Homeಅಂತರಾಷ್ಟ್ರೀಯರೂಪಾಂತರಿ ವೈರಸ್‌ ಮೂಲ ವೈರಸ್‌ಗಿಂತ ಶೇ. 50-70 ರಷ್ಟು ವೇಗವಾಗಿ ಹರಡುತ್ತದೆ: WHO ಕಳವಳ

ರೂಪಾಂತರಿ ವೈರಸ್‌ ಮೂಲ ವೈರಸ್‌ಗಿಂತ ಶೇ. 50-70 ರಷ್ಟು ವೇಗವಾಗಿ ಹರಡುತ್ತದೆ: WHO ಕಳವಳ

2020ರ ಡಿಸೆಂಬರ್‌ ಮಧ್ಯ ಭಾಗದಲ್ಲಿ ಬ್ರಿಟನ್‌ನಲ್ಲಿ ರೂಪಾಂತರಗೊಂಡ ವೈರಸ್‌ ಪತ್ತೆಯಾಗಿತ್ತು. ಇದು ಮೂಲ ಕೊರೊನಾ ವೈರಸ್‌ಗಿಂತ ಶೇ.50ರಿಂದ ಶೇ.70ರಷ್ಟು ಹೆಚ್ಚು ವೇಗವಾಗಿ ಹರಡುತ್ತದೆ ಎಂದು WHO ಅಭಿಪ್ರಾಯ ಪಟ್ಟಿದೆ.

- Advertisement -
- Advertisement -

“ಬ್ರಿಟನ್‌ನಲ್ಲಿ ಪತ್ತೆಯಾದ ರೂಪಾಂತರಿ ಕೊರೊನಾ ವೈರಸ್‌ ಈಗ ಜಗತ್ತಿನ 60 ರಾಷ್ಟ್ರಗಳಲ್ಲಿ ಹರಡಿದೆ” ಎಂದು ವಿಶ್ವ ಆರೋಗ್ಯ ಸಂಸ್ಥೆ(WHO) ಕಳವಳ ವ್ಯಕ್ತಪಡಿಸಿದೆ. ಕಳೆದ ಒಂದು ವಾರದಲ್ಲಿ ರೂಪಾಂತರಿ ವೈರಸ್‌ ಪತ್ತೆಯಾಗಿರುವ ರಾಷ್ಟ್ರಗಳ ಪಟ್ಟಿಗೆ ಹೊಸದಾಗಿ 10 ದೇಶಗಳು ಸೇರ್ಪಡೆಯಾಗಿವೆ.

ಜಗತ್ತಿನಾದ್ಯಂತ ಕೊರೊನಾದಿಂದಾಗಿ 20 ಲಕ್ಷಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಈಗಾಗಲೆ ಕೆಲವು ದೇಶಗಳು ಕೊರೊನಾ ವೈರಸ್‌ಗೆ ಲಸಿಕೆಯನ್ನು ಕಂಡುಹಿಡಿದಿವೆ. ಆದರೆ ಅವು ಇನ್ನೂ ಸಮರ್ಪಕವಾಗಿ ಪೂರಕವಾಗುತ್ತಿಲ್ಲ. ಹೀಗಿರುವಾಗ ಈ ಹೊಸ ರೂಪಾಂತರಿ ಕೊರನಾ ವೈರಸ್ ಮತ್ತೊಂದು ಆತಂಕವನ್ನು ಸೃಷ್ಟಿಸಿದ್ದು, ಇದು ಹರಡದಂತೆ ತಡೆಯುವುದು ಹೇಗೆ ಎಂಬುದು ಮತ್ತಷ್ಟು ಆತಂಕಕ್ಕೀಡು ಮಾಡಿದೆ.

ಬ್ರಿಟನ್‌ ರೀತಿಯೇ ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ರೂಪಾಂತರಿ ವೈರಸ್‌, ಅತಿ ವೇಗವಾಗಿ ಹರಡಬಲ್ಲದಾಗಿದೆ. ಆ ವೈರಸ್‌ 23 ರಾಷ್ಟ್ರಗಳಲ್ಲಿ ಪತ್ತೆಯಾಗಿದೆ ಎಂದು WHO ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಕೋವಿಡ್ ಲಸಿಕೆಯಷ್ಟೇ ಸಾಕೆ? ಭವಿಷ್ಯದ ಸಾಂಕ್ರಾಮಿಕಗಳನ್ನು ಎದುರಿಸಲು ನಾವು ಸಜ್ಜಾಗಿದ್ದೇವೆಯೆ?

ಕೊರೊನಾ ಸೋಂಕಿನಿಂದಾಗಿ ಕಳೆದ 7 ದಿನಗಳಲ್ಲಿ ಜಗತ್ತಿನಾದ್ಯಂತ ಸುಮಾರು 93,000 ಮಂದಿ ಸಾವಿಗೀಡಾಗಿದ್ದರೆ. ಇದೇ ಅವಧಿಯಲ್ಲಿ 47 ಲಕ್ಷ ಹೊಸ ಪ್ರಕರಣಗಳು ದಾಖಲಾಗಿವೆ ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

2020ರ ಡಿಸೆಂಬರ್‌ ಮಧ್ಯ ಭಾಗದಲ್ಲಿ ಬ್ರಿಟನ್‌ನಲ್ಲಿ ರೂಪಾಂತರಗೊಂಡ ವೈರಸ್‌ ಪತ್ತೆಯಾಗಿತ್ತು. ಇದು ಮೂಲ ಕೊರೊನಾ ವೈರಸ್‌ಗಿಂತ ಶೇ.50ರಿಂದ ಶೇ.70ರಷ್ಟು ಹೆಚ್ಚು ವೇಗವಾಗಿ ಹರಡುತ್ತದೆ ಎಂದು WHO ಅಭಿಪ್ರಾಯ ಪಟ್ಟಿದೆ.

ಎರಡೂ ರೀತಿಯ ರೂಪಾಂತರಗೊಂಡ ವೈರಸ್‌ ವೇಗವಾಗಿ ಹರಡಬಹುದಾಗಿದ್ದರೂ ಸಹ, ಅವು ಪ್ರಾಣಕ್ಕೆ ಹೆಚ್ಚು ಅಪಾಯಕಾರಿಯಾಗಬಹುದೆಂದು ಪರಿಗಣಿಸಿಲ್ಲ. ಈಗ ಅಭಿವೃದ್ಧಿಪಡಿಸಿರುವ ಲಸಿಕೆಯು ಬ್ರಿಟನ್‌ನಲ್ಲಿ ಪತ್ತೆಯಾಗಿರುವ ಬಿ117 ವೈರಸ್‌ ತಡೆಯುವುದರಲ್ಲಿಯೂ ಪರಿಣಾಮಕಾರಿಯಾಗಿದೆ ಎಂದು ಫೈಝರ್‌ ಮತ್ತು ಜರ್ಮನಿಯ ಬಯೊ ಎನ್‌ಟೆಕ್‌ ಹೇಳಿವೆ.


ಇದನ್ನೂ ಓದಿ: ಪ್ರಯೋಗ ಪೂರೈಸದ ಲಸಿಕೆಗೆ ತರಾತುರಿಯಲ್ಲಿ ಅನುಮತಿ ನೀಡಲಾಗಿದೆಯೆ?: ಅಘಾತಕಾರಿ ಮಾಹಿತಿ ಬಿಚ್ಚಿಟ್ಟ ಆರ್‌ಟಿಐ ಕಾರ್ಯಕರ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...