Homeಮುಖಪುಟರೈಲ್ವೆ ಹಳಿಗಳ ಮೇಲೆ 2020ರಲ್ಲಿ ಮೃತಪಟ್ಟವರು 8,700 ಮಂದಿ, ಹೆಚ್ಚಿನವರು ವಲಸೆ ಕಾರ್ಮಿಕರು

ರೈಲ್ವೆ ಹಳಿಗಳ ಮೇಲೆ 2020ರಲ್ಲಿ ಮೃತಪಟ್ಟವರು 8,700 ಮಂದಿ, ಹೆಚ್ಚಿನವರು ವಲಸೆ ಕಾರ್ಮಿಕರು

- Advertisement -
- Advertisement -

ದೇಶದಲ್ಲಿ ಹಬ್ಬುತ್ತಿರುವ ಕೊರೊನಾ ವೈರಸ್ ಕಾರಣದಿಂದ ಲಾಕ್‌ಡೌನ್ ಹೇರಿ ಪ್ರಯಾಣಿಕರ ರೈಲು ಸೇವೆಗಳನ್ನು ಮೊಟಕುಗೊಳಿಸಲಾಗಿದ್ದರೂ 2020 ರಲ್ಲಿ 8,700 ಕ್ಕೂ ಹೆಚ್ಚು ಜನರು ರೈಲ್ವೆ ಹಳಿಗಳ ಮೇಲೆ ಮೃತಪಟ್ಟಿದ್ದಾರೆ. ಹೀಗೆ ಬಲಿಯಾದವರಲ್ಲಿ ಅನೇಕರು ವಲಸೆ ಕಾರ್ಮಿಕರಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮಾಹಿತಿ ಹಕ್ಕು ಕಾಯ್ದೆಯಡಿ ಮಧ್ಯಪ್ರದೇಶ ಮೂಲದ ಕಾರ್ಯಕರ್ತ ಚಂದ್ರಶೇಖರ್ ಗೌರ್ ಅವರ ಪ್ರಶ್ನೆಗೆ ರೈಲ್ವೆ ಮಂಡಳಿ 2020 ಜನವರಿ ಮತ್ತು ಡಿಸೆಂಬರ್ ನಡುವಿನ ಅವಧಿಯಲ್ಲಿ ರೈಲ್ವೆ ಹಳಿಗಳ ಮೇಲೆ ಸಂಭವಿಸಿದ ಸಾವುಗಳ ಡೇಟಾವನ್ನು ಹಂಚಿಕೊಂಡಿದೆ.

“ರಾಜ್ಯ ಪೊಲೀಸರಿಂದ ಪಡೆದ ಮಾಹಿತಿಯ ಆಧಾರದ ಮೇಲೆ, ಜನವರಿ 2020 ಮತ್ತು ಡಿಸೆಂಬರ್ 2020 ರ ನಡುವೆ ರೈಲ್ವೆ ಹಳಿಗಳಲ್ಲಿ 805 ಜನರು ಗಾಯಗೊಂಡಿದ್ದಾರೆ. 8,733 ಮಂದಿ ಸಾವನ್ನಪ್ಪಿದ್ದಾರೆ” ಎಂದು ರೈಲ್ವೆ ಮಂಡಳಿ ತಿಳಿಸಿದೆ.

ರೈಲು ಮಾರ್ಗಗಳು. ರಸ್ತೆಗಳು ಅಥವಾ ಹೆದ್ದಾರಿಗಳಿಗಿಂತ ಚಿಕ್ಕವು, ಈ ಮೂಲಕ ಪ್ರಯಾಣಿಸಿದರೆ ಬೇಗ ಊರುಗಳನ್ನು ಸೇರಿಕೊಳ್ಳಬಹುದು ಎಂದು ಭಾವಿಸಲಾಗಿರುವುದರಿಂದ ಸತ್ತವರಲ್ಲಿ ಅನೇಕರು ವಲಸೆ ಕಾರ್ಮಿಕರಾಗಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ: ಮ್ಯಾಗಿ ಸೇರಿದಂತೆ ನೆಸ್ಲೆಯ 60% ಉತ್ಪನ್ನಗಳು ಆರೋಗ್ಯಕರವಲ್ಲ: ಸಂಸ್ಥೆಯ ಆಂತರಿಕ ವರದಿ

ಜೊತೆಗೆ ಲಾಕ್‌ಡೌನ್ ಮಾರ್ಗಸೂಚಿಗಳನ್ನು ಉಲ್ಲಂಘಿಸುತ್ತಿರುವುದಕ್ಕಾಗಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಸಹ ವಲಸೆ ಕಾರ್ಮಿಕರು ರೈಲ್ವೆ ಟ್ರ್ಯಾಕ್‌ಗಳಲ್ಲಿ ಪ್ರಯಾಣಿಸುತ್ತಾರೆ. ಹಾಗೇಯೆ ದಾರಿಯ ಮಧ್ಯದಲ್ಲಿ ಕಳೆದುಹೋಗುವುದಿಲ್ಲ ಎಂಬ ನಂಬಿಕೆಯನ್ನು ಸಹ ಅವರು ಹೊಂದಿದ್ದಾರೆ. ಲಾಕ್‌ಡೌನ್ ಆಗಿರುವುದರಿಂದ ಯಾವುದೇ ರೈಲುಗಳು ಓಡುವುದಿಲ್ಲ ಎಂದು ಊಹಿಸಿದ್ದಾರೆ” ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದಕ್ಕೂ ಮುಂಚಿನ ನಾಲ್ಕು ವರ್ಷಗಳಿಗೆ ಹೋಲಿಸಿದರೆ 2020 ರ ಸಾವುನೋವುಗಳು ಕಡಿಮೆ ಇದೆ. ಆದರೆ, ಮಾರ್ಚ್ 25 ರಂದು ಲಾಕ್‌ಡೌನ್ ಘೋಷಣೆಯಾದ ನಂತರ ಪ್ರಯಾಣಿಕರ ಸೇವೆಗಳನ್ನು ನಿರ್ಬಂಧಿಸಲಾಗಿದೆ ಎಂಬ ಅಂಶದಿಂದಾಗಿ ಈ ಸಾವುಗಳ ಸಂಖ್ಯೆ ಗಮನಾರ್ಹವಾಗಿವೆ.

ರೈಲ್ವೆ ಅಂಕಿಅಂಶಗಳ ಪ್ರಕಾರ, ರಾಜ್ಯ ಸರ್ಕಾರಗಳಿಂದ ಸಂಗ್ರಹಿಸಲ್ಪಟ್ಟ, 2016 ಮತ್ತು 2019 ರ ನಡುವೆ ಇಂತಹ ಘಟನೆಗಳಲ್ಲಿ 56,271 ಜನರು ಸಾವನ್ನಪ್ಪಿದ್ದಾರೆ ಮತ್ತು 5,938 ಜನರು ಗಾಯಗೊಂಡಿದ್ದಾರೆ.

2016 ರಲ್ಲಿ 14,032 ಜನರು, 2017 ರಲ್ಲಿ 12,838, 2018 ರಲ್ಲಿ 14,197 ಮತ್ತು 2019 ರಲ್ಲಿ 15,204 ಜನರು ಸಾವನ್ನಪ್ಪಿದ್ದಾರೆ ಎಂದು ಅಂಕಿ ಅಂಶಗಳು ತೋರಿಸುತ್ತವೆ. ಆದರೂ, ರೈಲ್ವೆ ಇಲಾಖೆ ಈ ಸಾವುಗಳನ್ನು “ರೈಲ್ವೆ ಅಪಘಾತಗಳು” ಎಂದು ಪರಿಗಣಿಸುವುದಿಲ್ಲ.

ಈ ಸಾವುಗಳು “ಅಹಿತಕರ ಘಟನೆಗಳು” ಅಥವಾ “ಅತಿಕ್ರಮಣ” ದ ವರ್ಗಕ್ಕೆ ಸೇರಿಸಲಾಗುತ್ತದೆ. ಇವುಗಳ ವಿಚಾರಣೆಯನ್ನು ರಾಜ್ಯ ಪೊಲೀಸರು  ನಡೆಸಿ, ಸಂತ್ರಸ್ತರಿಗೆ ಸಂಬಂಧಪಟ್ಟ ರಾಜ್ಯ ಸರ್ಕಾರಗಳಿಂದ ಪರಿಹಾರವನ್ನು ನೀಡಲಾಗುತ್ತದೆ. ಇಂತಹ ಘಟನೆಗಳನ್ನು ಕಡಿಮೆ ಮಾಡಲು ರೈಲ್ವೆ ಬೃಹತ್ ಅಭಿಯಾನಗಳನ್ನು ನಡೆಸಿದ್ದು, ಕೆಲವು ಸಂದರ್ಭಗಳಲ್ಲಿ ಸಹಾನುಭೂತಿಯ ಆಧಾರದ ಮೇಲೆ ಸಂತ್ರಸ್ತರ ಕುಟುಂಬ ಸದಸ್ಯರಿಗೆ ಪರಿಹಾರವನ್ನು ನೀಡಿದೆ.


ಇದನ್ನೂ ಓದಿ: ಚಿಕ್ಕಮಗಳೂರಿನ ತರೀಕೆರೆಯಲ್ಲಿ ವೈದ್ಯರ ಮೇಲೆ ಹಲ್ಲೆ, ನಾಲ್ವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...