Homeಕರ್ನಾಟಕ88 ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲು ; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ :...

88 ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲು ; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ : ಸಿಎಂ ಸಿದ್ದರಾಮಯ್ಯ

- Advertisement -
- Advertisement -


ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಶನಿವಾರ (ಜ.17) ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನ ಉದ್ಘಾಟಿಸಿದ ನಂತರ ಮಾಧ್ಯಮ ಗೋಷ್ಠಿಯಲ್ಲಿ ಅವರು ಮಾತನಾಡಿದರು.

ಪೋಲೀಸ್ ಇಲಾಖೆ ಕೆಲವು ಠಾಣೆಗಳಲ್ಲಿ ಉತ್ತಮವಾಗಿ ಕೆಲಸ ಮಾಡುತ್ತಿದ್ದು, ಇನ್ನು ಕೆಲವೆಡೆ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಸುಮಾರು 88 ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲಾಗಿದ್ದಾರೆ. ಬೇಲಿಯೇ ಎದ್ದು ಹೊಲ ಮೇಯ್ದಂತೆ ಆಗಿರುವುದು ಅಕ್ಷಮ್ಯ ಅಪರಾಧ. ರಾಜ್ಯ ಸರ್ಕಾರ ಮಾತ್ರವಲ್ಲದೆ, ಪೋಲೀಸ್ ಇಲಾಖೆಗೆ ಕೆಟ್ಟ ಹೆಸರು ತರುವಂಥ ಕೆಲಸವಿದು ಎಂದರು.

2003ರಿಂದ ರಾಜ್ಯದಲ್ಲಿ ಅಪರಾಧಗಳ ಸಂಖ್ಯೆ ಕಡಿಮೆಯಾಗುತ್ತಿದೆ. ರಾಯಚೂರು ಜಿಲ್ಲೆಯ ಕವಿತಾಳ ಪೊಲೀಸ್ ಠಾಣೆ ದೇಶದಲ್ಲಿಯೇ ಉತ್ತಮ ಪೋಲೀಸ್ ಠಾಣೆಗಳ ಸಾಲಿನಲ್ಲಿ ಮೂರನೇ ಸ್ಥಾನ ಪಡೆದಿದೆ ಎಂದು ಹೇಳಿದರು.

ಪೊಲೀಸರು ಜಾಗರೂಕತೆಯಿಂದ ಕೆಲಸ ಮಾಡಬೇಕು

ಪೋಲೀಸ್ ಸಬ್ ಇನ್‌ಸ್ಪೆಕ್ಟರ್, ಎಎಸ್‌ಪಿ, ಡಿವೈಎಸ್‌ಪಿ, ಎಸಿಪಿ ಇವರಿಗೆ ಗೊತ್ತಿಲ್ಲದೆ ಯಾವ ಅಪರಾಧವೂ ನಡೆಯಲು ಸಾಧ್ಯವಿಲ್ಲ. ಪೊಲೀಸರು ಜಾಗರೂಕತೆಯಿಂದ ಕೆಲಸ ಮಾಡಬೇಕು. ವಿಶೇಷವಾಗಿ ದುರ್ಬಲರಿಗೆ ರಕ್ಷಣೆ ನೀಡಬೇಕು. ಬಲಾಢ್ಯರ ಕೈಗೊಂಬೆಗಳಂತೆ ಕೆಲಸ ಮಾಡಬಾರದು.

ಪೊಲೀಸರು ಜಾಗರೂಕತೆಯಿಂದ, ದಕ್ಷತೆಯಿಂದ ಕೆಲಸ ಮಾಡಿದರೆ ರಾಜ್ಯವನ್ನು ಮಾದಕವಸ್ತು ಮುಕ್ತವನ್ನಾಗಿಸಬಹುದು

ಕಳ್ಳತನ, ಸುಲಿಗೆ, ದರೋಡೆ, ಕೊಲೆ ಮುಂತಾದ ಪ್ರಕರಣಗಳು ಕಡಿಮೆಯಾಗುತ್ತಿದ್ದರೂ, ಸೈಬರ್ ಅಪರಾಧ ಹಾಗೂ ಡ್ರಗ್ಸ್ ಅಪರಾಧಗಳು ಕಡಿಮೆಯಾಗುತ್ತಿಲ್ಲ. ಯುವಜನರು ಇದರಿಂದ ಹಾಳಾಗುತ್ತಿದ್ದು, ಕರ್ನಾಟಕವನ್ನು ಮಾದಕವಸ್ತು ಮುಕ್ತ ರಾಜ್ಯವಾಗಿಸಬೇಕೆಂದು ಸರ್ಕಾರ ಘೋಷಣೆ ಮಾಡಿದೆ. ಪೊಲೀಸರು ಜಾಗರೂಕತೆಯಿಂದ, ದಕ್ಷತೆಯಿಂದ ಕೆಲಸ ಮಾಡಿದರೆ ರಾಜ್ಯವನ್ನು ಮಾದಕವಸ್ತು ಮುಕ್ತವನ್ನಾಗಿಸಬಹುದು. ಜೊತೆಗೆ ಯುವಜನರನ್ನೂ ರಕ್ಷಿಸಬಹುದು ಎಂದರು.

ಡ್ರಗ್ಸ್ ದಂಧೆ ಮಾಡುವ ವಿದೇಶಿಯರನ್ನು ಮುಲಾಜಿಲ್ಲದೆ ಅವರ ದೇಶಕ್ಕೆ ಕಳುಹಿಸಬೇಕು. ರಾಜ್ಯವನ್ನು ಮಾದಕವಸ್ತು ಮುಕ್ತ ಮಾಡಬೇಕಾದರೆ ಡ್ರಗ್ಸ್ ಮಾರಾಟ ಮಾಡುವವರನ್ನು ವಿಚಾರಣೆ ಮಾಡಿದರೆ ಅಥವಾ ಮಾದಕ ವಸ್ತು ವ್ಯಸನಿಗಳನ್ನು ವಿಚಾರಿಸಿದರೆ ಡ್ರಗ್ಸ್ ಜಾಲವನ್ನು ಪತ್ತೆ ಹಚ್ಚಬಹುದು. ಸರಬರಾಜು ಮಾಡುವವರನ್ನು ವಿಚಾರಣೆಗೆ ಗುರಿಪಡಿಸಿದರೆ, ಉತ್ಪಾದಕರು ಹಾಗೂ ಸರಬರಾಜುದಾರರು ಯಾರು ಎಂದು ತಿಳಿಯುತ್ತದೆ. ಎಲ್ಲ ಪೊಲೀಸ್ ಠಾಣೆಗಳಲ್ಲಿ ಈ ಕೆಲಸವನ್ನು ತಕ್ಷಣದಿಂದಲೇ ಮಾಡಬೇಕು. ವಿದೇಶಿಯರು ಜಾಮೀನಿನ ಮೇಲೆ ಬಿಡುಗಡೆಯಾಗಿ ಇಲ್ಲೇ ಉಳಿದರೆ ಪುನಃ ಅದೇ ಅಪರಾಧದಲ್ಲಿ ತೊಡಗುವ ಸಾಧ್ಯತೆಗಳು ಹೆಚ್ಚು. ಆದ್ದರಿಂದ ವಿದೇಶಿಯರನ್ನು ಯಾವುದೇ ಮುಲಾಜಿಲ್ಲದೆ ಅವರ ದೇಶಕ್ಕೆ ಕಳುಹಿಸಬೇಕು ಎಂಬುವುದಾಗಿ ಸೂಚಿಸಲಾಗಿದೆ ಎಂದು ಸಿಎಂ ಹೇಳಿದರು.

ಪೋಲೀಸ್ ಠಾಣೆಗಳ ಮೇಲೆ ಮೇಲಾಧಿಕಾರಿಗಳು ನಿಗಾ ಇಡಬೇಕು

ಪೋಲೀಸ್ ಠಾಣೆಗಳಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಹಾಗೂ ಪೊಲೀಸ್ ಸಬ್‌ ಇನ್‌ಸ್ಪೆಕ್ಟರ್, ಡಿವೈಎಸ್‌ಪಿಗಳ ಮೇಲೆ ಮೇಲಾಧಿಕಾರಿಗಳು ನಿಗಾ ಇಡಲು ಸೂಚಿಸಲಾಗಿದೆ. ಅಪರಾಧಗಳಲ್ಲಿ ಅವರು ಶಾಮೀಲಾಗಬಾರದು ಎಂದರು.

ಡ್ರಗ್ಸ್ ಪತ್ತೆ ಹಚ್ಚುವಲ್ಲಿ ವಿಫಲರಾದ ಪೊಲೀಸರ ಮೇಲೆ ಕ್ರಮಕ್ಕೆ ಸೂಚನೆ

ಮಹಾರಾಷ್ಟ್ರದ ಪೊಲೀಸರಿಗೆ ಬೆಂಗಳೂರಿಗೆ ಬಂದು ಡ್ರಗ್ಸ್ ಪತ್ತೆಹಚ್ಚಲು ಸಾಧ್ಯವಾದರೆ, ರಾಜ್ಯದ ಪೊಲೀಸರು ಏಕೆ ಮಾಡಬಾರದು? ರಾಜ್ಯದ ಪೊಲೀಸರು ಇದನ್ನು ಪತ್ತೆ ಹಚ್ಚುವಲ್ಲಿ ವಿಫಲರಾಗಿದ್ದು, ಸಂಬಂಧಪಟ್ಟ ಪೊಲೀಸರ ಮೇಲೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಸಿಎಂ ತಿಳಿಸಿದರು.

ಸೈಬರ್ ಅಪರಾಧ ಮತ್ತು ಮಾದಕವಸ್ತು ನಿಯಂತ್ರಣಕ್ಕೆ ಕಾನೂನನ್ನು ಇನ್ನಷ್ಟು ಬಿಗಿಗೊಳಿಸಬೇಕಾಗುತ್ತದೆ.
ಹೊಸ ಕಾನೂನು ಅಥವಾ ತಿದ್ದುಪಡಿಯನ್ನು ಮುಂಬರುವ ದಿನಗಳಲ್ಲಿ ಮಾಡಬೇಕಾಗುತ್ತದೆ ಎಂದರು.

ಐಪಿಎಲ್ ಕುರಿತಂತೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಡಿ ಮೈಕಲ್ ಕುನ್ಹಾ ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿ, ಅವರ ಶಿಫಾರಸ್ಸುಗಳನ್ನು ಪಾಲಿಸಲು ಗೃಹ ಸಚಿವರ ಅಧ್ಯಕ್ಷತೆಯಲ್ಲಿ ಉಪ ಸಮಿತಿ ರಚಿಸಲಾಗಿದೆ. ಅಲ್ಪಾವಧಿ ಶಿಫಾರಸ್ಸುಗಳನ್ನು ಕೂಡಲೆ ಜಾರಿಗೆ ತರಬೇಕು ಹಾಗೂ ದೀರ್ಘಾವಧಿಯಲ್ಲಿ ಉಳಿದವನ್ನು ಪಾಲಿಸಬೇಕಿದೆ. ಶಿಫಾರಸುಗಳನ್ನು ಜಾರಿ ಮಾಡಲೇಬೇಕು ಎಂದರು.

ಬಳ್ಳಾರಿ ಘಟನೆ: ತನಿಖಾ ವರದಿ ಬಂದ ನಂತರ ತಪಿತಸ್ಥರ ಮೇಲೆ ಕ್ರಮ

ಬಳ್ಳಾರಿ ಘಟನೆಗೆ ಸಂಬಂಧಿಸಿದಂತೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಿಎಂ, ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಬಳ್ಳಾರಿ ಸೂಕ್ಷ್ಮ ಪ್ರದೇಶವಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸ್ಥಳದಲ್ಲಿ ಇರಲಿಲ್ಲ ಎಂಬ ಕಾರಣಕ್ಕೆ ಅಮಾನತು ಮಾಡಲಾಗಿದೆ. ತನಿಖಾ ವರದಿ ಬಂದ ನಂತರ ತಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದರು.

ರಾಜೀವ್ ಗೌಡರನ್ನು ಬಂಧಿಸಲಾಗುವುದು

ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಶಿಡ್ಲಘಟ್ಟದ ಪೌರಾಯುಕ್ತರನ್ನು ನಿಂದಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಿಎಂ, ಅವರು ತಲೆಮರೆಸಿಕೊಂಡಿದ್ದು, ಬಂಧಿಸಲಾಗುವುದು. ಅವರ ಮೇಲೆ ಕಾನೂನಿನ ಪ್ರಕಾರ ಕ್ರಮಕೈಗೊಳ್ಳಲು ಸೂಚಿಸಲಾಗಿದೆ. ಯಾವುದೇ ಪಕ್ಷದವರಾಗಲಿ ಕಾನೂನಿಗಿಂತ ಯಾರೂ ಮೇಲಲ್ಲ ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣದಲ್ಲಿ ರೋಹಿತ್ ವೇಮುಲಾ ಕಾಯ್ದೆ ಜಾರಿಗೊಳಿಸುತ್ತೇವೆ: ಭಟ್ಟಿ ವಿಕ್ರಮಾರ್ಕ ಮಲ್ಲು

ರಾಜ್ಯದಲ್ಲಿ ರೋಹಿತ್ ವೇಮುಲಾ ಕಾಯ್ದೆಯನ್ನು ಆದಷ್ಟು ಬೇಗ ಜಾರಿಗೆ ತರಲಾಗುವುದು ಎಂದು ತೆಲಂಗಾಣ ಉಪಮುಖ್ಯಮಂತ್ರಿ ಭಟ್ಟಿ ವಿಕ್ರಮಾರ್ಕ ಮಲ್ಲು ಶನಿವಾರ ಹೇಳಿದ್ದಾರೆ. ಪ್ರಜಾ ಭವನದಲ್ಲಿ ಜಸ್ಟೀಸ್ ಫಾರ್ ರೋಹಿತ್ ವೇಮುಲಾ ಅಭಿಯಾನ ಸಮಿತಿಯ...

ಇಂದೋರ್ ಕಲುಷಿತ ನೀರು ದುರಂತ : ಸಂತ್ರಸ್ತ ಕುಟುಂಬಗಳನ್ನು ಭೇಟಿಯಾದ ರಾಹುಲ್ ಗಾಂಧಿ

ಶನಿವಾರ (ಜ.17) ಮಧ್ಯಪ್ರದೇಶದ ಇಂದೋರ್‌ಗೆ ಭೇಟಿ ನೀಡಿದ ಲೋಕಸಭೆಯ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ, ಇತ್ತೀಚೆಗೆ ಸಂಭವಿಸಿದ ಕಲುಷಿತ ನೀರು ದುರಂತದ ಸಂತ್ರಸ್ತರನ್ನು ಭೇಟಿಯಾದರು. ಕಲುಷಿತ ನೀರು ಕುಡಿದು ವಾಂತಿ ಮತ್ತು...

ಮಹಾರಾಷ್ಟ್ರದಲ್ಲಿ ಬಿಜೆಪಿ-ಎನ್‌ಡಿಎ ಜೊತೆ ಯಾವುದೇ ಮೈತ್ರಿ ಇಲ್ಲ: ಓವೈಸಿ

ಮಹಾರಾಷ್ಟ್ರದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಅಥವಾ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಜೊತೆ ಯಾವುದೇ ಮೈತ್ರಿ ಇರುವುದಿಲ್ಲ ಎಂದು ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. ಭಾರತದ ಅತ್ಯಂತ ಶ್ರೀಮಂತ ರಾಜ್ಯವಾದ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ...

ರೋಹಿತ್ ವೇಮುಲ ಕಾಯ್ದೆ ಘೋಷಣೆಯಲ್ಲ, ಅಗತ್ಯ : ರಾಹುಲ್ ಗಾಂಧಿ

ಹೈದರಾಬಾದ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ರೋಹಿತ್ ವೇಮುಲ ಜಾತಿ ತಾರತಮ್ಯಕ್ಕೆ ಬಲಿಯಾಗಿ ಇಂದಿಗೆ (17 ಜನವರಿ 2026) 10 ವರ್ಷಗಳಾಗಿದ್ದು, ಲೋಕಸಭೆಯ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ರೋಹಿತ್ ಅವರನ್ನು ಸ್ಮರಿಸಿ ಸಾಮಾಜಿಕ...

ದೇವರು-ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ; ಬಿಜೆಪಿ ಕೌನ್ಸಿಲರ್‌ಗಳಿಗೆ ಕೇರಳ ಹೈಕೋರ್ಟ್ ನೋಟಿಸ್

ತಿರುವನಂತಪುರಂ ನಗರಸಭೆಯ ಬಿಜೆಪಿ ಕೌನ್ಸಿಲರ್‌ಗಳು ವಿವಿಧ ದೇವರು, ಹುತಾತ್ಮರು ಮತ್ತು ರಾಜಕೀಯ ಚಳುವಳಿಗಳ ಹೆಸರಿನಲ್ಲಿ ಮಾಡಿದ ಪ್ರಮಾಣವಚನಗಳ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ರಿಟ್ ಅರ್ಜಿಯ ಕುರಿತು ಕೇರಳ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ...

ಮಧ್ಯಪ್ರದೇಶ: ಬುಡಕಟ್ಟು ವಿಶ್ವವಿದ್ಯಾಲಯ ಹಾಸ್ಟೆಲ್ ಒಳಗೆ ಅಸ್ಸಾಮಿ ವಿದ್ಯಾರ್ಥಿ ಮೇಲೆ ಗುಂಪು ಹಲ್ಲೆ

ಮಧ್ಯಪ್ರದೇಶದ ಇಂದಿರಾ ಗಾಂಧಿ ರಾಷ್ಟ್ರೀಯ ಬುಡಕಟ್ಟು ವಿಶ್ವವಿದ್ಯಾಲಯದ ಹಾಸ್ಟೆಲ್ ಕೋಣೆಯೊಳಗೆ ಐದು ಜನ ವಿದ್ಯಾರ್ಥಿಗಳ ತಂಡವು ಅಸ್ಸಾಮಿ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ. ಗುಂಪು ಆತನಿಗೆ ಇಲ್ಲಿಯೇ ಸಾಯಬೇಕು ಎಂದು...

ಮಹಿಳೆಯರ ಜೊತೆ ಪುರುಷರಿಗೂ ಉಚಿತ ಬಸ್‌ ಪ್ರಯಾಣ, ಗ್ರಾಮೀಣರಿಗೆ 150 ಕೂಲಿ ದಿನ : ಎಐಎಡಿಎಂಕೆ ಚುನಾವಣಾ ಭರವಸೆ

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಶನಿವಾರ (ಜ.17) ಪಕ್ಷದ ಮೊದಲ ಹಂತದ ಪ್ರಣಾಳಿಕೆ (ಚುನಾವಣಾ ಭರವಸೆ) ಬಿಡುಗಡೆ ಮಾಡಿದ್ದಾರೆ. ಕರ್ನಾಟಕದ ಗೃಹಲಕ್ಷ್ಮಿ ಯೋಜನೆಯಂತೆ ಎಲ್ಲಾ ಪಡಿತರ...

ಛತ್ತೀಸ್‌ಗಢ| ಬಿಜಾಪುರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲರು ಸಾವು

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಗಳೊಂದಿಗಿನ ಎನ್‌ಕೌಂಟರ್‌ನಲ್ಲಿ ಕನಿಷ್ಠ ಇಬ್ಬರು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲೆಯ ವಾಯುವ್ಯ ಪ್ರದೇಶದ ಅರಣ್ಯ ಬೆಟ್ಟಗಳಲ್ಲಿ ಶನಿವಾರ ಬೆಳಿಗ್ಗೆ ಗುಂಡಿನ ಚಕಮಕಿ ನಡೆಯಿತು. ಹಿರಿಯ...

ಮಮತಾ ಬ್ಯಾನರ್ಜಿ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಸುವೇಂದು ಅಧಿಕಾರಿ

ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಶುಕ್ರವಾರ (ಜ.16) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ 100 ಕೋಟಿ ರೂ.ಗಳ ಪರಿಹಾರ ಕೋರಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಮಮತಾ...

ಕೋಮುವಾದ ಕಾರಣಕ್ಕೆ ಬಾಲಿವುಡ್‌ನಲ್ಲಿ ಅವಕಾಶ ಕಡಿಮೆ; ರೆಹಮಾನ್ ಹೇಳಿಕೆ ತಳ್ಳಿಹಾಕಿದ ಜಾವೇದ್ ಅಖ್ತರ್

ಯಶಸ್ವೀ ಸಂಗೀತಗಾರನಾಗಿ ಹಲವು ಕೊಡುಗೆ ನೀಡಿದ್ದರೂ ಕೆಲವರಿಗೆ ಹೊರಗಿನವನು ಎಂಬ ಭಾವನೆ ಹೋಗಿಲ್ಲ. ಕಳೆದ ಎಂಟು ವರ್ಷಗಳಲ್ಲಿ ಬಾಲಿವುಡ್‌ನ ಕದ ಮುಚ್ಚಿದೆ ಎಂಬ ಬಗ್ಗೆ ಎ.ಆರ್. ರೆಹಮಾನ್ ಹೇಳಿಕೆಯನ್ನು ಹಿರಿಯ ಗೀತೆ ರಚನೆಕಾರ...