Homeಕರೋನಾ ತಲ್ಲಣಕೊರೊನಾ ತಡೆಗೆ ಕ್ರಮ ಕೈಗೊಳ್ಳಲು ಕರ್ನಾಟಕ ಸೇರಿ 9 ರಾಜ್ಯಗಳಿಗೆ ಕೇಂದ್ರ ಸೂಚನೆ

ಕೊರೊನಾ ತಡೆಗೆ ಕ್ರಮ ಕೈಗೊಳ್ಳಲು ಕರ್ನಾಟಕ ಸೇರಿ 9 ರಾಜ್ಯಗಳಿಗೆ ಕೇಂದ್ರ ಸೂಚನೆ

ಎರಡು-ಮೂರು ದಿನಗಳ ಕಾಲ ಲಾಕ್‌ಡೌನ್ ಮಾಡುವುದರಿಂದ ಏನೂ ಪ್ರಯೋಜನ ಇಲ್ಲ ಕೊರೊನ ಸೋಂಕು ಹರಡುವುದನ್ನು ತಡೆಯಲು ಅದು ಪರಿಹಾರವೂ ಅಲ್ಲ ಎಂಬುದನ್ನು ಆಯಾ ರಾಜ್ಯಗಳ ಮುಖ್ಯಕಾರ್ಯದರ್ಶಿಗಳು ಕೇಂದ್ರ ಸರ್ಕಾಕ್ಕೆ ತಿಳಿಸಿದ್ದಾರೆ.

- Advertisement -
- Advertisement -

ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕಂಟೈನ್ಮೆಂಟ್ ವಲಯಗಳಲ್ಲಿ ಕಣ್ಗಾವಲು ವಹಿಸುವಂತೆ ಕೇಂದ್ರ ಸರ್ಕಾರ ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳಿಗೆ ಸೂಚಿಸಿದೆ.

ನಿನ್ನೆ ಆಂದ್ರಪ್ರದೇಶ, ಬಿಹಾರ, ತೆಲಂಗಾಣ, ಒಢಿಶಾ, ಪಶ್ಚಿಮಬಂಗಾಳ, ಅಸ್ಸಾಂ, ಕರ್ನಾಟಕ, ಜಾರ್ಖಂಡ್ ಮತ್ತು ಉತ್ತರ ಪ್ರದೇಶದ ಸರ್ಕಾರಗಳ ಮುಖ್ಯಕಾರ್ಯದರ್ಶಿಗಳೊಂದಿಗೆ ಮೂರು ಗಂಟೆಗಳ ಕಾಲ ನಡೆಸಿದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಸೂಚಿಸಲಾಗಿದೆ ಎಂದು ಸರ್ಕಾರದ ಮೂಲಗಳನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

ಸಚಿವ ಸಂಪುಟದ ಕಾರ್ಯದರ್ಶಿಗಳು, ಆರೋಗ್ಯ ಸಚಿವಾಲಯದ ಕಾರ್ಯದರ್ಶಿಗಳು, ಸಚಿವಾಲಯದ ಹಿರಿಯ ಅಧಿಕಾರಿಗಳು, ರಾಷ್ಟ್ರೀಯ ಟ್ಯಾಸ್ಕ್ ಪೋರ್ಸ್ ಅಧಿಕಾರಿಗಳು ಸತತ ಮೂರು ಗಂಟೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಎಂಟು ರೀತಿಯ ನಿಬಂಧನಗೆಳನ್ನು ಪಾಲಿಸಬೇಕು ಎಂದು ರಾಜ್ಯಗಳಿಗೆ ಸೂಚಿಸಿದ್ದಾರೆ.

ಕೊರೊನಾ ಸೋಂಕು ಹರಡದಂತೆ ತಡೆಯಲು ಕ್ರಮ ಕೈಗೊಳ್ಳಬೇಕು. ಕೊವಿಡ್-19 ಮರಣ ಪ್ರಮಾಣವನ್ನು ತಡೆಯಬೇಕು. ಕೊರೊನಾ ಸೋಂಕು ಪಾಸಿಟೀವ್ ಕೇಸುಗಳು ಹೆಚ್ಚದಂತೆ ಮುಖ್ಯ ಕಾರ್ಯದರ್ಶಿಗಳು ಕೇಂದ್ರದ ಮಾರ್ಗಸೂಚಿಗಳನ್ನು ಅನುಷ್ಠಾನಗೊಳಿಸಬೇಕು ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಒಂಬತ್ತು ರಾಜ್ಯಗಳು ಲಾಕ್‌ಡೌನ್ ಮತ್ತು ಸ್ಥಳೀಯ ಲಾಕ್‌ಡೌನ್ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನ ಗೊಳಿಸಬೇಕು. ಕಂಟೈನ್ಮೆಂಟ್ ಜೋನ್‌ಗಳಲ್ಲಿ ಕಾಣ್ಗಾವಲು ಹಾಕಬೇಕು. ಕೋವಿಡ್ ಆಸ್ಪತ್ರೆಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಹೆಚ್ಚಿಸಬೇಕು ಎಂದು ಕೇಂದ್ರ ಹೇಳಿದೆ.

ಈ ಸಂದರ್ಭದಲ್ಲಿ ಎರಡು-ಮೂರು ದಿನಗಳ ಕಾಲ ಲಾಕ್ ಡೌನ್ ಮಾಡುವುದರಿಂದ ಏನೂ ಪ್ರಯೋಜನ ಇಲ್ಲ ಕೊರೊನಾ ಸೋಂಕು ಹರಡುವುದನ್ನು ತಡೆಯಲು ಅದು ಪರಿಹಾರವೂ ಅಲ್ಲ ಎಂಬುದನ್ನು ಆಯಾ ರಾಜ್ಯಗಳ ಮುಖ್ಯಕಾರ್ಯದರ್ಶಿಗಳು ಕೇಂದ್ರ ಸರ್ಕಾಕ್ಕೆ ತಿಳಿಸಿದರೆಂದು ಇಂಡಿಯನ್ ಎಕ್ಸ್ ಪ್ರೆಸ್ ವರದಿಯಲ್ಲಿ ತಿಳಿಸಿಲಾಗಿದೆ.

ಕೊರೊನ ಎದುರಿಸಲು ಸಿಬ್ಬಂದಿಯ ಕೊರತೆ ಇರುವುದರಿಂದ ಲಭ್ಯವಿರುವ ಜನರನ್ನು ಬಳಸಿಕೊಳ್ಳಲು ಮುಂದಾಗಬೇಕು, ಪರ್ಯಾಯ ಸಂಪನ್ಮೂಲಗಳನ್ನು ಬಳಸಿಕೊಳ್ಳಬೇಕು. ನಿವೃತ್ತ ವೈದ್ಯರು, ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳು, ನರ್ಸಿಂಗ್ ವಿದ್ಯಾರ್ಥಿಗಳನ್ನು ಕೆಲಸಕ್ಕೆ ಬಳಸಿಕೊಳ್ಳಬೇಕು ಎಂದು ಕೇಂದ್ರ ಸರ್ಕಾರ ಹೇಳಿದೆ.

ಆಸ್ಪತ್ರೆಗಳಲ್ಲಿ ಆಕ್ಸಿಜೆನ್ ಸಿಲೆಂಡರ್‌‌‌ಗಳು, ಪರೀಕ್ಷಾ ಕಿಟ್‌ಗಳು, ಔಷಧಿಗಳು ಮತ್ತು ಅಗತ್ಯವಿರುವ ವೈದ್ಯರನ್ನು ನೇಮಕ ಮಾಡಿಕೊಳ್ಳಲು ವಿಳಂಬ ಮಾಡಬಾರದು. ಅಗತ್ಯ ಸಿಬ್ಬಂದಿ ಮತ್ತು ವೈದ್ಯಕೀಯ ಸಲಕರಣೆಗಳು ಇರುವಂತೆ ಮುಖ್ಯಕಾರ್ಯದರ್ಶಿಗಳು ನೋಡಿಕೊಳ್ಳಬೇಕು ಎಂದು ತಿಳಿಸಿದೆ.

ಕೇರಳ, ಗೋವಾ ಮತ್ತು ದೆಹಲಿಯಿಂದ ಈ ರಾಜ್ಯಗಳು ಪಾಠ ಕಲಿಯಬೇಕು. ಕರ್ನಾಟಕದಲ್ಲೂ ಕೊರೊನಾ ಸೋಂಕು ಹರಡದಂತೆ ತಡೆಯುವಲ್ಲಿ ಉತ್ತಮ ಸಾಧನೆ ಮಾಡಿದೆ ಎಂದು ಶ್ಲಾಘಿಸಲಾಯಿತು ಎಂದು ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ.


ಓದಿ: ಬಿಜೆಪಿ ಸರ್ಕಾರಕ್ಕೆ ಒಂದು ವರ್ಷ; ಖಾಸಗಿ ಆಸ್ಪತ್ರೆಗಳನ್ನು ಸ್ವಾಧೀನಪಡಿಸಿಕೊಳ್ಳವುದು ಇನ್ಯಾವಾಗ?


 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಸಕ್ಕರೆ ಮಟ್ಟ ಹೆಚ್ಚಿಸಿಕೊಳ್ಳಲು ಮಾವಿನಹಣ್ಣು, ಸಿಹಿತಿಂಡಿ ಸೇವಿಸುತ್ತಿರುವ ಕೇಜ್ರಿವಾಲ್..; ಇಡಿ ಆರೋಪ

0
ಮಧುಮೇಹಿಯಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ವೈದ್ಯಕೀಯ ಜಾಮೀನು ಪಡೆಯಲು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸಲು ಪ್ರತಿದಿನ ಮಾವಿನಹಣ್ಣು, ಆಲೂ ಪುರಿ ಮತ್ತು ಸಿಹಿತಿಂಡಿಗಳನ್ನು ಸೇವಿಸುತ್ತಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಗುರುವಾರ...