Homeಮುಖಪುಟಬಿಜೆಪಿ ಖಾತೆ ತೆರೆಯಲು ವಿಫಲವಾದ 9 ಜಿಲ್ಲೆಗಳಿವು

ಬಿಜೆಪಿ ಖಾತೆ ತೆರೆಯಲು ವಿಫಲವಾದ 9 ಜಿಲ್ಲೆಗಳಿವು

- Advertisement -
- Advertisement -

2023ರ ಜನಾದೇಶ ಪ್ರಕಟಗೊಂಡಿದ್ದು ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ಲಭಿಸಿದೆ. ಆಡಳಿತರೂಢ ಬಿಜೆಪಿ ನೆಲಕಚ್ಚಿದೆ. ಭಾರೀ ಬಹುಮತದ ಕನಸು ಕಾಣುತ್ತಿದ್ದ ಬಿಜೆಪಿ ಪಕ್ಷ 9 ಜಿಲ್ಲೆಗಳಲ್ಲಿ ಒಂದೂ ಸ್ಥಾನ ಪಡೆಯಲು ವಿಫಲವಾಗಿದೆ. ಅಂತಹ ಜಿಲ್ಲೆಗಳ ಮಾಹಿತಿ ಇಲ್ಲಿದೆ.

ಕೊಡಗು

ಎರಡು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಕೊಡಗು ಜಿಲ್ಲೆಯ ಬಿಜೆಪಿಯ ಭದ್ರನೆಲೆಯಾಗಿತ್ತು. ಸತತವಾಗಿ ಗೆಲ್ಲುತ್ತಿದ್ದ ಬಿಜೆಪಿ ಬ್ರೇಕ್ ಹಾಕಿದ ಕಾಂಗ್ರೆಸ್ ಎರಡೂ ಕ್ಷೇತ್ರಗಳನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ.

ಚಾಮರಾಜನಗರ

ನಾಲ್ಕು ವಿಧಾನಸಭಾ ಕ್ಷೇತ್ರಗಳಿರುವ ಚಾಮರಾಜನಗರದಲ್ಲಿ ಬಿಜೆಪಿ ಗೆಲುವು ಕಂಡಿತ್ತು. ಆದರೆ ಈ ಬಾರಿ ಸಚಿವ ವಿ.ಸೋಮಣ್ಣ ಸ್ಪರ್ಧಿಸಿದರೂ ಸಹ ಬಿಜೆಪಿಗೆ ಗೆಲ್ಲಲಾಗಲಿಲ್ಲ. ಮೂರು ಕಡೆ ಕಾಂಗ್ರೆಸ್ ಮತ್ತು ಒಂದು ಕಡೆ ಜೆಡಿಎಸ್ ವಿಜಯ ಪತಾಕೆ ಹಾರಿಸಿವೆ.

ಮಂಡ್ಯ

ಮಂಡ್ಯದಲ್ಲಿ ಬಿಜೆಪಿ ಖಾತೆ ತೆರೆಯಲು ಸಾಧ್ಯವಾಗಿರಲಿಲ್ಲ. ಆದರೆ 2019ರಲ್ಲಿ ಆಪರೇಷನ್ ಕಮಲ ನಡೆಸಿ ಜೆಡಿಎಸ್‌ನ ನಾರಾಯಣಗೌಡರನ್ನು ಬಿಜೆಪಿ ಸೆಳೆದುಕೊಂಡು ಉಪ ಚುನಾವಣೆಯಲ್ಲಿ ಗೆಲ್ಲಿಸಿಕೊಳ್ಳಲಾಗಿತ್ತು. ಆದರೆ ಈಗ ಅವರು ಮೂರನೇ ಸ್ಥಾನಕ್ಕೆ ಕುಸಿದು ಹೀನಾಯ ಸೋಲು ಕಂಡರು. ಅಲ್ಲಿ ಜೆಡಿಎಸ್ ಅಭ್ಯರ್ಥಿ ಎಚ್.ಟಿ ಮಂಜು ಜಯ ಗಳಿಸಿದರು. ಮಂಡ್ಯ ಜಿಲ್ಲೆಯಲ್ಲಿ 5 ಕಡೆ ಕಾಂಗ್ರೆಸ್, ಒಂದು ಕಡೆ ಸರ್ವೋದಯ ಕರ್ನಾಟಕ ಮತ್ತು ಒಂದು ಕಡೆ ಜೆಡಿಎಸ್ ಗೆದ್ದಿದೆ. ಬಿಜೆಪಿ ಶೂನ್ಯ ಸಾಧನೆ ಮಾಡಿದೆ.

ರಾಮನಗರ

ನಾಲ್ಕು ವಿಧಾನಸಭಾ ಕ್ಷೇತ್ರಗಳ ರಾಮನಗರದಲ್ಲಿ ಚನ್ನಪಟ್ಟಣದಲ್ಲಿ ಮಾತ್ರ ಬಿಜೆಪಿಯ ಪ್ರಬಲ ಸ್ಪರ್ಧೆ ಇತ್ತು. ಅಲ್ಲಿಯೂ ಸಿ.ಪಿ ಯೋಗೀಶ್ವರ್ ಎಚ್‌ಡಿಕೆ ಎದುರು ಸೋತರು. ಉಳಿದ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ.

ಕೋಲಾರ

ಆರು ವಿಧಾನಸಭಾ ಕ್ಷೇತ್ರಗಳ ಕೋಲಾರದಲ್ಲಿ ಎರಡು ಕಡೆ ಜೆಡಿಎಸ್ ಗೆಲುವು ಕಂಡರೆ ಉಳಿದ ನಾಲ್ಕು ಕಡೆ ಕಾಂಗ್ರೆಸ್ ಗೆಲುವು ಸಾಧಿಸಿದೆ.

ಚಿಕ್ಕಬಳ್ಳಾಪುರ

ಆರೋಗ್ಯ ಸಚಿವರಾಗಿದ್ದ ಡಾ.ಕೆ ಸುಧಾಕರ್ ಸೋಲಿನೊಂದಿಗೆ ಜಿಲ್ಲೆಯಲ್ಲಿ ಇದ್ದ ಏಕೈಕ ಬಿಜೆಪಿ ಖಾತೆ ಕ್ಲೋಸ್ ಆಗಿದೆ. ಐದು ಕ್ಷೇತ್ರಗಳಲ್ಲಿ ಮೂರು ಕಾಂಗ್ರೆಸ್, ಒಂದು ಜೆಡಿಎಸ್ ಮತ್ತು ಒಂದು ಕಡೆ ಪಕ್ಷೇತರ ಅಭ್ಯರ್ಥಿ ಗೆಲುವಿನ ನಗೆ ಬೀರಿದ್ದಾರೆ.

ಚಿಕ್ಕಮಗಳೂರು

ಬಿಜೆಪಿ ಭದ್ರಕೋಟೆ ಚಿಕ್ಕಮಗಳೂರು ಛಿದ್ರವಾಗಿದೆ. 5ಕ್ಕೆ 5 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಸಿ.ಟಿ ರವಿ ಸೋಲುಂಡಿದ್ದಾರೆ.

ಬಳ್ಳಾರಿ

ಹಳೆಯ ಕಾಂಗ್ರೆಸ್ ನೆಲೆ ಬಳ್ಳಾರಿ ಮತ್ತೆ ಕೈ ವಶವಾಗಿದೆ. 5ಕ್ಕೆ 5 ಕ್ಷೇತ್ರಗಳಲ್ಲಿ ಕಾಂಗ್ರೆಸ್ ವಿಜಯ ಪತಾಕೆ ಹಾರಿಸಿದೆ. ಬಿಜೆಪಿಯ ಬಿ.ಶ್ರೀರಾಮುಲು ಸೋಲುಂಡಿದ್ದಾರೆ.

ಯಾದಗಿರಿ

ನಾಲ್ಕು ವಿಧಾನಸಭಾ ಕ್ಷೇತ್ರಗಳ ಯಾದಗಿರಿಯಲ್ಲಿ ಒಂದು ಕಡೆ ಜೆಡಿಎಸ್ ಗೆಲುವು ಕಂಡರೆ ಉಳಿದ ಮೂರು ಕಡೆ ಕಾಂಗ್ರೆಸ್ ಗೆಲುವು ಸಾಧಿಸಿದೆ.

ಇದನ್ನೂ ಓದಿ: 2019ರಲ್ಲಿ ಆಪರೇಷನ್ ಕಮಲಕ್ಕೆ ಒಳಗಾಗಿದ್ದ ಕ್ಷೇತ್ರಗಳಲ್ಲಿನ ಫಲಿತಾಂಶ ಹೀಗಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...