Homeಕರ್ನಾಟಕಹಾಸನ| ಗಣೇಶ ಮೆರವಣಿಗೆ ವೇಳೆ ಅಪಘಾತದಲ್ಲಿ 9 ಮಂದಿ ಸಾವು: ತಲಾ 5 ಲಕ್ಷ ರೂ....

ಹಾಸನ| ಗಣೇಶ ಮೆರವಣಿಗೆ ವೇಳೆ ಅಪಘಾತದಲ್ಲಿ 9 ಮಂದಿ ಸಾವು: ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

- Advertisement -
- Advertisement -

ಹಾಸನ ತಾಲೂಕಿನ ಮೊಸಳೆ ಹೊಸಹಳ್ಳಿಯಲ್ಲಿ ಶುಕ್ರವಾರ (ಸೆ.12) ರಾತ್ರಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸೇರಿ 9 ಮಂದಿ ಸಾವಿಗೀಡಾಗಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮೃತರ ಕುಟುಂಬಸ್ಥರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದಿಂದ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಮೃತ ಮೂವರು ವಿದ್ಯಾರ್ಥಿಗಳು ಮೊಸಳೆ ಹೊಸಹಳ್ಳಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಧ್ಯಯನ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಮೃತರ ಮಾಹಿತಿಯನ್ನು ಸರ್ಕಾರ ಹಂಚಿಕೊಂಡಿದೆ.. 

ಮೊಸಳೆ ಹೊಸಹಳ್ಳಿಯ ರಾಷ್ಟ್ರೀಯ ಹೆದ್ದಾರಿ 373ರಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ಸಾಗುತ್ತಿದ್ದ ವೇಳೆ ನಿಯಂತ್ರಣ ಕಳೆದುಕೊಂಡು ನುಗ್ಗಿದ ಮಿನಿ ಕ್ಯಾಂಟರ್ ಜನಸಂದಣಿ ಮೇಲೆ ಹರಿದಿದೆ. ಇದರಿಂದ ದುರಂತ ಸಂಭವಿಸಿದೆ. ಹಾಸನದಿಂದ ಹೊಳೆನರಸೀಪುರದ ಕಡೆಗೆ ಹೊರಟಿದ್ದ ಕ್ಯಾಂಟರ್ ಚಾಲಕನಿಗೂ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕ್ಯಾಂಟರ್ ಲಾರಿ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದಾಗ ಬೈಕ್ ಅಡ್ಡ ಬಂದಿದೆ. ಅದನ್ನು ತಪ್ಪಿಸಲು ಚಾಲಕ ಯತ್ನಿಸಿದಾಗ ರಸ್ತೆ ವಿಭಜಕ ದಾಟಿದ ಕ್ಯಾಂಟರ್ ಮೆರವಣಿಗೆಯಲ್ಲಿ ಸಾಗುತ್ತಿದ್ದ ಜನರ ಗುಂಪಿನ ಮೇಲೆ ಹರಿದಿದೆ ಎಂದು ತಿಳಿದು ಬಂದಿದೆ.

ಗಂಭೀರ ಸ್ಥಿತಿಯಲ್ಲಿರುವ ಹಲವು ಗಾಯಾಳುಗಳನ್ನು ಹಾಸನದ ಹಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವರು ಹಾಸನದ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನಾ ಸ್ಥಳಕ್ಕೆ ಸಂಸದ ಶ್ರೇಯಸ್ ಪಟೇಲ್, ಶಾಸಕ ಎಚ್‌.ಡಿ ರೇವಣ್ಣ ಮತ್ತು ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಭೇಟಿ ನೀಡಿದ್ದಾರೆ. ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ.

“ರಾತ್ರಿ 8ರಿಂದ 8:45ರ ನಡುವೆ, ಮೊಸಳೆ ಹೊಸಳ್ಳಿಯಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆಯ ಮೇಲೆ ಕ್ಯಾಂಟರ್ ಲಾರಿಯೊಂದು ನುಗ್ಗಿದ್ದರಿಂದ ದುರ್ಘಟನೆ ಸಂಭವಿಸಿದೆ. ಈ ದುರಂತದಲ್ಲಿ 9 ಜನರು ಸಾವನ್ನಪ್ಪಿದ್ದು, ಕ್ಯಾಂಟರ್​ ಚಾಲಕ ಕೂಡ ಗಾಯಗೊಂಡಿದ್ದಾರೆ. 6 ಮಂದಿ ಗ್ರಾಮಸ್ಥರು ಮತ್ತು ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವಿಗೀಡಾಗಿದ್ದಾರೆ” ಎಂದು ದಕ್ಷಿಣ ವಲಯದ ಐಜಿಪಿ ಎಂ.ಬಿ ಬೋರಲಿಂಗಯ್ಯ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

“ಹಾಸನದಲ್ಲಿ ಗಣೇಶ ವಿಸರ್ಜನೆಗಾಗಿ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಲಾರಿ ಹರಿದು ಹಲವರು ಸಾವಿಗೀಡಾಗಿ, ಸುಮಾರು 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡ ಸುದ್ದಿ ತಿಳಿದು ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

“ಮೃತರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಇದು ಅತ್ಯಂತ ನೋವಿನ ಘಳಿಗೆ. ಅಪಘಾತ ಸಂತ್ರಸ್ತ ಕುಟುಂಬಗಳ ಜೊತೆ ನಾವೆಲ್ಲರೂ ನಿಲ್ಲೋಣ” ಎಂದಿದ್ದಾರೆ.

ಪ್ರತ್ಯೇಕ ಮೀಸಲಾತಿಗೆ ಆಗ್ರಹಿಸಿ ಅಲೆಮಾರಿಗಳಿಂದ ರಾಹುಲ್‌ಗೆ ‘ಅಂತಿಮ ಭರವಸೆ ಪತ್ರ’; ಗಾಂಧಿ ಜಯಂತಿಯಂದು ದೆಹಲಿ ಚಲೋ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...