Homeಮುಖಪುಟಮನ್ ಕಿ ಬಾತ್ ಕಾರ್ಯಕ್ರಮಕ್ಕೆ 830 ಕೋಟಿ ರೂ. ಖರ್ಚು ಮಾಡಿದೆ ಎಂದು ಟ್ವೀಟ್ ಮಾಡಿದ...

ಮನ್ ಕಿ ಬಾತ್ ಕಾರ್ಯಕ್ರಮಕ್ಕೆ 830 ಕೋಟಿ ರೂ. ಖರ್ಚು ಮಾಡಿದೆ ಎಂದು ಟ್ವೀಟ್ ಮಾಡಿದ ಎಎಪಿ ನಾಯಕನ ವಿರುದ್ಧ FIR

- Advertisement -
- Advertisement -

‘ಮನ್ ಕಿ ಬಾತ್’ ರೇಡಿಯೋ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರ 830 ಕೋಟಿ ರೂಪಾಯಿ ಖರ್ಚು ಮಾಡಿದೆ ಎಂದು ಆಮ್ ಆದ್ಮಿ ಪಕ್ಷದ ಗುಜರಾತ್ ಮುಖ್ಯಸ್ಥ ಇಸುದನ್ ಗಧ್ವಿ ಅವರು ಟ್ವೀಟ್ ಮಾಡಿದ್ದಕ್ಕೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಸೋಮವಾರ ಪಿಟಿಐ ವರದಿ ಮಾಡಿದೆ.

2014ಅಕ್ಟೋಬರ್ 3ರಂದು ಪ್ರಧಾನಿ ಮೋದಿ ಅವರು ಈ ಮನ್ ಕಿ ಬಾತ್ ರೇಡಿಯೋ ಕಾರ್ಯಕ್ರಮ ಆರಂಭಿಸಿದ್ದರು.ಇದು ಪ್ರತಿ ತಿಂಗಳ ಕೊನೆಯ ಭಾನುವಾರದಂದು ಆಕಾಶವಾಣಿಯಲ್ಲಿ ಪ್ರಸಾರವಾಗುತ್ತದೆ. ಏಪ್ರಿಲ್ 30ರಂದು 100ನೇ ಸಂಚಿಕೆ ಪ್ರಸಾರವಾಗಿತ್ತು.

”ಮನ್ ಕಿ ಬಾತ್‌ನ ಒಂದು ಸಂಚಿಕೆಗೆ 8.3 ಕೋಟಿ ರೂಪಾಯಿ ವೆಚ್ಚವಾಗಿದೆ. ಅಂದರೆ ಕೇಂದ್ರವು ಇದುವರೆಗೆ 100 ಸಂಚಿಕೆಗಳಿಗೆ 830 ಕೋಟಿ ರೂ. ಖರ್ಚು ಮಾಡಿದೆ” ಎಂದು ಇಸುದನ್ ಗಧ್ವಿ ಟ್ವೀಟ್‌ನಲ್ಲಿ ಹೇಳಿಕೊಂಡಿದ್ದರು, ಆದರೆ ಆನಂತರ ಅದನ್ನು ಈಗ ಅಳಿಸಲಾಗಿದೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.

ಈ ಬಗ್ಗೆ ಪ್ರೆಸ್ ಬ್ಯೂರೋ ಆಫ್ ಇನ್ಫಾರ್ಮೇಶನ್‌ನ ಸತ್ಯ-ಪರಿಶೀಲನಾ ಘಟಕವು, ಗಧ್ವಿ ಅವರು ಟ್ವೀಟ್‌ನ ಮಾಹಿತಿಯು ತಪ್ಪುದಾರಿಗೆಳೆಯುವಂತಿದೆ ಎಂದು ಆರೋಪ ಮಾಡಿದೆ.

ಇದನ್ನೂ ಓದಿ: ‘ನೂರು ‘ಮನ್ ಕಿ ಬಾತ್’ ಮುಗಿಸಿದ್ದಕ್ಕೆ ಅಭಿನಂದನೆಗಳು, ಈಗಲಾದರೂ ‘ಜನ್ ಕಿ ಬಾತ್’ ಕೇಳುತ್ತಿರಾ?’: ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ

”8.3 ಕೋಟಿ ರೂ.ಗಳು ಇಲ್ಲಿಯವರೆಗಿನ ಮನ್ ಕಿ ಬಾತ್‌ ಕಾರ್ಯಕ್ರಮದ ಒಟ್ಟು ಜಾಹೀರಾತುಗಳಿಂದ ಬಂದಿರುವ ಹಣವಾಗಿದೆ. ಅದು ಒಂದು ಸಂಚಿಕೆಯ ಹಣ ಅಲ್ಲ. ಗಧ್ವಿ ಅವರ ಟ್ವೀಟ್‌ನ ಮಾಹಿತಿ ಸುಳ್ಳು ಎಂದು ಎಂದು ಬ್ಯೂರೋ ಭಾನುವಾರ ಟ್ವೀಟ್ ಮಾಡಿದೆ.

ಅಹಮದಾಬಾದ್ ಸೈಬರ್ ಕ್ರೈಂ ಬ್ರಾಂಚ್ ಗಧ್ವಿಯ ವಿರುದ್ಧ ಏಪ್ರಿಲ್ 29ರಂದು ಪ್ರಕರಣ ದಾಖಲಿಸಿಕೊಂಡಿದ್ದು, ಸೆಕ್ಷನ್ 153 (ಗಲಭೆ ಉಂಟುಮಾಡುವ ಉದ್ದೇಶದಿಂದ ಪ್ರಚೋದನೆಯನ್ನು ನೀಡುವುದು), 500 (ಮಾನನಷ್ಟ), 505(1)(ಬಿ) ಮತ್ತು (ಸಿ) (ವದಂತಿಯನ್ನು ಪ್ರಕಟಿಸುವುದು ಅಥವಾ ಸಾರ್ವಜನಿಕರಿಗೆ ಭಯ ಅಥವಾ ಎಚ್ಚರಿಕೆಯನ್ನು ಉಂಟುಮಾಡುವ ಉದ್ದೇಶದಿಂದ ವರದಿ ಮಾಡಿ, ಅಥವಾ ರಾಜ್ಯದ ವಿರುದ್ಧ ಅಥವಾ ಸಾರ್ವಜನಿಕ ನೆಮ್ಮದಿಯ ವಿರುದ್ಧ ಅಪರಾಧ ಮಾಡಲು ಜನರನ್ನು ಪ್ರೇರೇಪಿಸುವುದು) ಮತ್ತು 505 (2) (ವರ್ಗಗಳ ನಡುವೆ ದ್ವೇಷ, ದ್ವೇಷ ಅಥವಾ ಕೆಟ್ಟ ಇಚ್ಛೆಯನ್ನು ಸೃಷ್ಟಿಸುವ ಅಥವಾ ಉತ್ತೇಜಿಸುವ ಹೇಳಿಕೆಗಳು), ಭಾರತೀಯ ದಂಡ ಸಂಹಿತೆ ಅಡಿ ಪ್ರಕರಣ ದಾಖಲಿಸಲಾಗಿದೆ.

ಗಧ್ವಿ ಅವರ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿಯೂ ಪ್ರಕರಣ ದಾಖಲಿಸಲಾಗಿದೆ ಎಂದು ಸಹಾಯಕ ಪೊಲೀಸ್ ಆಯುಕ್ತ (ಸೈಬರ್ ಕ್ರೈಂ) ಜೆಎಂ ಯಾದವ್ ಪಿಟಿಐಗೆ ತಿಳಿಸಿದ್ದಾರೆ.

ಈ ಬಗ್ಗೆ ಆಮ್ ಆದ್ಮಿ ಪಕ್ಷವು ಪ್ರತಿಕ್ರಿಯಿಸಿದ್ದು, ”ಗಧ್ವಿ ವಿರುದ್ಧದ ಎಫ್‌ಐಆರ್ ದಾಖಲಿಸುವ ಮೂಲಕ ಆಡಳಿತಾರೂಢ ಬಿಜೆಪಿಯು ಪ್ರತಿಪಕ್ಷಗಳ ಮೇಲೆ ಮತ್ತೊಂದು ದಾಳಿ ನಡೆಸಿದೆ” ಎಂದು ಹೇಳಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ದೆಹಲಿ ಕಾಂಗ್ರೆಸ್‌ನಲ್ಲಿ ನಿಲ್ಲದ ರಾಜೀನಾಮೆ ಪರ್ವ; ಎಎಪಿ ಮೈತ್ರಿ ವಿರೋಧಿಸಿ ಪಕ್ಷ ತೊರೆದ ಮತ್ತಿಬ್ಬರು...

0
ದೆಹಲಿ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಅರವಿಂದ್ ಸಿಂಗ್ ಲವ್ಲಿ ನಂತರ ಪಕ್ಷಕ್ಕೆ ಭಾರಿ ಹಿನ್ನಡೆಯಾಗಿದ್ದು, ರಾಷ್ಟ್ರ ರಾಜಧಾನಿಯ ಎರಡು ಲೋಕಸಭಾ ಸ್ಥಾನಗಳಿಗೆ ನೇಮಿಸಿದ್ದ ಅದರ ಇಬ್ಬರು ನಾಯಕರು, ವೀಕ್ಷಕರಾದ ನೀರಜ್ ಬಸೋಯಾ ಮತ್ತು ನಸೀಬ್...