Homeಮುಖಪುಟತಮಿಳುನಾಡು ಬಿಎಸ್‌ಪಿ ರಾಜ್ಯಾಧ್ಯಕ್ಷನ ಹತ್ಯೆ : 8 ಜನರ ಬಂಧನ

ತಮಿಳುನಾಡು ಬಿಎಸ್‌ಪಿ ರಾಜ್ಯಾಧ್ಯಕ್ಷನ ಹತ್ಯೆ : 8 ಜನರ ಬಂಧನ

- Advertisement -
- Advertisement -

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ತಮಿಳುನಾಡು ರಾಜ್ಯ ಘಟಕದ ಅಧ್ಯಕ್ಷ ಕೆ.ಆರ್ಮ್‌ಸ್ಟ್ರಾಂಗ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಿನ್ನೆ (ಜುಲೈ 5) ಸಂಜೆ ನಡೆದಿದೆ.

ಚೆನ್ನೈನ ಪೆರಂಬೂರ್‌ನಲ್ಲಿರುವ ಅವರ ಮನೆಯ ಬಳಿಯೇ ಕೃತ್ಯ ನಡೆದಿದೆ. ಸುಮಾರು 6 ಜನರು ದುಷ್ಕರ್ಮಿಗಳು ಬೈಕ್‌ನಲ್ಲಿ ಆಗಮಿಸಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಆರ್ಮ್‌ಸ್ಟ್ರಾಂಗ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

ಘಟನೆಯ ಬಳಿಕ ಹಂತಕರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದರು. ಈ ನಡುವೆ 8 ಮಂದಿ ಅಣ್ಣಾನಗರ ಸಹಾಯಕ ಪೊಲೀಸ್ ಆಯುಕ್ತರ ಮುಂದೆ ಶರಣಾಗಿದ್ದಾರೆ. ಅವರನ್ನು ಪೊಲೀಸರು ಬಂಧಿಸಿದ್ದಾರೆ.

ತಪ್ಪಿತಸ್ಥರ ಪತ್ತೆ ಮತ್ತು ಪ್ರಕರಣದ ತನಿಖೆಗಾಗಿ 10 ವಿಶೇಷ ತಂಡಗಳನ್ನು ರಚಿಸಲಾಗಿದೆ. ಚೆನ್ನೈ ಉತ್ತರ ಸಹಾಯಕ ಪೊಲೀಸ್ ಆಯುಕ್ತ ಅಸ್ರಾ ಗಾರ್ಗ್‌ ತನಿಖೆಯ ಉಸ್ತುವಾರಿ ವಹಿಸಿದ್ದಾರೆ. ಬಿಎಸ್‌ಪಿ ಬೆಂಬಲಿಗರು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ರಾಜೀನಾಮೆಗೆ ಆಗ್ರಹಿಸಿದ್ದಾರೆ.

ಮಾಯಾವತಿ ಪ್ರತಿಕ್ರಿಯೆ :

ಆರ್ಮ್‌ಸ್ಟ್ರಾಂಗ್ ಹತ್ಯೆ ಕುರಿತು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಪ್ರತಿಕ್ರಿಯಿಸಿದ್ದು, “ಆರ್ಮ್‌ಸ್ಟ್ರಾಂಗ್ ಹತ್ಯೆ ಖಂಡನೀಯ. ವೃತ್ತಿಯಲ್ಲಿ ವಕೀಲರಾಗಿದ್ದ ಅವರು, ದಲಿತರ ಪರ ಗಟ್ಟಿ ಧ್ವನಿಯಾಗಿದ್ದರು. ರಾಜ್ಯ ಸರ್ಕಾರ ತಪ್ಪಿತಸ್ಥರನ್ನು ಶಿಕ್ಷಿಸಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ : ಹೊಸ ಕ್ರಿಮಿನಲ್ ಕಾನೂನಿನಲ್ಲಿ ಪೊಲೀಸ್ ಕಸ್ಟಡಿ ಅವಧಿ ಹೆಚ್ಚಳ: ಕಳವಳ ವ್ಯಕ್ತಪಡಿಸಿದ ಪಿಯುಸಿಎಲ್‌; ತಿದ್ದುಪಡಿಗೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...