Homeಮುಖಪುಟನಗರಗಳಲ್ಲಿ ಒಳಚರಂಡಿ, ಸೆಪ್ಟಿಕ್ ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸುವ ಶೇ.92ರಷ್ಟು ಕಾರ್ಮಿಕರು ಎಸ್‌ಸಿ, ಎಸ್‌ಟಿ, ಒಬಿಸಿ ವರ್ಗದವರು :...

ನಗರಗಳಲ್ಲಿ ಒಳಚರಂಡಿ, ಸೆಪ್ಟಿಕ್ ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸುವ ಶೇ.92ರಷ್ಟು ಕಾರ್ಮಿಕರು ಎಸ್‌ಸಿ, ಎಸ್‌ಟಿ, ಒಬಿಸಿ ವರ್ಗದವರು : ವರದಿ

- Advertisement -
- Advertisement -

ಭಾರತದ 29 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 3 ಸಾವಿರ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗಳಲ್ಲಿ ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್‌ಗಳನ್ನು ಸ್ವಚ್ಚಗೊಳಿಸುವ ಅಪಾಯಕಾರಿ ಕೆಲಸಗಳಲ್ಲಿ ತೊಡಗಿರುವ, 38,000 ಕಾರ್ಮಿಕರಲ್ಲಿ ಶೇ. 91.9ರಷ್ಟು ಜನರು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ವರ್ಗದವರು ಎಂದು ಕೇಂದ್ರ ಸರ್ಕಾರದ ವರದಿಯಿಂದ ತಿಳಿದು ಬಂದಿದೆ.

ಒಟ್ಟು ಶೇ. 91.9ರಷ್ಟು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಕಾರ್ಮಿಕರ ಪೈಕಿ, ಶೇ. 68.9ರಷ್ಟು ಪರಿಶಿಷ್ಟ ಜಾತಿ (ಎಸ್‌ಸಿ), ಶೇ. 14.7 ಇತರ ಹಿಂದುಳಿದ ವರ್ಗಗಳು (ಒಬಿಸಿ) ಮತ್ತು ಶೇ.8.3ರಷ್ಟು ಪರಿಶಿಷ್ಟ ವರ್ಗ (ಎಸ್‌ಟಿ) ಕಾರ್ಮಿಕರಿದ್ದಾರೆ. ಸಾಮಾನ್ಯ ವರ್ಗದವರು ಶೇ.8ಕ್ಕಿಂತ ಕಡಿಮೆ ಇದ್ದಾರೆ.

ಎಲ್ಲಾ ಒಳಚರಂಡಿ ಕೆಲಸಗಳನ್ನು ಯಾಂತ್ರೀಕರಿಸಲು ಮತ್ತು ಈ ಅಪಾಯಕಾರಿ ಕೆಲಸದಿಂದಾಗಿ ಸಾವುಗಳನ್ನು ತಡೆಯಲು ಹಮ್ಮಿಕೊಂಡಿರುವ ‘ನಮಸ್ತೆ’ ಕಾರ್ಯಕ್ರಮದ ಅಂಗವಾಗಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್ ಕಾರ್ಮಿಕರ ಎಣಿಕೆ ಕಾರ್ಯವನ್ನು ನಡೆಸುತ್ತಿದೆ.

2023-24ರಲ್ಲಿ ಮ್ಯಾನ್ಯುವಲ್ ಸ್ಕ್ಯಾವೆಂಜರ್‌ಗಳ ಪುನರ್ವಸತಿಗಾಗಿ ಸ್ವಯಂ ಉದ್ಯೋಗ ಯೋಜನೆ(ಎಸ್‌ಆರ್‌ಎಂಎಸ್)ಯ ಬದಲು ಈ ಯೋಜನೆಯನ್ನು ತರಲಾಗಿದೆ.

ಸರ್ಕಾರ ಸಂಸತ್ತಿನಲ್ಲಿ ಮಂಡಿಸಿದ ದತ್ತಾಂಶಗಳಂತೆ 2019 ಮತ್ತು 2023ರ ನಡುವೆ ಒಳಚರಂಡಿಗಳು ಮತ್ತು ಸೆಪ್ಟಿಕ್ ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸುವ ಅಪಾಯಕಾರಿ ಕೆಲಸದಿಂದ ದೇಶಾದ್ಯಂತ ಕನಿಷ್ಠ 377 ಜನರು ಮೃತಪಟ್ಟಿದ್ದಾರೆ.

ಮಲ ಹೊರುವುದು ಒಂದು ಪದ್ಧತಿಯಾಗಿ ದೇಶದಾದ್ಯಂತ ಅಂತ್ಯಗೊಂಡಿದೆ. ಒಳಚರಂಡಿ ಹಾಗೂ ಸೆಪ್ಟಿಕ್ ಟ್ಯಾಂಕ್‌ಗಳ ಅಪಾಯಕಾರಿ ಶುಚಿತ್ವವನ್ನು ನಿಲ್ಲಿಸುವುದು ಈಗಿನ ಅಗತ್ಯವಾಗಿದೆ ಎನ್ನುವುದು ಕೇಂದ್ರ ಸರ್ಕಾರದ ವಾದ.

ಮಲಗುಂಡಿಗಳನ್ನು ಸ್ವಚ್ಛಗೊಳಿಸುವ ವಾಹನಗಳ ಚಾಲಕರು, ಸಹಾಯಕರು,ಯಂತ್ರ ನಿರ್ವಾಹಕರು ಮತ್ತು ಕ್ಲೀನರ್‌ಗಳು ಸೇರಿದಂತೆ ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್‌ಗಳ ಸ್ವಚ್ಛತೆಯೊಂದಿಗೆ ನೇರವಾಗಿ ಗುರುತಿಸಿಕೊಂಡಿರುವ ಕಾರ್ಮಿಕರನ್ನು ನಮಸ್ತೆ ಕಾರ್ಯಕ್ರಮವು ಗುರಿಯಾಗಿಸಿಕೊಂಡಿದೆ ಎಂದು ಸಚಿವಾಲಯವು ಹೇಳಿದೆ.

ರಾಷ್ಟ್ರೀಯ ಮಟ್ಟದಲ್ಲಿ ಇಂತಹ ಕಾರ್ಮಿಕರ ಎಣಿಕೆ, ಅವರಿಗೆ ಸುರಕ್ಷತಾ ತರಬೇತಿ ಮತ್ತು ಸಲಕರಣೆಗಳ ಒದಗಿಸುವಿಕೆ ಹಾಗೂ ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್ ಕಾರ್ಮಿಕರನ್ನು ‘ಸ್ಯಾನಿಪ್ರಿನಿಯರ್ಸ್’ ಅಥವಾ ನೈರ್ಮಲ್ಯ ಉದ್ಯಮಿಗಳನ್ನಾಗಿ ಪರಿವರ್ತಿಸಲು ಬಂಡವಾಳ ಸಬ್ಸಿಡಿಗಳನ್ನು ನೀಡುವುದು ಅದರ ಗುರಿಯಾಗಿದೆ.

ಜಾತಿ ಗಣತಿಗೆ ಆಗ್ರಹಿಸಿದ ಕಾಂಗ್ರೆಸ್

ಸರ್ಕಾರದ ವರದಿಯ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಕಾಂಗ್ರೆಸ್, “ದೇಶದಲ್ಲಿ ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸುವ 92% ಜನರು ಎಸ್‌ಸಿ, ಎಸ್‌ಟಿ, ಒಬಿಸಿ ವರ್ಗಗಳಿಂದ ಬಂದವರು. ಈ ಡೇಟಾವು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ವರ್ಗದ ಜನರ ಜೀವನವು ಬಲವಂತದ ಪರಿಸ್ಥಿತಿಗಳಿಗೆ ತಳ್ಳಲ್ಪಟ್ಟಿದೆ ಎಂಬುವುದನ್ನು ತೋರಿಸುತ್ತದೆ. ಇಂದು ಜಾತಿ ಗಣತಿ ಅಗತ್ಯವಾಗಿದ್ದು, ಅದರಿಂದ ಸರ್ಕಾರದ ಯೋಜನೆಗಳಲ್ಲಿ ಈ ವರ್ಗಗಳ ಸಹಭಾಗಿತ್ವವನ್ನು ಖಚಿತಪಡಿಸಿಕೊಳ್ಳಬಹುದಾಗಿದೆ. ಕಾಂಗ್ರೆಸ್ ಯಾವುದೇ ಬೆಲೆ ತೆತ್ತಾದರೂ ಜಾತಿ ಗಣತಿಯ ಆಗ್ರಹವನ್ನು ಮುಂದುವರಿಸಲಿದೆ. ದೇಶದ 90% ಜನರು ತಮ್ಮ ಹಕ್ಕುಗಳನ್ನು ಪಡೆಯುವುದನ್ನು ಖಚಿತಪಡಿಸಲಿದೆ” ಎಂದು ಹೇಳಿದೆ.

ಇದನ್ನೂ ಓದಿ : ‘ಪ್ರತಿಭೆ ವ್ಯರ್ಥವಾಗಲು ಬಿಡುವುದಿಲ್ಲ..’; ದಲಿತ ವಿದ್ಯಾರ್ಥಿ ಪರವಾಗಿ ಐಐಟಿಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...