Homeಕರ್ನಾಟಕಮಂಡ್ಯ | 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ

ಮಂಡ್ಯ | 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ

- Advertisement -
- Advertisement -

ಸಕ್ಕರೆ ನಗರಿ ಮಂಡ್ಯದಲ್ಲಿ ಮೂರು ದಿನಗಳ (ಡಿ. 20,21,22) ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು (ಡಿ.20) ಉದ್ಘಾಟಿಸಿದರು.

ಆದಿ ಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮಿ, ಸಮ್ಮೇಳನಾಧ್ಯಕ್ಷ ನಾಡೋಜ ಡಾ. ಗೊ.ರು.ಚನ್ನಬಸಪ್ಪ, ಹಿರಿಯ ಸಾಹಿತಿ ಡಾ.ದೊಡ್ಡರಂಗೇಗೌಡ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಡಾ.ಚಂದ್ರ ಶೇಖರ ಕಂಬಾರ ಉದ್ಘಾಟನಾ ಸಮಾರಂಭದ ವೇದಿಕೆ ಮೇಲೆ ಇದ್ದರು.

ಕೃಷಿ ಸಚಿವ ಚೆಲುವರಾಯಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಹೆ.ಚ್.ಸಿ ಮಹದೇವಪ್ಪ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್‌ ಮುನಿಯಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ವಿಧಾನಸಭೆಯ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ, ಶಾಸಕರಾದ ಪಿ.ಎಂ.ನರೇಂದ್ರ ಸ್ವಾಮಿ, ಪಿ.ರವಿಕುಮಾರ್, ಎಂ.ಬಿ‌.ರಮೇಶ್ ಬಂಡಿ ಸಿದ್ದೇಗೌಡ, ದರ್ಶನ್ ಪುಟ್ಟಣ್ಣಯ್ಯ, ಕೆ.ಎಂ.ಉದಯ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

ಅಕ್ಷರ ಜಾತ್ರೆಗೆ ಹರಿದು ಬಂದ ಜನಸಾಗರ

ಸಾಹಿತ್ಯ ಸಮ್ಮೇಳನಕ್ಕೆ  ಮೊದಲ ದಿನವೇ ನಿರೀಕ್ಷೆಗೂ ಮೀರಿ ಜನ ಸಾಗರ ಹರಿದು ಬಂತು. ಬೆಳಿಗ್ಗೆ 8 ಗಂಟೆಯಿಂದಲೇ ಸ್ಥಳೀಯ ನಾಗರಿಕರು, ಮಹಿಳೆಯರು, ವಿದ್ಯಾರ್ಥಿಗಳು ಸಮ್ಮೇಳನ ಕಣ್ಮನ ತುಂಬಿಕೊಳ್ಳಲು ತಂಡೋಪ ತಂಡವಾಗಿ ಆಗಮಿಸಿದರು. ಮಂಡ್ಯ ನಗರ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣದ ವ್ಯವಸ್ಥೆ ಕಲ್ಪಿಸಿರುರುವದೂ ಜನರ ಓಡಾಟಕ್ಕೆ ಸಹಕಾರಿಯಾಯಿತು. ಇನ್ನು ರಾಜ್ಯದ ನಾನಾ ಜಿಲ್ಲೆಗಳಿಂದ ಕನ್ನಡಾಭಿಮಾನಿಗಳು, ಸಾಹಿತಿಗಳು, ಸಾಹಿತ್ಯಾಸಕ್ತರು ಗುರುವಾರವೇ ನಗರಕ್ಕೆ ಆಗಮಿಸಿದ್ದಾರೆ.

ಬಿಗಿ ಭದ್ರತೆ : ಸಾಹಿತ್ಯ ಸಮ್ಮೇಳನಕ್ಕೆ ಹೆಚ್ಚಿನ ಜನ ಸೇರುವ ಕಾರಣ ಯಾವುದೇ ಅಹಿತರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಮಂಡ್ಯ ಜಿಲ್ಲಾ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಿದೆ. ಒಟ್ಟು 3,200 ಪೊಲೀಸ್ ಸಿಬ್ಬಂದಿಯನ್ನು ಸಾಹಿತ್ಯ ಸಮ್ಮೇಳನಕ್ಕೆ ನಿಯೋಜಿಸಲಾಗಿದೆ.

ಶಾಲಾ- ಕಾಲೇಜುಗಳಿಗೆ ರಜೆ : ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಹಿನ್ನೆಲೆ ಮಂಡ್ಯ ನಗರ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು, ಶಿಕ್ಷಕರು, ಉಪನ್ಯಾಸಕರು ಸಾಹಿತ್ಯ ಸಮ್ಮೇಳನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.

ಇದನ್ನೂ ಓದಿ : ಮಂಡ್ಯ | ಧ್ವಜಾರೋಹಣದ ಮೂಲಕ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...