Homeಕರೋನಾ ತಲ್ಲಣಭಾರತದಲ್ಲಿ 24 ಗಂಟೆಗಳಲ್ಲಿ 90 ಸಾವಿರಕ್ಕೂ ಹೆಚ್ಚು ಕೊರೊನಾ ಸೋಂಕಿತರು!

ಭಾರತದಲ್ಲಿ 24 ಗಂಟೆಗಳಲ್ಲಿ 90 ಸಾವಿರಕ್ಕೂ ಹೆಚ್ಚು ಕೊರೊನಾ ಸೋಂಕಿತರು!

ವಿಶ್ವದ ಕೊರೊನಾ ಸೋಂಕಿತರ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ಭಾರತ ಇಂದು 2ನೇ ಸ್ಥಾನಕ್ಕೆ ಜಿಗಿಯುವ ಸಾಧ್ಯತೆ ಇದ್ದು, ಬ್ರೆಜಿಲ್ ಅನ್ನು ಹಿಂದಿಕ್ಕಲಿದೆ.

- Advertisement -
- Advertisement -

ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನ ದಿನಕ್ಕೂ ಹೆಚ್ಚಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 90,632 ಕೊರೊನಾ ಪ್ರಕರಣಗಳು ದಾಖಲಾಗುವ ಮೂಲಕ ಏಕದಿನದ ಗರಿಷ್ಠ ದಾಖಲೆ ಬರೆದಿದೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 41 ಲಕ್ಷಗಳನ್ನು ದಾಟಿದ್ದು, 24 ಗಂಟೆಗಳಲ್ಲಿ 1,065 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ವಿಶ್ವದ ಕೊರೊನಾ ಸೋಂಕಿತರ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ಭಾರತ ಇಂದು 2ನೇ ಸ್ಥಾನಕ್ಕೆ ಜಿಗಿಯುವ ಸಾಧ್ಯತೆ ಇದ್ದು, ಬ್ರೆಜಿಲ್ ಅನ್ನು ಹಿಂದಿಕ್ಕಲಿದೆ. ಬ್ರೆಜಿಲ್‌ನಲ್ಲಿ ಸದ್ಯಕ್ಕೆ 41,23,000 ಪ್ರಕರಣಗಳಿದ್ದರೆ, ಭಾರತದಲ್ಲಿ 41,14,773 ಪ್ರಕರಣಗಳು ದಾಖಲಾಗಿವೆ. ಕೇವಲ 9 ಸಾವಿರ ಪ್ರಕರಣಗಳ ಅಂತರದಲ್ಲಿ ಭಾರತ ಮತ್ತು ಬ್ರೆಜಿಲ್ ಇವೆ. ದೇಶದಲ್ಲಿಒಟ್ಟು 70,626 ಮಂದಿ ಸೊಂಕಿನಿಂದ ಮೃತಪಟ್ಟಿದ್ದು, ಸದ್ಯ 8,62,320 ಸಕ್ರಿಯ ಪ್ರಕರಣಗಳಿವೆ.

ದೇಶದಲ್ಲೇ ಅತಿಹೆಚ್ಚು ಪ್ರಕರಣಗಳು ಪತ್ತೆಯಾಗಿರುವ ಮಹಾರಾಷ್ಟ್ರದಲ್ಲಿ ಸದ್ಯ 2,21,012 ಸಕ್ರಿಯ ಪ್ರಕರಣಗಳಿವೆ. ಆಂಧ್ರ ಪ್ರದೇಶದಲ್ಲಿ 1,00,880 ಸೋಂಕಿತರಿದ್ದಾರೆ. ಕೋವಿಡ್‌ನಿಂದ ಸಂಭವಿಸುತ್ತಿರುವ ಸಾವಿನ ಪ್ರಮಾಣದಲ್ಲಿ ಇಳಿಕೆಯಾಗಿದ್ದು, ಸದ್ಯ ಶೇ.1.73ರಷ್ಟಿದೆ. ಚೇತರಿಕೆ ಪ್ರಮಾಣ ಶೇಕಡಾ 77.32ರಷ್ಟಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.


ಇದನ್ನೂ ಓದಿ: ರೋಗಲಕ್ಷಣಗಳು ಇರುವವರು, ಇಲ್ಲದವರು ಕೊರೊನಾ ಪರೀಕ್ಷೆ ಮಾಡಿಸಬೇಕೆ, ಬೇಡವೇ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ರೇವಣ್ಣ ಸಹಚರ ಸತೀಶ್ ಬಾಬಣ್ಣಗೆ ನ್ಯಾಯಾಂಗ ಬಂಧನ

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ ಬಯಲಾದ ಬೆನ್ನಲ್ಲಿ ಮೈಸೂರಿನಲ್ಲಿ ಮಹಿಳೆಯನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣದ ಎರಡನೇ ಆರೋಪಿ ಸತೀಶ್ ಬಾಬಣ್ಣ ಬಂಧನವಾಗಿದ್ದು, ಅವರನ್ನು ನ್ಯಾಯಾಲಯ 14...