Homeಮುಖಪುಟ‘ರಾಕೆಟ್ರಿ: ದಿ ನಂಬಿ ಎಫೆಕ್ಟ್‌’ ಚಿತ್ರದ 90% ವಿಷಯಗಳು ಸುಳ್ಳು: ಇಸ್ರೊ ಮಾಜಿ ವಿಜ್ಞಾನಿಗಳು

‘ರಾಕೆಟ್ರಿ: ದಿ ನಂಬಿ ಎಫೆಕ್ಟ್‌’ ಚಿತ್ರದ 90% ವಿಷಯಗಳು ಸುಳ್ಳು: ಇಸ್ರೊ ಮಾಜಿ ವಿಜ್ಞಾನಿಗಳು

- Advertisement -
- Advertisement -

ಬಹುಭಾಷಾ ನಟ ಆರ್.ಮಾಧವನ್ ಅವರು ನಿರ್ದೇಶಿಸಿರುವ ‘ರಾಕೆಟ್ರಿ: ದಿ ನಂಬಿ ಎಫೆಕ್ಟ್‌’ ಚಿತ್ರದಲ್ಲಿ ಇಸ್ರೋಗೆ ಸಂಬಂಧಿಸಿ ಉಲ್ಲೇಖಿಸಲಾದ ಕನಿಷ್ಠ 90% ವಿಷಯಗಳು ಸುಳ್ಳು ಎಂದು ಇಸ್ರೋ ಮಾಜಿ ವಿಜ್ಞಾನಿಗಳ ಗುಂಪು ಹೇಳಿದೆ. ಚಿತ್ರದಲ್ಲಿ ಮತ್ತು ವಿವಿಧ ಟಿವಿ ಮಾಧ್ಯಮಗಳ ಮೂಲಕ ಮಾಡಿದ ಪ್ರತಿಪಾದನೆಗಳಿಂದ ಇಸ್ರೋ ಖ್ಯಾತಿಗೆ ಕಳಂಕ ಹಚ್ಚಲಾಗಿದೆ ಎಂದು ಅವರು ಹೇಳಿದ್ದಾರೆ.

ನಟ ಆರ್.ಮಾಧವನ್ ಬರೆದು, ನಿರ್ಮಿಸಿ, ನಿರ್ದೇಶಿಸಿದ ಚಿತ್ರವು ಇಸ್ರೋದ ಏರೋನಾಟಿಕಲ್ ಎಂಜಿನಿಯರ್ ನಂಬಿ ನಾರಾಯಣನ್ ಅವರ ಜೀವನವನ್ನು ಆಧರಿಸಿದೆ ಎಂದು ಪ್ರತಿಪಾದಿಸಲಾಗಿದೆ. ಚಿತ್ರದ ಬಗ್ಗೆ ಬುಧವಾರ ಪತ್ರಿಕಾಗೋಷ್ಠಿ ನಡೆಸಿದ ಮಾಜಿ ವಿಜ್ಞಾನಿಗಳು, ಚಿತ್ರದಲ್ಲಿ ಇಸ್ರೋ ಬಗ್ಗೆ ಹೇಳಲಾದ ಸುಳ್ಳುಗಳ ಬಗ್ಗೆ ಮಾತನಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇಸ್ರೋದ ಎಲ್‌ಪಿಎಸ್‌ಇ ನಿರ್ದೇಶಕರಾದ ಡಾ. ಎ. ಇ. ಮುತ್ತುನಾಯಗಂ, ಕ್ರಯೋಜೆನಿಕ್ ಎಂಜಿನ್‌ನ ಯೋಜನಾ ನಿರ್ದೇಶಕರಾದ ಪ್ರೊ.ಇ.ವಿ.ಎಸ್.ನಂಬೂತಿರಿ, ಯೋಜೆನಿಕ್ ಎಂಜಿನ್‌ನ ಉಪನಿರ್ದೇಶಕರಾದ ಡಿ. ಶಶಿಕುಮಾರನ್ ಸೇರಿದಂತೆ ಇಸ್ರೋ ಮಾಜಿ ವಿಜ್ಞಾನಿಗಳು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ: 10% ಮೀಸಲಾತಿ: ಆರ್‌‌ಎಸ್‌ಎಸ್‌ ಮಂದಿ ಹಬ್ಬಿಸಿರುವ 100% ಸುಳ್ಳುಗಳು!

“ನಂಬಿ ನಾರಾಯಣನ್ ಅವರ ಕುರಿತು ನಿರ್ಮಿಸಲಾಗಿರುವ ‘ರಾಕೆಟ್ರಿ: ದಿ ನಂಬಿ ಎಫೆಕ್ಟ್’ ಚಲನಚಿತ್ರದ ಮೂಲಕ ಮತ್ತು ಟಿವಿ ಚಾನೆಲ್‌ಗಳ ಮೂಲಕ ಇಸ್ರೋ ಮತ್ತು ಇತರ ವಿಜ್ಞಾನಿಗಳನ್ನು ದೂಷಿಸುತ್ತಿರುವುದರಿಂದ ನಾವು ಸಾರ್ವಜನಿಕರಿಗೆ ಕೆಲವು ವಿಷಯಗಳನ್ನು ಹೇಳಲೆ ಬೇಕಿದೆ” ಎಂದು ಮಾಜಿ ವಿಜ್ಞಾನಿಗಳು ಹೇಳಿದ್ದಾರೆ.

“ಇಸ್ರೋದ ಅನೇಕ ಯೋಜನೆಗಳ ಪಿತಾಮಹ ಅವರು ಎಂದು ಹೇಳಲಾಗುತ್ತಿದೆ, ಇದು ಸುಳ್ಳು. ಭಾರತದ ರಾಷ್ಟ್ರಪತಿಯಾಗಲು ಹೋದ ಎಪಿಜೆ ಅಬ್ದುಲ್ ಕಲಾಂ ಅವರನ್ನೂ ಒಮ್ಮೆ ತಿದ್ದಿದ್ದೇನೆ ಎಂದು ಸಿನಿಮಾದಲ್ಲಿ ಹೇಳಿಕೊಂಡಿದ್ದಾರೆ. ಅದೂ ಸುಳ್ಳು’’ ಎಂದು ಮಾಜಿ ವಿಜ್ಞಾನಿಗಳು ತಿಳಿಸಿದ್ದಾರೆ.

ಚಿತ್ರದಲ್ಲಿ ತಪ್ಪುದಾರಿಗೆಳೆಯುವ ಪ್ರತಿಪಾದನೆಗಳ ಬಗ್ಗೆ ಸ್ಪಷ್ಟಿಕರಣ ನೀಡುವಂತೆ ಇಸ್ರೋದ ಪ್ರಸ್ತುತ ಅಧ್ಯಕ್ಷ ಎಸ್. ಸೋಮನಾಥ್ ಅವರನ್ನು ಕೋರಿದ್ದೇವೆ ಎಂದು ವಿಜ್ಞಾನಿಗಳು ಹೇಳಿದ್ದಾರೆ.

ನಾರಾಯಣನ್ ಅವರ ಬಂಧನದಿಂದಾಗಿ ಭಾರತಕ್ಕೆ ಕ್ರಯೋಜೆನಿಕ್ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿಕೊಳ್ಳುವಲ್ಲಿ ವಿಳಂಬವಾಯಿತು ಎಂದು ಚಿತ್ರದಲ್ಲಿ ನಾರಾಯಣನ್ ಅವರ ಸಮರ್ಥನೆ ಮಾಡಿರುವುದರ ಬಗ್ಗೆ ವಿಜ್ಞಾನಿಗಳು ಆಕ್ಷೇಪ ಎತ್ತಿದ್ದಾರೆ. 1980 ರ ದಶಕದಲ್ಲಿ ಇವಿಎಸ್ ನಂಬೂತಿರಿ ಅವರ ನಿರ್ದೇಶನದಲ್ಲಿ ಇಸ್ರೋ ಕ್ರಯೋಜೆನಿಕ್ ತಂತ್ರಜ್ಞಾನದ ಮೇಲೆ ಕೆಲಸ ಮಾಡಲು ಪ್ರಾರಂಭಿಸಿತು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಎನ್‌ಇಪಿ: ಫೈಥಾಗರಸ್‌ ಥಿಯರಿ ಸುಳ್ಳು, ಸಂಸ್ಕೃತ, ಮನುಸ್ಮೃತಿ ಕಲಿಕೆಗೆ ಪ್ರಸ್ತಾಪ: ಕರ್ನಾಟಕ ಸರ್ಕಾರದ ಹೊಸ ಹೆಜ್ಜೆ

ನಾರಾಯಣನ್ ಅವರಿಗೂ ಈ ಯೋಜನೆಗೂ ಯಾವುದೇ ಸಂಬಂಧ ಇಲ್ಲ ಎಂದು ಅವರು ಹೇಳಿದ್ದಾರೆ. ಇಸ್ರೋಗೆ ಸಂಬಂಧಿಸಿದಂತೆ ಚಲನಚಿತ್ರದಲ್ಲಿ ಉಲ್ಲೇಖಿಸಲಾದ ಕನಿಷ್ಠ 90% ವಿಷಯಗಳು ಸುಳ್ಳು ಎಂದು ಮಾಜಿ ವಿಜ್ಞಾನಿಗಳ ಗುಂಪು ಹೇಳಿದೆ.

“ಸಿನಿಮಾದಲ್ಲಿ ಹೇಳಿದ್ದೆಲ್ಲಾ ನಿಜ ಎಂದು ನಾರಾಯಣನ್ ಕೆಲವು ಟಿವಿ ಚಾನೆಲ್‌ಗಳಲ್ಲಿ ಹೇಳಿಕೊಂಡಿದ್ದಾರೆ ಎಂದು ನಮಗೆ ತಿಳಿದು ಬಂದಿದೆ. ತಮ್ಮ ಅನೇಕ ಸಾಧನೆಗಳನ್ನು ನಾರಾಯಣನ್ ಅವರಿಗೆ ಕ್ರೆಡಿಟ್‌ ನೀಡಲಾಗುತ್ತಿದೆ ಎಂದು ಕೆಲವು ವಿಜ್ಞಾನಿಗಳು ಕಳವಳ ವ್ಯಕ್ತಪಡಿಸಿದ್ದಾರೆ” ಎಂದು ಅವರು ಹೇಳಿದ್ದಾರೆ.

ಮಾಜಿ ವಿಜ್ಞಾನಿಗಳು ನೀಡಿದ ಹೇಳಿಕೆಗೆ ನಾರಾಯಣನ್ ಮತ್ತು ಚಿತ್ರದ ನಿರ್ಮಾಪಕ ಆರ್‌. ಮಾಧವನ್ ಅವರು ಪ್ರತಿಕ್ರಿಯೆ ನೀಡಿಲ್ಲ.

ನಾರಾಯಣನ್ ವಿರುದ್ಧ ಹೊರಿಸಲಾದ ಇಸ್ರೋ ಬೇಹುಗಾರಿಕೆ ಪ್ರಕರಣದಲ್ಲಿ ಅವರ ಕೈವಾಡದ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಕೇರಳ ಪೊಲೀಸರಿಗೆ ಸುಪ್ರೀಂ ಕೋರ್ಟ್ 2018 ರಲ್ಲಿ ಆದೇಶಿಸಿತ್ತು. ಇದರ ನಂತರ ಬಂಧನಕ್ಕೆ ಒಳಗಾಗಿದ್ದ ಅವರು ಎರಡು ತಿಂಗಳ ಕಾಲ ಜೈಲಿನಲ್ಲಿ ಕಳೆದಿದ್ದರು. ನಂತರ ಅವರ ವಿರುದ್ಧದ ಬೇಹುಗಾರಿಕೆ ಪ್ರಕರಣವು ಸುಳ್ಳು ಎಂದು ಸಿಬಿಐ ನಿರ್ಧರಿಸಿತ್ತು.

ಇದನ್ನೂ ಓದಿ: ಪಠ್ಯದಲ್ಲಿ ಸೂಲಿಬೆಲೆ ಪಾಠದ ಕುರಿತು ಮಾತನಾಡಲು ಆರ್ ಅಶೋಕ್ ಹಿಂದೇಟು: ಚಕ್ರವರ್ತಿಯ ಈ ಸುಳ್ಳುಗಳು ಕಾರಣವೇ?

1994 ರಲ್ಲಿ ಕೇರಳದಾದ್ಯಂತ ಭಾರಿ ವಿವಾದವೆಬ್ಬಿಸಿದ್ದ ಬೇಹುಗಾರಿಕೆ ಪ್ರಕರಣದಲ್ಲಿ ಇಬ್ಬರು ವಿಜ್ಞಾನಿಗಳು ಮತ್ತು ಇಬ್ಬರು ಮಾಲ್ಡೀವಿಯನ್ ಮಹಿಳೆಯರು ಸೇರಿದಂತೆ ಇತರ ನಾಲ್ವರು ಕೆಲವು ಬಾಹ್ಯಾಕಾಶ ಕಾರ್ಯಕ್ರಮಗಳನ್ನು ವಿದೇಶಿ ರಾಷ್ಟ್ರಗಳಿಗೆ ವರ್ಗಾಯಿಸಿದ್ದಾರೆ ಎಂಬ ಆರೋಪಗಳನ್ನು ಮಾಡಲಾಗಿತ್ತು.

ಕೇರಳ ಪೊಲೀಸರು ತಮ್ಮ ಪ್ರಾಥಮಿಕ ತನಿಖೆಯನ್ನು ಪೂರ್ಣಗೊಳಿಸಿದ ನಂತರ ಸಿಬಿಐ ಪ್ರಕರಣವನ್ನು ಕೈಗೆತ್ತಿಕೊಂಡಿತ್ತು. ಸಿಬಿಐಗೆ ಬೇಹುಗಾರಿಕೆಯ ಯಾವುದೇ ಪುರಾವೆಗಳು ಸಿಕ್ಕಿರಲಿಲ್ಲ. ಈ ಹಗರಣದಿಂದಾಗಿ ಆಗಿನ ಮುಖ್ಯಮಂತ್ರಿ ದಿವಂಗತ ಕೆ.ಕರುಣಾಕರನ್ ಅವರು ರಾಜೀನಾಮೆ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನನ್ನ ಅನುಬವದ ಪ್ರಕಾರ ,ಎಲೆಲ್ಲಿ ದಾಡಿ ಇರತ್ತೋ ಅಲ್ಲೆಲ್ಲಾ ಮೋಸಾನೇ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...