Homeಕರೋನಾ ತಲ್ಲಣದೇಶದಲ್ಲಿ 2 ಡೋಸ್ ಲಸಿಕೆ ಪಡೆದ 87,000 ಕ್ಕೂ ಹೆಚ್ಚು ಜನರಿಗೆ ಕೋವಿಡ್ ಸೋಂಕು

ದೇಶದಲ್ಲಿ 2 ಡೋಸ್ ಲಸಿಕೆ ಪಡೆದ 87,000 ಕ್ಕೂ ಹೆಚ್ಚು ಜನರಿಗೆ ಕೋವಿಡ್ ಸೋಂಕು

- Advertisement -
- Advertisement -

ಕೊರೊನಾ ಲಸಿಕೆಯ ಎರಡು ಡೋಸ್‌ಗಳನ್ನು ಪಡೆದ ಬಳಿಕವೂ ದೇಶಾದ್ಯಂತ 87,000 ಕ್ಕೂ ಹೆಚ್ಚು ಜನರಿಗೆ ಕೋವಿಡ್ ಪಾಸಿಟಿವ್ ವರದಿಯಾಗಿದೆ. ಅದರಲ್ಲಿ ಶೇಕಡಾ 46 ರಷ್ಟು ಪ್ರಕರಣಗಳು ಕೇರಳದಿಂದ ವರದಿಯಾಗಿವೆ ಎಂದು ಆರೋಗ್ಯ ಸಚಿವಾಲಯದ ಮೂಲಗಳು ತಿಳಿಸಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಕೇರಳದಲ್ಲಿ ಲಸಿಕೆಯ ಮೊದಲ ಡೋಸ್ ಪಡೆದ 80,000 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಇನ್ನು ಎರಡನೇ ಡೋಸ್ ಪಡೆದಿರುವ 40,000 ಜನರು ಸೋಂಕಿಗೆ ಒಳಗಾಗಿದ್ದಾರೆ ಎಂದು ಸಚಿವಾಲಯದ ಮೂಲಗಳು ತಿಳಿಸಿವೆ.

ಕೇರಳದಲ್ಲಿ ಪ್ರತಿನಿತ್ಯದ ಪ್ರಕರಣಗಳು ಏರಿಕೆಯಾಗುತ್ತಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ ಎಂದು  ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ಕಳವಳ ವ್ಯಕ್ರಪಡಿಸಿದೆ.

ಇದನ್ನೂ ಓದಿ: ಕೇರಳ: ತಂದೆ ಜೊತೆ ಶಬರಿಮಲೆಗೆ ತೆರಳಲು 9 ವರ್ಷದ ಬಾಲಕಿಗೆ ಹೈಕೋರ್ಟ್ ಅನುಮತಿ

ಲಸಿಕೆ ಪಡೆದು ಸೋಂಕಿಗೆ ಒಳಗಾಗಿರುವವರ ಸುಮಾರು 200 ಮಾದರಿಗಳನ್ನು ಜೀನೋಮಿಕ್ ಸೀಕ್ವೆನ್ಸಿಂಗ್‌ ಮಾಡಲಾಗಿದೆ ಆದರೆ ಇಲ್ಲಿಯವರೆಗೆ ಯಾವುದೇ ರೂಪಾಂತರ ಪ್ರಕರಣಗಳು ಕಂಡುಬಂದಿಲ್ಲ ಎಂದು ಮೂಲಗಳು ತಿಳಿಸಿವೆ.

ಸೋಂಕಿನ ರೂಪಾಂತರವು ಯಾವಾಗಲೂ ಹೊಸ ಅಲೆ ಉಂಟಾಗಲು ಕಾರಣವಾಗುತ್ತದೆ. ಈ ವರ್ಷದ ಆರಂಭದಲ್ಲಿ ಕೋವಿಡ್‌ ಎರಡನೇ ಅಲೆಯಲ್ಲಿ ವೈರಸ್‌ನ ಡೆಲ್ಟಾ ರೂಪಾಂತರವು ಆತಂಕಕ್ಕೆ ಕಾರಣವಾಗಿತ್ತು. ಸದ್ಯ ದೇಶದಲ್ಲಿ ಎರಡನೇ ಅಲೆ ಇಳಿಮುಖವಾಗುತ್ತಿರುವುದರಿಂದ, ಸೋಂಕಿನ ಹೊಸ ರೂಪಾಂತರಗಳು ಕಂಡು ಬರುವ ಸಾಧ್ಯತೆಯ ಬಗ್ಗೆ ಅಧಿಕಾರಿಗಳು ಎಚ್ಚರ ವಹಿಸಿದ್ದಾರೆ.

ಕೇರಳವು ಅತಿ ಹೆಚ್ಚು ದೈನಂದಿನ ಕೋವಿಡ್ ಸೋಂಕು ಪ್ರಕರಣಗಳನ್ನು ವರದಿ ಮಾಡುತ್ತಿದ್ದು, ಗುರುವಾರ 21,427 ಪ್ರಕರಣಗಳು ಮತ್ತು 179 ಸಾವುಗಳನ್ನು ವರದಿ ಮಾಡಿದೆ. ಶೇಕಡಾ 100 ರಷ್ಟು ವ್ಯಾಕ್ಸಿನೇಷನ್ ನಡೆಸಿರುವ ವಯನಾಡಿನಿಂದಲೂ ಹೊಸ ಪ್ರಕರಣಗಳು ವರದಿಯಾಗಿವೆ.


ಇದನ್ನೂ ಓದಿ: ಕೇರಳ: ಲಸಿಕೆ ಪಡೆದಿದ್ದ 40,000 ಕ್ಕೂ ಹೆಚ್ಚು ಜನರಿಗೆ ಕೊರೊನಾ ಸೋಂಕು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಅಧಿಕಾರಕ್ಕೆ ಬಂದರೆ ‘ಪಿತ್ರಾರ್ಜಿತ ಆಸ್ತಿ ತೆರಿಗೆ’ ಜಾರಿಗೊಳಿಸುವುದಾಗಿ ಕಾಂಗ್ರೆಸ್ ಹೇಳಿಲ್ಲ

0
ಕಳೆದ ಎರಡು ದಿನಗಳಿಂದ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' (Inheritance Tax) ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' ಜಾರಿಗೆ ತರಲಿದೆ. ಈ...