಬಲ ಹೋರಾಟ ನಡೆಸುತ್ತಿದ್ದೇವೆ. ನಮ್ಮ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ನಕ್ಸಲಿಸಂ ಕೊನೆಗೊಳ್ಳಬೇಕು ಎಂದು ಬಯಸುತ್ತಾರೆ ಎಂದು ವಿಷ್ಣು ದೇವ್ ಸಾಯಿ ಹೇಳಿದ್ದಾರೆ.

ಏಪ್ರಿಲ್ 16 ರಂದು, ಕಂಕೇರ್ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು 29 ನಕ್ಸಲೀಯರನ್ನು ಹೊಡೆದುರುಳಿಸಿದರೆ, ನಾರಾಯಣಪುರ ಜಿಲ್ಲೆಯ ಅಬುಜ್ಮಾರ್ ಪ್ರದೇಶದಲ್ಲಿ ನಡೆದ ಮತ್ತೊಂದು ಎನ್‌ಕೌಂಟರ್‌ನಲ್ಲಿ 10 ನಕ್ಸಲೀಯರ ಹತ್ಯೆ ನಡೆದಿತ್ತು.

 ಇದನ್ನು ಓದಿ:ಎನ್‌ಡಿಎ ಸರ್ಕಾರದ ಪತನ ಸನ್ನಿಹಿತವಾಗಿದೆ: ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ಯಾನೇಶ್ ಕುಮಾರ್ ರಕ್ಷಣೆಗಾಗಿ ದೆಹಲಿಯನ್ನೇ ಭಾರತ-ಪಾಕ್ ಗಡಿಯನ್ನಾಗಿ ಪರಿವರ್ತಿಸಿದ ಮೋದಿ: ಅಭಿಜೀತ್ ದಿಪ್ಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್‌) ನಡೆದಿರುವ ಅಕ್ರಮಗಳನ್ನು ವಿರೋಧಿಸಿ, ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಚರ್ಚಿಸಲು ವಿದ್ಯಾರ್ಥಿ ಸಂಘಟನೆಗಳು,...

ಸಹಪಾಠಿಗಳ ಜಾತಿ, ಪ್ರವೇಶದ ವರ್ಗ, ರ‍್ಯಾಂಕ್ ಕೇಳಬೇಡಿ: ದರ್ಶನ್, ಸಾಹಿಲ್ ಸಾವುಗಳ ಬೆನ್ನಲ್ಲೇ ತಾರತಮ್ಯ ವಿರೋಧಿ ನಿಯಮ ನೆನಪಿಸಿದ ಐಐಟಿ ಬಾಂಬೆ

ಮುಂಬೈ: ಸಹಪಾಠಿಗಳ ಜಾತಿ, ಪ್ರವೇಶದ ವರ್ಗ ಅಥವಾ ಪ್ರವೇಶ ಪರೀಕ್ಷೆಯ ರ‍್ಯಾಂಕ್‌ಗಳ ಬಗ್ಗೆ ಪ್ರಶ್ನಿಸುವುದು ತಾರತಮ್ಯಕ್ಕೆ ಕಾರಣವಾಗಬಹುದು. ಇಂತಹ ಪ್ರಶ್ನೆಗಳನ್ನು ಕೇಳಬಾರದು ಎಂದು ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಬಾಂಬೆ ತನ್ನ ವಿದ್ಯಾರ್ಥಿಗಳಿಗೆ...

ಲೈಂಗಿಕ ಕಿರುಕುಳದ ಆರೋಪ ಮಾಡಿದ ಪತ್ರಕರ್ತೆಯ ವಿರುದ್ಧ ಜಾತಿ ನಿಂದನೆ ಪ್ರಕರಣ: ಬಲವಂತದ ಕ್ರಮ ಕೈಗೊಳ್ಳದಂತೆ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ದೆಹಲಿಯಲ್ಲಿ ನಡೆಯುತ್ತಿದ್ದ ಪ್ರತಿಭಟನೆಗಳನ್ನು ವರದಿ ಮಾಡುವಾಗ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ವಿವೇಕ್ ಭಗತ್ ಅವರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದ ಮಹಿಳಾ ಪತ್ರಕರ್ತೆಯ ವಿರುದ್ಧ ದಾಖಲಾಗಿರುವ...

ಸಿಇಸಿ ವಿರೋಧಿ ಪ್ರತಿಭಟನೆ: ಮೆಟ್ರೋ ನಿರ್ಬಂಧ, ಇಂಟರ್ನೆಟ್ ಸ್ಥಗಿತ ಪ್ರಕರಣ: ಸುಪ್ರೀಂ ಕೋರ್ಟ್ ಗೆ ಬೇಷರತ್ ಕ್ಷಮೆಯಾಚಿಸಿದ ಕೇಂದ್ರ ಕಾರ್ಯದರ್ಶಿ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಅಕ್ಟೋಬರ್ 10ರಂದು ದೆಹಲಿಯಲ್ಲಿ ನಡೆದ ಪ್ರತಿಭಟನೆಯ ಹಿನ್ನೆಲೆಯಲ್ಲಿ ಮೆಟ್ರೋ ಮತ್ತು ರೈಲು ಸೇವೆಗಳ ಮೇಲೆ ನಿರ್ಬಂಧ ವಿಧಿಸಿದ ಹಾಗೂ ಇಂಟರ್ನೆಟ್...

‘ಯಾರೂ ನಮ್ಮನ್ನು ಬೆದರಿಸಿ ಮಣಿಸಲು ಸಾಧ್ಯವಿಲ್ಲ’: ವಿಪಕ್ಷಗಳ ಸುಪ್ರೀಂ ಕೋರ್ಟ್ ಮಾರ್ಚ್ ಕುರಿತು ಸಿಜೆಐ ಹೇಳಿಕೆ

ನ್ಯಾಯಾಲಯ ಸಂಕೀರ್ಣಗಳ ಸಮೀಪ ಪ್ರತಿಭಟನೆಗಳು ಮತ್ತು ಮೆರವಣಿಗೆಗಳಿಗೆ ನಿಯಂತ್ರಕ ಚೌಕಟ್ಟೊಂದನ್ನು ರೂಪಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ಸಂಬಂಧ ಸುಪ್ರೀಂ ಕೋರ್ಟ್ ಇಂದು (ಅ.15) ನೋಟಿಸ್ ಜಾರಿ ಮಾಡಿದೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್...

ದೆಹಲಿ ಪ್ರತಿಭಟನೆ ಹಾಗೂ ಜಂತರ್ ಮಂತರ್ ರದ್ದತಿ ವಿವಾದ: ಕೇಂದ್ರ ಸರ್ಕಾರ ಹಾಗೂ ಪೊಲೀಸರಿಗೆ ಸುಪ್ರೀಂ ನೋಟಿಸ್; ವಿಡಿಯೋ ಸಾಕ್ಷ್ಯ ಭದ್ರಪಡಿಸಲು ನಿರ್ದೇಶನ!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಗಳ ವೇಳೆ ಪೊಲೀಸರು ನಡೆಸಿದ್ದರೆನ್ನಲಾದ ಅತಿಯಾದ ಬಲಪ್ರಯೋಗ, ಸಾರ್ವಜನಿಕರ ಸಂಚಾರ ನಿರ್ಬಂಧ ಹಾಗೂ ಪ್ರಮುಖ ಪ್ರತಿಭಟನಾ ಸ್ಥಳವಾಗಿದ್ದ 'ಜಂತರ್ ಮಂತರ್' ಅನ್ನು ರದ್ದುಗೊಳಿಸಿದ (De-notification) ಕೇಂದ್ರ...

ಹಿಂದೂ ಧರ್ಮದಿಂದ ಇಸ್ಲಾಂಗೆ ಮತಾಂತರಗೊಂಡವರಿಗೆ ‘ಹಿಂದುಳಿದ ವರ್ಗದ’ ಮೀಸಲಾತಿ ಇಲ್ಲ : ಮದ್ರಾಸ್ ಹೈಕೋರ್ಟ್ ತೀರ್ಪು ಎತ್ತಿಹಿಡಿದ ಸುಪ್ರೀಂ ಕೋರ್ಟ್

ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳುವ ವ್ಯಕ್ತಿಯು ತನ್ನ ಮತಾಂತರ ಪೂರ್ವದ ಜಾತಿ ಸ್ಥಿತಿಯ ಆಧಾರದ ಮೇಲೆ ಹಿಂದುಳಿದ ವರ್ಗದ (ಬಿಸಿ) ಮೀಸಲಾತಿಗೆ ಅರ್ಹನಲ್ಲ ಎಂದು ತೀರ್ಪು ನೀಡಿದ್ದ ಮದ್ರಾಸ್ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್...

‘ಎಸ್‌ಐಆರ್’ ವಿರುದ್ಧ ಇಂಡಿಯಾ ನಾಯಕರ ಅರ್ಜಿ: ಸುಪ್ರೀಂ ಕೋರ್ಟ್‌ನಿಂದ ಚುನಾವಣಾ ಆಯೋಗಕ್ಕೆ ನೋಟಿಸ್

ಭಾರತೀಯ ಚುನಾವಣಾ ಆಯೋಗ ದೇಶಾದ್ಯಂತ ಜಾರಿಗೆ ತಂದಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯ ಕಾನೂನಾತ್ಮಕತೆಯನ್ನು ಪ್ರಶ್ನಿಸಿ ವಿಪಕ್ಷ 'ಇಂಡಿಯಾ' ಒಕ್ಕೂಟ ಸಲ್ಲಿಸಿರುವ ಪ್ರಮುಖ...

ಸಿಇಸಿ ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನಟ ಇಮ್ರಾನ್ ಖಾನ್‌ಗೆ ಭಾರತ ತೊರೆಯುವಂತೆ ನೋಟಿಸ್: ಅಕ್ಟೋಬರ್ 28ರ ಗಡುವು

ಮುಂಬೈ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಮುಂಬೈನ ಆಗಸ್ಟ್ ಕ್ರಾಂತಿ ಮೈದಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನಟ ಇಮ್ರಾನ್ ಖಾನ್ ಅವರಿಗೆ ಅಕ್ಟೋಬರ್ 28ರೊಳಗೆ ಭಾರತ ತೊರೆಯುವಂತೆ...

2018ರ ‘ಬಿಜೆಪಿ ಐಟಿ ಸೆಲ್’ ವೀಡಿಯೊ ವಿವಾದ: ಯೂಟ್ಯೂಬರ್ ಧ್ರುವ್ ರಾಠಿಗೆ ಹೊಸ ಸಮನ್ಸ್ ಜಾರಿ ಮಾಡಿದ ದೆಹಲಿ ಕೋರ್ಟ್!

ಡಿಜಿಟಲ್ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದ್ದ 2018ರ ಕ್ರಿಮಿನಲ್ ಮಾನಹಾನಿ ದೂರಿಗೆ (Criminal Defamation Case) ಸಂಬಂಧಿಸಿದಂತೆ, ಪ್ರಸಿದ್ಧ ಯೂಟ್ಯೂಬರ್ ಧ್ರುವ್ ರಾಠಿ ಅವರಿಗೆ ದೆಹಲಿಯ ಸಾಕೇತ್ ನ್ಯಾಯಾಲಯವು ಹೊಸದಾಗಿ...