Homeಕರ್ನಾಟಕಡಿಸೆಂಬರ್‌ 20, 21, 22 ರಂದು ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

ಡಿಸೆಂಬರ್‌ 20, 21, 22 ರಂದು ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

- Advertisement -
- Advertisement -

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಡಿಸೆಂಬರ್‌ 20,21,22 ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಇಂದು (ಜೂನ್25) ಗೃಹ ಕಚೇರಿ ಕೃಷ್ಣಾದಲ್ಲಿ ಸಾಹಿತ್ಯ ಸಮ್ಮೇಳನದ ಪೂರ್ವಭಾವಿಯಾಗಿ ಕನ್ನಡ ಸಾಹಿತ್ಯ ಪರಿಷತ್ತು, ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರೊಂದಿಗೆ ಸಭೆ ನಡೆಸಿದ ಬಳಿಕ ಸಿಎಂ ಮಾಹಿತಿ ನೀಡಿದರು.

“ಈ ಹಿಂದೆ ಜೂನ್‌ ತಿಂಗಳಲ್ಲಿ ಸಮ್ಮೇಳನ ಆಯೋಜಿಸಲು ತೀರ್ಮಾನಿಸಲಾಗಿತ್ತು. ಆದರೆ, ಚುನಾವಣಾ ನೀತಿ ಸಂಹಿತೆಯ ಹಿನ್ನೆಲೆ ಮುಂದೂಡಲಾಗಿತ್ತು. ಇದೀಗ ಡಿಸೆಂಬರ್‌ ತಿಂಗಳಲ್ಲಿ ಸಮ್ಮೇಳನ ನಡೆಸಲು ನಿರ್ಧರಿಸಲಾಗಿದೆ. ರಾಜ್ಯ, ಹೊರರಾಜ್ಯ ಹಾಗೂ ವಿದೇಶದ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಈ ಸಮ್ಮೇಳನದಲ್ಲಿ ಭಾಗವಹಿಸುವಂತೆ ಮನವಿ ಮಾಡುತ್ತೇವೆ” ಎಂದು ಹೇಳಿದರು.

“ಸರ್ಕಾರ ಜಿಲ್ಲಾಡಳಿತ, ಸಾಹಿತ್ಯ ಪರಿಷತ್ತಿಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು, ಸಾಹಿತ್ಯ ಸಮ್ಮೇಳನ ಅಧ್ಯಕ್ಷರ ಆಯ್ಕೆಯಾದ ಕೂಡಲೇ ಮಾಹಿತಿ ನೀಡಲಾಗುವುದು. ಜಿಲ್ಲಾಡಳಿತ, ಸಾಹಿತ್ಯ ಪರಿಷತ್ತಿನವರು ಸಾಹಿತಿಗಳ ಪಟ್ಟಿ ಒದಗಿಸಿದ ನಂತರ ಸರ್ಕಾರದೊಂದಿಗೆ ಚರ್ಚಿಸಿ ಅಂತಿಮಗೊಳಿಸಲು ತೀರ್ಮಾನಿಸಲಾಗಿದೆ” ಎಂದರು.

“ಮಂಡ್ಯದಲ್ಲಿ 48ನೇ ಸಾಹಿತ್ಯ ಸಮ್ಮೇಳನ 1974 ರಲ್ಲಿ ಜಯದೇವಿ ತಾಯಿ ಲಿಗಾಡೆ ಅವರ ಅಧ್ಯಕ್ಷತೆಯಲ್ಲಿ, 63ನೇ ಸಾಹಿತ್ಯ ಸಮ್ಮೇಳನ 1994 ರಲ್ಲಿ ಡಾ. ಚದುರಂಗ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿತ್ತು. ಇದೀಗ ಮೂರನೇ ಬಾರಿ ಸಮ್ಮೇಳನ ಆಯೋಜಿಸಲಾಗುತ್ತಿದೆ. ಎಲ್ಲರೂ ಸೇರಿ ಸಮ್ಮೇಳನವನ್ನು ಯಶಸ್ವಿಯಾಗಿ ಅಯೋಜಿಸೋಣ. ಆ ವಿಶ್ವಾಸ ನನಗಿದೆ” ಎಂದು ತಿಳಿಸಿದರು.

ಹಾಲಿನ ದರ ಏರಿಕೆ ಕೆಎಂಎಫ್‌ ನಿರ್ಧಾರ: ಸಿಎಂ

“ಹಾಲಿನ ದರ ಏರಿಕೆ ಕುರಿತು ಯಾವುದೇ ಮಾಹಿತಿ ಇಲ್ಲ. ದರ ಏರಿಕೆ ಕುರಿತು ಕೆಎಂಎಫ್ ತೀರ್ಮಾನಿಸುತ್ತದೆ. ನೆರೆಯ ರಾಜ್ಯಗಳ ದರಕ್ಕೆ ಅನುಗುಣವಾಗಿ ಏರಿಕೆ ಮಾಡಲು ತೀರ್ಮಾನಿಸಿರಬಹುದು. ಈ ಬಗ್ಗೆ ಕೂಡಲೇ ಮಾಹಿತಿ ಪಡೆಯುವೆ” ಎಂದು ಪ್ರಶ್ನೆಯೊಂದಕ್ಕೆ ಸಿಎಂ ಉತ್ತರಿಸಿದರು.

ಸಭೆಯಲ್ಲಿ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ, ಮಂಡ್ಯ ಜಿಲ್ಲೆಯ ಶಾಸಕರು, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ಕೆ. ಗೋವಿಂದರಾಜು, ನಸೀರ್‌ ಅಹ್ಮದ್‌, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಮಹೇಶ್‌ ಜೋಷಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಅಜಯ್‌ ನಾಗಭೂಷಣ್‌ ಮತ್ತು ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ : ಸಿಎಂ ಭೇಟಿಯಾದ ರೇಣುಕಸ್ವಾಮಿ ಪೋಷಕರು; ಮೃತನ ಪತ್ನಿಗೆ ಕೆಲಸ ಕೊಡಿಸುವಂತೆ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...